The most-visited ಕನ್ನಡ Wikipedia articles, updated daily. Learn more...
sneha ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಆಂಧ್ರಪ್ರದೇಶದಿಂದ ರಾಜ್ಯಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು .
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ 'ಮಾರ್ಸ್'(Mars) ಎಂದು ಕರೆಯುತ್ತಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್ ) (ಬಿಎಸ್ಇ: 500104, NSE: HINDPETRO), ಭಾರತದ ಮುಂಬಯಿ ನಗರದಲ್ಲಿರುವ ಭಾರತದ ಸರ್ಕಾರದ ಒಡೆತನದ ತೈಲ ಕಂಪನಿಯಾಗಿದೆ ಹಾಗೂ ವಿಶ್ವ ದರ್ಜೆಯ 500 ಕಂಪನಿಗಳ ಭಾರತದ ಫಾರ್ಚೂನ್ 500 ಕಂಪನಿಗಳಲ್ಲಿ 311 ನೆಯ ಸ್ಥಾನ ಗಳಿಸಿದೆ, ಹಣಕಾಸು ವರ್ಷ 2008-09ರಂತೆ ವಾರ್ಷಿಕ ವಹಿವಾಟು ₹ 1,16,428 ಕೋಟಿಗಳಷ್ಟಿದೆ ಹಾಗೂ ಮಾರಾಟ/ಆದಾಯ 1,31,802 ಕೋಟಿ ರೂಗಳು (ಯುಎಸ್$ 25,618 ಮಿಲಿಯನ್ಗಳು), ಭಾರತದಲ್ಲಿ 20% ಮಾರುಕಟ್ಟೆಯ ಶೇರುಗಳು ಇವೆ ಹಾಗೂ ಮಾರುಕಟ್ಟೆಯಲ್ಲಿ ಪ್ರಭಾವಿ ಅಡಿಗಟ್ಟನ್ನು ಹೊಂದಿದೆ. ಕ್ರಮವಾಗಿ ಹಣಕಾಸು ವರ್ಷ 2007-08ರಲ್ಲಿ: ವಹಿವಾಟು- ರೂ 1,03,837 ಕೋಟಿಗಳು, ಹಾಗೂ ಮಾರಾಟ/ಆದಾಯ- ₹ 1,12,098 ಕೋಟಿಗಳು (ಯುಎಸ್$ 25,142 ಮಿಲಿಯನ್). ಎಚ್ಪಿಸಿಎಲ್ ಕಂಪನಿಯು ಪೆಟ್ರೋಲಿಯಂ ಇಂಧನ & ವಿಶೇಷ ಉತ್ಪನ್ನಗಳನ್ನು ತಯಾರಿಸುವಂತಹ 2 ಪ್ರಮುಖ ಸಂಸ್ಕರಣಾಗಾರಗಳನ್ನು ಹೊಂದಿದೆ, ವಾರ್ಷಿಕ 6.5 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯವಿರುವ (ಎಮ್ಎಮ್ಪಿಟಿಎ) ಒಂದು ಮುಂಬಯಿ (ಪಶ್ಚಿಮ ಕರಾವಳಿ)ಯಲ್ಲಿ ಹಾಗೂ 8.3 ಎಮ್ಎಮ್ಪಿಟಿಎ ಸಾಮರ್ಥ್ಯವಿರುವ ಇನ್ನೊಂದು ವಿಶಾಖಪಟ್ಟಣಂ (ಪೂರ್ವ ಕರಾವಳಿ)ನಲ್ಲಿ ಇವೆ.
ಮರಣಎಂದರೆ ಜೀವಿಯ ಅಂತ್ಯವಾಗುವುದು. ಇನ್ನೊಂದು ಅರ್ಥದಲ್ಲಿ ಈ ಜಗತ್ತಿನಿಂದ ಇಲ್ಲವಾಗುವುದು.ಜನನದಂತೆ ಮರಣವೂ ನಿಸರ್ಗ ಪ್ರೇರಿತ.ಮರಣವೆಂದರೆ ದೇಹದಿಂದ ಆತ್ಮ ಸ್ವತಂತ್ರವಾಗುವುದು ಎಂಬ ಭಾವನೆ ಜಗತ್ತಿನ ಎಲ್ಲ ದೇಶಗಳಲ್ಲಿಯೂ ಇದೆ.ಎಲ್ಲಾ ಧರ್ಮಗಳಲ್ಲಿಯೂ ಮರಣ ಸಂಬಂದ ಕಲ್ಪನೆಗಳಲ್ಲಿ ಸಾದೃಶ್ಯವಿದೆ.ಮನುಷ್ಯ ಸಹಜವಾದ ಭೀತಿ,ನಿರೀಕ್ಷೆ,ಆಶೋತ್ತರಗಳನ್ನು ಮರಣದ ಕಲ್ಪನೆ ಪ್ರತಿಬಿಂಬಿಸುತ್ತದೆ. ಸಾವು, ಜೀವಿಯೊಂದರಲ್ಲಿ ಇರುವ ಎಲ್ಲಾ ಜೈವಿಕ ಕಾರ್ಯಗಳು ಮುಕ್ತಾಯ ಆಗುತ್ತವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:{{{1}}}(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಹಿಂದೂಧರ್ಮವನ್ನು ಬೋಧಿಸುವ ಮತ್ತು ಅರ್ಚಕರ ವರ್ಗಕ್ಕೆ ಸೇರಿದವರನ್ನು ಬ್ರಾಹ್ಮಿನ್ Brāhmaṇa (ಬ್ರಾಹ್ಮಣರು) ಎನ್ನುತ್ತಾರೆ.ब्राह्मण. ಬ್ರಾಹ್ಮಿನ್ ಎಂಬ ಇಂಗ್ಲಿಷ್ ಪದವು ಸಂಸ್ಕೃತ ಪದದ ಆಂಗ್ಲ ರೂಪವಾಗಿದೆBrāhman; (ಬ್ರಹ್ಮನ್ ಎಂದರೆ ಶ್ರೇಷ್ಠ ಆತ್ಮ ಎಂಬ ಅರ್ಥವೂ ಹಿಂದೂ ಧರ್ಮದಲ್ಲಿದೆ). ಬ್ರಾಹ್ಮಣರನ್ನು ವಿಪ್ರ "ಪ್ರೇರಣೆಗೊಂಡ" ಅಥವಾ ದ್ವಿಜ "ಎರಡು ಬಾರಿ ಹುಟ್ಟಿದವರು" ಎಂದೂ ಕರೆಯುತ್ತಾರೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.