The most-visited ಕನ್ನಡ Wikipedia articles, updated daily. Learn more...
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
1997ರಲ್ಲಿ ಜಿಲ್ಲೆಯಾಗಿ ಪರಿವರ್ತನೆಯಾದ ಹಾವೇರಿ ಐತಿಹಾಸಿಕವಾಗಿಯೂ ಪ್ರಸಿದ್ಧ ಜಿಲ್ಲೆ. ಜಿಲ್ಲೆಯ ಕದರ ಮಂಡಲಗಿಯಲ್ಲಿ ದ್ವಾಪರಯುಗದಲ್ಲಿ ಜನಮೇಜಯ ಕಟ್ಟಿಸಿದ ಮಾರುತಿ ದೇವಾಲಯವಿದ್ದರೆ, ಕಾಗಿನೆಲೆಯಲ್ಲಿ ಕನಕದಾಸರ ಆರಾಧ್ಯದೈವ ಆದಿಕೇಶವ ದೇವಾಲಯವಿದೆ. ಇದಲ್ಲದೆ ಮೋಟೆಬೆನ್ನೂರಿನಲ್ಲಿ ಮಲ್ಲಿಕಾರ್ಜುನ ದೇವಾಲಯ, ಸಂಗೂರಿನಲ್ಲಿ ಈಶ್ವರ, ವೀರಭದ್ರ ದೇವಾಲಯ, ಹಿರೇಬೆಂಡಿಗೇರಿಯಲ್ಲಿ ಕಾಳಪ್ಪನ ದೇಗುಲ, ಹುಲಗೂರಿನಲ್ಲಿ ಸಿದ್ಧಲಿಂಗ ದೇವಾಲಯಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ ...
ಸಾವಿತ್ರಿ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ. ಸಾವಿತ್ರಿ - ಹಿಂದೂ ಧರ್ಮದ ಪುರಾಣಗಳಲ್ಲಿನ ಪ್ರಮುಖ ವ್ಯಕ್ತಿಗಳಲ್ಲೊಬ್ಬರು. ಸತ್ಯವಾನ್ ಅವರ ಪತ್ನಿಯಾದ ಸಾವಿತ್ರಿ, ತನ್ನ ಪತಿ ಮರಣ ಹೊಂದಿದಾಗ ಯಮನೊಡನೆ ಮಾತಿನಲ್ಲೇ ಹೋರಾಡಿ, ತನ್ನ ಪತಿಯ ಪ್ರಾಣವನ್ನು ಯಮನಿಂದ ಹಿಂದಕ್ಕೆ ಪಡೆಯುತ್ತಾಳೆ .ಅಂದಿನಿಂದ ಸತಿಶ್ರೇಷ್ಠರಲ್ಲಿ ಒಬ್ಬರೆಂದು ಪರಿಗಣಸಲಾಗುವ ಸಾವಿತ್ರಿ, ಸತಿ ಸಾವಿತ್ರಿ ಎಂದೇ ಪ್ರಸಿದ್ಧಿ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಎಚ್.ಅನಂದ್, ಜನಪ್ರಿಯವಾಗಿ ಮಾಸ್ಟರ್ ಆನಂದ್ ಓರ್ವ ಕನ್ನಡ ನಟ, ಹಾಸ್ಯನಟ ಮತ್ತು ನಿರ್ದೇಶಕರಾಗಿದ್ದು, ಬಾಲ ಕಲಾವಿದನಾಗಿ ಪ್ರಥಮ ಬಾರಿಗೆ ಪ್ರವೇಶ ಪಡೆದಿದ್ದಾರೆ.1991 ರಲ್ಲಿ ಗೌರಿ ಗಣೇಶದಲ್ಲಿ ಅನಂತ್ ನಾಗ್, ಸಿಹಿ ಕಹಿ ಚಂದ್ರು ಮತ್ತು ರಮೇಶ್ ಭಟ್ ಅವರೊಂದಿಗೆ ಅಭಿನಯಿಸಿದರು.ಕಿಂದರಿಜೋಗಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಆನಂದ್ ಬಾಲ ಕಲಾವಿದನಾಗಿ ಅಭಿನಯಿಸಿದ್ದಾರೆ.ಬಾಲ್ಯದಲ್ಲಿ ತನ್ನ ವೃತ್ತಿಜೀವನದುದ್ದಕ್ಕೂ 'ಮಾಸ್ಟರ್' ಎಂಬ ಹೆಸರಿನ ಪೂರ್ವಪ್ರತ್ಯಯದೊಂದಿಗೆ ಅವರ ಹೆಸರು ಸಲ್ಲುತ್ತದೆ ಎಂಬುದು ಗಮನಾರ್ಹವಾಗಿದೆ, ಇದು ಜನಪ್ರಿಯ ಹೆಸರಾಗಿದೆ ಮತ್ತು ಇಲ್ಲಿಯವರೆಗೆ ಅವರ ಹೆಸರನ್ನು ಟ್ಯಾಗ್ ಮಾಡಲಾಗಿದೆ.2002 ರಲ್ಲಿ ಬಿಡುಗಡೆಯಾದ ಫ್ರೆಂಡ್ ಚಲನಚಿತ್ರದಲ್ಲಿ ಅವರು ಪಾತ್ರವಹಿಸಿದ ಪಾತ್ರವು ಖ್ಯಾತಿಗೆ ಕಾರಣವಾಯಿತು.ನಂತರ ಅವರು 2010 ರಲ್ಲಿ ಎಸ್ಎಸ್ಎಲ್ಸಿ ನನ್ ಮಕ್ಳು ಹಾಸ್ಯ ದೂರದರ್ಶನ ಸರಣಿಯ ನಿರ್ದೇಶನವನ್ನು ಕೈಗೊಂಡರು, ಇದು ಏಷ್ಯನ್ನೆಟ್ ಸುವರ್ಣದಲ್ಲಿ ಪ್ರಸಾರವಾಯಿತು. ಅವರು 2011 ರಲ್ಲಿ 5 ಇಡಿಯಟ್ಸ್ ಚಿತ್ರದೊಂದಿಗೆ ಚಲನಚಿತ್ರ ನಿರ್ದೇಶನದಲ್ಲಿ ಪಾದಾರ್ಪಣೆ ಮಾಡಿದರು.ನಂತರ ಅವರು ಏಷ್ಯನೆಟ್ ಸುವರ್ಣ ಮತ್ತು ಕಲರ್ಸ್ ಕನ್ನಡಕ್ಕಾಗಿ ರೋಬೋ ಫ್ಯಾಮಿಲಿ TV ಸರಣಿಯ ಪಡುವಾರಾಳಿ ಪಾಡ್ ಡಿಗಲು ಟಿವಿ ಸರಣಿಯನ್ನು ನಿರ್ದೇಶಿಸಿದರು.ಅವರು 60 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. .
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
ಶ್ರೀನಿವಾಸ ರಾಮಾನುಜನ ಅಯ್ಯ೦ಗಾರ್ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.