The most-visited ಕನ್ನಡ Wikipedia articles, updated daily. Learn more...
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ೧೯೬೧ದಲ್ಲಿ ಸ್ಥಾಪಿಸಲಾಯಿತು. ೧೯೬೧ರಲ್ಲಿ ೧೭೯೨ ಬಸ್ಸುಗಳಿದ್ದವು. ಸಂಸ್ಥೆಯು ಕರ್ನಾಟಕ ಸರ್ಕಾರದ ಮಾಲೀಕತ್ವದಲ್ಲಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬೆಂಗಳೂರು ವಿಶ್ವವಿದ್ಯಾಲಯ - ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಲಯವೂ ಒಂದಾಗಿದೆ. ಇದು ಇದರ ಪ್ರಮಾಣ ಮತ್ತು ಗುಣಮಟ್ಟಗಳೆರಡನ್ನೂ ಗಮನಿಸಿದ ಮಾತು. ಇದನ್ನು ದೃಢೀಕರಿಸುವಂತೆ ಇದರ ವ್ಯಾಪ್ತಿಯಲ್ಲಿರುವ ೭೨೦ ಕಾಲೇಜುಗಳನ್ನು ಮತ್ತು ಇದರ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಯುಜಿಸಿ ನ್ಯಾಕ್ ಸಮಿತಿಯು ನೀಡಿರುವ ಪಂಚತಾರಾ ಮಾನ್ಯತೆಯನ್ನು ಗಮನಿಸಬಹುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಅಥವಾ . 63 ವರ್ಷಗಳ ಹಿಂದೆ , 21 ಬಂದೂಕುಗಳ ಸೆಲ್ಯೂಟ್ ಮತ್ತು ಡಾ ರಾಜೇಂದ್ರ ಪ್ರಸಾದರ ಭಾರತದ ರಾಷ್ಟ್ರೀಯ ಧ್ವಜದಲ್ಲಿ unfurling ಜನವರಿ 26, 1950 ರಂದು ಭಾರತೀಯ ಗಣರಾಜ್ಯ ಐತಿಹಾಸಿಕ ಜನ್ಮ ಘೋಷಿಸಿತು; ನಮ್ಮ ದೇಶದ ನಂತರ 894 ದಿನಗಳ ಬ್ರಿಟಿಷ್ ರೂಲ್ ನ ವಾಪಸಾತಿ ನಂತರ ಪರಮಾಧಿಕಾರದ ಆಯಿತು . ಅಂದಿನಿಂದ ಪ್ರತಿ ವರ್ಷ ದಿನ ರಾಷ್ಟ್ರದೆಲ್ಲೆಡೆ ದೊಡ್ಡ ಹೆಮ್ಮೆ ಮತ್ತು ಸಂತೋಷ ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಚಳಿಗಾಲದ ಒಲಿಂಪಿಕ್ಸ್ 2018 ಅಧಿಕೃತವಾಗಿ XXIII ಒಲಂಪಿಕ್ ವಿಂಟರ್ ಗೇಮ್ಸ್ ,ಅಧಿಕೃತವಾಗಿ ಶೈಯೋನೈಸ್ಡ್ ಮತ್ತು ಸಾಮಾನ್ಯವಾಗಿ ಪಿಯಾಂಗ್ಚಂಗ್ 2018 ಎಂದು ಕರೆಯಲ್ಪಡುತ್ತದೆ, ಇದು ಫೆಬ್ರರವರಿ 9 ರಿಂದ ನಡೆಯುವ ಅಂತರಾಷ್ಟ್ರೀಯ ಬಹು ಕ್ರೀಡಾ ಸ್ಪರ್ಧೆಯಾಗಿದೆ. ಫೆಬ್ರವರಿ 25, 2018 ರಂದು, ದಕ್ಷಿಣ ಕೊರಿಯಾದ ಪಯೋಂಗ್ಚಂಗ್ ಕೌಂಟಿಯಲ್ಲಿ, ಫೆಬ್ರವರಿ 8, 2018 ರ ಉದ್ಘಾಟನಾ ಸಮಾರಂಭದಂದು ಕೆಲವು ಘಟನೆಗಳಿಗೆ ಆರಂಭಿಕ ಸುತ್ತುಗಳು ನಡೆದವು. ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿ ನಡೆದ 123 ನೇ ಐಓಸಿ ಅಧಿವೇಶನದಲ್ಲಿ ಜುಲೈ 2011 ರಲ್ಲಿ ಪೈಯೋಂಗ್ಚಾಂಂಗ್ ಆತಿಥೇಯರಾಗಿ ಆಯ್ಕೆಯಾಯಿತು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಸಿಖ್ಖ್ಧರ್ಮದ ಸಂಸ್ಥಾಪಕ ಗುರುನಾನಕ್ ಪಶ್ಚಿಮ ಪಂಜಾಬ್ನ (ಈಗಿನ ಪಾಕಿಸ್ತಾನ) ತಳವಂಡಿಯಲ್ಲಿ,ಏಪ್ರಿಲ್ ೧೫, ೧೪೬೯ರಂದು ಹುಟ್ಟಿದರು.ಸಾಮಾನ್ಯ ಹಿಂದೂ ಕುಟುಂಬದ ಕಲ್ಯಾಣ್ ದಾಸ್ ಮತ್ತು ಮೆಹ್ತಾ ತೃಪ್ತ ದಂಪತಿಗಳ ಮಗನಾಗಿ ಜನಿಸಿದರು.ತಮ್ಮ ೧೬ನೇ ವಯಸ್ಸಿನಲ್ಲಿ ಸುಲಾಖನಿಯವರೊಂದಿಗೆ ವಿವಾಹ.ಶ್ರೀಚಂದ್ ಮತ್ತು ಲಕ್ಷ್ಮಿದಾಸ್ ಮಕ್ಕಳು. ಕಾರ್ತಿಕ ಮಾಸದ ಪೌರ್ಣಮಿಯ ದಿನವನ್ನು ಗುರುನಾನಕ್ ಅವರ ಜನ್ಮದಿನವನ್ನಾಗಿ ಆಚರಿಸಲಾಗುತ್ತದೆ. ತುಂಬಾ ಸಹಜ ಮತ್ತು ಸರಳವಾಗಿದ್ದ, ಪವಾಡ ಮಾಡುತ್ತೇನೆಂದು ಹೇಳಿಕೊಳ್ಳದ, ಜನರ ಮಧ್ಯದ ಜೀವ ಗುರುನಾನಕ್.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
[[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಅಬ್ರಹಾಂ ಒರ್ಟೆಲಿಯಸ್ (ಆರ್ಟೆಲ್ಸ್, ಒರ್ಥೆಲಿಯಸ್, ವರ್ಟೆಲ್ಸ್; 14 ಏಪ್ರಿಲ್ 1527 - 28 ಜೂನ್ 1598) ಫ್ಲೆಮಿಶ್ ಕಾರ್ಟೊಗ್ರಾಫರ್ ಮತ್ತು ಭೂಗೋಳಶಾಸ್ತ್ರಜ್ಞರಾಗಿದ್ದರು, ಸಾಂಪ್ರದಾಯಿಕವಾಗಿ ಮೊದಲ ಆಧುನಿಕ ಅಟ್ಲಾಸ್ ಸೃಷ್ಟಿಕರ್ತರಾಗಿ ಗುರುತಿಸಲ್ಪಟ್ಟರು,ಥಿಯಟ್ರಮ್ ಆರ್ಬಿಸ್ ಟೆರಾರಮ್ (ದಿ ಥಿಯೇಟರ್ ಆಫ್ ದಿ ವರ್ಲ್ಡ್). ಒರ್ಟೆಲಿಯಸ್ನ್ನು ನೆದರ್ಲ್ಯಾಂಡ್ನ ಕಾರ್ಟೋಗ್ರಫಿ ಶಾಲೆಯ ಸಂಸ್ಥಾಪಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ ಮತ್ತು ಅದರ ಸುವರ್ಣಯುಗದಲ್ಲಿ (ಸುಮಾರು 1570-1670) ಶಾಲೆಯ ಅತ್ಯಂತ ಗಮನಾರ್ಹ ಪ್ರತಿನಿಧಿಗಳಲ್ಲಿ ಒಬ್ಬರು.1570 ರಲ್ಲಿ ಅವರ ಅಟ್ಲಾಸ್ನ ಪ್ರಕಟಣೆ ಸಾಮಾನ್ಯವಾಗಿ ನೆದರ್ ಲ್ಯಾಂಡಿಷ್ ಕಾರ್ಟೊಗ್ರಫಿಯ ಸುವರ್ಣ ಯುಗದ ಅಧಿಕೃತ ಆರಂಭವೆಂದು ಪರಿಗಣಿಸಲ್ಪಟ್ಟಿದೆ. ತಮ್ಮ ಪ್ರಸ್ತುತ ಸ್ಥಾನಗಳಿಗೆ ತೇಲುವ ಮೊದಲು ಖಂಡಗಳು ಒಟ್ಟಿಗೆ ಸೇರಿಕೊಂಡಿದ್ದವು ಎಂದು ಊಹಿಸುವ ಮೊದಲ ವ್ಯಕ್ತಿ ಎನ್ನಲಾಗಿದೆ.
ಪುನೀತ್ ರಾಜ್ಕುಮಾರ್ (ಇಂಗ್ಲಿಷ್: Puneeth Rajkumar) (ಜನನ 1975 17 ಮಾರ್ಚ್) ಭಾರತೀಯ ಚಿತ್ರನಟ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತಾ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಎಲೆಕ್ಟ್ರಾನಿಕ್ ಮತದಾನ ವು,( ಇ ಮತದಾನ ಎಂದೂ ಕರೆಯಲ್ಪಡುತ್ತದೆ ) ವಿವಿಧ ರೀತಿಯ ಮತದಾನಗಳನ್ನು ತನ್ನ ಪರಿಧಿಯಲ್ಲಿ ಒಳಗೊಂಡಂತಹ ಒಂದು ಪದವಾಗಿದ್ದು,ಎಲೆಕ್ಟ್ರಾನಿಕ್ (ವಿದ್ಯುನ್ಮಾನ) ರೀತಿಯಲ್ಲಿ ಮತ ಚಲಾಯಿಸುವ ಮತ್ತು ವಿದ್ಯುನ್ಮಾನ ರೀತಿಯಲ್ಲಿಯೇ ಮತಗಳನ್ನು ಎಣಿಸುವ ಪ್ರಕ್ರಿಯೆಗಳನ್ನು ಬಿಂಬಿಸುವ ಪದವಾಗಿದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಇವುಗಳನ್ನು ಒಳಗೊಂಡಿರುತ್ತವೆಪಂಚ್ ಕಾರ್ಡಗಳು, ಆಪ್ಟಿಕಲ್ ಸ್ಕಾನ್ ಮತದಾನದ ವ್ಯವಸ್ಥೆ ಮತ್ತು ವಿಶೇಷವಾದ ಮತಗಟ್ಟೆಗಳು ಡೈರೆಕ್ಟ್-ರೆಕಾರ್ಡಿಂಗ್ ಎಲೆಕ್ಟ್ರಾನಿಕ್ ಮತದಾನದ ಪದ್ಧತಿಯನ್ನೂ (ಡಿ ಅರ್ ಇ) ಸಹ ಒಳಗೊಂಡಿರುತ್ತದೆ, ಅದು ದೂರವಾಣಿಗಳು, ಖಾಸಗಿ ಗಣಕಯಂತ್ರದ ನೆಟ್ವರ್ಕ್ ಗಳು, ಅಥವಾ ಅಂತರ್ಜಾಲಗಳ ಮುಖಾಂತರ, ಮತಪತ್ರಗಳು ಮತ್ತು ಮತಗಳನ್ನು ರವಾನಿಸುವುದೂ ಸಹ ಸೇರಿರುತ್ತದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಮತಪತ್ರಗಳ ಎಣಿಕೆಯನ್ನು ತ್ವರಿತಗೊಳಿಸಬಹುದು ಮತ್ತು ವಿಕಲ ಮತದಾರರಿಗೆ ಉತ್ತಮಗೊಂಡ ತಲುಪುವಿಕೆಯನ್ನು ಒದಗಿಸಬಹುದು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.