The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಸುಭಾಷ್ ಚಂದ್ರ ಬೋಸ್ (; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೯೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಯೋಗ (ಸಂಸ್ಕೃತ, ಪಾಲಿ: yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಶ್ರೀನಿವಾಸ ರಾಮಾನುಜನ ಅಯ್ಯ೦ಗಾರ್ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕನ್ನಡದಲ್ಲಿ ಗದ್ಯಸಾಹಿತ್ಯ :- ಸದ್ಯದಲ್ಲಿ ಕನ್ನಡ ಗದ್ಯ ಸಾಹಿತ್ಯದ ಇತಿಹಾಸವನ್ನು ಹಲ್ಮಿಡಿ ಶಾಸನದಿಂದ (ಸು.450) ಗುರುತಿಸಬಹುದು. ಸು.5ನೆಯ ಶತಮಾನದಿಂದ ಸು.18ನೆಯ ಶತಮಾನದವರೆಗೆ ಅಸಂಖ್ಯ ಗದ್ಯ ಶಾಸನಗಳು ದೊರೆಯುತ್ತವೆ. ಅವುಗಳಲ್ಲಿ ವೀರಗಲ್ಲು, ಮಾಸ್ತಿಕಲ್ಲು, ದತ್ತಿಶಾಸನಗಳಲ್ಲಿಯ ಗದ್ಯ ಆಯಾ ಕಾಲದ ಐತಿಹಾಸಿಕ, ಸಾಮಾಜಿಕ ಮತ್ತು ಇತರ ಸಂಗತಿಗಳೊಂದಿಗೆ ಭಾಷಾಸ್ವರೂಪವನ್ನು ತಿಳಿಸುತ್ತದೆ.
[[ಚಿತ್ರ:GolGumbaz2.jpg |right|thumb|250px|ಗೋಲ ಗುಂಬಜ್] ಗೋಲ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.