The most-visited ಕನ್ನಡ Wikipedia articles, updated daily. Learn more...
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಗೂಗಲ್ ಡೂಡಲ್ ಎಂಬುದು ರಜಾದಿನಗಳು, ಘಟನೆಗಳು, ಸಾಧನೆಗಳು ಮತ್ತು ಜನರ ಬಗೆಗಿನ ವಿಚಾರಗಳನ್ನು ಆಧರಿಸಿ ಆಚರಿಸಲು ಉದ್ದೇಶಿಸಿರುವ ಗೂಗಲ್ನ ಮುಖಪುಟ. ಇದನ್ನು ಗಮನಿಸಿಕೊಂಡು ಗೂಗಲ್ ಲೋಗೋದ ವಿಶೇಷತೆಯನ್ನು, ತಾತ್ಕಾಲಿಕ ಬದಲಾವಣೆಗಳನ್ನು ಮಾಹಿತಿಯಾಗಿ ತಯಾರಿಸುವುದು. ಕೆಲವು ಸಂದರ್ಭಗಳಲ್ಲಿ ಸರ್ವರ್ಗಳು ಕುಸಿದಲ್ಲಿ ಅದರ ಅನುಪಸ್ಥಿತಿಯಲ್ಲಿ ಬಳಕೆದಾರರಿಗೆ ತಿಳಿಸಲು ಲ್ಯಾರಿ ಪೇಜ್ ಮತ್ತು ಸರ್ಜೆ ಬ್ರಿನ್ ಈ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿದರು.
ನಾಲ್ಕನೆಯ ಮೈಸೂರು ಯುದ್ಧವು (೧೭೯೮ - ೧೭೯೯) ಬ್ರಿಟೀಶರಿಗೂ ಮೈಸೂರು ರಾಜ್ಯಕ್ಕೂ ನಡೆದ ಯುದ್ಧ ಸರಣಿಯಲ್ಲಿ ನಾಲ್ಕನೆಯ ಹಾಗೂ ಕಡೆಯ ಯುದ್ಧ. ಆಗಿನ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪನಿಯ ಗವರ್ನರ್ ಜನರಲ್ ಪದವಿಯು ಲಾರ್ಡ್ ಕಾರ್ನವಾಲೀಸನಿಂದ ಜನರಲ್ ಹ್ಯಾರಿಸನಿಗೆ ಹಸ್ತಾಂತರಗೊಂಡಿತ್ತು. ೧೭೯೮ರಲ್ಲಿ ನೆಪೋಲಿಯನ್ , ಭಾರತವನ್ನು ಹೆದರಿಸುವ ಉದ್ದೇಶದಿಂದ , ಈಜಿಪ್ಟಿನಲ್ಲಿ ಬಂದಿಳಿದ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಮದ್ಯಸಾರಯುಕ್ತ ಪಾನೀಯ (ಆಲ್ಕೊಹಾಲ್ಯುಕ್ತ ಪಾನೀಯ)
ಆಲ್ಕೊಹಾಲ್ಯುಕ್ತ ಪಾನೀಯ ವು ಎಥನಾಲನ್ನು ಹೊಂದಿರುವ (ಸಾಮಾನ್ಯವಾಗಿ ಆಲ್ಕೊಹಾಲ್ ಎಂದು ಕರೆಯುವ) ಪಾನೀಯವಾಗಿದೆ. ಆಲ್ಕೊಹಾಲ್ಯುಕ್ತ ಪಾನೀಯವನ್ನು ಮೂರು ಸಾಮಾನ್ಯ ವಿಧಗಳಾಗಿ ವಿಂಗಡಿಸಲಾಗಿದೆ: ಸಾರಾಯಿ(ಬಿಯರು)ಗಳು, ದ್ರಾಕ್ಷಾರಸ(ವೈನು)ಗಳು, ಮತ್ತು ಮದ್ಯ ಸಾರಗಳು. ಇವುಗಳನ್ನು ಕಾನೂನು ಬದ್ಧವಾಗಿ ಕೆಲವು ದೇಶಗಳಲ್ಲಿ ಸೇವಿಸುತ್ತಾರೆ, ಮತ್ತು 100ಕ್ಕೂ ಹೆಚ್ಚಿನ ದೇಶಗಳಲ್ಲಿ ಇದರ ತಯಾರಿಕೆ, ಮಾರಾಟ, ಹಾಗೂ ಸೇವನೆಗಳನ್ನು ಕಾನೂನುಬದ್ಧವಾಗಿ ನಿಯಂತ್ರಿಸುತ್ತಾರೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
{{Infobox company |name = ಭಾರತೀಯ ರೇಲ್ವೆ |logo = Indian railways.webp |logo_size = 125px |logo_alt = Indian Railways logo |logo_caption = |logo_padding = center |image = Indian_Railways_Headquarters.jpg |image_size = 250px |image_alt = |image_caption = ಭಾರತೀಯ ರೇಲ್ವೆಯ ಪ್ರಧಾನ ಕಚೇರಿ, ದೆಹಲಿ |native_name = भारतीय रेल Bhāratīya Rel |type = ಸರ್ಕಾರಿ ಸ್ವಾಮ್ಯ |industry = ರೇಲ್ವೆ |founded = 16 ಏಪ್ರಿಲ್ 1853 (1853-೦೪-16) | hq_location_city = ನವ ದೆಹಲಿ | hq_location_country = ಭಾರತ |area_served = ಭಾರತ |key_people = {{unbulleted list|[[ ಪೀಯುಷ್ ಗೋಯಲ್ ] (ರೈಲು ಮಂತ್ರಿ, 2020–)}} |services = ಪ್ರಯಾಣಿಕ ರೈಲುಸರಕು ಸೇವೆಗಳುಭಾಂಗಿ ವಾಹಕಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ಸೇವೆಗಳುನಿಲುಗಡೆ ಪ್ರದೇಶ ಕಾರ್ಯಾಚರಣೆಗಳುಇತರ ಸಂಬಂಧಿತ ಸೇವೆಗಳು |revenue = ₹1.709 trillion (US$೩೭.೯೪ billion) | revenue_year = 2015–16 | profit = ₹ ೧೦೫.೦೨ billion (US$೨.೩೩ billion) | profit_year = 2015–16 |owner = ಭಾರತ ಸರ್ಕಾರ |num_employees = 1.335 ದಶಲಕ್ಷ | num_employees_year = 2014 |parent = ರೈಲು ಸಚಿವಾಲಯ ರೈಲು ಮಂಡಳಿ ಮೂಲಕ |divisions = ೧೮ ರೇಲ್ವೆ ವಲಯಗಳು |subsid = |homepage = www.indianrail.gov.inindianrailways.gov.in |footnotes = |intl = No | module = }} ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ.
ಕ್ಯಾಡ್ಬರಿ, (ಹಿಂದೆ ಕ್ಯಾಡ್ಬರಿಸ್ ಮತ್ತು ಕ್ಯಾಡ್ಬರಿ ಶ್ವೆಪ್ಪೆಸ್,) ಬ್ರಿಟಿಷ್ ಬಹುರಾಷ್ಟ್ರೀಯ ಮಿಠಾಯಿ ಕಂಪನಿಯಾಗಿದ್ದು, 2010 ರಿಂದ ಸಂಪೂರ್ಣವಾಗಿ ಮಾಂಡೆಲೆಜ್ ಇಂಟರ್ನ್ಯಾಷನಲ್ (ಮೂಲತಃ ಕ್ರಾಫ್ಟ್ ಫುಡ್ಸ್ ) ಒಡೆತನದಲ್ಲಿದೆ. ಇದು ಮಾರ್ಸ್ ಎಂಬ ಬ್ರಾಂಡ್ ನಂತರ ವಿಶ್ವದ ಎರಡನೇ ಅತಿದೊಡ್ಡ ಮಿಠಾಯಿ ಬ್ರಾಂಡ್ ಆಗಿದೆ. ಕ್ಯಾಡ್ಬರಿ ಕಂಪನಿಯು ತನ್ನ ಅಂತರರಾಷ್ಟ್ರೀಯ ಪ್ರಧಾನ ಕಛೇರಿಯನ್ನು ಪಶ್ಚಿಮ ಲಂಡನ್ನ ಉಕ್ಸ್ಬ್ರಿಡ್ಜ್ನಲ್ಲಿ ಹೊಂದಿದೆ, ಮತ್ತು ವಿಶ್ವದಾದ್ಯಂತ 50 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ ) ಭಾರತದ ಸ್ವಾಯತ್ತ ಸಾರ್ವಜನಿಕ ಆಡಳಿತ ಮಾನವ ಹಕ್ಕುಗಳ 28 ಸುಗ್ರೀವಾಜ್ಞೆಯ ಸೆಪ್ಟೆಂಬರ್ 1993 ರಕ್ಷಣೆಯ ಅಡಿಯಲ್ಲಿ ಅಕ್ಟೋಬರ್ 1993 ರ12 ರಂದು ರಚಿಸಲ್ಪಟ್ಟದೆ ಇದು ಮಾನವ ಹಕ್ಕು ಕಾಯಿದೆ 1993 (TPHRA) ರಕ್ಷಣೆಯಿಂದ ಒಂದು ಶಾಸನಬದ್ಧ ಆಧಾರವನ್ನು ನೀಡಿತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಾನವ ಹಕ್ಕುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ ಜವಾಬ್ದಾರನಾಗಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಕಾಯಿದೆ ವ್ಯಾಖ್ಯಾನಿಸಿರುವಂತೆ "ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಸಂವಿಧಾನದ ಭರವಸೆಯ ವ್ಯಕ್ತಿಯ ಘನತೆಗೆ ಸಂಬಂಧಿಸಿದ ಹಕ್ಕುಗಳು ಅಥವಾ ಅಂತರಾಷ್ಟ್ರಿಯ ಕರಾರುಗಳು.
[ಯಶ್ ಗೌಡ] (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.