The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಬ ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಬಿಂದ್ಯಾ ರಾಮ್ (ಹುಟ್ಟಿದ್ದು, ೨ ಅಕ್ಟೋಬರ್ ೧೯೯೨), ತನ್ನ ಸಿನಿಮಾ ಕ್ಷೇತ್ರದ ಹೆಸರಿನಿಂದ ಜನಪ್ರಿಯರಾಗಿರುವ ರಚಿತಾ ರಾಮ್, ಅವರು ಭಾರತದ ನಟಿ. ಪ್ರಥಮವಾಗಿ ಕನ್ನಡ ಚಿತ್ರರಂಗದಲ್ಲಿ ಅವರು ತುಂಬ ಹೆಸರುವಾಸಿಯಾಗಿದ್ದಾರೆ, ಅವರು ಕನ್ನಡದ ಕಿರುತೆರೆಯ ದೈನಿಕ ಧಾರಾವಾಹಿ ಎರಿಯಸ್ ಎಂಬ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ಯಶಸ್ವಿ ದೂರದರ್ಶನ ವೃತ್ತಿಜೀವನದ ನಂತರ, ರಚಿತಾ ಅವರು, ಮೊದಲನೆಯ ಚಿತ್ರ "ಬುಲ್ ಬುಲ್"ನಲ್ಲಿ ದರ್ಶನ್ ಜೊತೆಗ ನಾಯಕಿಯಾಗಿ ನಟಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕದ ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರನ್ನು ಆಯ್ಕೆ ಮಾಡಲು ೨೦೧೮ರಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ನಡೆಯಲಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ
ಪ್ರತಿ ವರ್ಷದ ಎಪ್ರೀಲ್ ೨೩ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತರಾಷ್ಟ್ರೀಯ ಪುಸ್ತಕ ದಿನ ಎಂದೂ ಕರೆಯುತ್ತಾರೆ). ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ (ಯುನೆಸ್ಕೋ) 1995ರಲ್ಲಿ ಮೊದಲ ಬಾರಿಗೆ ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯಗಳ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೊ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ ಅಥವಾ ಗಮ್ಮತ್ತು ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ ಹೊಂದಿದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ವಿಜ್ಞಾನದ ಇತಿಹಾಸ ಎಂದರೆ ನೈಸರ್ಗಿಕ ವಿಶ್ವವನ್ನು ಮನುಷ್ಯರು ಅರ್ಥಮಾಡಿಕೊಳ್ಳುವಿಕೆಯ ಐತಿಹಾಸಿಕ ಬೆಳವಣಿಗೆಯ ಅಧ್ಯಯನ ಎನ್ನಬಹುದು. 20ನೇ ಶತಮಾನದ ಕೊನೆಯವರೆಗೆ ವಿಜ್ಞಾನದ ಇತಿಹಾಸ, ವಿಶೇಷವಾಗಿ ಭೌತಿಕ ಮತ್ತು ಜೀವಶಾಸ್ತ್ರೀಯ ವಿಜ್ಞಾನಗಳು ತಪ್ಪು ಸಿದ್ಧಾಂತಗಳ ಮೇಲೆ ನೈಜ ಸಿದ್ಧಾಂತಗಳ ವಿಜಯವನ್ನು ಸಾರುವ ನಿರೂಪಣೆಗಳ ಹಾಗೆ ಕಾಣಲಾಗುತ್ತಿತ್ತು. ವಿಜ್ಞಾನವು ನಾಗರಿಕತೆಯ ಪ್ರಗತಿಯ ಒಂದು ಬಹುಮುಖ್ಯ ಆಯಾಮವೆಂದೇ ಚಿತ್ರಿತವಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಬಹುರಾಷ್ಟ್ರೀಯ ನಿಗಮಗಳ ಉಗಮ ಮತ್ತು ಬೆಳವಣಿಗೆಯು ದ್ವಿತೀಯ ಜಾಗತಿಕ ಮಹಾಯುದ್ಧದ ನಂತರದ ವಿದ್ಯಮಾನವಾಗಿದೆ. ಬಹುರಾಷ್ಟ್ರೀಯ ನಿಗಮಗಳು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿದೆ. ಜಗತ್ತಿನ ಒಟ್ಟು ಉತ್ಪಾದನೆಯಲ್ಲಿ ಸುಮಾರು ಶೇ.೩೦ ರಷ್ಟನ್ನು ಬಹುರಾಷ್ಟ್ರೀಯ ನಿಗಮಗಳು ಉತ್ಪಾದಿಸುತ್ತಿವೆ ಎಂಬ ಅಂಶವನ್ನು ಗಮನಿಸಿದರೆ ವಿಶ್ವ ಆರ್ಥಿಕತೆಯಲ್ಲಿ ಅವುಗಳ ಮಹತ್ವ ಅರಿವಿಗೆ ಬರುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.