The most-visited ಕನ್ನಡ Wikipedia articles, updated daily. Learn more...
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
Caste Balija ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ತೀರ್ಥಂಕರ ವೃಷಭ ನಾಥ(ಆದಿನಾಥ)ರು ಸಂಸಾರದ ನಶ್ವರತೆಯನ್ನು ಅರಿತು ವೈರಾಗ್ಯವನ್ನು ಹೊಂದಿ ದೀಕ್ಷೆಯನ್ನು ಗ್ರಹಣೆ ಮಾಡಿ ತಪಸ್ಸಿಗೆ ಕಾಡಿಗೆ ತೆರಳುತ್ತಾರೆ.೬ ತಿಂಗಳು ಕಠಿಣ ತಪಸ್ಸನ್ನು ಮಾಡಿದ ಮೇಲೆ ಆಹಾರಕ್ಕೆಂದು ನಗರಕ್ಕೆ ವಿಧಿ ಪೂರ್ವಕ ಆಗಮಿಸುತ್ತಾರೆ.ಆದರೆ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರವನ್ನು ಕೊಡುವ ವಿಧಿಯನ್ನು ಶ್ರಾವಕ-ಶ್ರಾವಕಿಯರು ತಿಳಿದಿರುವುದಿಲ್ಲ.ಆ ಕಾರಣ ಜನರು ಮೊದಲೇ ಮಹಾರಾಜರಾಗಿದ್ದ ಅವರನ್ನು ಸತ್ಕರಿಸುವ ಭಾವನೆಯಿಂದ ವಿವಿಧ ಒಡವೆ,ವಸ್ತ್ರಗಳನ್ನು ಕೆಲವು ನೀಡಲು ಮುಂದಾಗುತ್ತಾರೆ,ಕೆಲವರು ತಮ್ಮ ಹೆಣ್ಣು ಮಕ್ಕಳನ್ನು ಮದುವೆಯಾಗುವಂತೆ ಕೇಳಿಕೊಳ್ಳುತ್ತಾರೆ.ಆದರೆ ಇದಾವುದನ್ನು ಬಯಸದ ಅವರು ಪುನಃ ಕಾಡಿಗೆ ತಪ್ಪಸ್ಸಿಗೆಂದು ಮರಳುತ್ತಾರೆ.ಇದಾಗಿ ೭ ತಿಂಗಳು ೯ ದಿನಗಳ ಉಪವಾಸದ ನಂತರ ಮತ್ತೆ ಹಸ್ತಿನಾಪುರ ಎಂಬ ನಗರಕ್ಕೆ ಆಹಾರಕ್ಕೆಂದು ಆಗಮಿಸುತ್ತಾರೆ.ಆವಾಗಲು ಪುನಃ ಅದೇ ಘಟನೆಗಳು ಮರುಕಳಿಸುತ್ತವೆ.ಆದರೆ ಅದೇ ನಗರದ ರಾಜಾ ಶ್ರೇಯಾಂಸನು ಇವರ ದರ್ಶನಕ್ಕೆಂದು ಪರಿವಾರ ಸಹಿತ ಆಗಮಿಸುತ್ತಾನೆ.ಆಗ ಅವನಿಗೆ ಹಿಂದಿನ ಜನ್ಮದ ಜಾತಿ ಸ್ಮರಣೆ ಆಗುತ್ತದೆ.ಹಿಂದಿನ ಭವ(೮ನೆ)ದಲ್ಲಿ ಇವರಿಬ್ಬರು(ಆದಿನಾಥರು) ಸೆರೀ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರ ನೀಡಿದ ಸ್ಮರಣೆ ಆಗುತ್ತದೆ.ತಕ್ಷಣವೇ ರಾಜಾ ಸೋಮನು ಮತ್ತು ಶ್ರೆಯಾಂಸನು ಸೆರೀ ನವಧಾ ಭಕ್ತಿಯಿಂದ ಮೊದಲಿಗೆ ಇಕ್ಷು(ಕಬ್ಬಿನ ಹಾಲು)ರಸವನ್ನು ನೀಡುತ್ತಾರೆ.ಅಹಾರವಾದಾಕ್ಷಣ ದೇವತೆಗಳು ಪಂಚಾಶ್ಚರ್ಯ ವೃಷ್ಟಿ ಮಾಡುತ್ತಾರೆ.ಜನರು ಜಯ ಜಯಕಾರಗಳನ್ನು ಹಾಕಿ ಸಂತೋಷ ಪಡುತ್ತಾರೆ.ವೃಷಭ ನಾಥರಿಗೆ ಮೊದಲು ಆಹಾರ(ಪಾರಣಾ)ವಾದ ದಿವಸ ವೈಶಾಖ ಶುಕ್ಲ ತೃತೀಯ ತಿಥಿಯಿದ್ದ ಕಾರಣ ಆ ದಿನವನ್ನು “ಅಕ್ಷಯ ತೃತೀಯ“ವೆಂದು ಆಚರಿಸಲಾಗುತ್ತದೆ.ಜೈನ ಧರ್ಮದಲ್ಲಿ ಮುನಿಗಳಿಗೆ ಆಹಾರ ದಾನ ಮಾಡುವುದೆಂದರೆ ಅತ್ಯಂತ ಅತಿಶಯ,ಅಕ್ಷಯ ಪುಣ್ಯಕ್ಕೆ ಕಾರಣ ಎಂದು ಹೇಳಲಾಗಿದೆ.ಈ ದಿನ ಬಸದಿಗಳಲ್ಲಿ ವಿಶೇಷವಾಗೀ ಅಭಿಷೇಕ ಪೂಜೆ,ಉತ್ಸವಗಳನ್ನು ಆಚರಿಸಲಾಗುತ್ತದೆ.ಈ ದಿನ ದಿಗಂಬರ ಮುನಿಗಳಿಗೆ ,ವಿಶೇಷವಾಗಿ ಕಬ್ಬಿನ ಹಾಲನ್ನು ಆಹಾರ ದಾನದಲ್ಲಿ ನೀಡುವುದರಿಂದ ಧನ,ದಾನ್ಯಗಳು,ಮನೆಯಲ್ಲಿ ಸುಖ,ನೆಮ್ಮದಿ ಅಕ್ಷಯವಾಗಿ ವೃದ್ಧಿಯಾಗುತ್ತವೆ ಎಂಬ ನಂಬಿಕೆಯಿದೆ. ತೀರ್ಥಂಕರ ವೃಷಭ ನಾಥರ ಸಂಕ್ಷೇಪ ಜೀವನ ಪರಿಚಯ- ತಂದೆ-ರಾಜಾ ನಾಭೀರಾಯ(೧೪ ನೆ ಮನು) ತಾಯೀ-ರಾಣೀ ಮರುದೇವಿ ಜನ್ಮ ಸ್ಥಳ-ಅಯೋಧ್ಯ(ಉ.ಪ್ರ) ಗರ್ಭಕಲ್ಯಾಣ-ಆಷಾಡ ಕೃಷ್ಣ ೨ ಜನ್ಮ ಕಲ್ಯಾಣ-ಚೈತ್ರ ಕೃಷ್ಣ ೯ ದೀಕ್ಷಾ ಕಲ್ಯಾಣ-ಚೈತ್ರ ಕೃಷ್ಣ ೯ ಕೇವಲ ಜ್ಞಾನ-ಪಾಲ್ಗ್ಹುಣ ಕೃಷ್ಣ ೧೧ ಮೋಕ್ಷ(ನಿರ್ವಾಣ)ಕಲ್ಯಾಣ-ಮಾಘ ಕೃಷ್ಣ ೧೪ ಜನತೆಗೆ ಕಲಿಸಿದ 6 ವಿದ್ಯೆಗಳು-ಅಸಿ,ಮಸಿ,ಕೃಷಿ,ವಿಧ್ಯೆ,ವಾಣಿಜ್ಯ,ಮತ್ತು ಶಿಲ್ಪ ಕಲೆ. ಪಟ್ಟ ರಾಣೀಯರು-ನಂದಾ(ಯಶಸ್ವತೀ),ಸುನಂದಾ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಪುನೀತ್ ರಾಜ್ಕುಮಾರ್ (ಇಂಗ್ಲಿಷ್: Puneeth Rajkumar) (ಜನನ 1975 17 ಮಾರ್ಚ್) ಭಾರತೀಯ ಚಿತ್ರನಟ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತಾ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು.
[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.