The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
೧೨ನೇ ಶತಮಾನದಲ್ಲಿ ಸಾಮಾಜಿಕ ಕ್ರಾ೦ತಿಗೆ ಕಾರಣಾರಾದ ಮಹಾನ್ ವ್ಯಕ್ತಿಗಳಲ್ಲಿ ಜಗಜ್ಯೊತಿ ಬಸವಣ್ಣನವರು ಒಬ್ಬರು.ಬಸವಣ್ಣನವರು ಮಾದರಸ ಮತ್ತು ಮಾದಲಾಂಬಿಕೆಯ ಮಗನಾಗಿ ಬಾಗೇವಾಡಿಯಲ್ಲಿ ಜನಿಸಿದರು. ಬಸವಣ್ಣನವರು ಮತ್ತು ಶಿವಶರಣರು ಸ್ವೀಕರಿಸಿ, ಆಚರಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಯೋಗ, ಮಹಿಳಾ ಸಬಲೀಕರಣ, ದಲಿತೋದ್ದಾರ ಮತ್ತು ಸಾಮಾಜಿಕ ಕ್ರಾಂತಿಯ ಸಂದೇಶವನ್ನು ಜನತೆಗೆ ನೀಡುವುದು ಶ್ರೀ ಬಸವೇಶ್ಡರ ಜಯಂತಿಯ ಮೂಲ ಉದ್ದೇಶವಾಗಿದೆ. ೧೨ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯು ಇಂದು ನಾವು ಎದುರಿಸುತ್ತಿರುವ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ತೀರ್ಥಂಕರ ವೃಷಭ ನಾಥ(ಆದಿನಾಥ)ರು ಸಂಸಾರದ ನಶ್ವರತೆಯನ್ನು ಅರಿತು ವೈರಾಗ್ಯವನ್ನು ಹೊಂದಿ ದೀಕ್ಷೆಯನ್ನು ಗ್ರಹಣೆ ಮಾಡಿ ತಪಸ್ಸಿಗೆ ಕಾಡಿಗೆ ತೆರಳುತ್ತಾರೆ.೬ ತಿಂಗಳು ಕಠಿಣ ತಪಸ್ಸನ್ನು ಮಾಡಿದ ಮೇಲೆ ಆಹಾರಕ್ಕೆಂದು ನಗರಕ್ಕೆ ವಿಧಿ ಪೂರ್ವಕ ಆಗಮಿಸುತ್ತಾರೆ.ಆದರೆ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರವನ್ನು ಕೊಡುವ ವಿಧಿಯನ್ನು ಶ್ರಾವಕ-ಶ್ರಾವಕಿಯರು ತಿಳಿದಿರುವುದಿಲ್ಲ.ಆ ಕಾರಣ ಜನರು ಮೊದಲೇ ಮಹಾರಾಜರಾಗಿದ್ದ ಅವರನ್ನು ಸತ್ಕರಿಸುವ ಭಾವನೆಯಿಂದ ವಿವಿಧ ಒಡವೆ,ವಸ್ತ್ರಗಳನ್ನು ಕೆಲವು ನೀಡಲು ಮುಂದಾಗುತ್ತಾರೆ,ಕೆಲವರು ತಮ್ಮ ಹೆಣ್ಣು ಮಕ್ಕಳನ್ನು ಮದುವೆಯಾಗುವಂತೆ ಕೇಳಿಕೊಳ್ಳುತ್ತಾರೆ.ಆದರೆ ಇದಾವುದನ್ನು ಬಯಸದ ಅವರು ಪುನಃ ಕಾಡಿಗೆ ತಪ್ಪಸ್ಸಿಗೆಂದು ಮರಳುತ್ತಾರೆ.ಇದಾಗಿ ೭ ತಿಂಗಳು ೯ ದಿನಗಳ ಉಪವಾಸದ ನಂತರ ಮತ್ತೆ ಹಸ್ತಿನಾಪುರ ಎಂಬ ನಗರಕ್ಕೆ ಆಹಾರಕ್ಕೆಂದು ಆಗಮಿಸುತ್ತಾರೆ.ಆವಾಗಲು ಪುನಃ ಅದೇ ಘಟನೆಗಳು ಮರುಕಳಿಸುತ್ತವೆ.ಆದರೆ ಅದೇ ನಗರದ ರಾಜಾ ಶ್ರೇಯಾಂಸನು ಇವರ ದರ್ಶನಕ್ಕೆಂದು ಪರಿವಾರ ಸಹಿತ ಆಗಮಿಸುತ್ತಾನೆ.ಆಗ ಅವನಿಗೆ ಹಿಂದಿನ ಜನ್ಮದ ಜಾತಿ ಸ್ಮರಣೆ ಆಗುತ್ತದೆ.ಹಿಂದಿನ ಭವ(೮ನೆ)ದಲ್ಲಿ ಇವರಿಬ್ಬರು(ಆದಿನಾಥರು) ಸೆರೀ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರ ನೀಡಿದ ಸ್ಮರಣೆ ಆಗುತ್ತದೆ.ತಕ್ಷಣವೇ ರಾಜಾ ಸೋಮನು ಮತ್ತು ಶ್ರೆಯಾಂಸನು ಸೆರೀ ನವಧಾ ಭಕ್ತಿಯಿಂದ ಮೊದಲಿಗೆ ಇಕ್ಷು(ಕಬ್ಬಿನ ಹಾಲು)ರಸವನ್ನು ನೀಡುತ್ತಾರೆ.ಅಹಾರವಾದಾಕ್ಷಣ ದೇವತೆಗಳು ಪಂಚಾಶ್ಚರ್ಯ ವೃಷ್ಟಿ ಮಾಡುತ್ತಾರೆ.ಜನರು ಜಯ ಜಯಕಾರಗಳನ್ನು ಹಾಕಿ ಸಂತೋಷ ಪಡುತ್ತಾರೆ.ವೃಷಭ ನಾಥರಿಗೆ ಮೊದಲು ಆಹಾರ(ಪಾರಣಾ)ವಾದ ದಿವಸ ವೈಶಾಖ ಶುಕ್ಲ ತೃತೀಯ ತಿಥಿಯಿದ್ದ ಕಾರಣ ಆ ದಿನವನ್ನು “ಅಕ್ಷಯ ತೃತೀಯ“ವೆಂದು ಆಚರಿಸಲಾಗುತ್ತದೆ.ಜೈನ ಧರ್ಮದಲ್ಲಿ ಮುನಿಗಳಿಗೆ ಆಹಾರ ದಾನ ಮಾಡುವುದೆಂದರೆ ಅತ್ಯಂತ ಅತಿಶಯ,ಅಕ್ಷಯ ಪುಣ್ಯಕ್ಕೆ ಕಾರಣ ಎಂದು ಹೇಳಲಾಗಿದೆ.ಈ ದಿನ ಬಸದಿಗಳಲ್ಲಿ ವಿಶೇಷವಾಗೀ ಅಭಿಷೇಕ ಪೂಜೆ,ಉತ್ಸವಗಳನ್ನು ಆಚರಿಸಲಾಗುತ್ತದೆ.ಈ ದಿನ ದಿಗಂಬರ ಮುನಿಗಳಿಗೆ ,ವಿಶೇಷವಾಗಿ ಕಬ್ಬಿನ ಹಾಲನ್ನು ಆಹಾರ ದಾನದಲ್ಲಿ ನೀಡುವುದರಿಂದ ಧನ,ದಾನ್ಯಗಳು,ಮನೆಯಲ್ಲಿ ಸುಖ,ನೆಮ್ಮದಿ ಅಕ್ಷಯವಾಗಿ ವೃದ್ಧಿಯಾಗುತ್ತವೆ ಎಂಬ ನಂಬಿಕೆಯಿದೆ. ತೀರ್ಥಂಕರ ವೃಷಭ ನಾಥರ ಸಂಕ್ಷೇಪ ಜೀವನ ಪರಿಚಯ- ತಂದೆ-ರಾಜಾ ನಾಭೀರಾಯ(೧೪ ನೆ ಮನು)ತಾಯೀ-ರಾಣೀ ಮರುದೇವಿಜನ್ಮ ಸ್ಥಳ-ಅಯೋಧ್ಯ(ಉ.ಪ್ರ)ಗರ್ಭಕಲ್ಯಾಣ-ಆಷಾಡ ಕೃಷ್ಣ ೨ಜನ್ಮ ಕಲ್ಯಾಣ-ಚೈತ್ರ ಕೃಷ್ಣ ೯ದೀಕ್ಷಾ ಕಲ್ಯಾಣ-ಚೈತ್ರ ಕೃಷ್ಣ ೯ಕೇವಲ ಜ್ಞಾನ-ಪಾಲ್ಗ್ಹುಣ ಕೃಷ್ಣ ೧೧ಮೋಕ್ಷ(ನಿರ್ವಾಣ)ಕಲ್ಯಾಣ-ಮಾಘ ಕೃಷ್ಣ ೧೪ಜನತೆಗೆ ಕಲಿಸಿದ 6 ವಿದ್ಯೆಗಳು-ಅಸಿ,ಮಸಿ,ಕೃಷಿ,ವಿಧ್ಯೆ,ವಾಣಿಜ್ಯ,ಮತ್ತು ಶಿಲ್ಪ ಕಲೆ.ಪಟ್ಟ ರಾಣೀಯರು-ನಂದಾ(ಯಶಸ್ವತೀ),ಸುನಂದಾ.ಪುತ್ರರು-೧೦೧(ಭಾರತ,ಬಾಹುಬಲೀ ಸೇರೀ)ಪುತ್ರೀಯರು-ಬ್ರಾಮ್ಹೀ,ಸುಂದರೀ.(ಬ್ರಾಮ್ಹಿಗೆ ಅಕ್ಷರ ವಿಧ್ಯೆ,ಸುಂದರೀಗೆ ಅಂಕ ವಿಧ್ಯೆ ಕಳಿಸಿದರು.)ದೀಕ್ಷೆ(ವೈರಾಗ್ಯ)ಗೆ ಕಾರಣ-ನೀಲಾಂಜನ ನೃತ್ಯ.ದೀಕ್ಷಾ ಸ್ಥಳ-ಪ್ರಯಾಗ,ಸಿದ್ದಾರ್ಥಕ ವನದಲ್ಲಿ,ವಟ ವೃಕ್ಷದ ಕೆಳಗೆ.ಪ್ರಮುಖ ಗಣಧರ-ವೃಷಭ ಸೇನ.ಪ್ರಮುಖ ಆರ್ಯಿಕಾ-ಬ್ರಾಮ್ಹೀ.ಪ್ರಮುಖ ಉಪಸ್ಥಿತಿ-ಭರತ ಚಕ್ರವರ್ತೀ.(ಈತನಿಂದಲೇ ನಮ್ಮ ದೇಶಕ್ಕೆ ಭಾರತ ಎಂದು ಹೆಸರು ಬಂತು ಅನ್ನುವ ಉಲ್ಲೇಖಗಳು ಸಿಗುತ್ತವೆ)ಆಯು,ಎತ್ತರ-೮೪ ಲಕ್ಷ ಪೂರ್ವ ಮತ್ತು ೫೦೦ ಧನುಸ್ಸು ಎತ್ತರ.ಇತರೆ ಹಸರುಗಳು-ಆದಿನಾಥ,ಪುರುದೇವ,ಆದಿ ಬ್ರಮಂಹ,ಪ್ರಜಾಪತೀ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು.
hHarihara I Bukka Raya I (Hakka Bukka)13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ನಾಯಕ (ಬೇಡ / ವಾಲ್ಮೀಕಿ ನಾಯಕ) ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.