The most-visited ಕನ್ನಡ Wikipedia articles, updated daily. Learn more...
ದಾಸವಾಳ ಗಳು (pronounced /hɨˈbɪskəs/ ಅಥವಾ /haɪˈbɪskəs/) ಮ್ಯಾಲೋ ಗಳ(ಕೆನ್ನೀಲಿ ಬಣ್ಣದ ಹೂವು ಬಿಡುವ ಕಾಡು ಜಾತಿಯ ಗಿಡಗಳ) ವರ್ಗಕ್ಕೆ ಸೇರಿದ ಮಾಲ್ವಸಿಯೇ ಜಾತಿಯ ಹೂಬಿಡುವ ಸಸ್ಯಗಳಾಗಿವೆ. ಇದು ಸಾಕಷ್ಟು ದೊಡ್ಡ ಸಸ್ಯವರ್ಗ ಹೊಂದಿದ್ದು, ಸುಮಾರು ೨೦೦–೨೨೦ರಷ್ಟು ಪ್ರಭೇದಗಳನ್ನು ಒಳಗೊಂಡಿದೆ. ಇದು ಜಗತ್ತಿನಾದ್ಯಂತ ಶಾಖದ ತಾಪಮಾನ, ಉಪೋಷ್ಣವಲಯ ಹಾಗು ಉಷ್ಣವಲಯ ಪ್ರದೇಶಗಳಲ್ಲಿನ ಸ್ಥಳೀಯ ಸಸ್ಯವಾಗಿದೆ.
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದೇಶದ ಆಯವ್ಯಯ. ಒಂದು ದೇಶವೂ ತನ್ನ ಆಡಳಿತ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತೋರಬೇಕಾದ ಕಾರಣ ಅದು ಪ್ರಜೆಗಳಿಗೆ ತನ್ನ ಬಜೆಟ್ ಅಧಿವೇಶನದಲ್ಲಿ ತನ್ನ ಮುಂದಿನ ಹಣಕಾಸು ವರ್ಷದ ನಿರೀಕ್ಷಿತ ಧನ ಸಂಗ್ರಹಣೆ ಹಾಗು ವಿವಿಧ ಪ್ರಮುಖ ಅತ್ಯಾವಶ್ಯಕ ಕ್ಷೇತ್ರಗಳಲ್ಲಿ ಹಾಗು ಅಭಿವೃದ್ಧಿ ಕ್ಷೇತ್ರದಲ್ಲಿ ತನ್ನ ಹಣ ಹೂಡಿಕೆಯ ಅಂದಾಜು ಮುಂಗಡ ಪತ್ರವನ್ನು ತಯಾರು ಮಾಡಿ ಮಂಡಿಸುತ್ತದೆ.ಇದು ಪ್ರಜಾಪ್ರಭುತ್ವದ ಆಡಳಿತದ ಬಹು ಮುಖ್ಯ ಕಾರ್ಯ.ದೇಶದ ಬಜೆಟ್ ಎಂಬುದು ದೇಶದ ರಾಜಾದಾಯದಿಂದ (ರೆವೆನ್ಯೂ) ಹಣ ಖರ್ಚು ಮಾಡಲು ಒಂದು ಯೋಜನೆಯನ್ನು ರಚಿಸುವ ಪ್ರಕ್ರಿಯೆ. ಈ ಖರ್ಚು ಯೋಜನೆಯನ್ನು ಬಜೆಟ್ ಅಥವಾ ಹಣಕಾಸು ಮುಂಗಡಪತ್ರ ಎಂದು ಕರೆಯಲಾಗುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ದೆಹಲಿ ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮತ್ತು ಉತ್ತರ ಪ್ರದೇಶಗಳಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-೧೮೯೭ ಪ್ರಕಾರ ಇದನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಅನೇಕ ವಾಣಿಜ್ಯ ಸಂಸ್ಥೆಗಳು ಸ್ಥಗಿತಗೊಂಡಿವೆ. ಭಾರತವು ಎಲ್ಲಾ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ರಾಷ್ಟ್ರೀಯ ವೈದ್ಯರ ದಿನವು ವೈಯಕ್ತಿಕ ಜೀವನ ಮತ್ತು ಸಮುದಾಯಗಳಿಗೆ ವೈದ್ಯರ ಕೊಡುಗೆಗಳನ್ನು ಗುರುತಿಸಲು ಒಂದು ದಿನವಾಗಿದೆ.ದಿನ ಗುರುತಿಸಲು ಬಳಸಲಾಗುತ್ತದೆ ಸ್ಮರಣಾರ್ಥ ಘಟನೆ ಅವಲಂಬಿಸಿ ದಿನಾಂಕ ದೇಶದಿಂದ ರಾಷ್ಟ್ರಕ್ಕೆ ಬದಲಾಗಬಹುದು.ಕೆಲವು ರಾಷ್ಟ್ರಗಳಲ್ಲಿ ಈ ದಿನವನ್ನು ರಜಾದಿನವೆಂದು ಗುರುತಿಸಲಾಗಿದೆ.ರೋಗಿಗಳು ಮತ್ತು ಆರೋಗ್ಯ ಸೇವೆ ಉದ್ಯಮದ ಪ್ರಾಯೋಜಕರು ಆಚರಿಸಬೇಕೆಂದು ಭಾವಿಸಿದ್ದರೂ ಇದನ್ನು ಸಾಮಾನ್ಯವಾಗಿ ಆರೋಗ್ಯ ರಕ್ಷಣಾ ಸಂಸ್ಥೆಗಳಿಂದ ಆಚರಿಸಲಾಗುತ್ತದೆ.ಸಿಬ್ಬಂದಿ ಗುರುತಿಸುವ ಸಂಕೇತಗಳೊಂದಿಗೆ ವೈದ್ಯರನ್ನು ಪ್ರಸ್ತುತಪಡಿಸಲು ವೈದ್ಯರು ಊಟವನ್ನು ಆಯೋಜಿಸಬಹುದು.ಐತಿಹಾಸಿಕವಾಗಿ, ಒಂದು ಕಾರ್ಡ್ ಅಥವಾ ಕೆಂಪು ಕಾರ್ನೇಷನ್ ಅನ್ನು ವೈದ್ಯರು ಮತ್ತು ಅವರ ಸಂಗಾತಿಗಳಿಗೆ ಕಳುಹಿಸಬಹುದು, ಸತ್ತ ವೈದ್ಯರ ಸಮಾಧಿಯ ಮೇಲೆ ಹೂವು ಹೂಡಲಾಗುತ್ತದೆ.ಮೊದಲ ವೈದ್ಯರ ದಿನವನ್ನು ಜಾರ್ಜದ ವೈಂಡರ್ನಲ್ಲಿ ಮಾರ್ಚ್ ೩೦,೧೯೩೩ರಂದು ಆಚರಿಸಲಾಗಿತ್ತು. ಭಾರತದಲ್ಲಿ ಪ್ರಸಿದ್ಧ ವೈದ್ಯ ಮತ್ತು ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಬಿಧಾನ್ ಚಂದ್ರ ರಾಯ್ ಅವರ ಗೌರವಾರ್ಥ ವೈದ್ಯರ ದಿನವನ್ನು ಜುಲೈ ೧ರಂದು ಆಚರಿಸಲಾಗುತ್ತದೆ. ಈ ಆಚರಣೆಯು ನಮ್ಮ ಜೀವನದಲ್ಲಿರುವ ವೈದ್ಯರಿಗೆ ಅವರು ನಮಗೆಷ್ಟು ಮುಖ್ಯ ಮತ್ತು ನಮ್ಮನ್ನು ಗುಣಪಡಿಸುವ ಅವರ ಚಿಕಿತ್ಸೆಗಳು ಎಷ್ಟು ಅಮೂಲ್ಯವೆಂದು ತೋರಿಸುವ ಅಗತ್ಯವನ್ನು ಈಡೇರಿಸುತ್ತದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಮಧ್ಯ ಏಷ್ಯಾದಿಂದ ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ , ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು , ತಾಯಿಯ ಮೂಲಕ . ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು ,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ , ಬುದ್ಧಿವಂತಿಕೆಯ ಸಾಹಿತ್ಯ , ಕಲೆ , ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ ಮಾನವೇಂದ್ರೇಣ ಯಾ ಪುರೀ ನಿರ್ಮಿತಾ ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ವಿಶ್ವದ ರಾಷ್ಟ್ರಗಳನ್ನು ಅವುಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸ್ಥಾನಬದ್ಧಗೊಳಿಸಿ ಕೆಳಕಂಡ ಪಟ್ಟಿಕೆಯಲ್ಲಿ ತೋರಿಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಭೌಮ ರಾಷ್ಟ್ರಗಳು ಮತ್ತು ಸ್ವಯಮಾಡಳಿತ ಹೊಂದಿರುವ ಅವಲಂಬಿತ ಪ್ರಾಂತ್ಯಗಳು ಇವೆ. ಇಲ್ಲಿ ತೋರಿಸಿರುವ ವಿಸ್ತೀರ್ಣವು ದೇಶದ ಒಟ್ಟು ನೆಲ ಮತ್ತು ನಾಡಿನೊಳಗೆ ಇರುವ ಜಲಪ್ರದೇಶಗಳ (ಸರೋವರ, ನದಿ ಮತ್ತು ಜಲಾಶಯ) ವಿಸ್ತೀರ್ಣಗಳು ಸೇರಿವೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಮೂರನೆಯ ಪಾಣಿಪತ್ ಯುದ್ಧ ೧೭೬೧ರ ಜನವರಿ ೧೪ರಂದು ಇಂದಿನ ಹರ್ಯಾಣದಲ್ಲಿರುವ ಪಾಣಿಪತ್ನಲ್ಲಿ (29.39° N 76.97° E) ಮರಾಠ ಸಾಮ್ರಾಜ್ಯ ಮತ್ತು ಅಹ್ಮದ್ ಶಾಹ್ ದುರ್ರಾನಿ (ಅಹ್ಮದ್ ಶಾಹ್ ಅಬ್ದಾಲಿ ಎಂದೂ ಕೂಡ ಕರೆಯಲಾಗುತ್ತದೆ) ನೇತೃತ್ವದ ಪಾಶ್ತುನ್ ಜನರ ಸೇನೆಯ ಮಧ್ಯೆ ನಡೆದ ಯುದ್ಧ. ಇದು ಪಾಣಿಪತ್ ಅಲ್ಲಿ ನಡೆದ ಮೂರನೆಯ ಯುದ್ಧ. ಈ ಯುದ್ಧದಲ್ಲಿ ಫ್ರೆಂಚರಿಂದ ಮದ್ದು ಗುಂಡು ಮತ್ತಿ ತರಬೇತಿ ಗಳಿಸಿದ್ದ ಮರಾಠರಿಗೂ, ಅಹಮದ್ ಶಾ ಅಬ್ದಾಲಿಯ ಸಬಲ ಕುದುರೆ ಕಾಳಗ ನಿಪುಣರ ಮಧ್ಯೆ ಮುಖಾಮುಖಿಯಾಯಿತು.
ಕರ್ನಾಟಕದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ಕರ್ನಾಟಕ ರಾಜ್ಯದಲ್ಲಿ ೨೦೧೯ - ೨೦೨೦ರ ಕರೋನವೈರಸ್ ಸಾಂಕ್ರಾಮಿಕವನ್ನು ಮೊದಲ ಬಾರಿಗೆ ಮಾರ್ಚ್ ೯, ೨೦೨೦ ರಂದು ದೃಢಪಡಿಸಲಾಯಿತು. ಸಾಂಕ್ರಾಮಿಕ ರೋಗಗಳ ಕಾಯ್ದೆ, ೧೮೯೭ರ ಅಡಿಯಲ್ಲಿ ಸಾಂಕ್ರಾಮಿಕ ನಿರ್ಬಂಧನೆಗಳನ್ನು ಕರ್ನಾಟಕದಲ್ಲಿ ಘೋಷಿಸಲಾಯಿತು. .
' ಸಂಪರ್ಕ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.
ದೆಹಲಿಯ ಸುಲ್ತಾನರು ದೆಹಲಿಯಲ್ಲಿದ್ದ ಮುಸಲ್ಮಾನ ಸುಲ್ತಾನರು, ಇದು ಭಾರತೀಯ ಉಪಖಂಡದ ದೊಡ್ಡ ಭಾಗಗಳನ್ನು 320 ವರ್ಷಗಳವರೆಗೆ (1206-1526) ವಿಸ್ತರಿಸಿತು. ಐದು ರಾಜವಂಶಗಳಾದ ದೆಹಲಿ ಸುಲ್ತಾನರ ಅನುಕ್ರಮವಾಗಿ: ಮಾಮ್ಲುಕ್ ಸಾಮ್ರಾಜ್ಯ (1206-90), ಖಲ್ಜಿ ಸಾಮ್ರಾಜ್ಯ (1290-1320), ತುಘಲಕ್ ರಾಜವಂಶ (1320-1414), ಸಯ್ಯಿದ್ ಸಾಮ್ರಾಜ್ಯ (1414- 51), ಮತ್ತು ಲೋದಿ ಸಾಮ್ರಾಜ್ಯ (1451-1526).ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು 1236 ರಿಂದ 1240 ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿಕ್ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ .
[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.