The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕ್ರೋನ್ಸ್ ರೋಗ ವನ್ನು (ಕ್ರೋನ್ಸ್-ಲೆಸ್ನಿವೊಸ್ಕಿ ರೋಗ , ಅಥವಾ ಮೊರ್ಬಸ್ ಲೆಸ್ನಿವೊಸ್ಕಿ-ಕ್ರೋನ್ಸ್ , ಗ್ರಾನುಲೋಮಾಟಸ್ಕೊಲೈಟಿಸ್ ಮತ್ತು ಕರಳುಗಳ ಊದುವಿಕೆ ಎಂದೂ ಕರೆಯಲಾಗುತ್ತದೆ) ಕರಳುಗಳ ಉರಿಯುವಿಕೆಯ ರೋಗವಾಗಿದ್ದು ಅದು ಬಾಯಿ ಯಿಂದ ಗುದದ ಜೀರ್ಣಾಂಗವ್ಯೂಹದ ಯಾವುದೇ ಭಾಗಕ್ಕಾದರೂ ಪರಿಣಾಮ ಬೀರಬಹುದು, ಹಲವಾರು ಬಗೆಯರೋಗ ಲಕ್ಷಣಗಳನ್ನು ಉಂಟುಮಾಡುತ್ತಿದೆ. ಇದು ಪ್ರಾಥಮಿಕವಾಗಿ ಹೊಟ್ಟೆಯ ನೋವು, ಅತಿಸಾರ (ರಕ್ತದಿಂದಾದರೂ ಆಗಿರಬಹುದು), ವಾಂತಿ, ಅಥವಾತೂಕ ಕಡಿಮೆಯಾಗುವುದಕ್ಕೆ ಕಾರಣವಾಗುತ್ತದೆ, ಆದರೆ ಜೀರ್ಣಾಂಗವ್ಯೂಹದ ಹೊರಭಾಗವಾದಂತಹ ಚರ್ಮ ತುರಿಕೆ, ಸಂಧಿವಾತ ಮತ್ತುಕಣ್ಣು ಉರಿತಕ್ಕೂ ಸಹ ಕಾರಣವಾಗಬಹುದು.ಕ್ರೋನ್ಸ್ ರೋಗವು ಒಂದು ಸ್ವಯಂ ರಕ್ಷಿತ ರೋಗವಾಗಿದ್ದು, ಜೀರ್ಣಾಂಗವ್ಯೂಹದರಕ್ಷಣಾ ರಚನೆಯ ದೇಹದ ಮೇಲೆ ಆಕ್ರಮಿಸುತ್ತದೆ, ಇದರಿಂದಾಗಿಉರಿಯುವಿಕೆಗೆ ಕಾರಣವಾಗುತ್ತದೆ; ಇದನ್ನು ಇನ್ಫ್ಲಮೇಟರಿ ಬವೆಲ್ ರೋಗದ ಲಕ್ಷಣದಂತೆ ವರ್ಗೀಕರಿಸಲಾಗಿದೆ. ಕ್ರೋನ್ಸ್ ರೋಗಕ್ಕೆ ಅನುವಂಶಿಕಸಂಬಂಧದದವಿರುವುದರ ಸಾಕ್ಷ್ಯವಿದೆ, ಇದು ರಕ್ತಸಂಬಂಧಿಗಳಲ್ಲಿ ಈ ರೋಗವು ಹೆಚ್ಚಿನ ತೊಂದರೆಯನ್ನುಂಟುಮಾಡಬಹುದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ಪ್ರವಾಸ ಸಾಹಿತ್ಯ 19ನೆಯ ಶತಮಾನದಲ್ಲಿಯೇ ಆರಂಭವಾಯಿತು. ಜವಹರಲಾಲ್ ನೆಹರೂರವರು ಕೆ.ಪಿ.ಎಸ್.ಮೆನೆನ್ ರವರ ಗ್ರಂಥಕ್ಕೆ ಮುನ್ನುಡಿ ಬರೆಯುತ್ತ ಹೀಗೆ ಹೇಳಿದ್ದಾರೆ: ‘ಪ್ರವಾಸ ಮಾಡುವುದು ಒಳ್ಳೆಯದು; ಹಾಗೆ ಪ್ರವಾಸ ಮಾಡಲಾರದೇ ಹೋದಾಗ ಪ್ರವಾಸದ ಬಗೆಗೆ ಬಂದಿರುವ ಸಾಹಿತ್ಯವನ್ನಾದರೂ ಓದುವುದು ಉತ್ತಮ ಹವ್ಯಾಸ’. ಕನ್ನಡಿಗರು ಈ ಹವ್ಯಾಸ ಬೆಳೆಸಿಕೊಳ್ಳಲು ಸಾಕಷ್ಟು ಸರಕಿದೆ.
ವಿಕಿ ಎನ್ನುವುದು ತಂತ್ರಜ್ಞಾನವಾಗಿದ್ದು ಅದು ಬಳಕೆದಾರರಿಗೆ ಲಭ್ಯವಿರುವ ಮಾಹಿತಿಯನ್ನು ಸೇರಿಸಲು ಅನುವು ಮಾಡಿಕೊಡುತ್ತದೆ, ಜೊತೆಗೆ ಬಳಕೆದಾರರಿಗೆ ಬದಲಾವಣೆಗಳನ್ನು ಅಥವಾ ತಿದ್ದುಪಡಿಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಸಾಮಾನ್ಯವಾಗಿ ಅಂತರ್ಜಾಲದಲ್ಲಿ ಒದಗಿಸುವ ಪುಟಗಳು (ಜಾಲ ಪುಟಗಳು) ಮಾಹಿತಿಯನ್ನು ಪುಟದ ಓದುಗರಿಂದ ಬದಲಾಯಿಸಲಾಗುವುದಿಲ್ಲ. ವಿಕಿ ತಂತ್ರಜ್ಞಾನವನ್ನು ಆಧರಿಸಿದ ಪುಟಗಳಲ್ಲಿನ ಮಾಹಿತಿಯನ್ನು ಓದುಗರಿಂದ ಬದಲಾಯಿಸಬಹುದು.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.