The most-visited ಕನ್ನಡ Wikipedia articles, updated daily. Learn more...
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ರಾಷ್ಟ್ರ ಸೇವಿಕಾ ಸಮಿತಿಯು ರಾಷ್ಟ್ರೀಯ ದೃಷ್ಟಿಕೋನಯುಳ್ಳ, ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ, ಮಹಿಳೆಯರಿಗಾಗಿಯೆ ಸೀಮಿತವಾದ, ಮಹಿಳೆಯರನ್ನು ರಾಷ್ಟ್ರೀಯ ನಿರ್ಮಾಣದಲ್ಲಿ ತೊಡಗಿಸುವ ಸ್ವಯಂಸೇವಿ ಸಂಸ್ಥೆ. ವಿಶ್ಲೇಷಕರ ಪ್ರಕಾರ ಇದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಹಿಳಾ ವಿಭಾಗ. ಆದರೆ ಸೇವಿಕಾ ಸಂಸ್ಥೆಯ ಪ್ರಕಾರ ಅವರ ಸಂಸ್ಥೆ ಸಮಾನ ಧ್ಯೇಯೋದ್ದೇಶಗಳನ್ನು ಹೊಂದಿದ ಒಂದು ಸ್ವತಂತ್ರ, ಸಮಾನಾಂತರ ಸಂಸ್ಥೆ, ಹೀಗೆಯೇ ಇರಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರಾದ ಕೇಶವ ಬಲಿರಾಮ್ ಹೆಡಗೇವಾರ್ ಕೂಡ ಆಶಿಸಿದ್ದರು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಗಾಂಧಾರಿ ಎಂಬುದು ಮಹಾಭಾರತ ಮಹಾಕಾವ್ಯದಲ್ಲಿ ಬರುವ ಒಂದು ಪಾತ್ರ. ಗಾಂಧಾರ ದೇಶದ (ಈಗಿನ ಕಾಂದಹಾರ್, ಅಫ್ಘಾನಿಸ್ಥಾನ)ರಾಜನಾದ ಸುಬಲನ ಪುತ್ರಿಯಾದ ಈಕೆ ಕುರುವಂಶದ ಮಹಾರಾಜನಾದ ಧೃತರಾಷ್ಟ್ರನನ್ನು ವರಿಸುತ್ತಾಳೆ. ಹುಟ್ಟು ಕುರುಡನಾದ ತನ್ನ ಪತಿ ಧೃತರಾಷ್ಟ್ರನಿಗೆ ಕಾಣದ ಹೊರಜಗತ್ತು ತನಗೂ ಸಹ ಕಾಣುವುದು ಬೇಡವೆಂದು ನಿರ್ಧರಿಸಿ ತನ್ನ ಕಣ್ಣಿಗೆ ಪಟ್ಟಿಯನ್ನು ಕಟ್ಟಿಕೊಳ್ಳುತ್ತಾಳೆ.
ಮರುಭೂಮಿ:ಭೂಮಿಯ ಯಾವ ಪ್ರದೇಶಗಳಲ್ಲಿ ನೀರಿನ ಆದಾಯ ಅತಿ ಕಡಿಮೆ ಇದೆಯೋ (ವಾರ್ಷಿಕ ಸರಾಸರಿ ೨೫೦ ಮಿಲ್ಲಿಮೀಟರ್ ಗಿಂತ ಕಡಿಮೆ) ಅಂತಹ ಪ್ರದೇಶಗಳು ಮರುಭೂಮಿ ಎಂದು ಭೂಗೋಳಶಾಸ್ತ್ರದಲ್ಲಿ ಕರೆಯಲ್ಪಡುತ್ತವೆ. ಸಸ್ಯಗಳು ಹಾಗೂ ಪ್ರಾಣಿಗಳ ಜೀವನಕ್ಕೆ ಜಲಾಧಾರವೊದಗಿಸಲಾರದಷ್ಟು ಒಣ ವಾತಾವರಣವನ್ನು ಹೊಂದಿರುವ ಭೂಪ್ರದೇಶವು ಮರುಭೂಮಿಯೆನಿಸಿಕೊಳ್ಳುತ್ತದೆ. ಈ ಪ್ರದೇಶಗಳಲ್ಲಿ ಜನವಸತಿ ಅತಿ ವಿರಳ ಅಥವಾ ಇಲ್ಲವೇ ಇಲ್ಲ.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಟೆಂಪ್ಲೇಟು:Expert-subject-multiple REDIRECT Template:Alternative Dispute Resolutionಸಂಧಾನ ಎಂಬುದು ವಿವಾದವನ್ನು ಬಗೆಹರಿಸುವ, ಕ್ರಿಯೆಗಳ ಮಾರ್ಗಗಳ ಮೇಲೆ ಒಂದು ಒಪ್ಪಂದವನ್ನು ನೀಡುವ, ಒಬ್ಬ ವ್ಯಕ್ತಿಗೆ ಅಥವಾ ಸಮಷ್ಟಿಯ ಲಾಭಕ್ಕಾಗಿ ಚೌಕಾಶಿ ಮಾಡುವ ಅಥವಾ ವಿವಿಧ ಆಸಕ್ತಿಗಳನ್ನು ಸಂತೃಪ್ತಗೊಳಿಸುವ ಪರಿಣಾಮಗಳನ್ನು ತರುವುದಕ್ಕೆ ಉದ್ದೇಶಿಸಿದ ಒಂದು ಸಂಭಾಷಣೆ. ಇದು ಪರ್ಯಾಯ ವಿವಾದ ಕೊನೆಗಾಣಿಸುವಿಕೆಯ ಪ್ರಥಮ ಪದ್ಧತಿ. ಸಂಧಾನವು ವ್ಯವಹಾರದಲ್ಲಿ, ಲಾಭವಿಲ್ಲದ ಸಂಸ್ಥೆಗಳಲ್ಲಿ, ಸಾರ್ಕಾರಿ ಶಾಖೆಗಳಲ್ಲಿ, ಕಾನೂನುಬದ್ಧ ದಾವೆಗಳಲ್ಲಿ, ದೇಶಗಳಲ್ಲಿ ಮತ್ತು ಮದುವೆ, ವಿಚ್ಚೇದನ, ತಂದೆತಾಯಿಗಳಲ್ಲಿ, ಮತ್ತು ಪ್ರತಿನಿತ್ಯದ ಜೀವನದಲ್ಲಿ ಮುಂತಾದ ವೈಯುಕ್ತಿಕ ಸಂದರ್ಭಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ.