The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಆನಂದಿ ಗೋಪಾಲ ಜೋಷಿ ಅಥವಾ ಆನಂದಿಬಾಯಿ ಗೋಪಾಲರಾವ್ ಜೋಶಿ (March 31, 1865 - February 26, 1887)ರವರು ಪಾಶ್ಚಾತ್ಯ ವೈದ್ಯಕೀಯ ಪದವಿ ಪಡೆದ ಮೊಟ್ಟಮೊದಲ ಮಹಿಳಾ ವೈದ್ಯೆ. (ಕಾದಂಬಿನಿ ಗಂಗೂಲಿಯವರೂ ಸಹ ಇದೇ ವರ್ಷ,ಅಂದರೇ ೧೮೮೬ ರಲ್ಲಿ ಆದರೇ ಆನಂದಿಬಾಯಿಯ ನಂತರ ಪದವಿ ಪಡೆದರು). ಅಷ್ಟೇ ಅಲ್ಲದೇ ಪಾಶ್ಚಾತ್ಯ ಮೊಟ್ಟಮೊದಲ ಹಿಂದೂ ಮಹಿಳೆ, ಮತ್ತು ಅಮೇರಿಕಾದ ನೆಲದ ಮೇಲೆ ನಡೆದ ಮೊದಲ ಹಿಂದೂ ಮಹಿಳೆ ಎಂಬ ಹೆಗ್ಗಳಿಕೆಯೂ ಇವರಿಗೇ ಸಲ್ಲುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಪ್ರಬಂಧ ರಚನೆ - ಅರ್ಥಪೂರ್ಣ ಖಚಿತ ವಾಕ್ಯಗಳ ಮೂಲಕ ವ್ಯಕ್ತಿಯ ಆಲೋಚನೆಗಳನ್ನು ಲಿಖಿತವಾಗಿ ಅಭಿವ್ಯಕ್ತಿಸುವ ಹಾಗೂ ನಿರ್ದಿಷ್ಟ ವಿಷಯಗಳನ್ನು ಕ್ರಮಬದ್ಧ ರೀತಿಯಲ್ಲಿ ಸಮರ್ಪಕವಾಗಿ ನಿರೂಪಿಸುವ ಪರಿ. ಇದು ವ್ಯಾಕರಣದ ಒಂದು ಅಂಗ. ==ಪ್ರಬಂಧಗಳು==amm na baga ಪ್ರಬಂಧ ರಚನೆಯು ಸಾಮಾನ್ಯವಾಗಿ ಲೇಖಕನ ವ್ಯಕ್ತಿತ್ವ ವೈಶಿಷ್ಟ್ಯದಿಂದ ಕೂಡಿದ ಸ್ವತಂತ್ರ ನಿರ್ದಿಷ್ಟ ಲಘು ಬರೆವಣಿಗೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಥವಾ ಕಾಂಗ್ರೆಸ್(ಐ) ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಇಂದು ಇರುವ ರಾಜಕೀಯ ಪಕ್ಷಗಳಲ್ಲಿ ಅತ್ಯಂತ ಹಳೆಯದು, ಮತ್ತು ಅತ್ಯಂತ ದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದು. ೧೮೮೫ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷ, ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೊರಾಟದಲ್ಲಿ ಮುಂಚೂಣಿಯಲ್ಲಿದ್ದು ಹಾಗು ಸ್ವಾತಂತ್ರ್ಯದ ನಂತರ ಭಾರತದ ಆಡಳಿತವನ್ನು ಅತಿ ಹೆಚ್ಚು ಕಾಲ ವಹಿಸಿದೆ. ೧೪ ನೆಯ ಲೋಕ ಸಭೆಯಲ್ಲಿ (೨೦೦೪-೨೦೦೯) ೧೪೫ ಸ್ಥಾನಗಳನ್ನು ಹೊಂದಿದ್ದು ಸದ್ಯಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಪಕ್ಷ.
== ಮಾಹಿತಿ ಹಕ್ಕು ಕಾಯಿದೆ 2005 (RTI ) ಎಂಬುದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ. ಇದು ಭಾರತದಲ್ಲಿ ಮಾಹಿತಿಯ ಸ್ವಾತಂತ್ರ್ಯದ ಶಾಸನದ ಒಂದು ರಾಷ್ಟ್ರೀಯ ಮಟ್ಟದ ಕಾರ್ಯಗತಗೊಳಿಸುವಿಕೆಯಾಗಿದ್ದು, "ಮಾಹಿತಿ ಹಕ್ಕಿನ ಕಾರ್ಯಸಾಧ್ಯ ಆಡಳಿತ ಪದ್ಧತಿಯನ್ನು ನಾಗರಿಕರಿಗಾಗಿ ಸಜ್ಜುಗೊಳಿಸುವುದಕ್ಕೆ" ಸಂಬಂಧಿಸಿದ ಉದ್ದೇಶವು ಇದರ ಹಿಂದೆ ಅಡಗಿದೆ. ರಾಜ್ಯ-ಮಟ್ಟ ಕಾನೂನೊಂದರ ಅಡಿಯಲ್ಲಿ ಪರಿಗಣಿಸಿ ಚರ್ಚಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿದ, ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾಯಿದೆಯು ಅನ್ವಯಿಸುತ್ತದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.