The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕದ ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರನ್ನು ಆಯ್ಕೆ ಮಾಡಲು ೨೦೧೮ರಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ನಡೆಯಲಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಸಂವಹನ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.