The most-visited ಕನ್ನಡ Wikipedia articles, updated daily. Learn more...
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಹಿಂದುಸ್ಥಾನ್ ಯೂನಿವರ್ ಲೀವರ್ ಲಿಮಿಟೆಡ್ (HUL) (ಬಿಎಸ್ಇ: 500696) ಭಾರತದ ಒಂದು ದೊಡ್ಡ ಕಂಪನಿಯಾಗಿದ್ದು ಇದುತೀವ್ರ ಬೇಡಿಕೆಯ ಗ್ರಾಹಕ ವಸ್ತುಗಳನ್ನು ಮಾರಾಟ ಮಾಡುವಲ್ಲಿ ನಿರತವಾಗಿದೆ. ಇದು ಆಂಗ್ಲೊ-ಡಚ್ ಕಂಪನಿಯಾಗಿರುವ ಯೂನಿಲೀವರ್ ಇದರಲ್ಲಿ ಸುಮಾರು 52% ರಷ್ಟು ಪಾಲುದಾರಿಕೆ ಪಡೆದಿದೆ. HUL ನ್ನು ಲೀವರ್ ಬ್ರದರ್ಸ್ ಇಂಡಿಯಾ ಲಿಮಿಟೆಡ್ ಎಂದು 1933 ರಲ್ಲಿ ರಚಿಸಲಾಯಿತು.ಆದರೆ ಅದು 1956 ರಲ್ಲಿ ಅಸ್ತಿತ್ವಕ್ಕೆ ಬಂತು.ಲೀವರ್ ಬ್ರದರ್ಸ್ ನ ವಿಲೀನದ ಅನಂತರ ಹಿಂದುಸ್ತಾನ್ ಲೀವರ್ ಲಿಮಿಟೆಡ್ ಆಗಿ ರೂಪಗೊಂಡಿತು.ಹಿಂದುಸ್ತಾನ್ ವನಸ್ಪತಿ Mfg.
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಚಹಾ ವು ಕೆಮೆಲಿಯಾ ಸೈನೆನ್ಸಿಸ್ ಸಸ್ಯದ ಎಲೆಗಳು, ಎಲೆಯ ಮೊಗ್ಗುಗಳು, ಹಾಗೂ ಅಂತರಗೆಣ್ಣುಗಳ ವ್ಯಾವಸಾಯಿಕ ಉತ್ಪನ್ನವಾಗಿದ್ದು ಹಲವಾರು ವಿಧಾನಗಳಿಂದ ಇದು ತಯಾರಿಸಲ್ಪಡುತ್ತದೆ ಮತ್ತು ಹದಗೊಳಿಸಲ್ಪಡುತ್ತದೆ. ಬಿಸಿಯಾಗಿರುವ ಅಥವಾ ಕುದಿಯುತ್ತಿರುವ ನೀರಿಗೆ ಹದಗೊಳಿಸಲಾದ ಅಥವಾ ಸಂಸ್ಕರಿಸಲಾದ ಎಲೆಗಳನ್ನು ಮಿಶ್ರಗೊಳಿಸಿ ತಯಾರಿಸಲಾಗುವ ಪರಿಮಳದ ಪಾನೀಯಕ್ಕೂ "ಚಹಾ" ಎಂದೇ ಕರೆಯಲಾಗುತ್ತದೆ ಹಾಗೂ ಇದು ಸ್ವತಃ ಕೆಮೆಲಿಯಾ ಸೈನೆನ್ಸಿಸ್ ಸಸ್ಯಕ್ಕಿರುವ ಸಾಮಾನ್ಯ ಹೆಸರಾಗಿದೆ. ನೀರಿನ ನಂತರ, ಚಹಾವು ವಿಶ್ವದಲ್ಲಿ ಅತ್ಯಂತ ವ್ಯಾಪಕವಾಗಿ-ಬಳಸಲಾಗುತ್ತಿರುವ ಪಾನೀಯವಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ರಬ್ಬರ್ ಮರದಿಂದ ಲ್ಯಾಟೆಕ್ಸ್ ಸಂಗ್ರಹಿಸಲಾಗುತ್ತದೆ. 'ನೈಸರ್ಗಿಕ ರಬ್ಬರ್' [ಎಲಸ್ಟೋಮರ್] [ಎಲ್ಯಾಸ್ಟಿಕ್][ಹೈಡ್ರೋಕಾರ್ಬನ್ ಪಾಲಿಮರ್] ಅದು ಮೂಲವಾಗಿ ಮಿಲ್ಕಿ [ಕಲಿಲ ದ್ರಾವಣ] ಅಥವಾ ಲ್ಯಾಟೆಕ್ಸ್ ನಿಂದ ಕೆಲವು ಗಿಡಗಳ ಸಾರದಿಂದ ಪಡೆದುಕೊಳ್ಳಲಾಗಿರುತ್ತದೆ. ಗಿಡಗಳಿಗೆ ‘ಕೊಳಾಯಿ’ ರೂಪದಲ್ಲಿ ಮಾಡಲಾಗಿರುತ್ತದೆ, ಅಂದರೆ ಮರದ ತೊಗಟೆಗೆ ಕೊರೆಯಲಾಗಿರುತ್ತದೆ ಮತ್ತು ಲ್ಯಾಟೆಕ್ಸ್ ಸಾರವನ್ನು ಸಂಗ್ರಹಿಸಲಾಗುವುದು ಮತ್ತು ಬಳಕೆಯ ರಬ್ಬರ್ ಆಗಿ ಶುದ್ಧೀಕರಿಸಲಾಗುವುದು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಟೆಂಪ್ಲೇಟು:Redirectshere ಟೆಂಪ್ಲೇಟು:Redirectshere ಗುಲಾಬಿ ಯು ರೋಸೇಸಿ ವಂಶದೊಳಗೆ ಬರುವ ರೋಸಾ ಕುಲದ ಒಂದು ದೀರ್ಘಕಾಲಿಕ, ಹೂವಿನ ಪೊದೆಸಸ್ಯ ಅಥವಾ ಬಳ್ಳಿಯಾಗಿದ್ದು, ಅದು 100ಕ್ಕೂ ಹೆಚ್ಚಿನ ಜಾತಿಗಳನ್ನು ಒಳಗೊಂಡಿದೆ ಹಾಗೂ ವೈವಿಧ್ಯಮಯ ಬಣ್ಣಗಳಲ್ಲಿ ದೊರೆಯುತ್ತದೆ. ನೆಟ್ಟಗೆ ನಿಲ್ಲುವ ಪೊದೆಸಸ್ಯಗಳು ಮತ್ತು ಯಾವುದಾದರೂ ಆಸರೆಯ ಮೇಲೇರುವ ಅಥವಾ ಹಬ್ಬುವ ಸಸ್ಯಗಳನ್ನು ಮತ್ತು ಈ ಜಾತಿಯು ಒಳಗೊಂಡಿದ್ದು, ಕಾಂಡಗಳ ಮೇಲೆ ಅಲ್ಲಲ್ಲಿ ಚೂಪಾದ ಮುಳ್ಳುಗಂತಿಗಳು (ಸಣ್ಣ ಮುಳ್ಳುಗಳು) ಇರುತ್ತವೆ. ಇವುಗಳಲ್ಲಿ ಬಹುತೇಕ ಸಸ್ಯಗಳು ಏಷ್ಯಾಕ್ಕೆ ಸೇರಿದ್ದರೆ, ಅಲ್ಪ ಸಂಖ್ಯೆಯ ಜಾತಿಗಳು ಯುರೋಪ್, ಉತ್ತರ ಅಮೆರಿಕಾ ಮತ್ತು ವಾಯವ್ಯ ಆಫ್ರಿಕಾದ ಮೂಲದವಾಗಿವೆ.
ಅಂತರವಲೋಕನ ಒಬ್ಬ ವ್ಯಕ್ತಿಯ ಪ್ರಜ್ಞಾನುಭವದ (ಕಾನ್ಷಸ್ ಎಕ್ಸ್ ಪೀರಿಯನ್ಸ್) ಸ್ವಯಂ ವೀಕ್ಷಣೆ (ಇಂಟ್ರಸ್ಪೆಕ್ಷನ್). ಅದು ಒಂದು ಒಳನೋಟ; ತನ್ನ ಪ್ರಬುದ್ಧ ಚೇತನದಲ್ಲಿ ನಡೆಯುತ್ತಿರುವ ಆಲೋಚನೆಗಳು, ಭಾವನೆಗಳು ಮತ್ತು ಇಚ್ಛೆಗಳಲ್ಲದೆ ತಾನು ಯಾವುದನ್ನು ನೋಡು ತ್ತಾನೆ, ಕೇಳುತ್ತಾನೆ ಅಥವಾ ಕಲ್ಪಿಸಿಕೊಳ್ಳುತ್ತಾನೆ ಎಂಬುವುಗಳ ಬಗ್ಗೆ, ಒಬ್ಬ ವ್ಯಕ್ತಿ ವಿವರಗಳನ್ನು ನೀಡುವ ವಿಧಾನ. ಅಂದರೆ, ಒಬ್ಬ ವ್ಯಕ್ತಿ ತನ್ನ ಪ್ರಬುದ್ಧ ಪ್ರಜ್ಞಾ ಪ್ರವಾಹದ (ಸ್ಟ್ರೀಮ್ ಆಫ್ ಕಾನ್ಷಸ್ನೆಸ್) ಮೂಲಾಂಶಗಳ ವೈಲಕ್ಷಣ್ಯಗಳಲ್ಲಿರುವ ಪರಸ್ಪರ ಹೋಲಿಕೆ ವ್ಯತ್ಯಾಸಗಳನ್ನು ಗುರುತಿಸಿ, ಅವುಗಳನ್ನು ವಿಂಗಡಿಸಿ ವಿವರಿಸುವ ಕ್ರಮ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಪುನೀತ್ ರಾಜ್ಕುಮಾರ್ (ಇಂಗ್ಲಿಷ್: Puneeth Rajkumar) (ಜನನ 1975 17 ಮಾರ್ಚ್) ಭಾರತೀಯ ಚಿತ್ರನಟ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತಾ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಈಸ್ಟ್ಮನ್ ಕೊಡ್ಯಾಕ್ ಕಂಪೆನಿ (NYSE: EK) (ಸಾಮಾನ್ಯವಾಗಿ ಕೊಡ್ಯಾಕ್ ಎಂದು ಕರೆಯಲ್ಪಡುತ್ತದೆ) ಒಂದು ಮಲ್ಟಿನ್ಯಾಷನಲ್ ಇಮೇಜಿಂಗ್ ಮತ್ತು ಫೋಟೋಗ್ರಾಫಿಕ್ ಸಾಧನ, ಸಾಮಗ್ರಿ ಮತ್ತು ಸೇವೆಗಳನ್ನು ಒದಗಿಸುವ ಉದ್ಯಮ ವಾಗಿದ್ದು ರೋಚೆಸ್ಟರ್, ನ್ಯೂಯಾರ್ಕ್, ಅಮೇರಿಕ ಸಂಯುಕ್ತ ಸಂಸ್ಥಾನ ದಲ್ಲಿ ತನ್ನ ಪ್ರಧಾನ ಶಾಖೆಯನ್ನು ಹೊಂದಿದೆ ಮತ್ತು ಇದರ ನೊಂದಣಿಯನ್ನು ನ್ಯೂಜರ್ಸಿಯಲ್ಲಿ ಮಾಡಲಾಗಿತ್ತು. ಜಾರ್ಜ್ ಈಸ್ಟ್ಮನ್ ಇದನ್ನು ೧೮೯೨ ರಲ್ಲಿ ಪ್ರಾರಂಭಿಸಿದರು.
ಕನ್ನಡ ಚಿತ್ರರಂಗವು ಕರ್ನಾಟಕದಲ್ಲಿ ರಚಿಸಲಾಗುವ ಚಲನಚಿತ್ರಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ ರಂಗಭೂಮಿ ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು ತುಳು ಹಾಗು ಕೊಂಕಣಿ ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. ೧೯೩೪ರಲ್ಲಿ ತೆರೆ ಕಂಡ "ಸತಿ ಸುಲೋಚನ" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.೧೯೫೪ರಲ್ಲಿ ಬಿಡುಗಡೆ ಹೊಂದಿದ "ಬೇಡರ ಕಣ್ಣಪ್ಪ" ಈ ಚಿತ್ರರಂಗದ ಪ್ರಮುಖ ನಟರಾದ ರಾಜಕುಮಾರ್ ಅವರ ಮೊದಲ ಚಿತ್ರ. ಕರ್ನಾಟಕದಲ್ಲಿ ‘ವಸಂತಸೇನಾ ಚಿತ್ರಕ್ಕೆ ಮೊದಲು ಮೂಕಿ ಚಿತ್ರಗಳು ತಯಾರಾಗಿದ್ದವು.