The most-visited ಕನ್ನಡ Wikipedia articles, updated daily. Learn more...
ಆಚಾರ್ಯ ಸರ್ ಪ್ರಫುಲ್ಲಾ ಚಂದ್ರ ರಾಯಿ CIE (ಬೆಂಗಾಲಿ: প্রফুল্ল চন্দ্র রায়; 2 ಆಗಸ್ಟ್ 1861 - 16 ಜೂನ್ 1944) [1] ಒಬ್ಬ ಬೆಂಗಾಲಿ ರಸಾಯನಶಾಸ್ತ್ರಜ್ಞ, ಶಿಕ್ಷಕ ಮತ್ತು ವಾಣಿಜ್ಯೋದ್ಯಮಿ. ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ ಯುರೋಪ್ನ ಹೊರಗಿನ ಮೊದಲ ರಸಾಯನಶಾಸ್ತ್ರಜ್ಞ, ಲ್ಯಾಂಡ್ಮಾರ್ಕ್ ಪ್ಲೇಕ್ನೊಂದಿಗೆ ತನ್ನ ಜೀವನದ ಮತ್ತು ಕೆಲಸವನ್ನು ಗೌರವಿಸಿತು. ಅವರು ಭಾರತದ ಮೊದಲ ಔಷಧಿ ಕಂಪೆನಿಯಾಗಿದ್ದ ಬಂಗಾಳ ಕೆಮಿಕಲ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕರಾಗಿದ್ದರು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
{{#if:| ಸಾಗರ ಅಥವಾ ಸಾಗರ ಜಂಬಗಾರು ಭಾರತ ದೇಶದ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಒಂದು ನಗರ ಮತ್ತು ಅದೇ ಹೆಸರಿನ ಉಪವಿಭಾಗೀಯ ಮತ್ತು ತಾಲೂಕು ಆಡಳಿತ ಕೇಂದ್ರ. ಬೆಂಗಳೂರು ನಗರದಿಂದ ೩೬೦ ಕಿ.ಮೀ ದೂರದಲ್ಲಿರುವ ಸಾಗರ ನಗರವು ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಟ್ಟಿದೆ. ಮಳೆ ಹೆಚ್ಚಾಗಿ ಬೀಳುವ ಸಾಗರ ತಾಲೂಕು ಸಹಜವಾಗಿ ದಟ್ಟವಾದ ಕಾಡು ಮತ್ತು ವಿವಿಧ ರೀತಿಯ ಪ್ರಾಣಿಸಂಕುಲಗಳಿಗೆ ತವರಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಯಪ್ರಕಾಶ ಮಾವಿನಕುಳಿ ವೃತ್ತಿಯಲ್ಲಿ ಓರ್ವ ಉಪನ್ಯಾಸಕರು. ಇವರು ಕನ್ನಡ ಸಾಹಿತ್ಯದ ಕವಿ, ಕಾದಂಬರಿಕಾರ, ವಿಮರ್ಶಕ, ಸಂಪಾದಕ, ಆಕಾಶವಾಣಿಯ ಧ್ವನಿ ಕಲಾವಿದ, ನಾಟಕಕಾರ, ರಂಗ ನಿರ್ದೇಶಕ ಮತ್ತು ರಂಗಭೂಮಿ ಮತ್ತು ಚಲನಚಿತ್ರ ನಟ. ಕನ್ನಡ ಸಾಹಿತ್ಯಕ್ಕೆ ಇವರು ನಾಟಕಗಳು, ಕಾದಂಬರಿ, ಸಣ್ಣಕಥೆಗಳು, ಕಾವ್ಯ ಮತ್ತು ಇತರರೊಡನೆ ಸಂಪಾದನೆಯು ಸೇರಿದಂತೆ ಸುಮಾರು ಎಪ್ಪತ್ತು ಪುಸ್ತಕಗಳನ್ನು ಕೊಟ್ಟಿರುವುದು ಇವರ ಹೆಗ್ಗಳಿಕೆ.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಜೀವಶಾಸ್ತ್ರ ಅಥವಾ ಜೀವವಿಜ್ಞಾನವು ಬದುಕಿರುವ ಜೀವಿಗಳ ಮತ್ತು ಜೀವರಾಶಿಗಳ ಬಗೆಗೆ ಅಧ್ಯಯನ ಮಾಡುವ ಒಂದು ನೈಸರ್ಗಿಕ ವಿಜ್ಞಾನ. ಅದು ಜೀವಿಗಳ ರಚನೆ, ಕಾರ್ಯನಿರ್ವಹಣೆ, ಬೆಳವಣಿಗೆ, ವಿಕಾಸ, ಹಂಚಿಕೆ, ಗುರುತಿಸುವಿಕೆ ಮತ್ತು ಜೀವ ವರ್ಗೀಕರಣಗಳ ಅಧ್ಯಯನವನ್ನು ಒಳಗೊಂಡಿದೆ. ಆಧುನಿಕ ಜೀವಶಾಸ್ತ್ರವು ಹಲವು ಶಾಖೆಗಳು ಮತ್ತು ಉಪಶಾಖೆಗಳನ್ನು ಒಳಗೊಂಡ ದೊಡ್ಡ ಮತ್ತು ವಿಶಾಲದೃಷ್ಟಿಯನ್ನು ಹೊಂದಿದ ಕ್ಷೇತ್ರ.
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು.ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ. ಈ ಚಳುವಳಿಯ ಮುಕ್ಯ ಗುರಿ ಮಧ್ವಾಚಾರ್ಯರ ದ್ವೈತ ತತ್ತ್ವಶಾಸ್ತ್ರ (ಮಧ್ವ ಸಿದ್ಧಾಂತ )ವನ್ನು ಜನಸಾಮಾನ್ಯರಲ್ಲಿ ದಾಸ ಸಾಹಿತ್ಯ (ಭಗವಂತನ ಸೇವಕರ ಸಾಹಿತ್ಯ)ದ ಮಾಧ್ಯಮದಲ್ಲಿ ಪ್ರಸಾರಿಸುವುದು.ಶ್ರೀಪಾದರಾಯ, ವ್ಯಾಸತೀರ್ಥ, ವಾದಿರಾಜತೀರ್ಥ, ಪುರಂದರ ದಾಸ ಹಾಗು ಕನಕ ದಾಸರಂತಹ ಪ್ರಖ್ಯಾತ ಹಿಂದೂ ತತ್ವಜ್ಞಾನಿಗಳು, ಕವಿಗಳು ಹಾಗು ವಿದ್ವಾಂಸ ಈ ಸಮಯದಲ್ಲಿ ಮುಖ್ಯ ಪಾತ್ರ ವಹಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಕರ್ನಾಟಕದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ಕರ್ನಾಟಕ ರಾಜ್ಯದಲ್ಲಿ ೨೦೧೯ - ೨೦೨೦ರ ಕೊರೋನಾವೈರಸ್ ಸಾಂಕ್ರಾಮಿಕವನ್ನು ಮೊದಲ ಬಾರಿಗೆ ಮಾರ್ಚ್ ೯, ೨೦೨೦ ರಂದು ದೃಢಪಡಿಸಲಾಯಿತು. ಸಾಂಕ್ರಾಮಿಕ ರೋಗಗಳ ಕಾಯ್ದೆ, ೧೮೯೭ರ ಅಡಿಯಲ್ಲಿ ಸಾಂಕ್ರಾಮಿಕ ನಿರ್ಬಂಧನೆಗಳನ್ನು ಕರ್ನಾಟಕದಲ್ಲಿ ಘೋಷಿಸಲಾಯಿತು. .
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪಂಡಿತಾ ರಮಾಬಾಯಿ ಸರಸ್ವತಿ(೨೩ ಏಪ್ರಿಲ್ ೧೮೫೮ - ೫ ಏಪ್ರಿಲ್ ೧೯೨೨) ಒಬ್ಬ ಭಾರತೀಯ ಸಾಮಾಜಿಕ ಸುಧಾರಕಿ ಮತ್ತು ಮಹಿಳಾ ವಿಮೋಚನೆಗಾಗಿ ಹೋರಾಡಿದ ಹಿರಿಮಹಿಳೆ. ಮಹಿಳ ಶಿಕ್ಷಣದ ಪ್ರವರ್ತಕರಾಗಿ ಹೆಸರು ಮಾಡಿದ ಹಿರಿಮೆ ಇವರದು.ಕಲ್ಕತ್ತಾ ವಿಶ್ವವಿದ್ಯಾಲಯದ ಬೋಧಕವರ್ಗದಿಂದ ಪರೀಕ್ಷಿಸಲ್ಪಟ್ಟ ಮೇಲೆ ಪಂಡಿತ ಎಂಬ ಸಂಸ್ಕೃತ ವಿದ್ವಾಂಸ ಪದವಿ ಮತ್ತು ಸರಸ್ವತಿ ಪದವಿ ಪಡೆದ ಮೊದಲ ಮಹಿಳೆ. ಪಂಡಿತಾ ರಮಾಬಾಯಿ ಸರಸ್ವತಿ ಸಾಮಾಜಿಕ ಕಾರ್ಯಕರ್ತರಾಗಿ, ವಿದ್ವಾಂಸರಾಗಿ ಮತ್ತು ಮಹಿಳಾ ಹಕ್ಕುಗಳ, ಸ್ವಾತಂತ್ರ್ಯ ಮತ್ತು ಶಿಕ್ಷಣದ ಆದ್ಯ ಪ್ರವರ್ತಕರಾಗಿ ಹೆಸರಾದವ್ರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ದತ್ತಾತ್ರೇಯನು ಹಿಂದೂಗಳಿಂದ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಅವತಾರನಾದ ದೇವರೆಂದು ಪರಿಗಣಿಸಲ್ಪಡುತ್ತಾನೆ. ದತ್ತ ಶಬ್ದದ ಅರ್ಥ "ಕೊಟ್ಟಿದ್ದು", ತ್ರಿಮೂರ್ತಿಗಳು ತಮ್ಮನ್ನು ತಾವೇ ಋಷಿ ದಂಪತಿಗಳಾದ ಅತ್ರಿ ಮತ್ತು ಅನಸೂಯೆಯರಿಗೆ ಪುತ್ರನ ರೂಪದಲ್ಲಿ ಅರ್ಪಿಸಿದ್ದರಿಂದ ದತ್ತನೆಂದು ಕರೆಯಲ್ಪಡುತ್ತಾನೆ. ಅವನು ಅತ್ರಿಯ ಪುತ್ರ, ಹಾಗಾಗಿ "ಆತ್ರೇಯ"ನೆಂಬ ಹೆಸರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
'ರತನ್ ನಾವಲ್ ಟಾಟಾ' (೨೮, ಡಿಸೆಂಬರ್, ೧೯೩೭-)ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ಇಬೊಲ ರೋಗ (EVD) ಅಥವಾ ಎಬೊಲ ಹೆಮರಾಜಿಕ್ ಜ್ವರ (ಈ ಹೆಚ್ ಎಫ್), ಇದು ವೈರಾಣುವಿನಿಂದ ಉಂಟಾಗುವ ರೋಗ. ಹರಡುವಿಕೆ: ಕೋತಿ ಅಥವಾ ಬಾವಲಿಯ ರಕ್ತದ ಸೋಂಕಿನಿಂದ,ಸೋಂಕಿನ ಗಾಳಿ ಅಥವಾ ರೋಗಿಯ ವೀರ್ಯದಿಂದ ಹರಡುತ್ತದೆ.ಸಮಯ: ವೈರಸ್ ಸೋಂಕು ತಗುಲಿದ ಎರಡು ದಿನ ಅಥವಾ ಹೆಚ್ಚೆಂದರೆ ಮೂರು ವಾರಗಳ ಒಳಗೆ ಸಮಸ್ಯೆ ಶುರುವಾಗುತ್ತವೆ. ಲಕ್ಷಣಗಳು: ಗಂಟಲು ನೋವು, ಸ್ನಾಯು ನೋವು ಮತ್ತು ತಲೆನೋವು, ಯಕೃತ್ತು ಮತ್ತು ಮೂತ್ರ ಕಾರ್ಯನಿರ್ವಹಣೆಯ ಹದಗೆಡುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.