The most-visited ಕನ್ನಡ Wikipedia articles, updated daily. Learn more...
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ ಮಾನವೇಂದ್ರೇಣ ಯಾ ಪುರೀ ನಿರ್ಮಿತಾ ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ಪ್ರೋಟೀನ್ಗಳು (ಬಹುಪೆಪ್ಟೈಡ್ಗಳು ಎಂದೂ ಪರಿಚಿತವಾಗಿವೆ) ರೇಖಾತ್ಮಕ ಸರಣಿಯಲ್ಲಿರುವ ಮತ್ತು ಗೋಳಾಕಾರದಲ್ಲಿ ಸುತ್ತಿರುವ ಅಮೀನೋ ಆಮ್ಲಗಳಿಂದ ರಚಿತವಾಗಿರುವ ಸಾವಯವ ಸಂಯುಕ್ತಗಳು. ಒಂದು ಪಾಲಮರ್ನಲ್ಲಿನ ಅಮೀನೋ ಆಮ್ಲಗಳು ಪಕ್ಕದ ಅಮೀನೋ ಆಮ್ಲ ಅವಶೇಷಗಳ ಕಾರ್ಬಾಕ್ಸಿಲ್ ಮತ್ತು ಅಮೀನೋ ಗುಂಪುಗಳ ನಡುವಿನ ಪೆಪ್ಟೈಡ್ ಬಂಧಗಳಿಂದ ಒಟ್ಟಾಗಿ ಸೇರಿಸಲ್ಪಟ್ಟಿರುತ್ತವೆ. ಒಂದು ಪ್ರೋಟೀನ್ನ ಅಮೀನೋ ಆಮ್ಲಗಳ ಸರಣಿಯು ವಂಶವಾಹಿ ಸಂಕೇತದಲ್ಲಿ ಸಂಕೇತೀಕರಿಸಲಾದ ಒಂದು ವಂಶವಾಹಿಯ ಸರಣಿಯಿಂದ ನಿರೂಪಿಸಲ್ಪಡುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಾಹಿತಿ, ಕವನ ಬರೆಯುವವರು.ಸಾಹಿತಿ ಬರೆದದ್ದು ಸಾಹಿತ್ಯವಾದರೆ,ಕವಿ ಬರೆದದ್ದು ಕವಿತೆ,ಕವನ,ಕಾವ್ಯವಾಗುತ್ತದೆ.ಅಚ್ಚಕನ್ನಡದಲ್ಲಿ ಕಬ್ಬಿಗನೆಂಬ ಹೆಸರಿದೆ.ಕವಿಯ ಶಕ್ತಿ,ಸಾಮರ್ಥ್ಯದ ಬಗ್ಗೆ "ರವಿ ಕಾಣದ್ದನ್ನು ಕವಿ ಕಂಡ" ಎಂಬ ಮಾತಿದೆ. ಅಂದರೆ ಕವಿಯಾದವನು ಬರೀ ವಾಸ್ತವ ಮಾತ್ರವಲ್ಲದೆ, ಕಲ್ಪನೆ(Imagination)ಯ ನಮೂನೆಯಲ್ಲಿ ಮೂಡಿಬಂದದ್ದನ್ನು ಚಮತ್ಕಾರಿಕವಾಗಿ ಹಾಗೂ ರಮಣೀಯವಾಗಿ ರಚಿಸುತ್ತಾನೆ ಮತ್ತು ಕಣ್ಣಿಗೆ ಕಟ್ಟಿದಂತೆ ಚಿತ್ರಿಸುತ್ತಾನೆ ಎಂದರ್ಥವಾಗುತ್ತದೆ...........................
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಕ್ಕರೆಯು, ಸಿಹಿ ಸ್ವಾದದ ವಿಶೇಷಗುಣ ಹೊಂದಿರುವ, ಮುಖ್ಯವಾಗಿ ಸೂಕ್ರೋಸ್, ಲ್ಯಾಕ್ಟೋಸ್, ಮತ್ತು ಫ್ರಕ್ಟೋಸ್ನಂತಹ, ತಿನ್ನಲರ್ಹವಾದ ಸ್ಫಟಿಕದಂತಹ ಪದಾರ್ಥಗಳ ವರ್ಗಕ್ಕೆ ಬಳಸಲಾಗುವ ಒಂದು ಅನೌಪಚಾರಿಕ ಪದ. ಆಹಾರದಲ್ಲಿ, ಸಕ್ಕರೆ ಪದವು ಬಹುತೇಕ ವಿಶಿಷ್ಟವಾಗಿ, ಮುಖ್ಯವಾಗಿ ಕಬ್ಬು ಮತ್ತು ಶುಗರ್ ಬೀಟ್ನಿಂದ ಪಡೆಯಲಾಗುವ, ಸೂಕ್ರೋಸನ್ನು ನಿರ್ದೇಶಿಸುತ್ತದೆ. ಇತರ ಸಕ್ಕರೆಗಳನ್ನು ಔದ್ಯೋಗಿಕ ಆಹಾರ ತಯಾರಿಕೆಯಲ್ಲಿ ಬಳಸಲಾಗುತ್ತದೆ, ಆದರೆ ಸಾಮಾನ್ಯವಾಗಿ ಹೆಚ್ಚು ನಿರ್ದಿಷ್ಟ ಹೆಸರುಗಳಿಂದ ಪರಿಚಿತವಾಗಿವೆ—ಗ್ಲೂಕೋಸ್, ಫ್ರಕ್ಟೋಸ್, ಹೈ ಫ್ರಕ್ಟೋಸ್ ಕಾರ್ನ್ ಸಿರಪ್, ಇತ್ಯಾದಿ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ದೇಶದ ಮುಖ್ಯಸ್ಥರಾಗಿ ರಾಷ್ಟ್ರಪತಿ ಇರುವಂತೆಯೇ, ಭಾರತದಲ್ಲಿ ರಾಜ್ಯಗಳ ಮುಖ್ಯಸ್ಥರನ್ನು ರಾಜ್ಯಪಾಲ ಎಂದು ಕರೆಯುತ್ತಾರೆ.ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಮುಖ್ಯಮಂತ್ರಿಗಳಾಗಿದ್ದರೂ ರಾಜ್ಯಪಾಲರು ರಾಜ್ಯಗಳ ಮುಖ್ಯಸ್ಥರಾಗಿರುತ್ತಾರೆ.ರಾಜ್ಯಪಾಲರನ್ನು ರಾಷ್ಟ್ರಪತಿಗಳು ನೇಮಿಸುತ್ತಾರೆ. ರಾಜ್ಯಪಾಲರ ಅಧಿಕಾರಾವಧಿ ೫ ವರ್ಷಗಳು.ಕೇಂದ್ರದಲ್ಲಿ ರಾಷ್ಟ್ರಪತಿ ಇದ್ದಂತೆ ರಾಜ್ಯದಲ್ಲಿ ರಾಜ್ಯಪಾಲ ಇರಬೇಕಾಗುತ್ತದೆ. ಭಾರತದ ಸಂವಿಧಾನದಲ್ಲಿ ರಾಜ್ಯದ ಶಾಸನ ರಚನಾ ಅಧಿಕಾರ ಹಾಗೂ ನ್ಯಾಯಾಂಗದ ಅಧಿಕಾರ ಹೊರತುಪಡಿಸಿ ಇರುವ ಉಳಿದೆಲ್ಲ ಅಧಿಕಾರವನ್ನು ರಾಜ್ಯಪಾಲರು ಇಲ್ಲವೆ ಅವರ ಹೆಸರಿನಲ್ಲಿಯೇ ನಿರ್ವಹಣೆ ಮಾಡಬೇಕಾಗುತ್ತದೆ.
'ರತನ್ ನಾವಲ್ ಟಾಟಾ' (೨೮, ಡಿಸೆಂಬರ್, ೧೯೩೭-)ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.