The most-visited ಕನ್ನಡ Wikipedia articles, updated daily. Learn more...
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) ( pronunciation , ಭಾಷಾಂತರ: ಆಂಧ್ರದ ಪ್ರಾಂತ್ಯ ), ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ಪಟ್ಟಿ|ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಪಟ್ಟಿ|ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.