The most-visited ಕನ್ನಡ Wikipedia articles, updated daily. Learn more...
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.ಕಾರ್ಮಿಕರ ಮೆರೆವಣಿಗೆ, ಪ್ರದರ್ಶನ, ಸಭೆ-ಇವು ಆ ದಿನದ ವಿಶೇಷಗಳು.
hi ಜೀವಸತ್ವ ವೆಂದರೆ (ವಿಟಮಿನ್) ಯಾವುದೇ ಜೀವಿಗೆ ಕೂಡಾ ಪೋಷಕಾಂಶದ ರೂಪದಲ್ಲಿ ಅಲ್ಪ ಪ್ರಮಾಣದಲ್ಲಿ ಅಗತ್ಯವಾಗಿರುವ ಸಾವಯವ ಸಂಯೋಗ. ಆಂಗ್ಲ ಪದ 'ವಿಟಮಿನ್vitamin' ಎಂಬುದು ಮೊದಲಿಗೆ 1800ನೇ ಶತಮಾನದ ಮೊದಲ ಭಾಗದಲ್ಲಿ 'ವೈಟಲ್' ಹಾಗೂ 'ಮಿನರಲ್' ಎಂಬೆರಡು ಪದಗಳ ಮಿಶ್ರಪದವಾಗಿ ಜನಪ್ರಿಯವಾಗಿತ್ತಾದರೂ, ಪದದ ನಿಜವಾದ ಅರ್ಥವು ಆ ಸಮಯದಿಂದೀಚೆಗೆ ಸಾಕಷ್ಟು ಬದಲಾಗಿದೆ. ಯಾವುದೇ ಜೀವಿಯು ಸಂಯೋಗವೊಂದನ್ನು ಸಾಕಷ್ಟು ಪ್ರಮಾಣದಲ್ಲಿ ಸಂಯೋಜಿಸಲು ಸಾಧ್ಯವಾಗದೇ ಆಹಾರದ ಮೂಲಕವೇ ಪಡೆದುಕೊಳ್ಳಬೇಕಾಗಿದ್ದರೆ ಅದನ್ನು ಜೀವಸತ್ವ ಎಂದು ಕರೆಯಲಾಗುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಗೂಗಲ್ ಡೂಡಲ್ ಎಂಬುದು ರಜಾದಿನಗಳು, ಘಟನೆಗಳು, ಸಾಧನೆಗಳು ಮತ್ತು ಜನರ ಬಗೆಗಿನ ವಿಚಾರಗಳನ್ನು ಆಧರಿಸಿ ಆಚರಿಸಲು ಉದ್ದೇಶಿಸಿರುವ ಗೂಗಲ್ನ ಮುಖಪುಟ. ಇದನ್ನು ಗಮನಿಸಿಕೊಂಡು ಗೂಗಲ್ ಲೋಗೋದ ವಿಶೇಷತೆಯನ್ನು, ತಾತ್ಕಾಲಿಕ ಬದಲಾವಣೆಗಳನ್ನು ಮಾಹಿತಿಯಾಗಿ ತಯಾರಿಸುವುದು. ಕೆಲವು ಸಂದರ್ಭಗಳಲ್ಲಿ ಸರ್ವರ್ಗಳು ಕುಸಿದಲ್ಲಿ ಅದರ ಅನುಪಸ್ಥಿತಿಯಲ್ಲಿ ಬಳಕೆದಾರರಿಗೆ ತಿಳಿಸಲು ಲ್ಯಾರಿ ಪೇಜ್ ಮತ್ತು ಸರ್ಜೆ ಬ್ರಿನ್ ಈ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿದರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ದಿ ಶೋ-ಮ್ಯಾನ್ ಎಂದೂ ಕರೆಯಲ್ಪಡುವ ರಣ್ಬಿರ್ ರಾಜ್ "ರಾಜ್" ಕಪೂರ್ ಹಿಂದಿ:राज कपूर (ಪಂಜಾಬಿಉರ್ದು: راج کپُور: ರಾಜ್ ಕಪೂರ್, ೧೪ ದಶಂಬರ್ ೧೯೨೪ - ೨ ಜೂನ್ ೧೯೮೮), ಭಾರತೀಯ ಹಿಂದಿ ಚಿತ್ರರಂಗದಲ್ಲಿ ನಟ, ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದರು. ಇವರು ಒಂಭತ್ತು ಭಾರಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದವರು. ಇವರ ಚಿತ್ರ ಆವಾರ (೧೯೫೧) ಮತ್ತು ಬೂಟ್ ಪಾಲಿಶ್ (೧೯೫೪) ಕ್ಯಾನೆ ಫಿಲ್ಮ್ ಫೆಸ್ಟಿವಲ್ನ ಪಾಮ್ ಡಿ'ಆರ್ಗೆ ನಾಮನಿರ್ದೇಶನಗೊಂಡಿದ್ದವು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕರ್ನಾಟಕದ ನಾಣ್ಯಗಳು : ಕರ್ನಾಟಕದಲ್ಲಿ ನಾಣ್ಯಗಳ ಪ್ರಾಚೀನತೆಯ ವಿಷಯದಲ್ಲಿ ಅತಿ ಖಚಿತವಾದ ಮಾಹಿತಿ ದೊರಕಿಲ್ಲವಾದುದುರಿಂದ, ಅವು ಇಲ್ಲಿ ಯಾವಗಿನಿಂದ ಬಳಕೆಯಲ್ಲಿವೆ ಎಂದು ಹೇಳುವುದು ಕಷ್ಟ.. ಉತ್ತರ ಭಾರತದಲ್ಲಿದ್ದಂತೆಯೇ ಇಲ್ಲಿಯೂ ಪ್ರಾಚೀನ ಕಾಲದಲ್ಲಿ ಮುದ್ರಾಂಕಿತ ನಾಣ್ಯಗಳು (ಪಂಚ್ಮಾಕ್ರ್ಡ್ ಕಾಯಿನ್ಸ್: ಚೈತ್ಯ, ಸ್ತೂಪ, ಬೆಟ್ಟಗಳೇ ಮುಂತಾದ ವಿವಿಧ ಚಿಹ್ನೆಗಳನ್ನು ಬೆಳ್ಳಿ ಅಥವಾ ತಾಮ್ರದ ತೆಳುಪಟ್ಟಿಗಳ ಮೇಲೆ ಮುದ್ರೆಯೊತ್ತಿ ಉಪಯೋಗಿಸುತ್ತಿದ್ದ ಭಾರತದ ಪ್ರಾಚೀನ ಪದ್ಧತಿಯ ನಾಣ್ಯಗಳು) ಬಳಕೆಯಲ್ಲಿದ್ದುವೆಂದು ಗೊತ್ತಾಗುತ್ತದೆ. ಆದರೆ ಇಲ್ಲಿ ಈ ನಾಣ್ಯಗಳ ವೈಶಿಷ್ಟ್ಯವೇನೆಂಬುದು ತಿಳಿದಿಲ್ಲ.
ಸಾಗರ ಅಥವಾ ಇನ್ನಿತರ ಜಲರಾಶಿಯಲ್ಲಿ ಅಗಾಧ ಪ್ರಮಾಣದ ಚಲನೆಯುಂಟಾದಾಗ ಜನಿಸುವ ಸಾಗರದ ತರಂಗಗಳ ಸರಣಿಗೆ ಸುನಾಮಿ (ತ್ಸುನಾಮಿ) ಎಂದು ಕರೆಯಲಾಗುತ್ತದೆ. ಭೂಕಂಪ, ಜ್ವಾಲಾಮುಖಿ, ಬಾಹ್ಯಾಕಾಶದ ಬೃಹತ್ ಗಾತ್ರದ ವಸ್ತುವಿನ ಅಪ್ಪಳಿಕೆ ಇತ್ಯಾದಿ ಸುನಾಮಿ ಅಲೆಗಳನ್ನು ಹುಟ್ಟುಹಾಕುವ ಸಾಮರ್ಥ್ಯ ಪಡೆದಿವೆ. ಸುನಾಮಿಯು, ಗಮನಕ್ಕೆ ಬಾರದಷ್ಟು ಸಣ್ಣ ಪ್ರಮಾಣದಿಂದ ಹಿಡಿದು ಅತ್ಯಂತ ಹಾನಿಕರವಾದ ನೈಸರ್ಗಿಕ ವಿಕೋಪದವರೆಗೂ ತನ್ನ ಪ್ರಭಾವ ಬೀರಬಲ್ಲುದಾಗಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ರೋಹಿತ್ ಗುರುನಾಥ್ ಶರ್ಮಾ (1987 ಏಪ್ರಿಲ್ 30 ರಂದು ಹುಟ್ಟಿದರು) ಭಾರತೀಯ ಅಂತರರಾಷ್ಟ್ರೀಯ ತಂಡದ ಆಟಗಾರ. ಅವರು ಬಲಗೈ ಬ್ಯಾಟ್ಸ್ಮನ್ ಮತ್ತು ದೇಶೀಯ ಕ್ರಿಕೆಟ್ನಲ್ಲಿ ಮುಂಬಯಿ ತಂಡದಲಿ ಆಡುವ ಒಬ್ಬ ಸಾಂದರ್ಭಿಕ ಬಲಗೈ ಆಫ್ ಬ್ರೇಕ್ ಬೌಲರ್ (ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹ್ಯಾಟ್ರಿಕ್ ಹೊಂದಿದೆ), ಆಗಿದ್ದಾರೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬಯಿ ಇಂಡಿಯನ್ಸ್ ತಂಡದ ನಾಯಕ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಸತ್ಯ ಸಾಯಿ ಬಾಬ (ತೆಲುಗು:సత్య సాయిబాబా),ಅವರ ಜನ್ಮ ನಾಮ ಸತ್ಯನಾರಾಯಣ ರಾಜು (ಜನನ: ನವೆ೦ಬರ್ ೨೩, ೧೯೨೬; ನಿಧನ: ಏಪ್ರಿಲ್ ೨೪, ೨೦೧೧), ಇವರು ಒಬ್ಬ ಪ್ರಸಿದ್ಧ ದಕ್ಷಿಣ ಭಾರತದ ಧಾರ್ಮಿಕ ಗುರು ಹಾಗು ಶಿಕ್ಷಕ. ಭಕ್ತರು ಅವರನ್ನು ಅವತಾರ ಪುರುಷ, ದೇವ ಮಾನವ, ಆಧ್ಯಾತ್ಮಿಕ ಶಿಕ್ಷಕ ಹಾಗು ಅದ್ಭುತ ಪವಾಡಗಳನ್ನು ಮಾಡುವ ಕೆಲಸಗಾರ ಎಂದು ವರ್ಣಿಸಿದರು. ಸತ್ಯ ಸಾಯಿ ಬಾಬಾರವರು ಹಲವಾರು "ಪವಾಡ ಸದೃಶ", ಕೆಲಸಗಳನ್ನು ಮಾಡಿ ವಿಭೂತಿ (ಪವಿತ್ರ ಬೂದಿ) ಹಾಗು ಚಿಕ್ಕ ವಸ್ತುಗಳಾದ ಉ೦ಗುರ,ಕಂಠಹಾರ ಹಾಗು ಕೈಗಡಿಯಾರಗಳನ್ನು ಪ್ರತ್ಯಕ್ಷಮಾಡುತ್ತಿದ್ದರು, ಇದರಿ೦ದಾಗಿ ಅವರು ಪ್ರಸಿದ್ಧರಾದರಲ್ಲದೆ ಹಲವಾರು ವಾದವಿವಾದಗಳಿಗೆ ಎಡೆಮಾಡಿಕೊಟ್ಟರು, ಅಲ್ಲದೆ ಸ೦ದೇಹಾತ್ಮಕವಾಗಿ ಕೈಚಳಕವನ್ನು ಸಾಧಿಸುತ್ತಾರೆ ಎಂದು ಹಲವರು ಹೇಳಿದರೆ, ಭಕ್ತರು ಅದು ದೈವತ್ವದ ಪ್ರತೀಕ ಎಂದು ಭಾವಿಸಿದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.
ಚದುರಂಗದ ನಿಯಮಗಳು (ಚದುರಂಗದ ಕಾನೂನುಗಳು ಎಂದೂ ಸಹ ಇವು ಪರಿಚಿತವಾಗಿವೆ) ಚದುರಂಗದ ಆಟದ ಆಡುವಿಕೆಯನ್ನು ನಿರ್ದೇಶಿಸುವ ನಿಯಮಗಳಾಗಿವೆ. ಚದುರಂಗದ ಮೂಲಗಳು ಕರಾರುವಾಕ್ಕಾಗಿ ಯಾವುವು ಎಂಬುದು ಅಸ್ಪಷ್ಟವಾಗಿದ್ದರೂ ಸಹ, ಆಟದ ಆಧುನಿಕ ನಿಯಮಗಳು ೧೬ನೇ ಶತಮಾನದ ಅವಧಿಯಲ್ಲಿ ಇಟಲಿಯಲ್ಲಿ ಮೊದಲು ರೂಪುಗೊಂಡವು ಎನ್ನಬಹುದು. ೧೯ನೇ ಶತಮಾನದ ಆರಂಭದವರೆಗೂ ಈ ನಿಯಮಗಳಲ್ಲಿ ಕೊಂಚಮಟ್ಟಿನ ಮಾರ್ಪಾಡು ಆಗುತ್ತಲೇ ಇತ್ತು.
[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಅಡೋಬ್ ಸಿಸ್ಟಮ್ಸ್ ಇನ್ಕಾರ್ಪೊರೇಟೆಡ್ (pronounced /əˈdoʊbiː/ ə-DOE-bee) (NASDAQ: ADBE) ಒಂದು ಅಮೆರಿಕನ್ ಕಂಪ್ಯೂಟರ್ ಸಾಫ್ಟ್ವೇರ್ ಕಂಪನಿ, ಇದರ ಪ್ರಧಾನ ಕಛೇರಿ USA ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್ನಲ್ಲಿದೆ. ಈ ಕಂಪನಿಯು ಮೊದಲಿನಿಂದಲೂ ತಯಾರಿಸುತ್ತಿರುವ ಮಲ್ಟಿಮೇಡಿಯಾ ಮತ್ತು ಕ್ರಿಯಾತ್ಮಕ ಸಾಫ್ಟ್ವೇರ್ ಉತ್ಪನ್ನಗಳ ಜೊತೆಯಲ್ಲಿ ಇತ್ತೀಚೆಗೆ ರಿಚ್ ಇಂಟರ್ನೆಟ್ ಅಪ್ಲಿಕೇಷನ್ ಸಾಫ್ಟ್ವೇರ್ ಡೆವಲಂಪ್ಮೆಂಟ್ನೆಡೆಗೆ ಲಗ್ಗೆ ಇಟ್ಟಿದೆ. ಡಿಸೆಂಬರ್ 1982 ರಲ್ಲಿ ಜಾನ್ ವರ್ನೋಕ್ ಮತ್ತು ಚಾರ್ಲ್ಸ್ ಗೆಸ್ಚ್ಕೆ ಯವರು ಅಡೋಬ್ ಅನ್ನು ಸ್ಥಾಪಿಸಿದರು, ಜೆರಾಕ್ಸ್ PARC ಕಂಪನಿಯನ್ನು ಬಿಟ್ಟು ಇವರು ಪೋಸ್ಟ್ಸ್ಕ್ರಿಪ್ಟ್ನ ಪುಟ ವಿವರಣೆ ಭಾಷೆಯ ಅಭಿವೃದ್ಧಿ ಹಾಗೂ ಮಾರಾಟಮಾಡಲು ತಮ್ಮದೇ ಕಂಪನಿಯನ್ನು ಪ್ರಾರಂಭಿಸಿದರು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
'ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆದಮ್'ಆಡಮ್, ಇಬ್ರಾಹಿಂಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್(ಸ) ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.