The most-visited ಕನ್ನಡ Wikipedia articles, updated daily. Learn more...
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ರವಿ ಬೆಳಗೆರೆ (೧೫ ಮಾರ್ಚ್ ೧೯೫೮ - ೧೩ ನವೆಂಬರ್ ೨೦೨೦) ಕನ್ನಡದ ಪತ್ರಕರ್ತರು ಹಾಗೂ ಪತ್ರಿಕೋದ್ಯಮಿಯಾಗಿದ್ದರು. ಹಾಯ್ ಬೆಂಗಳೂರ್ ಎಂಬ ವಾರಪತ್ರಿಕೆ ಹಾಗೂ 'ಓ ಮನಸೇ' ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಈ ದಿನ, ಭಾರತದಾದ್ಯಂತ, ಮಕ್ಕಳಿಗಾಗಿ ಮತ್ತು ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಆಯುರ್ವೇದದ ಪ್ರಕಾರ, ದೋಷವು ಒಬ್ಬ ವ್ಯಕ್ತಿಯ ದೇಹದಲ್ಲಿರುವ ಮೂರು ವಸ್ತುಗಳಲ್ಲಿ ಒಂದು. ಇಪ್ಪತ್ತನೇ ಶತಮಾನದ ಸಾಹಿತ್ಯದಿಂದ ಆರಂಭಗೊಂಡು, ಈ ಕಲ್ಪನೆಯನ್ನು ತ್ರಿದೋಷೋಪದೇಶ ಎಂದು ಕರೆಯಲಾಗುತ್ತಿದೆ. ಅಧಿಕೃತ ಆಯುರ್ವೇದ ಶಾಸ್ತ್ರಗ್ರಂಥಗಳು ಶರೀರದಲ್ಲಿ ಈ ಮೂರು ವಸ್ತುಗಳ ಪ್ರಮಾಣ ಮತ್ತು ಗುಣಮಟ್ಟಗಳು ಹೇಗೆ ಋತುಗಳು, ದಿನದ ಸಮಯ, ಆಹಾರ ಮತ್ತು ಹಲವು ಇತರ ಅಂಶಗಳ ಪ್ರಕಾರ ಏರಿಳಿಯುತ್ತವೆ ಎಂದು ವಿವರಿಸುತ್ತವೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಕರ್ನಾಟಕದ ಹಬ್ಬಗಳು : ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಜಾಲತಾಣವು ಒಂದು ಒಂಟಿ ಪ್ರಭಾವಕ್ಷೇತ್ರ ನಾಮದಿಂದ (ಡೊಮೇನ್ ನೇಮ್) ಸೇವೆಪಡೆಯುವ ಸಂಬಂಧಿತ ಜಾಲಪುಟಗಳ ಸಮೂಹ. ಒಂದು ಜಾಲತಾಣವು ಕನಿಷ್ಠ ಒಂದು ವೆಬ್ ಸರ್ವರ್ನಲ್ಲಿ ಸ್ಥಳಾವಕಾಶ ಪಡೆದಿರುತ್ತದೆ, ಮತ್ತು ಏಕರೂಪ ಸಾಧನ ಶೋಧಕ (ಯೂನಿಫ಼ಾರ್ಮ್ ರಿಸೋರ್ಸ್ ಲೊಕೇಟರ್) ಎಂದು ಕರೆಯಲ್ಪಡುವ ಒಂದು ಅಂತರಜಾಲ ವಿಳಾಸದ ಮುಖಾಂತರ ಅಂತರಜಾಲ ಅಥವಾ ಖಾಸಗಿ ಸ್ಥಳೀಯ ವಲಯ ಜಾಲದಂತಹ (ಲೋಕಲ್ ಏರಿಯಾ ನೆಟ್ವರ್ಕ್) ಒಂದು ಜಾಲಬಂಧದ ಮೂಲಕ ಪ್ರವೇಶಿಸಬಲ್ಲದ್ದಾಗಿರುತ್ತದೆ. ಎಲ್ಲ ಸಾರ್ವಜನಿಕವಾಗಿ ಸುಲಭ ಗಮ್ಯ ಜಾಲತಾಣಗಳು ಒಟ್ಟಾಗಿ ವಿಶ್ವವ್ಯಾಪಿ ಜಾಲವನ್ನು (ವರ್ಲ್ಡ್ ವೈಡ್ ವೆಬ್) ರಚಿಸುತ್ತವೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಿಂಗ್ ಫಿಶರ್ ರೆಡ್ ,ಇದನ್ನು ಈ ಮುಂಚೆ ಸಿಂಪ್ಲಿಫೈ ಡೆಕ್ಕನ್ ಅದಲ್ಲದೇ ಅದಕ್ಕೂ ಮೊದಲು ಏರ್ ಡೆಕ್ಕನ್ ಎಂದು ಹೇಳಲಾಗುತ್ತಿತ್ತು, ಇದೊಂದು ಕಡಿಮೆ-ವೆಚ್ಚದ ಏರ್ ಲೈನ್ ವಿಮಾನಯಾನ ಸೌಕರ್ಯ ನೀಡುವ ಸಂಸ್ಥೆ ಎನ್ನಲಾಗುತ್ತಿತ್ತು,ಇದನ್ನು ಕಿಂಗ್ ಫಿಶರ್ ಏರ್ ಲೈನ್ಸ್ ನಿರ್ವಹಿಸುತ್ತದೆ. ಇದರ ಕೇಂದ್ರ ಕಚೇರಿಯು [೧] ಭಾರತದಮುಂಬಯಿನಲ್ಲಿದೆ. ಈ ವಿಮಾನ ಸಂಸ್ಥೆಯು ಪ್ರಯಾಣಿಕರಿಗೆ ಆಗಾಗ ಕಡಿಮೆ ವೆಚ್ಚದ ಉತ್ತಮ ಸೇವೆ ಫ್ರಿಕ್ವೆಂಟ್ ಫ್ಳೈಯರ್ ಮೈಲ್ಸ್ ನ್ನು ನೀಡುತ್ತದೆ.(ಇದನ್ನು ಕಿಂಗ್ ಮೈಲ್ಸ್ ಎನ್ನುತ್ತಾರೆ.)ಕಿಂಗ್ ಫಿಶರ್ ರೆಡ್ ಗಾಗಿ ಕಿಂಗ್ ಕ್ಲಬ್ ಲಾಯಲ್ಟಿ ಮೂಲಕ ಅದರ ಪ್ರಧಾನ ಸಂಸ್ಥೆ ಕಿಂಗ್ ಫಿಶರ್ ಏರ್ ಲೈನ್ಸ್ ನಲ್ಲಿ ಟಿಕೆಟ್ ಗಳ ಮುಂಗಡ ಮಾಡಿಸುವ ವ್ಯವಸ್ಥೆ ಇದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.