The most-visited ಕನ್ನಡ Wikipedia articles, updated daily. Learn more...
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ಜೆನ್ಪ್ಯಾಕ್ಟ್ (NYSEG), ಎಂಬುದು ಭಾರತದ ಒಂದು BPO ಕಂಪನಿಯಾಗಿದೆ. ಇದಕ್ಕೂ ಮುಂಚಿತವಾಗಿ ಇದು GE ಕ್ಯಾಪಿಟಲ್ ಇಂಟರ್ನ್ಯಾಷನಲ್ ಸರ್ವೀಸಸ್ ಅಥವಾ GECIS ಎಂಬ ಹೆಸರಿನ GE ಸ್ವಾಮ್ಯದ ಒಂದು ಕಂಪನಿಯಾಗಿತ್ತು. ಭಾರತ, ಚೀನಾ, ಗ್ವಾಟೆಮಾಲಾ, ಹಂಗರಿ, ಮೆಕ್ಸಿಕೊ, ಮೊರಾಕೊ, ಫಿಲಿಪೀನ್ಸ್, ಪೋಲೆಂಡ್, ನೆದರ್ಲೆಂಡ್ಸ್, ರೊಮೇನಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನಗಳಿಂದ ಇದು ಕಾರ್ಯಾಚರಣೆಯನ್ನು ನಡೆಸುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಶಾಪ್ಕ್ಲೂಸ್ 07.683933069 07.044136282ಒ೦ದು ಆನ್ಲೈನ್ ಮಾರುಕಟ್ಟೆ ಸ್ಥಳವಾಗಿದ್ದು, ಅದರ ಪ್ರಧಾನ ಕಛೇರಿ ಭಾರತದ ಗುರಗ೦ವ್ನ ಸ್ಥಾಪಿತವಾಗಿದೆ. ಈ ಕ೦ಪನಿಯು ೨೦೧೧ರಲ್ಲಿ ಕಾಲಿಫೋರ್ನಿಯಾದ ಸಿಲಿಕಾನ್ ವ್ಯಲಿಯಲ್ಲಿ ಮೊದಲು ಸ್ಥಾಪನೆಗೊ೦ಡಿತು. ಇದರಲ್ಲಿ ೧೨೦೦೦ಕ್ಕೂ ಹೆಚ್ಚು ನೋ೦ದಾಯಿತ ವ್ಯಾಪಾರಿಗಳಿದ್ದು,ಎರಡು ಲಕ್ಷಕ್ಕು ಹೆಚ್ಚು ಉತ್ಪನ್ನಗಳನ್ನು ಇದು ಗ್ರಾಹಕರಿಗೆ ಒದಗಿಸುತ್ತಿದೆ, ಅಲ್ಲದೆ ಪ್ರತೀ ವರ್ಷವು ೯೫೦೦ ಸ್ಥಳಗಳಿ೦ದ ೪೨ ಮಿಲಿಯನ್ ಗ್ರಾಹಕರು ಈ ಆನ್ಲೈನ್ ವೇದಿಕೆಯನ್ನು ಉಪಯೋಗಿಸುತ್ತಿರುವುದು ಇದರ ಹೆಗ್ಗಳಿಕೆಯಾಗಿದೆ.
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:{{{1}}}(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
Bayerische Motoren Werke AG (BMW )(ಆಂಗ್ಲ:Bavarian Motor Works)೧೯೧೬ರಲ್ಲಿ ಸ್ಥಾಪನೆಗೊಂಡ ಜರ್ಮನಿಯ ಆಟೋಮೊಬೈಲ್(=ಸ್ವಯಂಚಾಲಿತ), ಮೋಟಾರ್ ಸೈಕಲ್ ಮತ್ತು ಎಂಜಿನ್ ತಯಾರಿಸುವ ಸಂಸ್ಥೆ. BMW MINI ಬ್ರ್ಯಾಂಡ್ ಕಾರುಗಳನ್ನು ತಯಾರಿಸುತ್ತಿದ್ದು, ಇದು ರೋಲ್ಸ್-ರಾಯ್ಸ್ ಮೋಟರ್ ಕಾರ್ಸ್ನ ಮಾತೃ ಸಂಸ್ಥೆ. BMW ತನ್ನ ಸಮರ್ಥ ಕಾರ್ಯ ನಿರ್ವಹಣೆಯಿಂದಲೂ, ವಿಲಾಸೀ ವೈಭವದಿಂದಲೂ ಜನಪ್ರಿಯವಾಗಿದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಒಂದು ಅಂತರಿಕ್ಷ ಕಾಯದ ಸುತ್ತ ಪ್ರದಕ್ಷಣೆ ಹಾಕುವಂತಹ ಮಾನವ ನಿರ್ಮಿತ ವಸ್ತುವಿಗೆ ಕೃತಕ ಉಪಗ್ರಹ ಎಂದು ಹೆಸರು. ಬಾಹ್ಯಾಕಾಶ ಹಾರಾಟದ ಸಂದರ್ಭದಲ್ಲಿ, ಒಂದು ಉಪಗ್ರಹವು ಉದ್ದೇಶಪೂರ್ವಕವಾಗಿ ಕಕ್ಷೆಗೆ ಇಡುವ ಕೃತಕ ವಸ್ತುವಾಗಿದೆ. ಅಂತಹ ವಸ್ತುಗಳು ಕೆಲವೊಮ್ಮೆ ಕೃತಕ ಉಪಗ್ರಹಗಳನ್ನು ಭೂಮಿಯ ಚಂದ್ರನಂತಹ ನೈಸರ್ಗಿಕ ಉಪಗ್ರಹಗಳಿಂದ ಪ್ರತ್ಯೇಕಿಸಲು ಕರೆಯಲಾಗುತ್ತದೆ.1957 ರಲ್ಲಿ ಸೋವಿಯತ್ ಒಕ್ಕೂಟವು ವಿಶ್ವದ ಮೊದಲ ಕೃತಕ ಉಪಗ್ರಹವಾದ ಸ್ಪುಟ್ನಿಕ್ 1 ಅನ್ನು ಪ್ರಾರಂಭಿಸಿತು.