The most-visited ಕನ್ನಡ Wikipedia articles, updated daily. Learn more...
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.
(ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.
thumb|ಅರ್ಜೆಂಟೀನಾ ಕಛೇರಿಗಳು ಫೇಸ್ಬುಕ್ ಒಂದು ವಿಶ್ವವ್ಯಾಪಕವಾದ ಸಾಮಾಜಿಕ ಸಂಪರ್ಕದ ಜಾಲತಾಣ, ಇದರ ಕಾರ್ಯಾಚರಣೆ ನಿರ್ವಹಿಸುವ ಮತ್ತು ಖಾಸಗಿಯಾಗಿ ಮಾಲಿಕತ್ವ ಹೊಂದಿರುವ ಕಂಪನಿ Facebook, Inc. ಬಳಕೆದಾರರು ತಮ್ಮ ಮಿತ್ರರನ್ನು ಇಲ್ಲಿ ಸೇರಿಸಬಹುದು ಮತ್ತು ಅವರಿಗೆ ಸಂದೇಶಗಳನ್ನು ಕಳುಹಿಸಬಹುದು, ಮತ್ತು ತಮ್ಮ ವೈಯುಕ್ತಿಕ ವ್ಯಕ್ತಿಚಿತ್ರವನ್ನು ಸಹ ನವೀಕರಿಸಿ ಮಿತ್ರರಿಗೆ ತಮ್ಮ ಬಗ್ಗೆ ಪ್ರಕಟಿಸಬಹುದು. ಇದರ ಜೊತೆಗೆ, ಬಳಕೆದಾರರು ಊರು, ಕಾರ್ಯಾಲಯ, ಶಾಲೆ, ಮತ್ತು ಪ್ರದೇಶದವರು ಸಂಘಟಿಸಿದ ಸಂಪರ್ಕಜಾಲದಲ್ಲಿ ಸೇರಬಹುದು.
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.
ಮಹಾದೇವಿ ವರ್ಮಾ (೧೯೦೭- ೧೧, ಸೆಪ್ಟೆಂಬರ್ ೧೯೮೭) ಹಿಂದಿ ಭಾಷೆಯ ಪ್ರಸಿದ್ಧ ಕವಯಿತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ, ಮಹಿಳಾ ಹಕ್ಕುಗಳ ಪ್ರತಿಪಾದಕಿ ಹಾಗು ಶಿಕ್ಷಣ ತಜ್ಞೆ.೧೯೧೪ರಿಂದ ೧೯೩೮ರವರೆಗೆ ಹಿಂದಿ ಸಾಹಿತ್ಯಲೋಕದಲ್ಲಿ ನೆಡೆದ ಛಾಯಾವಾದ ಸಾಹಿತ್ಯ ಪ್ರಕಾರ ಹಾಗು ಹಲವು ಕವಿ ಸಮ್ಮೇಳನಗಳಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸಿದರು. "ಆಧುನಿಕ ಮೀರಾ" ಎಂದು ಖ್ಯಾತರಾಗಿದ್ದ ಇವರು ೧೯೮೨ ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು. ಅಲಹಾಬಾದಿನಲ್ಲಿರುವ ಪ್ರಯಾಗ್ ಮಹಿಳಾ ವಿದ್ಯಾಪೀಠದ ಪ್ರಾಂಶುಪಾಲೆ ಹಾಗು ಉಪ-ಕುಲಪತಿಯಾಗಿಯು ಸಹ ಇವರು ಕಾರ್ಯ ನಿರ್ವಹಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಮೆಗಾಡೆಟ್ ಇದು ಅಮೆರಿಕದ ಹೆವಿ ಮೆಟಲ್ ಬ್ಯಾಂಡ್, 1983ರಲ್ಲಿ ಲಾಸ್ ಏಂಜಲೀಸ್, ಕ್ಯಾಲಿಫೋರ್ನಿಯಾದಲ್ಲಿ ಸ್ಥಾಪನೆಗೊಂಡಿತು. ಮೆಟಾಲಿಕಾಬ್ಯಾಂಡಿನಿಂದ ಮುಸ್ಟೇನ್ ನಿರ್ಗಮಿಸಿದ ನಂತರ ಡೇವ್ ಮುಸ್ಟೇನ್ ಮತ್ತು ಡೇವ್ ಎಲೇಫ್ಸನ್ ಈ ಬ್ಯಾಂಡ್ ಸ್ಥಾಪಿಸಿದರು. ಇದು ಇಲ್ಲಿಯವರೆಗೂ ಹನ್ನೆರಡು ಸ್ಟುಡಿಯೋ ಆಲ್ಬಮ್, ಆರು ಲೈವ್ ಆಲ್ಬಮ್, ಎರಡು ಇ.ಪಿ.ಗಳು, ಇಪ್ಪತ್ತಾರು ಏಕಗೀತೆಗಳು, ಮೂವತ್ತೆರಡು ಸಂಗೀತ ವಿಡಿಯೋಗಳು, ಮತ್ತು ಮೂರು ಸಂಗ್ರಹಗಳನ್ನು ಬಿಡುಗಡೆ ಮಾಡಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಕಾರವು ಬಂದಾಗ 'ಐ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸತ್ಯಜಿತ್ ರೇ (ಮೇ ೨, ೧೯೨೧ - ಏಪ್ರಿಲ್ ೨೩, ೧೯೯೨) ಪ್ರಸಿದ್ಧ ಬ೦ಗಾಳಿ ಚಿತ್ರ ನಿರ್ದೇಶಕರು, ಮತ್ತು ಭಾರತೀಯ ಚಿತ್ರರ೦ಗದ ಅತಿ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರು. ಪಥೇರ್ ಪಾ೦ಚಾಲಿ, ಅಪರಾಜಿತೊ ಮತ್ತು ಅಪ್ಪುವಿನ ಪ್ರಪ೦ಚ - ಈ ಮೂರು ಚಿತ್ರಗಳ ಸರಣಿ ಇವರ ಅತಿ ಪ್ರಸಿದ್ಧ ಚಿತ್ರಗಳನ್ನು ಒಳಗೊ೦ಡಿದೆ. ಅಕಿರಾ ಕುರೋಸಾವಾ, ಸ್ಟೀವನ್ ಸ್ಪೀಲ್ಬರ್ಗ್, ಮಾರ್ಟಿನ್ ಸೋರ್ಸೆಸಿ ಮೊದಲಾದ ಅನೇಕ ಹೆಸರಾ೦ತ ನಿರ್ದೇಶಕರು ಸತ್ಯಜಿತ್ ರೇ ಅವರ ಚಿತ್ರಗಳನ್ನು ಮೆಚ್ಚಿಕೊ೦ಡಿರುವುದು೦ಟು.
ಬ ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಮಾಪಣ್ಣ ಮಲ್ಲಿಕಾರ್ಜುನ್ ಖರ್ಗೆ (ಜನನ 21 ಜುಲೈ 1942) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, 16 ನೇ ಲೋಕಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಇವರು ಭಾರತ ಸರ್ಕಾರದಲ್ಲಿ ಮಾಜಿ ರೈಲ್ವೆ ಸಚಿವರಾಗಿದ್ದರು ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು. ಖರ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು 2009 ರಿಂದ ಸಂಸತ್ತಿನ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಸದಸ್ಯ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
"ಕಾರ್ಮಿಕ ಕಾನೂನು (ಅಥವಾ"ಲೇಬೊರ್", ಅಥವಾ"ಉದ್ಯೋಗ" ಕಾನೂನು) ಇದನ್ನು ಕಾನೂನಿನ ರಚನೆಗಳು ಎನ್ನಲಾಗುತ್ತದೆ.ಅಲ್ಲದೇ ಆಡಳಿತಾತ್ಮಕ ನಿಯಮಗಳು,ಅದಲ್ಲದೇ ಕಾನೂನು ಹಕ್ಕುಗಳ ವಿವರಣೆ ಮಾಡುವ,ನಿಬಂಧನೆಗಳುಕಾರ್ಯನಿರತ ಜನರು ಅಲ್ಲದೇ ಅವರ ಸಂಘಟನೆಗಳ ವಿವರವನ್ನೊಳಗೊಂಡಿದೆ. ಇದು ಟ್ರೇಡ್ ಯುನಿಯನ್,ಕಾರ್ಮಿಕ ಸಂಘಟನೆಗಳ ಸಂಬಂಧಿಸಿದ ಹಲವಾರು ಅಂಶಗಳನ್ನು,ಉದ್ಯೋಗದಾತರು ಮತ್ತು ಕಾರ್ಮಿಕರು ಇವರ ಬಗ್ಗೆ ವಿವರಗಳನ್ನು ತಿಳಿಸುತ್ತದೆ. ಕೆನಡಾದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಕಾನೂನುಗಳು ಒಟ್ಟುಗೂಡಿದ ಕೆಲಸದ ತಾಣಗಳ ಬಗ್ಗೆ ಹೇಳುತ್ತವೆಯೇ ವಿನಹ ವ್ಯಕ್ತಿಗಳ ವಿಷಯವನ್ನಲ್ಲ.
ಭಾರತದ ಸಾಮಾಜಿಕ -ಧಾರ್ಮಿಕ ಸುಧಾರಣ ಕ್ರಿಯೆಯಲ್ಲಿ ,ಹೆಚ್ಚು ತೊಡಗಿಸಿಕೊಂಡ ಬ್ರಹ್ಮ ಸಮಾಜ ವನ್ನು ೧೮೨೮ ರಲ್ಲಿ ಹುಟ್ಟು ಹಾಕಿದ್ದು, ರಾಜ ರಾಮ್ ಮೋಹನ್ ರೋಯ್ (ಆಗಸ್ಟ್ ೧೪, ೧೭೭೪ – ಸೆಪ್ಟೆಂಬರ್ ೨೭, ೧೮೩೩),ಬ್ರಾಹ್ಮೋ ಸಭಾ ದ ಸಂಸ್ಥಾಪಕರು , (ಜೊತೆಗೆ ದ್ವಾರಕನಾಥ್ ಟ್ಯಾಗೋರ್ ಮತ್ತು ಇತರ ಬೆಂಗಾಲಿ ಬ್ರಾಹ್ಮಣರು ). ರಾಜನೀತಿ , ಸಾರ್ವಜನಿಕ ಆಡಳಿತ ಮತ್ತು ವಿದ್ಯಾಭ್ಯಾಸ ಹಾಗೆ ಧರ್ಮದೊಂದಿಗೆ ,ಅವರ ಪ್ರಭಾವ ಪಾರದರ್ಶಕವಾಗಿತ್ತು. ಹಿಂದೂ ಧರ್ಮದ ಉತ್ತರ ಕ್ರಿಯಾ ಪದ್ಧತಿಯಲ್ಲಿ , ಸತಿಪದ್ಧತಿಯನ್ವಯ ವಿಧವೆಯನ್ನು ಗಂಡಂದಿರ ಅಗ್ನಿ ಚಿತೆಯ ಮೇಲೆ ಬಲವಂತವಾಗಿ ಸುಡುತ್ತಿದ್ದ 'ಸತಿ' ಪದ್ಧತಿಯನ್ನು ರದ್ದು ಮಾಡುವ ಹೋರಾಟದಲ್ಲಿ ಹೆಚ್ಚು ಕ್ರಿಯಾಶಿಳರಾಗಿದ್ದರು.