The most-visited ಕನ್ನಡ Wikipedia articles, updated daily. Learn more...
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಪ್ರಾಕ್ಟರ್ & ಗ್ಯಾಂಬಲ್ ಕಂ. (P&G , NYSE: PG) ಒಂದು ಫಾರ್ಚ್ಯೂನ್ 500 ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಷನ್ ಆಗಿದ್ದು ಡೌನ್ ಟೌನ್ ಸಿಂಸಿನಾಟಿ, ಓಹಿಯೋ ದಲ್ಲಿ ತನ್ನ ಕೇಂದ್ರಕಚೇರಿಗಳನ್ನು ಹೊಂದಿದೆ ಮತ್ತು ಹಲವಾರುಬಳಕೆದಾರರ ವಸ್ತುಗಳು ಈ ಕಾರ್ಪೊರೇಷನ್ ನಿಂದ ಉತ್ಪಾದನೆಗೊಳ್ಳುತ್ತವೆ. ಫಾರ್ಚ್ಯೂನ್ ನ ಬಹಳ ಮೆಚ್ಚತಕ್ಕ ಕಂಪನಿಗಳ 2010ರ ಪಟ್ಟಿಯಲ್ಲಿ ಅದು ಆರನೆಯ ಸ್ಥಾನದಲ್ಲಿವೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
'ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ ( (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆದಮ್'ಆಡಮ್, ಇಬ್ರಾಹಿಂಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್(ಸ) ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ
ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗವು (ಯುನೆಸ್ಕೋ) ೧೬ ನವಂಬರ್ ೧೯೪೫ರಂದು ಸ್ಥಾಪಿಸಲಾದ ವಿಶ್ವಸಂಸ್ಥೆಯ ಒಂದು ವಿಶಿಷ್ಟವಾದ ಸಂಸ್ಥೆ. ವಿಶ್ವಸಂಸ್ಥೆಯ ಸ್ಥಾಪನಶಾಸನದಲ್ಲಿ ಸೂಚಿಸಲಾದ ನ್ಯಾಯ, ನ್ಯಾಯ ಪರಿಪಾಲನೆ, ಮತ್ತು ಮಾನವ ಹಕ್ಕುಗಳು ಹಾಗೂ ಮೂಲಭೂತ ಸ್ವಾತಂತ್ರ್ಯಗಳಿಗಾಗಿ ವಿಶ್ವವ್ಯಾಪಿ ಗೌರವವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಿಕ್ಷಣ, ವಿಜ್ಞಾನ, ಮತ್ತು ಸಂಸ್ಕೃತಿಯ ಮೂಲಕ ಅಂತರರಾಷ್ಟ್ರೀಯ ಸಹಯೋಗಕ್ಕೆ ಪ್ರೋತ್ಸಾಹ ನೀಡಿ ಶಾಂತಿ ಮತ್ತು ಭದ್ರತೆಗೆ ನೆರವಾಗುವುದು ಅದರ ಅಧಿಕೃತ ಉದ್ದೇಶವಾಗಿದೆ. ಅದು ರಾಷ್ಟ್ರಗಳ ಒಕ್ಕೂಟದ ಬೌದ್ಧಿಕ ಸಹಕಾರದ ಅಂತರರಾಷ್ಟ್ರೀಯ ಆಯೋಗದ ಉತ್ತರಾಧಿಕಾರಿಯಾಗಿದೆ.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಸೀತಾರಾಮ ಕಲ್ಯಾಣ (೨೦೧೯ರ ಚಲನಚಿತ್ರ)
ಸೀತಾರಾಮ ಕಲ್ಯಾಣ 2019 ರ ಶ್ರೀರಾಮ್ ರವರು ಬರೆದು ನಿರ್ದೇಶಿಸಿರುವ ಕನ್ನಡ ಭಾಷೆಯ ಚಲನಚಿತ್ರ. ಈ ಚಿತ್ರವನ್ನು ನಿರಂಜನರವರು ಚನ್ನಾಂಬಿಕ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಬಹು ತಾರಾಂಗಣವನ್ನು ಹೊಂದಿರುವ ಈ ಚಿತ್ರದಲ್ಲಿ ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.