The most-visited ಕನ್ನಡ Wikipedia articles, updated daily. Learn more...
ವಿಚ್ಛೇದನ (ಅಥವಾ ಮದುವೆಯನ್ನು ಬೇರ್ಪಡಿಸುವುದು ) ಮದುವೆಯ ಸಂಸ್ಥೆಯ ಕೊನೆಯ ಮುಕ್ತಾಯ, ವ್ಯಕ್ತಿಗಳ ನಡುವಿನ ಮದುವೆ ಮತ್ತು ಮದುವೆಯ ಬಂಧನ ಬೇರ್ಪಡಿಸುವುದು ಮತ್ತು ಕಾನೂನಿನ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ರದ್ದುಗೊಳಿಸುವುದು. ಹೆಚ್ಚಿನ ದೇಶಗಳಲ್ಲಿ ನ್ಯಾಯಾಲಯ ಅಥವಾ ಕಾನೂನಿನ ಇತರೆ ಅಧಿಕಾರದ ಕಾರ್ಯವಿಧಾನದಿಂದ ವಿಚ್ಛೇದನಕ್ಕೆ ಅನುಮತಿಯ ಅಗತ್ಯವಿದೆ. ವಿಚ್ಛೇದನಕ್ಕೆ ಗಂಡ ಅಥವಾ ಹೆಂಡತಿಯ ಬೆಂಬಲ,ಮಕ್ಕಳ ಪಾಲನೆ,ಮಕ್ಕಳ ಬೆಂಬಲ,ಆಸ್ತಿಯ ಹಂಚಿಕೆ,ಮತ್ತು ಸಾಲ ಹಂಚಿಕೆಯಂತಹ ವಿಷಯಗಳು ಕಾನೂನಿನ ಕ್ರಮದಲ್ಲಿ ಇರಬಹುದು.
ಪರಿಣಯ ಅಥವಾ ದಾಂಪತ್ಯ ಎಂದೂ ಕರೆಯಲ್ಪಡುವ ಮದುವೆಯು ಸಾಮಾಜಿಕವಾಗಿ ಅಥವಾ ಶಾಸ್ತ್ರೋಕ್ತವಾಗಿ ಗುರುತಿಸಲ್ಪಟ್ಟ ಸಂಗಾತಿಗಳ ನಡುವಿನ ಒಕ್ಕೂಟ ಅಥವಾ ಕಾನೂನಾತ್ಮಕ ಒಪ್ಪಂದ. ಇದು ಅವರಿಬ್ಬರ ನಡುವಿನ, ಅವರ ಹಾಗೂ ಅವರ ಮಕ್ಕಳಿನ ನಡುವಿನ, ಮತ್ತು ಅವರ ಹಾಗೂ ಅವರ ಸಂಬಂಧಿಕರ ನಡುವಿನ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಸ್ಥಾಪಿಸುತ್ತದೆ. ಭಿನ್ನ ಸಂಸ್ಕೃತಿಗಳ ಪ್ರಕಾರ ಮದುವೆಯ ವ್ಯಾಖ್ಯಾನವು ಬದಲಾಗುತ್ತದೆ, ಆದರೆ ಪ್ರಧಾನವಾಗಿ ಅದು ಅಂತರವ್ಯಕ್ತೀಯ ಸಂಬಂಧಗಳು, ಸಾಮಾನ್ಯವಾಗಿ ಲೈಂಗಿಕ ಸಂಬಂಧಗಳನ್ನು ಅಂಗೀಕರಿಸುವ ಸಂಪ್ರದಾಯವಾಗಿದೆ.
ಚಿಪ್ಪಿನ ಆಕಾರ ಹೊಂದಿರುವ ಆಮೆಗಳು ಸರೀಸೃಪ ಜಾತಿಗೆ ಸೇರಿದವು. (ಇವುಗಳಲ್ಲಿ ಮೇಲು ವರ್ಗದ ದೊಡ್ಡ ಗಾತ್ರದ ಗುಂಪಿಗೆ ಸೇರಿದ್ದು ಚಿಪ್ಪಿರುವ ಪ್ರಾಣಿ -ಕೆಲೋನಿಯಾ-) ವಿಶೇಷ ಎಲುಬು ಅಥವಾ ಮೃದುವಾದ ಎಲುಬಿನ ಚಿಪ್ಪು ಅವುಗಳ ಪಕ್ಕೆಲಬುಗಳಿಂದ ಬೆಳವಣಿಗೆ ಹೊಂದಿ ಅವು ಕವಚದ ಆಕಾರದಲ್ಲಿ ಕಾರ್ಯನಿರ್ವಹಿಸುತ್ತವೆ. "ಆಮೆ"ಗಳನ್ನು ಇಡಿಯಾಗಿ ಚಿಪ್ಪಿರುವ ಪ್ರಾಣಿವರ್ಗಕ್ಕೆ ಸೇರಿಸಬಹುದು ಅಥವಾ ಒಂದೇ ಸ್ವಭಾವ ಇರುವ ಚಿಪ್ಪಿರುವ ಪ್ರಾಣಿಗಳ ವರ್ಗಕ್ಕೂ ಸೇರಿಸಬಹುದು - ಸಮುದ್ರ ಆಮೆ, ಸಿಹಿ ನೀರಿನ ಆಮೆ, ಕೂರ್ಮ ಮತ್ತು ಕೆಳಗಿನ ಚರ್ಚೆಯನ್ನೂ ನೋಡಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಿತ್ರರಂಗದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮಹಾರಾಣಾ ಪ್ರತಾಪ್ ಅಥವಾ ಮೇವಾರದ ಪ್ರತಾಪ್ ಸಿಂಗ್ ( 9 ಮೇ 1540- 29 ಜನವರಿ 1597) ವಾಯವ್ಯ ಭಾರತದ ರಾಜ್ಯವಾದ ಮೇವಾರವನ್ನು ಆಳುತ್ತಿದ್ದ ಹಿಂದೂ ದೊರೆಯಾಗಿದ್ದ. ಅವನು ಸೂರ್ಯವಂಶಿ ರಜಪೂತರ ಸಿಸೊದಿಯಾ ವಂಶಕ್ಕೆ ಸೇರಿದವನು. ತೀಕ್ಷ್ಣ ಸ್ವಭಾವದ ರಜಪೂತರ ಹೆಮ್ಮೆ ಮತ್ತು ಆತ್ಮಗೌರವದ ಸಾಕಾರರೂಪವಾಗಿದ್ದ ಪ್ರತಾಪ್, ಶತಮಾನಗಳವರೆಗೆ ರಜಪೂತರ ಮಹತ್ವಾಕಾಂಕ್ಷೆಯ ಗುಣಗಳಿಗೆ ದೃಷ್ಟಾಂತವಾಗಿದ್ದನು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಏತಿಹದ್ ಏರ್ವೇಸ್ (ಅರೇಬಿಕ್: الاتحاد ಅಲ್ ಇತ್ತಿಹಾದ್) ಧ್ವಜ ಹೊತ್ತ ಎಮಿರೇಟ್ಸ್ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ನಾ ಎರಡನೇ ಅತಿದೊಡ್ಡ ವಿಮಾನಯಾನ, ಆಗಿದೆ. ಇದರ ಪ್ರಧಾನ ಕಚೇರಿಯು ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (- ಇಕ್ಯಾಂಗ್ ಒಮಾ) ಬಳಿ ಖಲೀಫಾ ನಗರ ಅಬುಧಾಬಿ, ಆಗಿದೆ. ಜುಲೈ 2003 ರಲ್ಲಿ ಅಬುಧಾಬಿಯ ಎಮಿರೇಟ್ಸ್ ರಾಜಾಜ್ಞೆಯ ಮೇರೆಗೆ ಸ್ಥಾಪಿಸಿದ, ಎತಿಹಾಡ್ .
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡ್ಯೂಷೆ ಲುಫ್ಥಾನ್ಸ AG (FWB: LHA) (German pronunciation: [ˈdɔʏt͡ʃə ˈlʊfthanza]) ಎಂಬುದು, ಒಟ್ಟಾರೆ ಸಾಗಣೆ ಮಾಡಿದ ಪ್ರಯಾಣಿಕರ ಸಂಖ್ಯೆಯ ಪರಿಭಾಷೆಯಲ್ಲಿ ಹೇಳುವುದಾದರೆ ಯುರೋಪ್ನಲ್ಲಿನ ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದೆ, ಮತ್ತು ಜರ್ಮನಿಯ ಅಗ್ರಗಣ್ಯ ವಿಮಾನವಾಹಕವಾಗಿದೆ. ಲುಫ್ತ್ ("ಗಾಳಿ" ಎಂಬುದಕ್ಕಾಗಿರುವ ಜರ್ಮನ್ ಪದ), ಮತ್ತು ಹಾನ್ಸಾ (ಹಾನ್ಸಿಯಾಟಿಕ್ ಲೀಗ್ ಎಂಬ ಮಧ್ಯಯುಗದ ಪ್ರಬಲವಾದ ವ್ಯಾಪಾರೀ ಸಮೂಹದ ಹೆಸರು) ಎಂಬ ಎರಡು ಪದಗಳಿಂದ ಕಂಪನಿಯ ಹೆಸರು ಜನ್ಯವಾಗಿದೆ. ಸಾಗಿಸಲ್ಪಟ್ಟ ಒಟ್ಟಾರೆ ಪ್ರಯಾಣಿಕರ ಸಂಖ್ಯೆಯ ಪರಿಭಾಷೆಯಲ್ಲಿ ಹೇಳುವುದಾದರೆ, ಈ ವಿಮಾನಯಾನ ಸಂಸ್ಥೆಯು ವಿಶ್ವದ ಐದನೇ-ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, 18 ಸ್ವದೇಶಿ ಗಮ್ಯಸ್ಥಾನಗಳು ಹಾಗೂ ಆಫ್ರಿಕಾ, ಅಮೆರಿಕಾ ಖಂಡಗಳು, ಏಷ್ಯಾ ಹಾಗೂ ಯುರೋಪ್ ಖಂಡಗಳಾದ್ಯಂತದ 183 ಅಂತರರಾಷ್ಟ್ರೀಯ ಗಮ್ಯಸ್ಥಾನಗಳಿಗೆ ಅದು ತನ್ನ ಸೇವೆಗಳನ್ನು ನಿರ್ವಹಿಸುತ್ತಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಶಾಖಪಟ್ಟಣಂ ಅನಿಲ ಸೋರಿಕೆ, ಕೈಗಾರಿಕಾ ಸ್ಥಾವರದಲ್ಲಿ ನಡೆದ ಆಕಸ್ಮಿಕ ಅಪಘಾತವಾಗಿದ್ದು, ಭಾರತದ ಆಂಧ್ರಪ್ರದೇಶ ರಾಜ್ಯದ ವಿಶಾಖಪಟ್ಟಣಂ(ವಿಝಾಗ್ ಎಂದೂ ಹೆಸರಿದೆ) ಹೊರವಲಯದಲ್ಲಿರುವ, ಗೋಪಾಲಪಟ್ಟಣಂ ಬಳಿಯ ಆರ್.ಆರ್.ವೆಂಕಟಪುರಂ ಗ್ರಾಮದ ಎಲ್.ಜಿ. ಪಾಲಿಮರ್ಸ್ ರಾಸಾಯನಿಕ ಸ್ಥಾವರದಲ್ಲಿ ಮೇ ೭, ೨೦೨೦ರ ಮುಂಜಾನೆ ಸಂಭವಿಸಿತು. ಸೋರಿಕೆಯಾದ ಅನಿಲವು ಸುತ್ತಲಿನ ಸುಮಾರು ೩ ಕಿಲೋಮೀಟರ್ (೧.೯ ಮೈಲಿ) ವ್ಯಾಪ್ತಿಯಲ್ಲಿನ ಪ್ರದೇಶಗಳು ಮತ್ತು ಹಳ್ಳಿಗಳಿಗೆ ಹರಡಿತು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಚದುರಂಗದ ನಿಯಮಗಳು (ಚದುರಂಗದ ಕಾನೂನುಗಳು ಎಂದೂ ಸಹ ಇವು ಪರಿಚಿತವಾಗಿವೆ) ಚದುರಂಗದ ಆಟದ ಆಡುವಿಕೆಯನ್ನು ನಿರ್ದೇಶಿಸುವ ನಿಯಮಗಳಾಗಿವೆ. ಚದುರಂಗದ ಮೂಲಗಳು ಕರಾರುವಾಕ್ಕಾಗಿ ಯಾವುವು ಎಂಬುದು ಅಸ್ಪಷ್ಟವಾಗಿದ್ದರೂ ಸಹ, ಆಟದ ಆಧುನಿಕ ನಿಯಮಗಳು ೧೬ನೇ ಶತಮಾನದ ಅವಧಿಯಲ್ಲಿ ಇಟಲಿಯಲ್ಲಿ ಮೊದಲು ರೂಪುಗೊಂಡವು ಎನ್ನಬಹುದು. ೧೯ನೇ ಶತಮಾನದ ಆರಂಭದವರೆಗೂ ಈ ನಿಯಮಗಳಲ್ಲಿ ಕೊಂಚಮಟ್ಟಿನ ಮಾರ್ಪಾಡು ಆಗುತ್ತಲೇ ಇತ್ತು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.