The most-visited ಕನ್ನಡ Wikipedia articles, updated daily. Learn more...
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಅಗತ್ಯ ಸೇವೆ ನಿರ್ವಹಣೆ ಕಾಯಿದೆ (Essential Services Maintenance Act) (ESMA) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ, ಸರ್ಕಾರಿ ನೌಕರರ ಮೇಲೆ ಅಂಕುಶ ಹಾಕುವ ಕಾಯಿದೆ 1968 ರಿಂದ ಜಾರಿಯಲ್ಲಿದೆ. ಜಮ್ಮು ಕಾಶ್ಮೀರದ ಕೆಲ ಭಾಗಕ್ಕೆ ವಿನಾಯಿತಿ ನೀಡಲಾಗಿದೆ. ಕರ್ನಾಟಕದಲ್ಲಿ 1994ರಲ್ಲಿ ಈ ಕಾನೂನಿನ ಮೊದಲ ಉಲ್ಲೇಖ ಆಯಿತು.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಸುಧಾರಣೆ ಎಂಬ ಪ್ರಕ್ರಿಯೆ ಮಾನವನ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.ಇತಿಹಾಸದಲ್ಲಿ ತಿಳಿದಿರುವಂತೆ ಸಾಮಾಜಿಕ ರಾಜಕೀಯ ಹಾಗೂ ಧಾರ್ಮಿಕ ಸುಧಾರಣೆಗಳು ಮಾನವನ ಮೇಲೆ ಎಷ್ಹ್ಟೊಂದು ಪ್ರಾಭಾವ ಬೀರಿವೆ. ಹೀಗೆ ಚುನಾವಣಾ ಸುಧಾರಣೆಗಳೂ ಸಹ ಪ್ರಭಾವ ಬೀರುತ್ತವೆ.ಚುನಾವಣೆ ಎಂದರೆ ಒಂದು ಸಮೂಹದ ಜನರು ತಮ್ಮ ಆಶೆ-ಅಭಿಲಾಷೆಗಳಿಗೆ,ಜೀವಕ್ಕೆ ಬೇಕಾಗುವ ಮೂಲ ಸೌಕರ್ಯಗಳನ್ನು ಒದಗಿಸಿ, ಸುಖ ಸಂತೋಷದಿಂದ ಜೀವಿಸಲು ಅನುವು ಮಾಡಿಕೊಡುವ, ಹಾಗೂ ಸಹಕರಿಸುವಂತಹ ಒಬ್ಬ ಜವಾಬ್ದಾರಿಯುತ ವ್ಯಕ್ತಿ ಅಥವಾ ಗುಂಪನ್ನು ಅಯ್ಕೆ ಮಾಡುವ ಪ್ರಕ್ರಿಯೆ. ಚುನಾವಣೆಯು ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಜೆಗಳ ಕೈಯಲ್ಲಿರುವ ಶಕ್ತಿಶಾಲಿ ಅಸ್ತ್ರವಾಗಿ ಸಂವಿಧಾನದಿಂದ ಪಡೆದವರ ಚುನಾವಣೆಯನ್ನು ಪ್ರಜಾಪ್ರಭುತ್ವದ ಆಧಾರ ಸ್ಥಂಭ ಎಂದು ಕರೆಯಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಈ ದಿಶಾಧ್ವನಿಕ ಶಬ್ದಚಿತ್ರಣ ವು ಸಾಮಾನ್ಯವಾಗಿ ಸ್ಟಿರಿಯೊ ಅಥವಾ ಧ್ವನಿಯ ಪುನರುತ್ಥಾನದ ಕ್ರಿಯೆಯೆನಿಸಿದೆ.ಎರಡು ಅಥವಾ ಅದಕ್ಕಿಂತ ಹೆಚ್ಚು ಸ್ವತಂತ್ರ ಆಡಿಯೊ ಚಾನಲ್ ಗಳಿಂದ ಶಬ್ದದ ಪ್ರತಿಧ್ವನಿಗೆ ಪೂರಕವಾಗಲಿದೆ.ಇಲ್ಲಿ ಸುಸಾಂಗತ್ಯ ಸಂಗೀತ ಧ್ವನಿಗಾಗಿ ಧ್ವನಿವರ್ಧಕಗಳನ್ನು (ಲೌಡ್ ಸ್ಪೀಕರ್)ಬಳಸಲಾಗುತ್ತದೆ.ಹೀಗೆ ವಿವಿಧೆಡೆಯಿಂದ ಈ ಸಮ್ಮೀತಿಯ ಶಬ್ದಚಿತ್ರಣವು ಶ್ರವಣಕ್ಕೆ ನೈಸರ್ಗಿಕವಾಗಿ ಬರುವಂತೆ ಮಾಡುವ ವಿಧಾನವೇ ಸ್ಟೀರಿಯೊಫೊನಿಕ್ ಎನ್ನಲಾಗಿದೆ. ಇದಕ್ಕೆ ಹೋಲಿಕೆ ಎನ್ನುವಂತೆ ಇದನ್ನು ಬಹುತೇಕ ಮೊನೊಫೊನಿಕ್ ಅಥವಾ "ಮೊನೊ" ಪೂರಕ ಧ್ವನಿತ್ವದ ಪರಿಣಾಮವಾಗಿದೆ.ಈ ಆಡಿಯೊ ಒಂದು ವಾಹಕ ರೂಪವಾಗಿರುತ್ತದೆ.ಅಂದರೆ ಧ್ವನಿಯ ವಲಯದ (ಈ ಪುರಾತನ ದೃಶ್ಯ ವಲಯದ ವಿಜಿವಲ್ ಫೀಲ್ಡ್ ತೋರಿಸುತ್ತದೆ.) ಈ ಸ್ಟಿರಿಯೊ ರೆಕಾರ್ಡಿಂಗ್ ನ್ನು ಎಫ್ ಎಂ ಪ್ರಸಾರ ಮತ್ತು ಡಿಜಿಟಲ್ ಆಡಿಯೊ ಪ್ರಸಾರ (DAB)ಗಳಲ್ಲಿಯಲ್ಲದೇ ವಿವಿಧ ಟೆಲೆವಿಜನ್ ವಿಧಾನಗಳಲ್ಲಿ ಉಪಯೋಗಿಸಲಾಗುತ್ತದೆ. ಸ್ಟಿರಿಯೊಗಳಲ್ಲಿ ಧ್ವನಿಮುದ್ರಣದಲ್ಲಿ ಧ್ವನಿ ಎಂಜನೀಯರ್ ಪರಿಣತರು ವಿವಿಧ ವಿಧಾನಗಳನ್ನು ಬಳಸುತ್ತಾರೆ.ಎರಡು ದಿಶೆಗಳಲ್ಲಿ ಮೈಕ್ರೊಫೊನ್ ಗಳನ್ನು ಬಳಸಲಾಗುತ್ತದೆ.ಇದರೊಂದಿಗೆ ಸಮಾನಾಂತರ ಆಡಿಯೊಗಳಲ್ಲಿ ಸರ್ವದಿಕ್ಕುಗಳಲ್ಲಿ ಮೈಕ್ರೊಫೊನ್ ಗಳು ಅಥವಾ ಅತ್ಯಧಿಕ ಸಂಕೀರ್ಣ ತಂತ್ರಜ್ಞಾನವನ್ನು ಇದಕ್ಕೆ ಬಳಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಎಲೆಕ್ಟ್ರಾನಿಕ್ ಮತದಾನ ವು,( ಇ ಮತದಾನ ಎಂದೂ ಕರೆಯಲ್ಪಡುತ್ತದೆ ) ವಿವಿಧ ರೀತಿಯ ಮತದಾನಗಳನ್ನು ತನ್ನ ಪರಿಧಿಯಲ್ಲಿ ಒಳಗೊಂಡಂತಹ ಒಂದು ಪದವಾಗಿದ್ದು,ಎಲೆಕ್ಟ್ರಾನಿಕ್ (ವಿದ್ಯುನ್ಮಾನ) ರೀತಿಯಲ್ಲಿ ಮತ ಚಲಾಯಿಸುವ ಮತ್ತು ವಿದ್ಯುನ್ಮಾನ ರೀತಿಯಲ್ಲಿಯೇ ಮತಗಳನ್ನು ಎಣಿಸುವ ಪ್ರಕ್ರಿಯೆಗಳನ್ನು ಬಿಂಬಿಸುವ ಪದವಾಗಿದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಇವುಗಳನ್ನು ಒಳಗೊಂಡಿರುತ್ತವೆಪಂಚ್ ಕಾರ್ಡಗಳು, ಆಪ್ಟಿಕಲ್ ಸ್ಕಾನ್ ಮತದಾನದ ವ್ಯವಸ್ಥೆ ಮತ್ತು ವಿಶೇಷವಾದ ಮತಗಟ್ಟೆಗಳು ಡೈರೆಕ್ಟ್-ರೆಕಾರ್ಡಿಂಗ್ ಎಲೆಕ್ಟ್ರಾನಿಕ್ ಮತದಾನದ ಪದ್ಧತಿಯನ್ನೂ (ಡಿ ಅರ್ ಇ) ಸಹ ಒಳಗೊಂಡಿರುತ್ತದೆ, ಅದು ದೂರವಾಣಿಗಳು, ಖಾಸಗಿ ಗಣಕಯಂತ್ರದ ನೆಟ್ವರ್ಕ್ ಗಳು, ಅಥವಾ ಅಂತರ್ಜಾಲಗಳ ಮುಖಾಂತರ, ಮತಪತ್ರಗಳು ಮತ್ತು ಮತಗಳನ್ನು ರವಾನಿಸುವುದೂ ಸಹ ಸೇರಿರುತ್ತದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಮತಪತ್ರಗಳ ಎಣಿಕೆಯನ್ನು ತ್ವರಿತಗೊಳಿಸಬಹುದು ಮತ್ತು ವಿಕಲ ಮತದಾರರಿಗೆ ಉತ್ತಮಗೊಂಡ ತಲುಪುವಿಕೆಯನ್ನು ಒದಗಿಸಬಹುದು.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಆಭರಣಗಳು ಮನುಷ್ಯನ ಅಲಂಕರಣ ಸಾಧನಗಳಲ್ಲಿ ಒಂದು (ತೊಡುಗೆ); ಅಂಗರಾಗಗಳು (ನೋಡಿ- ಅಂಗರಾಗಗಳು,-ಅಂಗರಾಗಶಾಸ್ತ್ರ) ಮತ್ತು ಉಡುಗೆ ಉಳಿದ ಎರಡು ಸಾಧನಗಳು. ಇವು ವೈಯಕ್ತಿಕ ಶೃಂಗಾರಕ್ಕೆ ಧರಿಸಲಾಗುವ ಬ್ರೋಚುಗಳು, ಉಂಗುರಗಳು, ಕಂಠಹಾರಗಳು, ಕಿವಿಯೋಲೆಗಳು, ಲೋಲಕಗಳು ಮತ್ತು ಕಂಕಣಗಳಂತಹ ಸಣ್ಣ ಅಲಂಕಾರಿಕ ವಸ್ತುಗಳನ್ನು ಒಳಗೊಂಡಿರುತ್ತವೆ. ರತ್ನಾಭರಣಗಳನ್ನು ಮೈ ಮೇಲೆ ಧರಿಸಬಹುದು ಅಥವಾ ಬಟ್ಟೆಗಳಿಗೆ ಲಗತ್ತಿಸಬಹುದು, ಮತ್ತು ಈ ಪದವು ಬಾಳಿಕೆ ಬರುವ ವಸ್ತುಗಳಿಗೆ ಸೀಮಿತವಾಗಿದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಮಂಗಳದ್ರವ್ಯ ಎಂದರೆ ಒಳ್ಳೆಯದಾಗಲಿ ಎಂಬ ನಂಬಿಕೆಗೆ ಪೂರಕವಾಗಿ ಜನಪದರು ಬಳಸುವ ಪರಿಕರ. ಇವನ್ನು ಬಳಸುವ ಸಂದರ್ಭಗಳಿಗನುಗುಣವಾಗಿ ಸ್ಥೂಲವಾಗಿ ದ್ಯೆನಂದಿನ ಜೀವನದ, ಹಬ್ಬಹರಿದಿನಗಳ, ಮದುವೆ ಮುಂಜಿಗಳ ಮಂಗಳದ್ರವ್ಯಗಳೆಂದು ವಿಂಗಡಿಸಬಹುದು. ಅರಿಶಿನ, ಕುಂಕುಮ, ಹೂವು, ಗಂಧ, ಅಕ್ಷತೆ, ಬಳೆ, ರಂಗೋಲಿ, ಧೂಪ, ದೀಪ, ತೋರಣ ಇತ್ಯಾದಿಗಳನ್ನು ನಿತ್ಯಜೀವನದಲ್ಲಿಯೂ ಹಬ್ಬಹರಿದಿನಗಳಲ್ಲಿಯೂ ಮದುವೆ ಮುಂಜಿಗಳಲ್ಲಿಯೂ ಬಳಸುತ್ತಾರೆ.
ರಜನೀಕಾಂತ್ ಕನ್ನಡಿಗ(ಜನನ: ಡಿಸೆಂಬರ್ ೧೨ ೧೯೪೯) - ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಕನ್ನಡ ಚಿತ್ರರಂಗವಲ್ಲದೆ, ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿಯೂ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಇವರು ಬೆಂಗಳೂರು ಮಹಾನಗರ ಸಾರಿಗೆಯಲ್ಲಿ ನಿರ್ವಾಹಕರಾಗಿದ್ದುಕೊಂಡು ನಾಟಕಗಳಲ್ಲಿ ಅಭಿನಯಿಸಲು ಪ್ರಾರಂಭಿಸಿದರು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅಸೂಯೆಯು ಒಂದು ಭಾವನೆ, ಮತ್ತು ಈ ಶಬ್ದವು ಸಾಮಾನ್ಯವಾಗಿ ಸ್ಥಾನಮಾನದ ನಿರೀಕ್ಷಿತ ನಷ್ಟ ಅಥವಾ ದೊಡ್ಡ ವೈಯಕ್ತಿಕ ಮೌಲ್ಯದ ಯಾವುದರ ಬಗ್ಗೆಯಾದರೂ, ನಿರ್ದಿಷ್ಟವಾಗಿ ಮಾನವ ಸಂಪರ್ಕದ ಸಂಬಂಧದಲ್ಲಿ ಅಭದ್ರತೆ, ಭಯ, ಕಾಳಜಿ, ಮತ್ತು ಆತಂಕದ ಯೋಚನೆಗಳು ಮತ್ತು ಅನಿಸಿಕೆಗಳನ್ನು ಸೂಚಿಸುತ್ತದೆ. ಅಸೂಯೆಯು ಹಲವುವೇಳೆ ಸಿಟ್ಟು, ಅಸಮಾಧಾನ, ಅಪರ್ಯಾಪ್ತತೆ, ಅಸಹಾಯಕತೆ ಮತ್ತು ಜಿಗುಪ್ಸೆಯಂತಹ ಭಾವನೆಗಳ ಸಂಯೋಜನೆಯನ್ನು ಒಳಗೊಂಡಿರುತ್ತದೆ. ಅಸೂಯೆಯು ಮಾನವ ಸಂಬಂಧಗಳಲ್ಲಿ ವಿಶಿಷ್ಟ ಅನುಭವವಾಗಿದೆ.