The most-visited ಕನ್ನಡ Wikipedia articles, updated daily. Learn more...
ವ್ಯಾಕ್ಸಿನೇಷನ್ (ಲಸಿಕೆ ಹಾಕುವುದು)
ಯಾವುದೇ ಒಂದು ರೋಗಕ್ಕೆ ಪ್ರತಿರೋಧಕ(ಇಮ್ಯುನಿಟಿ) ಶಕ್ತಿಯನ್ನು ಉತ್ಪಾದಿಸುವ ಪ್ರತಿಜನಕ (ಆಂಟಿಜೆನಿಕ್) ವಸ್ತುವನ್ನು (ಒಂದು ಲಸಿಕೆ) ನೀಡುವ ಪ್ರಕ್ರಿಯೆಗೆ ವ್ಯಾಕ್ಸಿನೇಷನ್ (ಲಸಿಕೆಯನ್ನು ಹಾಕುವುದು) ಎಂದು ಕರೆಯಲಾಗುತ್ತದೆ. ಲಸಿಕೆಗಳು ಅನೇಕ ರೋಗಕಾರಕು ಉಂಟುಮಾಡುವಂತಹ ಸೋಂಕುಗಳಿಂದಾಗುವ ದುಷ್ಪರಿಣಾಮವನ್ನು ಸುಧಾರಿಸುತ್ತವೆ ಅಥವಾ ತಡೆಗಟ್ಟುತ್ತವೆ. ಅನೇಕ ಲಸಿಕೆಗಳ ಪೈಕಿ ವೈರಸ್ ರೋಗದ ಲಸಿಕೆ , HPV ಲಸಿಕೆ ಮತ್ತು ಸೀತಾಳೆ ಸಿಡುಬು (ಚಿಕನ್ಪಾಕ್ಸ್) ಲಸಿಕೆಗಳು ಉಪಯುಕ್ತವಾಗಿವೆ ಎನ್ನುವುದಕ್ಕೆ ಬಲವಾದ ಸಾಕ್ಷಿಗಳಿವೆ.
ಸಣ್ಣ ಸಿಡುಬು (ಮೈಲಿ ಬೇನೆ)ಒಂದು ಸಾಂಕ್ರಾಮಿಕ ರೋಗ.ಈ ರೋಗವು ಎರಡು ಬಗ್ಗೆಯ ವೈರಸ್ನಿಂದ ಉಂಟಾಗುತ್ತದೆ.ಒಂದು ವೇರಿಯನ್ಟ್ ಇನ್ನೊಂದು ವೇರಿಯೋಲ.ಲ್ಯಾಟಿನ್ ಭಾಷೆಯಲ್ಲಿ ಈ ರೋಗವನ್ನು ವೇರಿಯೋಲ ಎಂದು ಕರೆಯುತ್ತಾರೆ. ಆಂಗ್ಲ ಭಾಷೆಯಲ್ಲಿ ಈ ರೋಗವನ್ನು ಪಾಕ್ಸ್ ಅಥವಾ ರೆಡ್ ಪ್ಲೇಗ್ ಎಂದು ಕರೆಯುತ್ತಾರೆ. ೧೫ನೇ ಶತಮಾನದಲ್ಲಿ ಮೊಟ್ಟ ಮೊದಲು ಬ್ರಿಟನ್ನವರು ಈ ರೋಗವನ್ನು ಸಣ್ಣ ಸಿಡುಬು ಎಂದು ಬಳಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಅಯ್ಯಪ್ಪ ಶಿವ ಮತ್ತು (ಮೋಹಿನಿಯ ರೂಪದಲ್ಲಿ) ವಿಷ್ಣುವಿನ ಸಂತಾನವಾದ ಧರ್ಮ ಶಾಸ್ತದ ಒಂದು ಅವತಾರ ಎಂದು ನಂಬಲಾಗಿರುವ ಒಬ್ಬ ಹಿಂದೂ ದೇವತೆ, ಅವನನ್ನು ಸಾಮಾನ್ಯವಾಗಿ ತನ್ನ ಕುತ್ತಿಗೆಯ ಸುತ್ತ ಒಂದು ಆಭರಣ ಧರಿಸಿದಂತೆ ಯೋಗಿಕ ಭಂಗಿಯಲ್ಲಿ ಚಿತ್ರಿಸಲಾಗುತ್ತದೆ, ಹಾಗಾಗಿ ಅವನಿಗೆ ಮಣಿಕಂಠನೆಂಬ ಹೆಸರು. ೨೦ನೆಯ ಶತಮಾನದಲ್ಲಿ, ಅನೇಕ ವಿವಿಧ ಗುಂಪುಗಳಿಂದ, ದಕ್ಷಿಣ ಭಾರತದಲ್ಲಿ ಸಾರಿಗೆ ಹಾಗು ಸಂವಹನದಲ್ಲಿ ವ್ಯಾಪಕ ಸುಧಾರಣೆಗಳ ಫಲವಾಗಿ ಅಯ್ಯಪ್ಪನ ಆರಾಧಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಿಎನ್ ಎ ಚುಚ್ಚುಮದ್ದು ಹಾಕುವುದೆಂದರೆ ಜೀವಿಗಳ ಅಂಗಾಂಶಗಳನ್ನು ರೋಗಗಳ ವಿರುದ್ದ ರಕ್ಷಣೆಗೆ ಬಳಸುವ ಒಂದು ವಿಧಾನವಾಗಿದೆ.ಅನುವಂಶೀಯವಾಗಿ ರಚಿತ ಜೀವಕೋಶೀಯ ಎಳೆಗಳಲ್ಲಿ ಸೂಜಿಮದ್ದು ಮೂಲಕ ಸೂಕ್ತ ಔಷಧಿ ನೀಡಿ ಡಿಎನ್ ಎ ದ ಒಳಭಾಗದಲ್ಲಿ ಪ್ರತಿರಕ್ಷಣೆಯ ಪ್ರತಿಕ್ರಿಯೆ{/4{0}}ಯನ್ನು ನಿರ್ಮಿಸುವ ವಿಧಾನವಾಗಿದೆ. (ಡಿಆಕ್ಸಿರಿಬೊನ್ಯೂಕ್ಲಿಕ್ ಆಸಿಡ್ [DNA] ಜೀವಕೋಶಗಳ ಅತಿ ಸಣ್ಣ ಪರಮಾಣುವಿನ ರಾಜ ಎನಿಸಿದೆ) ಈ ನ್ಯೂಕ್ಲಿಕ್ ಆಸಿಡ್ ಚುಚ್ಚುಮದ್ದುಗಳ ಬಗ್ಗೆ ಇನ್ನೂ ಪ್ರಯೋಗ ನಡೆಯುತ್ತಿದೆ.ಇದನ್ನು ಹಲವಾರು ಸೂಕ್ಷ್ಮ ಜೀವಿಯ ವೈರಲ್,ಬ್ಯಾಕ್ಟೀರಿಯಾಗೆ ಸಂಭಂಧಿಸಿದ ಮತ್ತು ಪರಾವಲಂಬಿ ಜೀವಿಗಳಿಂದ ಉಂಟಾಗುವ ರೋಗ ಮತ್ತು ಹಲವು ವಿಧದ ಗೆಡ್ಡೆ ನಮೂನೆಯ ಬಗ್ಗೆ ಅಧ್ಯಯನಗಳು ನಡೆಯುತ್ತವೆ. ಡಿಎನ್ ಎ ಚುಚ್ಚುಮದ್ದುಗಳು ಇನ್ನುಳಿದ ಸಾಂಪ್ರದಾಯಿಕ ಚುಚ್ಚುಮದ್ದುಗಳಿಗಿಂತ ವಿಭಿನ್ನವೆನಿಸಿವೆ.ದೇಹದಲ್ಲಿ ವಿಶಾಲಪ್ರಮಾಣದಲ್ಲಿ ರೋಗನಿರೋಧಕತೆ ಉಂಟು ಮಾಡುವ ಪ್ರತಿಕ್ರಿಯಾ ವಿಧಾನಗಳಿಗಿಂತ ಸಮರ್ಥವಾಗಿವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
sneha ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.