The most-visited ಕನ್ನಡ Wikipedia articles, updated daily. Learn more...
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು.ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ. ಈ ಚಳುವಳಿಯ ಮುಕ್ಯ ಗುರಿ ಮಧ್ವಾಚಾರ್ಯರ ದ್ವೈತ ತತ್ತ್ವಶಾಸ್ತ್ರ (ಮಧ್ವ ಸಿದ್ಧಾಂತ )ವನ್ನು ಜನಸಾಮಾನ್ಯರಲ್ಲಿ ದಾಸ ಸಾಹಿತ್ಯ (ಭಗವಂತನ ಸೇವಕರ ಸಾಹಿತ್ಯ)ದ ಮಾಧ್ಯಮದಲ್ಲಿ ಪ್ರಸಾರಿಸುವುದು.ಶ್ರೀಪಾದರಾಯ, ವ್ಯಾಸತೀರ್ಥ, ವಾದಿರಾಜತೀರ್ಥ, ಪುರಂದರ ದಾಸ ಹಾಗು ಕನಕ ದಾಸರಂತಹ ಪ್ರಖ್ಯಾತ ಹಿಂದೂ ತತ್ವಜ್ಞಾನಿಗಳು, ಕವಿಗಳು ಹಾಗು ವಿದ್ವಾಂಸ ಈ ಸಮಯದಲ್ಲಿ ಮುಖ್ಯ ಪಾತ್ರ ವಹಿಸಿದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಹಿಂದೂ ಧರ್ಮ ದಲ್ಲಿ , ಸೂರ್ಯ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] ; ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಒಂದು ಮುದ್ರೆ ಯು [muːˈdrɑː] (ಸಂಸ್ಕೃತ: मुद्रा, ("ಮೊಹರು," "ಗುರುತು," ಅಥವಾ "ಅಭಿನಯ),) ಹಿಂದೂಧರ್ಮ ಅಥವಾ ಬುದ್ಧಧರ್ಮದಲ್ಲಿ ಸಾಂಕೇತಿಕ ಅಥವಾ ಧಾರ್ಮಿಕ ಅನುಷ್ಠಾನಗಳ ಒಂದು ಅಭಿನಯವಾಗಿದೆ ಅಥವಾ ಸಂಕೇತವಾಗಿದೆ. ಹಲವು ಮುದ್ರೆಗಳು ಪೂರ್ತಿ ದೇಹದ ಉಪಯೋಗವನ್ನು ಒಳಗೊಂಡಿರುತ್ತವೆ, ಹೆಚ್ಚಿನ ಮುದ್ರೆಗಳು ಕೈಗಳು ಮತ್ತು ಬೆರಳುಗಳ ಜೊತೆಗೆ ನಿರ್ವಹಿಸಲ್ಪಡುತ್ತವೆ. ಮುದ್ರೆಯು ಒಂದು ಆಧ್ಯಾತ್ಮಿಕ ಅಭಿನಯವಾಗಿದೆ ಮತ್ತು ಧರ್ಮ ಮತ್ತು ಟಾವೋ ತತ್ವಗಳ ಭಾರತಿಯ ಧರ್ಮಗಳು ಮತ್ತು ಸಂಪ್ರದಾಯಗಳ ಪ್ರತಿಮಾಶಾಸ್ತ್ರ ಮತ್ತು ಆಧಾತ್ಮಿಕ ಆಚರಣೆಗಳಲ್ಲಿ ಪ್ರಮಾಣಿತವಾಗಿ ಆಚರಿಸಲ್ಪಡುವ ಒಂದು ಶಕ್ತಿಯುತ ಸಂಕೇತವಾಗಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಿಳೆಯರ ಸಂತಾನೋತ್ಪತ್ತಿ ವ್ಯವಸ್ಥೆ ಮಹಿಳೆಯರ ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ನಾಲ್ಕು ಮುಖ್ಯ ಭಾಗಗಳಿವೆ, ಯೋನಿ (ಗರ್ಭಕೊಳವೆ) ಗರ್ಭಕೋಶ ೨ ಅಂಡಾಶಯಗಳು ೨ ಫಲೋಪಿಯನ್ ಕೊಳವೆಈ ರೀತಿಯಾಗಿ ೪ ಅಂಡಾಶಯಗಳು ಹಲವಾರು ಮೊಟ್ಟೆಗಳನ್ನು ಹೊಂದಿರುತ್ತವೆ. ೧೦-೧೮ ವಯಸ್ಸಿನೊಳಗೆ ಈ ಅಂಡಗಳು ಬೆಳೆದು ಹಣ್ಣಾಗತೊಡಗುತ್ತವೆ. ಪ್ರತಿ ತಿಂಗಳು ಈ ಫಲೋಪಿಯನ್ ಕೊಳವೆಗಳ ಮೂಲಕ ಗಭ್ಯಯ ತಲುಪುವಂತೆ ಈ ಅಂಡಾಶಯಗಳು ಅಂಡಾಣುವನ್ನು ಬಿಡುಗಡೆ ಮಾಡುತ್ತವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಅಭಿಜ್ಞಾನ ಶಾಕುಂತಲಮ್ (ಕನ್ನಡದಲ್ಲಿ "ಅಭಿಜ್ಞಾನ ಶಾಕುಂತಳ" ಎಂಬ ಪ್ರಯೋಗವು ಹೆಚ್ಚಾಗಿದೆ) ‘ಕವಿಕುಲಗುರು’ ಎಂದು ಪ್ರಖ್ಯಾತನಾದ ಕಾಳಿದಾಸನು ಸಂಸ್ಕೃತದಲ್ಲಿ ಬರೆದ ಏಳು ಅಂಕಗಳ ನಾಟಕ. ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಕಾಳಿದಾಸನೂ ಒಬ್ಬನೆನ್ನುವ ಸ್ಥಾನವನ್ನು ಗಳಿಸಿಕೊಟ್ಟ ನಾಟಕ. "ಕಾವ್ಯೇಷು ನಾಟಕಂ ರಮ್ಯಂ; ತತ್ರ ರಮ್ಯಾ ಶಾಕುಂತಲಾ" ಎಂದು ಹೊಗಳಿಸಿಕೊಂಡ ಶೃಂಗಾರರಸ ಪ್ರಧಾನವಾಗಿರುವ ಕೃತಿ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಅದರೊಡನೆ ಹೋರಾಡಿ ಅದನ್ನು ಆರಿಸುವುದಕ್ಕೆಂದೇ ವಿಶೇಷವಾಗಿ ರಚನೆಯಾಗಿರುವ ಸಿಬ್ಬಂದಿಗೆ ಈ ಹೆಸರಿದೆ. ಸಾಮಾನ್ಯವಾಗಿ ಇಂಥ ದಳ ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ವಿಸ್ತರಿಸುತ್ತದೆ. ಆಕಸ್ಮಿಕದಿಂದ ಉಂಟಾದ ಬೆಂಕಿಯನ್ನು ಆರಿಸುವುದು ಮಾತ್ರವಲ್ಲದೆ ಇತರೆಡೆಗಳಿಗೆ ಹರಡದಂತೆಯೂ ಈ ದಳ ನೋಡಿಕೊಳ್ಳುತ್ತದೆ.
ಮಾನವನ ಕಣ್ಣು ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಪ್ರಜ್ಞಾತ್ಮಕ ಜ್ಞಾನೇಂದ್ರಿಯವಾಗಿರುವ ಕಣ್ಣು, ದೃಷ್ಟಿಗೆ ಅವಕಾಶ ನೀಡುತ್ತದೆ. ಅಕ್ಷಿಪಟದಲ್ಲಿರುವ ರಾಡ್(ಕಣ್ಣಿನ ಪಾಪೆಯ ದಂಡ) ಮತ್ತು ಕೋನ್ (ಅಕ್ಷಿಪಟದಲ್ಲಿರುವ ಶಂಕುವಿನಾಕಾರದ ರಚನೆ) ಕೋಶಗಳು, ವಿವಿಧ ಬಣ್ಣಗಳು ಮತ್ತು ಅವುಗಳ ಗಾಢತೆಯನ್ನು ಗ್ರಹಿಸುವುದು ಸೇರಿದಂತೆ ಜಾಗೃತ ಬೆಳಕಿನ ಗ್ರಹಿಕೆ ಮತ್ತು ದೃಷ್ಟಿಗೆ ಅವಕಾಶ ಕಲ್ಪಿಸುತ್ತದೆ.
ವರಾಹಾವತಾರ ಹಂದಿಯ ರೂಪದಲ್ಲಿ ಹಿಂದೂ ದೇವತೆ ವಿಷ್ಣುವಿನ ಅವತಾರ, ಮತ್ತು ಇದು ಕೂರ್ಮಾವತಾರದ ನಂತರ ಹಾಗು ನರಸಿಂಹಾವತಾರದ ಮೊದಲು ಬರುತ್ತದೆ. ವರಾಹಾವತಾರವನ್ನು ದಶಾವತಾರಗಳಲ್ಲಿ ಮೂರನೆಯದಾಗಿ ಪಟ್ಟಿಮಾಡಲಾಗುತ್ತದೆ. ದೈತ್ಯ ಹಿರಣ್ಯಾಕ್ಷನು ಭೂಮಿಯನ್ನು (ಭೂದೇವಿಯಾಗಿ ಮೂರ್ತೀಕರಿಸಲಾಗಿದೆ) ಕದ್ದು ಆಕೆಯನ್ನು ಆದಿಸ್ವರೂಪದ ನೀರಿನಲ್ಲಿ ಬಚ್ಚಿಟ್ಟಾಗ, ವಿಷ್ಣು ಆಕೆಯನ್ನು ಕಾಪಾಡಲು ವರಾಹನಾಗಿ ಕಾಣಿಸಿಕೊಂಡನು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
{{Infobox company |name = ಭಾರತೀಯ ರೇಲ್ವೆ |logo = Indian Railway.svg |logo_size = 125px |logo_alt = Indian Railways logo |logo_caption = |logo_padding = center |image = Indian_Railways_Headquarters.jpg |image_size = 250px |image_alt = |image_caption = ಭಾರತೀಯ ರೇಲ್ವೆಯ ಪ್ರಧಾನ ಕಚೇರಿ, ದೆಹಲಿ |native_name = भारतीय रेल Bhāratīya Rel |type = ಸರ್ಕಾರಿ ಸ್ವಾಮ್ಯ |industry = ರೇಲ್ವೆ |founded = 16 ಏಪ್ರಿಲ್ 1853 (1853-೦೪-16) | hq_location_city = ನವ ದೆಹಲಿ | hq_location_country = ಭಾರತ |area_served = ಭಾರತ |key_people = {{unbulleted list|[[ ಪೀಯುಷ್ ಗೋಯಲ್ ] (ರೈಲು ಮಂತ್ರಿ, 2020–)}} |services = ಪ್ರಯಾಣಿಕ ರೈಲುಸರಕು ಸೇವೆಗಳುಭಾಂಗಿ ವಾಹಕಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ಸೇವೆಗಳುನಿಲುಗಡೆ ಪ್ರದೇಶ ಕಾರ್ಯಾಚರಣೆಗಳುಇತರ ಸಂಬಂಧಿತ ಸೇವೆಗಳು |revenue = ₹1.709 trillion (US$೩೭.೯೪ billion) | revenue_year = 2015–16 | profit = ₹ ೧೦೫.೦೨ billion (US$೨.೩೩ billion) | profit_year = 2015–16 |owner = ಭಾರತ ಸರ್ಕಾರ |num_employees = 1.335 ದಶಲಕ್ಷ | num_employees_year = 2014 |parent = ರೈಲು ಸಚಿವಾಲಯ ರೈಲು ಮಂಡಳಿ ಮೂಲಕ |divisions = ೧೮ ರೇಲ್ವೆ ವಲಯಗಳು |subsid = |homepage = www.indianrail.gov.inindianrailways.gov.in |footnotes = |intl = No | module = }} ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.