The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
{{Infobox film | name = ಕೆಜಿಎಫ್ | image = KGF(film)poster.jpg | caption = | film name = KGF Chapter 1 | director = ಪ್ರಶಾಂತ್ ನೀಲ್ | producer = ವಿಜಯ್ ಕಿರಗಂದೂರ್ | writer = ಪ್ರಶಾಂತ್ ನೀಲ್ | screenplay = ಪ್ರಶಾಂತ್ ನೀಲ್ | story = ಪ್ರಶಾಂತ್ ನೀಲ್ | cinematography =ಭುವನ್ ಗೌಡ | starring = ಯಶ್ಶ್ರೀನಿಧಿ ಶೆಟ್ಟಿವಶಿಷ್ಠ ಎನ್. ಸಿಂಹಮಾಳವಿಕಾ ಅವಿನಾಶ್ | music = ರವಿ ಬಸ್ರೂರು | studio = ಹೋಂಬಾಳೆ | distributor =ಕನ್ನಡ - ಕೆ ಆರ್ ಜಿ ಸ್ಟುಡಿಯೊಸ್ ಹಿಂದಿ - ಎಕ್ಸಲ್ ಎಂಟರ್ ಟೇನ್ಮೆಂಟ್ ಮತ್ತು ಎಎ ಫ಼ಿಲಂಸ್ ತಮಿಳು - ವಿಶಾಲ್ ಫಿಲಂ ಫ಼ಾಕ್ಟ್ರಿ ತೆಲುಗು - ವಾರಾಹಿ ಚಲನಚಿತ್ರ ಮಲಯಾಳಂ - ಗ್ಲೋಬಲ್ ಯುನೈಟೆಡ್ ಮೀಡಿಯಾ | released = | runtime = ೨ : ೩೪ ತಾಸು | country = ಭಾರತ | language = ಕನ್ನಡ | budget = 70crore | gross =15-20crores ಕೆಜಿಎಫ್ ಅಧ್ಯಾಯ ೧ ೨೦೧೮ರಲ್ಲಿ ಬಿಡುಗಡೆಯಾದ ಭಾರತೀಯ ಕನ್ನಡ ಚಲನಚಿತ್ರ.ಇದನ್ನು ಮೂಲ ಭಾಷೆಯಿಂದ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಧ್ವನಿಪಥದೊಂದಿಗೆ(ಡಬ್ ಮಾಡಿ) ಬಿಡುಗಡೆ ಮಾಡಲಾಯಿತು. ಚಲನಚಿತ್ರವನ್ನು ಉಗ್ರಂ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ಅವರು ಬರೆದು ನಿರ್ದೇಶಿಸಿದ್ದಾರೆ ಮತ್ತು ಹೋಂಬಾಳೆ ಚಲನಚಿತ್ರಗಳ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿದ್ದಾರೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.