The most-visited ಕನ್ನಡ Wikipedia articles, updated daily. Learn more...
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ತ್ರಿಪದಿ ಲಕ್ಷಣ :-- ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ ಮೊದಲ ಸಾಲಿನಲ್ಲಿ ನಾಲ್ಕು ವಿಷ್ಣುಗಣಗಳು ಹಾಗೇ ಎರಡನೇ ಸಾಲಿನಲ್ಲಿ ನಾಲ್ಕುಗಣಗಳಲ್ಲಿ ಎರಡನೇ ಗಣ ಬ್ರಹ್ಮಗಣ ಹಾಗೂ ಉಳಿದವು ವಿಷ್ಣುಗಣಗಳು, ಮೂರನೇ ಸಾಲಿನಲ್ಲಿ ಮೂರುಗಣಗಳೂ, ಅದರಲ್ಲಿಯೂ ಎರಡನೇ ಗಣ ಬ್ರಹ್ಮಗಣವಾಗಿರುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಆಕಾಶವು, ಬಾಹ್ಯಾಕಾಶದ ಗುಮ್ಮಟ ಎಂದೂ ಪರಿಚಿತವಿರುವ, ಸಾಮಾನ್ಯವಾಗಿ, ವಾತಾವರಣ ಮತ್ತು ಉಳಿದ ಬಾಹ್ಯಾಕಾಶವನ್ನು ಒಳಗೊಂಡಂತೆ, ಭೂಮಿಯ ಮೇಲ್ಮೈಯ ಮೇಲೆ ಒಂದು ನಿರ್ದಿಷ್ಟ ದೂರದಲ್ಲಿ ಸ್ಥಿತವಾಗಿರುವ ಎಲ್ಲವನ್ನೂ ನಿರ್ದೇಶಿಸುತ್ತದೆ. ಖಗೋಳಶಾಸ್ತ್ರದ ಕ್ಷೇತ್ರದಲ್ಲಿ, ಆಕಾಶವನ್ನು ಬಾಹ್ಯಾಕಾಶ ಗೋಳ ಎಂದೂ ಕರೆಯಲಾಗುತ್ತದೆ. ಇದು ಸೂರ್ಯ, ನಕ್ಷತ್ರಗಳು, ಗ್ರಹಗಳು, ಮತ್ತು ಚಂದ್ರ ಸಾಗುತ್ತಿರುವಂತೆ ಕಾಣುವ ಒಂದು ಕಾಲ್ಪನಿಕ ಗುಮ್ಮಟ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಅಬ್ರಹಮ್ ಬೆಂಜಮಿನ್ ಡಿ ವಿಲಿಯರ್ಸ್ (ಜನನ: ಫೆಬ್ರವರಿ ೧೭, ೧೯೮೪ ಪ್ರೆಟೋರಿಯಾ, ದಕ್ಷಿಣ ಆಫ್ರಿಕಾದಲ್ಲಿ) ದಕ್ಷಿಣ ಆಫ್ರಿಕಾದ ಆಟಗಾರ. ಎಬಿ ಡೀ ವಿಲಿಯರ್ಸ್ ಏಕದಿನ ಹಾಗೂ ಟ್ವೆಂಟಿ೨೦ ಪಂದ್ಯಗಳಿಗೆ ದಕ್ಷಿಣ ಆಫ್ರಿಕ ಕ್ರಿಕೆಟ್ ತಂಡದ ನಾಯಕನಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಮೂರು ಆವೃತ್ತಿಗಳಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ಪರವಾಗಿ ಆಡಿದ್ದರು ಆದರೆ ನಂತರ ನಡೆದ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ದುರ್ಗೆ ಅಂದರೆ "ದುರ್ಗಮ್ಮ", ದೇವಿಯ ಅತ್ಯಂತ ಪ್ರಸಿದ್ಧ ಅವತಾರ ಮತ್ತು ಹಿಂದೂ ದೇವತಾಸಂಗ್ರಹದಲ್ಲಿ ಶಕ್ತಿ ದೇವತೆಯ ಮುಖ್ಯ ರೂಪಗಳ ಪೈಕಿ ಒಬ್ಬಳು. ದುರ್ಗೆಯ ಪ್ರಾಚೀನ ರೂಪವು ಹಿಮಾಲಯ ಹಾಗು ವಿಂಧ್ಯದ ನಿವಾಸಿಗಳಿಂದ ಆರಾಧಿಸಲ್ಪಟ್ಟ ಒಬ್ಬ ಪರ್ವತ ದೇವಿ, ಅಲೆಮಾರಿ ಅಭೀರ ಕುರುಬನಿಂದ ಆರಾಧಿಸಲ್ಪಟ್ಟ ಒಬ್ಬ ದೇವಿ, ಒಬ್ಬ ಸ್ತ್ರೀಯಾಗಿ ಕಲ್ಪಿಸಲ್ಪಟ್ಟ ಸಸ್ಯ ಆತ್ಮ, ಮತ್ತು ಒಬ್ಬ ಯುದ್ಧ ದೇವತೆಯ ಸಮನ್ವಯದ ಪರಿಣಾಮ. ಅವಳ ಭಕ್ತರು ನಾಗರಿಕತೆಯಲ್ಲಿ ಮುಂದುವರೆದಂತೆ, ಪ್ರಾಚೀನ ಯುದ್ಧ ದೇವತೆಯು ಎಲ್ಲವನ್ನು ಧ್ವಂಸಮಾಡುವ ಕಾಳಿಯ ವ್ಯಕ್ತಿರೂಪವಾಗಿ, ಸಸ್ಯ ಆತ್ಮವು ಆದಿ ಶಕ್ತಿ ಮತ್ತು ಸಂಸಾರದಿಂದ ಮುಕ್ತಿಕೊಡುವ ಸಂರಕ್ಷಕಿಯಾಗಿ ರೂಪಾಂತರಗೊಂಡಳು ಮತ್ತು ಅವಳು ಕ್ರಮೇಣ ಬ್ರಾಹ್ಮಣಿಕ ಪುರಾಣ ಹಾಗು ತತ್ವಶಾಸ್ತ್ರದ ಪಂಕ್ತಿಯಲ್ಲಿ ತರಲಾಯಿತು.ಉತ್ತರ ಭಾರತದಲ್ಲಿ ದುರ್ಗೆಯನ್ನು ಹೆಚ್ಚಾಗಿ ಪ್ರಾರ್ಥಿಸುವರು.ನವರಾತ್ರಿ ದಿನಗಳಲ್ಲಿ ಈ ದೇವತೆಗೆ ವಿವಿಧ ರೀತಿಯ ಅಲಂಕಾರ ಮಾಡಿ ಪೂಜಿಸುವರು.ಈ ದೇವಿಯು ಧೈರ್ಯ ಹಾಗು ಶೌರ್ಯದ ಸಂಕೇತ."ದುರ್ಗೆ ದೇವತೆ" ಅಥವಾ "ಆದಿ ಪರಶಕ್ತಿ" ಹಿಂದೂ ದೇವಾನು-ದೇವತೆಯರಲ್ಲಿ ಒಬ್ಬರು.
ಸ್ವಕೇಂದ್ರಿತ ವ್ಯಕ್ತಿತ್ವ ಮನೋರೋಗ ಅಥವಾ ಉನ್ಮಾದ ವ್ಯಕ್ತಿತ್ವ (ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್), ಈ ಮನೋರೋಗವನ್ನು ಸ್ವಕೇಂದ್ರಿತ ಗಮನಾಪೇಕ್ಷೆ ಎಂಬ ಹೆಸರಿನಲ್ಲಿಯೂ ಕರೆಯುತ್ತಾರೆ. ನಾಟಕೀಯತೆ/ಎಲ್ಲರ ಗಮನವನ್ನು ತನ್ನಡೆಗೆ ಸೆಳೆಯುವ ಪ್ರಯತ್ನ, ಶ್ರಮಪಡಲು ತಯಾರಿಲ್ಲದ ಮನಸ್ಸು, ವಿಫಲತೆಗೆ, ನಿರಾಶೆಗೆ ತೀವ್ರವಾಗಿ ಪರಿತಪಿಸುವುದು, ಅದಕ್ಕಾಗಿ ಇತರರನ್ನು ದೂಷಿಸುವುದು, ಸಂಬಂಧಗಳಲ್ಲಿ ಗಂಭೀರತೆ ಇಲ್ಲದಿರುವುದು,ಅತಿಯಾದ ಭಾವೋದ್ವೇಗ, ಹುಡುಗಾಟಿಕೆಯ ಪ್ರವೃತ್ತಿ ಹೆಚ್ಚು ಇರುವುದು, ಇವೆಲ್ಲ ಈ ಕಾಯಿಲೆಯ ಪ್ರಮುಖ ಲಕ್ಷಣಗಳು. ಇದರ ಲಕ್ಷಣ ಸಾಮಾನ್ಯವಾಗಿ ಹದಿಹರೆಯದವರಲ್ಲಿ ಹಾಗೂ ಪ್ರೌಢಾವಸ್ಥೆಯಲ್ಲಿ ಪ್ರಾರಂಭವಾಗುತ್ತದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ರೈತನು ಕೃಷಿಯಲ್ಲಿ, ಅಥವಾ ಆಹಾರ ಅಥವಾ ಕಚ್ಚಾವಸ್ತುಗಳಿಗಾಗಿ ಸಾವಯವಗಳನ್ನು ಬೆಳೆಸುವಲ್ಲಿ ತೊಡಗಿರುವ ವ್ಯಕ್ತಿ. ಈ ಪದವು ಸಾಮಾನ್ಯವಾಗಿ ಜಮೀನು ಬೆಳೆಗಳು, ಹಣ್ಣಿನ ತೋಟಗಳು, ದ್ರಾಕ್ಷಿತೋಟಗಳು, ಕೋಳಿಗಳು, ಅಥವಾ ಇತರ ಪ್ರಾಣಿಗಳನ್ನು ಬೆಳೆಸುವ ಸ್ವಲ್ಪ ಸಂಯೋಜನೆಯನ್ನು ಮಾಡುವ ಜನರಿಗೆ ಅನ್ವಯಿಸುತ್ತದೆ. ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ.