The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ನವೆಂಬರ್ ೧ - ನವೆಂಬರ್ ತಿಂಗಳ ಮೊದಲ ದಿನ, ಮತ್ತು ವರ್ಷದ ೩೦೫ನೇ ದಿನ(ಅಧಿಕ ವರ್ಷದಲ್ಲಿ ೩೦೬ನೇ ದಿನ). ೧೯೫೬ ರಂದು ಕರ್ನಾಟಕ ಏಕೀಕರಣವಾಯಿತು. ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು.ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ದಿನವನ್ನಾಗಿ ಅಚರಿಸಲಾಗುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಏಕತೆ ಪ್ರತಿಮೆ ಎಂಬುದು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಜಕಾರಣಿ ವಲ್ಲಭಭಾಯ್ ಪಟೇಲ್ (೧೮೭೫-೧೯೫೦) ಅವರ ಪ್ರತಿಮೆಯಾಗಿದೆ. ಪ್ರಸ್ತುತ ಇದು ೧೮೨ ಮೀಟರ್ (೫೯೭ ಫ಼ೀಟ್) ನಷ್ಟು ಎತ್ತರವಿದ್ದು ವಿಶ್ವದ ಅತಿ ಎತ್ತರದ ಪ್ರತಿಮೆಯ ದಾಖಲೆಯನ್ನು ಹೊಂದಿದೆ. ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಲ್ಲಭಭಾಯಿ ಪಟೇಲ್ ಪ್ರಮುಖ ನಾಯಕರಾಗಿದ್ದರು ಮತ್ತು ಭಾರತದ ಮೊದಲ ಉಪಪ್ರಧಾನ ಮಂತ್ರಿಯಾಗಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಛಲವಾದಿ ಸಮುದಾಯದ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಪಾಪಿ ಶತ್ರುವಿನ ಕತ್ತಿಗೆ ಬಲಿಯಾದವರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಮೈಸೂರು ರಾಜ್ಯವು 1948 ರಿಂದ 1956 ರವರೆಗೂ ಭಾರತದ ಒಕ್ಕೂಟದಲ್ಲಿ ಒಂದು ಪ್ರತ್ಯೇಕ ರಾಜ್ಯವಾಗಿತ್ತು.ಮೈಸೂರು ಇದರ ರಾಜಧಾನಿಯಾಗಿತ್ತು.1956 ರಲ್ಲಿ ಈ ರಾಜ್ಯ ಗಣನೀಯವಾಗಿ ವಿಸ್ತರಿಸಲ್ಪಟ್ಟಿತು. ಇದು 1956ರಲ್ಲಿ ಭಾಷಾವಾರು ರಾಜ್ಯ ವಿಂಗಡಣೆ ಪರಿಣಾಮ ಕೂರ್ಗ್ ರಾಜ್ಯ, ಪಶ್ಚಿಮ ಮದ್ರಾಸ್ ಪ್ರೆಸಿಡೆನ್ಸಿಯಿಂದ ಕನ್ನಡ ಮಾತನಾಡುವ ಜಿಲ್ಲೆಗಳು,ದಕ್ಷಿಣ ಮುಂಬಯಿ ಪ್ರೆಸಿಡೆನ್ಸಿ,ಮತ್ತು ಪಶ್ಚಿಮ ಹೈದರಾಬಾದ್ ರಾಜ್ಯದ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲಾಯಿತು ರಾಜ್ಯ ಏಕರೂಪದ ಕನ್ನಡ-ಮಾತನಾಡುವ ರಾಜ್ಯವಾಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
[[ಚಿತ್ರ:GolGumbaz2.jpg |right|thumb|250px|ಗೋಲ ಗುಂಬಜ್] ಗೋಲ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಸರ್ಕಾರದ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ಶಾಸನಬದ್ಧ ಅಧಿಕಾರಗಳನ್ನು ಹೊಂದಿರುವ ಪ್ರಾಧಿಕಾರವಾಗಿದೆ. ಕರ್ನಾಟಕದಲ್ಲಿ ಅಧಿಕೃತ ಆಡಳಿತ ಭಾಷೆಯಾಗಿ ಕನ್ನಡ ಅಳವಡಿಕೆ ಮತ್ತು ಬಳಕೆಯನ್ನು ಇದು ಪರಿಶೀಲಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಲು ಶಿಫಾರಸ್ಸು ಮಾಡುತ್ತದೆ. ಕನ್ನಡ ಭಾಷೆಯ ಪ್ರೋತ್ಸಾಹ ಹಾಗೂ ಬೆಳವಣಿಯ ಕಾರ್ಯಚಟುವಟಿಕೆಗಳನ್ನು ನಡೆಸುವ ಕಾರ್ಯವ್ಯಾಪ್ತಿ ಹೊಂದಿದೆ.
'ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆದಮ್'ಆಡಮ್, ಇಬ್ರಾಹಿಂಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.