The most-visited ಕನ್ನಡ Wikipedia articles, updated daily. Learn more...
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ದೆಹಲಿ ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮತ್ತು ಉತ್ತರ ಪ್ರದೇಶಗಳಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-೧೮೯೭ ಪ್ರಕಾರ ಇದನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಅನೇಕ ವಾಣಿಜ್ಯ ಸಂಸ್ಥೆಗಳು ಸ್ಥಗಿತಗೊಂಡಿವೆ. ಭಾರತವು ಎಲ್ಲಾ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಹೆವ್ಲೆಟ್-ಪ್ಯಾಕರ್ಡ್ ಕಂಪನಿ (NYSE: HPQ), ಸಾಮಾನ್ಯವಾಗಿ HP ಎಂದು ಹೆಸರಿಸಲಾಗುತ್ತದೆ, USAದ ಕ್ಯಾಲಿಫೋರ್ನಿಯಾದ ಪಾಲೊ ಆಲ್ಟೊದಲ್ಲಿ ಮುಖ್ಯ ಕಛೇರಿ ಹೊಂದಿರುವ ಒಂದು ಗ್ರಾಹಕರ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ . HP ವಿಶ್ವದ ಅತಿ ದೊಡ್ಡ ತಂತ್ರಜ್ಞಾನ ಹೊಂದಿರುವ ಕಂಪನಿ ಸುಮಾರು ಎಲ್ಲದೇಶಗಳಲ್ಲಿಯೂ ಇದು ಕಾರ್ಯ ನಿರ್ವಹಿಸುತ್ತದೆ. HP ಯು ಉತ್ಪಾದನಾ ಎಣಿಕೆಯಲ್ಲಿ, ಶೇಖರಣೆಯಲ್ಲಿ, ಸಾಫ್ಟವೇರ್, ಹಾರ್ಡವೇರ್ ಜಾಲವನ್ನು ವೃದ್ಧಿಗೊಳಿಸುವಲ್ಲಿ ಮತ್ತು ಸೇವೆಯಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ.
ಮೈಕೆಲ್ ಡೆ ನಾಸ್ಟ್ರೆಡೇಮ್ (೧೪ ಡಿಸೆಂಬರ್ ಅಥವಾ ಡಿಸೆಂಬರ್ ೨೧ ೧೫೦೩ -೨ಜುಲೈ೧೫೬೬)ಸಾಮಾನ್ಯವಾಗಿ ಲ್ಯಾಟಿನ್ನಾಸ್ಟ್ರಾಡಾಮಸ ,ಈತ ಒಬ್ಬ ಫ್ರೆಂಚ್ ಪ್ರಾಚೀನ ಔಷಧ ವ್ಯಾಪಾರಿ ಮತ್ತು ಹೆಸರಾಂತ ಕಾಲಜ್ಞಾನಿ.ಆತ ತನ್ನ ಹಲವು ತತ್ವ ಸಿದ್ದಾಂತಗಳನ್ನು ಪ್ರಕಟಿಸಿದ್ದಾನೆ. ಅವುಗಳು ಆವಾಗಿನಿಂದಲೂ ಜಗತ್ತಿನಾದ್ಯಂತ ಪ್ರಖ್ಯಾತವಾಗಿವೆ. ಆತನ ಅತ್ಯುತ್ತಮ ಪುಸ್ತಕ ಲೇಸ್ ಪ್ರೊಫೆಟೀಸ್ ("ದಿ ಪ್ರೊಫೆಟೀಸ್ ") ಇದರ ಸಂಪುಟ ೧೫೫೫ರಲ್ಲಿ ಪ್ರಕಟಿಸಲ್ಪಟ್ಟಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕೊರೋನ ವೈರಸ್ ಸಸ್ತನಿಗಳು ಮತ್ತು ಪಕ್ಷಿಗಳಲ್ಲಿ ರೋಗಗಳನ್ನು ಉಂಟುಮಾಡುವ ಹಲವಾರು ವೈರಸ್ಗಳಲ್ಲಿ ಒಂದು. ಮಾನವರಲ್ಲಿ, ವೈರಸ್ಗಳು ನೆಗಡಿ ಸೇರಿದಂತೆ ಉಸಿರಾಟದ ಸೋಂಕನ್ನು ಉಂಟುಮಾಡುತ್ತವೆ, ಅವು ಸಾಮಾನ್ಯವಾಗಿ ಸೌಮ್ಯವಾಗಿರುತ್ತವೆ, ಆದರೂ SARS, MERS ಮತ್ತು COVID-19 ನಂತಹ ಅಪರೂಪದ ರೂಪಗಳು ಮಾರಕವಾಗಬಹುದು. ರೋಗ ಲಕ್ಷಣಗಳು ಇತರ ಜಾತಿಗಳಲ್ಲಿ ಬದಲಾಗುತ್ತವೆ: ಕೋಳಿಗಳಲ್ಲಿ ಅವು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗುತ್ತವೆ, ಆದರೆ ಹಸುಗಳು ಮತ್ತು ಹಂದಿಗಳಲ್ಲಿ ಕೊರೋನ ವೈರಸ್ಗಳು ಅತಿಸಾರಕ್ಕೆ ಕಾರಣವಾಗುತ್ತವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಬಂಜಾರ ಅಥವಾ ಲಂಬಾಣಿ ಅಥವಾ ನಾಯ್ಕ ಅಥವಾ ಗೋರ್ ಮಾಟ ಗುಜರಾತ್, ರಾಜಾಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ ಮತ್ತು ತಮಿಳು ನಾಡುಗಳಲ್ಲಿ ಪ್ರಮುಖವಾಗಿ ನಿವಾಸಿಸುವ ಒಂದು ಜನಾಂಗ. ಮೂಲತಃ ರಾಜಸ್ಥಾನ ಮತ್ತು ಗುಜರಾತ್ ಮೂಲದ ಇವರು ಲಂಬಾಣಿ ಭಾಷೆಯನ್ನು ಮಾತನಾಡುತ್ತಾರೆ. ಬಂಜಾರ್ ಸಮುದಾಯವು ತನ್ನದೇ ಅದಾ ವೇಷ ಭೂಷಣದಿಂದ ಭಾರತೀಯ ಶ್ರೀಮಂತ ಕಲಾ ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಇಂಟೆಲ್ ಕಾರ್ಪೊರೇಶನ್ (NASDAQ: INTC; SEHK: 4335; Euronext: INCO) ಒಂದು ಅಮೆರಿಕಾದ ಜಾಗತಿಕ ತಂತ್ರಜ್ಞಾನ ಕಂಪನಿಯಾಗಿದೆ. ಇದು ಆದಾಯದ ಆಧಾರದಲ್ಲಿ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಅರೆವಾಹಕ(ಸೆಮಿಕಂಡಕ್ಟರ್) ಚಿಪ್ ತಯಾರಕವಾಗಿದೆ. ಇದು ಹೆಚ್ಚಿನ ವೈಯಕ್ತಿಕ ಕಂಪ್ಯೂಟರ್ಗಳಲ್ಲಿ ಕಂಡುಬರುವ ಸಂಸ್ಕಾರಕಗಳಾದ x86 ಸರಣಿಯ ಮೈಕ್ರೋಪ್ರೋಸೆಸರ್ಗಳ(ಸೂಕ್ಷ್ಮಸಂಸ್ಕಾರಕಗಳ) ಸೃಷ್ಟಿಕರ್ತವಾಗಿದೆ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಆಂಗ್ಲ ಹೆಸರು - Infosys Limited (INFY) ಇನ್ಫೋಸಿಸ್ ಭಾರತದ ಬೆಂಗಳೂರು ನಗರದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಅತಿ ದೊಡ್ಡ ಸಂಸ್ಥೆಗಳಲ್ಲಿ ಒಂದಾಗಿದ್ದು, ೧,೪೫,೦೦೦ ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಭಾರತದಲ್ಲಿ ಒಂಬತ್ತು ತಂತ್ರಾಂಶ ಅಭಿವೃದ್ಧಿ ಕೇಂದ್ರ ಮತ್ತು ಪ್ರಪಂಚದಾದ್ಯಂತ ೨೯ ಕಛೇರಿಗಳನ್ನು ಭಾರತ, ಯುಸ್ಎ, ಚೀನಾ, ಆಸ್ಟ್ರೇಲಿಯಾ, ಯುಕೆ, ಕೆನಡ, ಜಪಾನ್ ಹಾಗೂ ಇನ್ನಿತರೆ ರಾಷ್ಟ್ರಗಳಲ್ಲಿದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.