The most-visited ಕನ್ನಡ Wikipedia articles, updated daily. Learn more...
ಫ್ಲಾರೆನ್ಸ್ ನೈಟಿಂಗೇಲ್ - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ ಇಟಲಿಯಲ್ಲಿ ೧೮೨೦ರ ಮೇ ೧೨ ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.೧೮೫೪ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಹಿಂದುಸ್ಥಾನ್ ಯೂನಿವರ್ ಲೀವರ್ ಲಿಮಿಟೆಡ್ (HUL) (ಬಿಎಸ್ಇ: 500696) ಭಾರತದ ಒಂದು ದೊಡ್ಡ ಕಂಪನಿಯಾಗಿದ್ದು ಇದುತೀವ್ರ ಬೇಡಿಕೆಯ ಗ್ರಾಹಕ ವಸ್ತುಗಳನ್ನು ಮಾರಾಟ ಮಾಡುವಲ್ಲಿ ನಿರತವಾಗಿದೆ. ಇದು ಆಂಗ್ಲೊ-ಡಚ್ ಕಂಪನಿಯಾಗಿರುವ ಯೂನಿಲೀವರ್ ಇದರಲ್ಲಿ ಸುಮಾರು 52% ರಷ್ಟು ಪಾಲುದಾರಿಕೆ ಪಡೆದಿದೆ. HUL ನ್ನು ಲೀವರ್ ಬ್ರದರ್ಸ್ ಇಂಡಿಯಾ ಲಿಮಿಟೆಡ್ ಎಂದು 1933 ರಲ್ಲಿ ರಚಿಸಲಾಯಿತು.ಆದರೆ ಅದು 1956 ರಲ್ಲಿ ಅಸ್ತಿತ್ವಕ್ಕೆ ಬಂತು.ಲೀವರ್ ಬ್ರದರ್ಸ್ ನ ವಿಲೀನದ ಅನಂತರ ಹಿಂದುಸ್ತಾನ್ ಲೀವರ್ ಲಿಮಿಟೆಡ್ ಆಗಿ ರೂಪಗೊಂಡಿತು.ಹಿಂದುಸ್ತಾನ್ ವನಸ್ಪತಿ Mfg.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ರಾಷ್ಟ್ರೀಯ ಉತ್ಪನ್ನ (GDP) ಒಂದು ದೇಶದ ಅರ್ಥವ್ಯವಸ್ಥೆಯನ್ನು ಅಳೆಯುವ ಒಂದು ಮಾಪನ. ಆ ದೇಶದಲ್ಲಿ ಒಂದು ವರ್ಷದಲ್ಲಿ ಉತ್ಪನ್ನವಾಗುವ ಎಲ್ಲಾ ಸರಕುಗಳ ಮತ್ತು ಆರ್ಥಿಕ ಅನುಕೂಲಗಳ ಒಟ್ಟು ಮಾರುಕಟ್ಟೆಯ ಬೆಲೆಯು ಅದರ ರಾಷ್ಟ್ರೀಯ ಉತ್ಪನ್ನವಾಗುತ್ತದೆ. ಈ ಉತ್ಪನ್ನವನ್ನು ಆ ರಾಷ್ಟ್ರದ ಜನಸಂಖ್ಯೆಯಿಂದ ಭಾಗಿಸಿದರೆ, ಆ ಮಾಪನವನ್ನು ತಲಾ ರಾಷ್ಟ್ರೀಯ ಉತ್ಪನ್ನ ಎಂದು ಕರೆಯಲಾಗುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ. ಸಮುದ್ರಮಂಥನದ ಇತರ ಹೆಸರುಗಳು — ಸಮುದ್ರಮಂಥನಂ — ಮಂಥನಂ ಎಂದರೆ ಸಂಸ್ಕೃತದಲ್ಲಿ ಮಂಥನ ಅಥವಾ 'ಕಡೆಯುವುದು' ಎಂದರ್ಥ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
'ಮಾಧ್ಯಮ ಅಥವಾ ಸಮೂಹ ಮಾಧ್ಯಮಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಚಿತ್ರವೀರ್ಯ ಮಹಾಭಾರತದಲ್ಲಿ ಶಂತನು ಮತ್ತು ಸತ್ಯವತಿಯ ಮಗ.ಇವನ ಅಣ್ಣ ಚಿತ್ರಾಂಗದ ಶಂತನುವಿನ ನಂತರ ಹಸ್ತಿನಾಪುರದ ಪಟ್ಟವೇರಿದ.ಚಿತ್ರಾಂಗದ ಸಂತಾನವಿಲ್ಲದೆ ನಿಧನ ಹೊಂದಿದುದರಿಂದ ಅವನ ತಮ್ಮನಾದ ವಿಚಿತ್ರವೀರ್ಯ ಸಿಂಹಾಸನವನ್ನೇರಿದ.ಇವನು ಪಟ್ಟವೇರಿದ ಸಮಯದಲ್ಲಿ ಇನ್ನೂ ಬಾಲಕನಾಗಿದ್ದುದರಿಂದ ಸತ್ಯವತಿಯ ಇನ್ನೊಬ್ಬ ಮಗನಾದ ಭೀಷ್ಮನು ಇವನ ಪರವಾಗಿ ರಾಜ್ಯಭಾರ ನಿಭಾಯಿಸಿದ.ಇವನು ಪ್ರಾಯ ಪ್ರಬುದ್ಧನಾದ ಸಮಯದಲ್ಲಿ ಇವನಿಗಾಗಿ ಭೀಷ್ಮನು ಕನ್ಯೆಯನ್ನು ಅರಸುತ್ತಿರುವಾಗ ಕಾಶಿಯ ರಾಜ ಸ್ವಯಂವರವನ್ನು ಏರ್ಪಡಿಸಿದ ವಿಷಯ ತಿಳಿದು ಅಲ್ಲಿಗೆ ಧಾವಿಸಿದ.ಅಲ್ಲಿ ಸ್ವಯಂವರವನ್ನು ವಿಚಿತ್ರವೀರ್ಯನ ಪರವಾಗಿ ಗೆದ್ದು ಕಾಶಿ ರಾಜನ ಮೂವರು ಕುವರಿಯರಾದ ಅಂಬಾ,ಅಂಬಿಕ ಮತ್ತು ಅಂಬಾಲಿಕರನ್ನು ಕರೆತರಲು ಪ್ರಯತ್ನಿಸಿದ. ಆದರೆ ಅಂಬಾ ಮೊದಲೇ ಸಾಳ್ವನನ್ನು ಪ್ರೀತಿಸುತ್ತಿದ್ದುದರಿಂದ ಅಂಬಿಕ ಮತ್ತು ಅಂಬಾಲಿಕೆಯರನ್ನು ಒತ್ತಾಯ ಪೂರ್ವಕ ವಿಚಿತ್ರವೀರ್ಯನಿಗೆ ಮದುವೆ ಮಾಡಿಸಿದ. ಮುಂದೆ ವಿಚಿತ್ರವೀರ್ಯನಿಗೆ ಮಕ್ಕಳಾಗುವ ಮೊದಲೇ ಕ್ಷಯ ರೋಗದಿಂದ ತೀರಿಕೊಂಡುದುದರಿಂದ ತಾಯಿ ಸತ್ಯವತಿ ಭೀಷ್ಮನಿಗೆ ಅಂಬಿಕ ಮತ್ತು ಅಂಬಾಲಿಕೆಯರನ್ನು ಮದುವೆಯಾಗುವಂತೆ ತಿಳಿಸುತ್ತಾಳೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶಾಪ್ಕ್ಲೂಸ್ ಒ೦ದು ಆನ್ಲೈನ್ ಮಾರುಕಟ್ಟೆ ಸ್ಥಳವಾಗಿದ್ದು, ಅದರ ಪ್ರಧಾನ ಕಛೇರಿ ಭಾರತದ ಗುರಗ೦ವ್ನ ಸ್ಥಾಪಿತವಾಗಿದೆ. ಈ ಕ೦ಪನಿಯು ೨೦೧೧ರಲ್ಲಿ ಕಾಲಿಫೋರ್ನಿಯಾದ ಸಿಲಿಕಾನ್ ವ್ಯಲಿಯಲ್ಲಿ ಮೊದಲು ಸ್ಥಾಪನೆಗೊ೦ಡಿತು. ಇದರಲ್ಲಿ ೧೨೦೦೦ಕ್ಕೂ ಹೆಚ್ಚು ನೋ೦ದಾಯಿತ ವ್ಯಾಪಾರಿಗಳಿದ್ದು,ಎರಡು ಲಕ್ಷಕ್ಕು ಹೆಚ್ಚು ಉತ್ಪನ್ನಗಳನ್ನು ಇದು ಗ್ರಾಹಕರಿಗೆ ಒದಗಿಸುತ್ತಿದೆ, ಅಲ್ಲದೆ ಪ್ರತೀ ವರ್ಷವು ೯೫೦೦ ಸ್ಥಳಗಳಿ೦ದ ೪೨ ಮಿಲಿಯನ್ ಗ್ರಾಹಕರು ಈ ಆನ್ಲೈನ್ ವೇದಿಕೆಯನ್ನು ಉಪಯೋಗಿಸುತ್ತಿರುವುದು ಇದರ ಹೆಗ್ಗಳಿಕೆಯಾಗಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಸ್ಯಾಮ್ಸಂಗ್ ಗ್ರೂಪ್ (ಕೊರಿಯನ್: 삼성그룹) ಒಂದು ಬಹುರಾಷ್ಟ್ರೀಯ ಸಂಘಟಿತ ವ್ಯಾಪಾರಿ ಸಂಸ್ಥೆಯಾಗಿದ್ದು, ದಕ್ಷಿಣ ಕೊರಿಯಾದ ಸಿಯೋಲ್ನ ಸ್ಯಾಮ್ಸಂಗ್ ನಗರದಲ್ಲಿ ಅದರ ಪ್ರಧಾನ ಕಛೇರಿಯನ್ನು ಹೊಂದಿದೆ. ಇದು ದಕ್ಷಿಣ ಕೊರಿಯಾದ ಅತ್ಯಂತ ದೊಡ್ಡ ಚೇಬಾಲ್ ಮತ್ತು ಆದಾಯದಿಂದ ಪ್ರಪಂಚದ ಎರಡನೇ ಅತಿ ದೊಡ್ಡ ಸಂಘಟಿತ ವ್ಯಾಪಾರಿ ಸಂಸ್ಥೆಯಾಗಿದೆ, ೨೦೦೮ರಲ್ಲಿ ಇದರ ವಾರ್ಷಿಕ ಆದಾಯವು US $೧೭೩.೪ ಶತಕೋಟಿಯಾಗಿತ್ತು. ಸ್ಯಾಮ್ಸಂಗ್ ಗ್ರೂಪ್ ಹಲವಾರು ಅಂತಾರಾಷ್ಟ್ರೀಯ ಮಟ್ಟದ ವ್ಯವಹಾರಗಳನ್ನು ಒಳಗೊಂಡಿದೆ, ಅವುಗಳಲ್ಲಿ ಹೆಚ್ಚಿನವು ಸ್ಯಾಮ್ಸಂಗ್ ಬ್ರ್ಯಾಂಡ್ನಡಿಯಲ್ಲಿ ಸೇರಿವೆ, ಅವುಗಳೆಂದರೆ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್, ಮಾರಾಟದಲ್ಲಿ ಪ್ರಪಂಚದಲ್ಲೇ ಅತ್ಯಂತ ದೊಡ್ಡ ತಂತ್ರಜ್ಞಾನ ಕಂಪನಿಯಾಗಿದೆ; ಸ್ಯಾಮ್ಸಂಗ್ ಹೆವಿ ಇಂಡಸ್ಟ್ರೀಸ್, ಪ್ರಪಂಚದ ಎರಡನೇ ಅತಿ ದೊಡ್ಡ ಹಡಗು-ನಿರ್ಮಾಣ-ಸಂಸ್ಥೆಯಾಗಿದೆ; U.S.ನ ಒಂದು ನಿರ್ಮಾಣ ಪತ್ರಿಕೆ ಇಂಜಿನಿಯರಿಂಗ್ ನ್ಯೂಸ್-ರೆಕಾರ್ಡ್ ನಡೆಸಿದ ೨೨೫ ಜಾಗತಿಕ ನಿರ್ಮಾಣ ಸಂಸ್ಥೆಗಳ ೨೦೦೯ರ ಶ್ರೇಣೀಕರಣದಲ್ಲಿ ಸ್ಯಾಮ್ಸಂಗ್ ಇಂಜಿನಿಯರಿಂಗ್ ೩೫ನೇ ಸ್ಥಾನವನ್ನು ಮತ್ತು ಸ್ಯಾಮ್ಸಂಗ್ C&T ೭೨ನೇ ಸ್ಥಾನವನ್ನು ಗಳಿಸಿದವು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಅಂಕಗಣಿತ(Aritmetic)ವು ಸಂಖ್ಯೆಗಳ ಕೆಲವು ಪರಿಕ್ರಿಯೆ(Operations)ಗಳ ಲಕ್ಷಣಗಳನ್ನು ತಿಳಿಸುವ ಗಣಿತದ ಒಂದು ವಿಭಾಗ.ಇದು ನಮಗೆ 'ಎಷ್ಟು?', 'ಎಷ್ಟು ದೂರ?', 'ಎಷ್ಟು ಉದ್ದ?' ಮುಂತಾದ ಪ್ರಶ್ನೆಗಳಿಗೆ ಉತ್ತರವನ್ನು ನೀಡುತ್ತದೆ.ಅಂಕಗಣಿತವನ್ನು ಕೆಲವೊಮ್ಮೆ ಸಂಖ್ಯೆಗಳ ವಿಜ್ಞಾನ ಎಂದೂ ಕರೆಯುತ್ತಾರೆ. ನಾಗರಿಕತೆಯ ಬೆಳೆವಣಿಗೆಗೆ ಅನಾದಿಕಾಲದಿಂದಲೂ ಅಂಕಗಣಿತ ಅತ್ಯಾವಶ್ಯಕವಾಗಿದ್ದಿತೆಂಬುದು ¸ಸ್ಪಷ್ಟವಾಗಿಯೇ ಇದೆ. ಎಲ್ಲಾ ಜನಾಂಗಗಳ ಪೂರ್ವಿಕರು ಇದಕ್ಕಾಗಿ ಬಹಳ ಶ್ರಮಿಸಿರಬೇಕು.