The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
{{#if:| ನ್ಯೂಯಾರ್ಕ ನಗರ ಅಮೇರಿಕಾ ದೇಶದ ಅತಿ ದೊಡ್ಡ ನಗರ ಮತ್ತು ಜಗತ್ತಿನ ಅತಿ ದೊಡ್ಡ ನಗರಗಳಲ್ಲಿ ಒಂದು. ಈ ನಗರವು ಜಗತ್ತಿನ ಆರ್ಥಿಕ, ಕಲೆ ಮತ್ತು ಮನೋರಂಜನೆಯ ಮೇಲೆ ತನ್ನ ಪ್ರಭಾವವನ್ನು ಬೀರುತ್ತದೆ. ಸಂಯುಕ್ತ ರಾಷ್ಟ್ರ ಸಂಘಟನೆಯ ಮುಖ್ಯ ಕಚೇರಿಯನ್ನು ಮತ್ತು ಅನೇಕ ಇತರ ಕಚೇರಿಗಳನ್ನು ಹೊಂದಿರುವ ಈ ನಗರ ಅಂತರ್ರಾಷ್ಟ್ರೀಯ ವಿದ್ಯಮಾನಗಳ ಮೇಲೆಯೂ ಪ್ರಭಾವವನ್ನು ಬೀರುತ್ತದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
== ಸರ್ವಾಂತಯಾ೯ಮಿ ಪ್ಲಾಸ್ಟಿಕ್ ಮೆದುವಾದ ಮತ್ತು ವಿವಿಧ ಆಕಾರಗಳ ಘನ ಕಾಯಗಳನ್ನು ಹೊಂದಿರುವ ಸಿಂಥಟಿಕ್ ವಸ್ತು ಪ್ಲಾಸ್ಟಿಕ್ಗಳನ್ನು ಹೆಚ್ಚಿನ ಅಣು ದ್ರವ್ಯರಾಶಿಯ ಜೈವಿಕ ಪಾಲಿಮರ್ಗಳು ಆದರೆ ಸಾಮಾನ್ಯವಾಗಿ ಇತರ ಪದಾರ್ಥಗಳುನ್ನು ಹೊಂದಿರುತ್ತದೆ. ವಿಶ್ವದಾದ್ಯಂತ ಘನ ತ್ಯಾಜ್ಯ ವಸ್ತುಗಳ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ಅತಿ ಭರದಿಂದ ತಲೆಯೆತ್ತಿ ಮೆರೆಯುತ್ತಿರುವ ನಗರಗಳು, ತ್ಯಾಜ್ಯ ವಸ್ತುಗಳ ಹೆಚ್ಚಳಕ್ಕೆ ಮುಖ್ಯವಾದ ಕಾರಣಗಳು, ತ್ಯಾಜ್ಯ ವಸ್ತುಗಳ ವಿಲೇವಾರಿಗೆ ಇದು ದೊಡ್ಡ ಸವಾಲಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಭಾರತ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸಾವಿತ್ರಿ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ. ಸಾವಿತ್ರಿ - ಹಿಂದೂ ಧರ್ಮದ ಪುರಾಣಗಳಲ್ಲಿನ ಪ್ರಮುಖ ವ್ಯಕ್ತಿಗಳಲ್ಲೊಬ್ಬರು. ಸತ್ಯವಾನ್ ಅವರ ಪತ್ನಿಯಾದ ಸಾವಿತ್ರಿ, ತನ್ನ ಪತಿ ಮರಣ ಹೊಂದಿದಾಗ ಯಮನೊಡನೆ ಮಾತಿನಲ್ಲೇ ಹೋರಾಡಿ, ತನ್ನ ಪತಿಯ ಪ್ರಾಣವನ್ನು ಯಮನಿಂದ ಹಿಂದಕ್ಕೆ ಪಡೆಯುತ್ತಾಳೆ .ಅಂದಿನಿಂದ ಸತಿಶ್ರೇಷ್ಠರಲ್ಲಿ ಒಬ್ಬರೆಂದು ಪರಿಗಣಸಲಾಗುವ ಸಾವಿತ್ರಿ, ಸತಿ ಸಾವಿತ್ರಿ ಎಂದೇ ಪ್ರಸಿದ್ಧಿ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ. ಈ ಶೈಲಿಯಲ್ಲಿ ನವರತ್ನಗಳನ್ನು ಉಪಯೋಗಿಸಿಕೊಂಡು ರಚಿತವಾದ ಆಭರಣ ಹಿಂದೂ ಧರ್ಮ, ಜೈನ್ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮ ಪ್ರಮುಖ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಇತರ ಧರ್ಮಗಳ ನಡುವೆ ಹೊಂದಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ಮುಖ್ಯ ನ್ಯಾಯಾಧೀಶರು ಎನ್ನುವುದು ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿನ ಅತ್ಯಂತ ಶ್ರೇಷ್ಠ ನ್ಯಾಯಾ ಧೀಶರ ಪದವಿಯಾಗಿದೆ. ಇದು ಭಾರತದಲ್ಲಿ ಒಬ್ಬ ನ್ಯಾಯಾಧೀಶರು ಹೊಂದಬಹುದಾದ ನ್ಯಾಯಾಧೀಶರ ಅತ್ಯುನ್ನತ ಸ್ಥಾನವಾಗಿದೆ. ಮುಖ್ಯ ನ್ಯಾಯಾಧೀಶರು ಸರ್ವೋಚ್ಛ ನ್ಯಾಯಾಲಯದ ಆಡಳಿತಾತ್ಮಕ ಕಾರ್ಯಗಳನ್ನು ನೋಡಿಕೊಳ್ಳುವುದಲ್ಲದೆ, ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿರುವ ಪ್ರಮುಖ ನ್ಯಾಯಾಧೀಶರಂತೆ ಸಕ್ರಿಯ ಕಾರ್ಯ ನಿರ್ವಹಿಸುವರು.
ಸರ್ ಜಗದೀಶ್ಚಂದ್ರ ಬೋಸ್, ಸಿಎಸ್ಐ , ಸಿಐಈ, ಎಫ್ಆರ್ಎಸ್ (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು. ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
sneha ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.