The most-visited ಕನ್ನಡ Wikipedia articles, updated daily. Learn more...
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಹಿಂದೂ ಧರ್ಮ ದಲ್ಲಿ , ಸೂರ್ಯ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] ; ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ಪತಂಜಲಿಯಿಂದ ಪ್ರವೃತ್ತವಾದ ಯೋಗಪದ್ಧತಿ. ಯೋಗವೆಂದರೆ ಚಿತ್ತವೃತ್ತಿನಿರೋಧವೆಂದು ವಿವರಿಸಿ ಯೋಗಸೂತ್ರ ಇದಕ್ಕೆ ಸಾಧನರೂಪವಾಗಿ ಯಮ, ನಿಯಮ , ಆಸನ , ಪ್ರಾಣಾಯಾಮ , ಪ್ರತ್ಯಾಹಾರ , ಧ್ಯಾನ , ಧಾರಣ , ಸಮಾಧಿ ಎಂಬ ಎಂಟು ಅಂಗಗಳನ್ನು ಎರಡನೆಯ ಅಧ್ಯಾಯವಾದ ಸಾಧನಪಾದದಲ್ಲಿ ಹೇಳಿದೆ. ಅಂಗವೆಂದರೆ ಅಶುದ್ಧವಾದ ಚಿತ್ತಕಲ್ಮಷಗಳು ಹೋಗಿ ವಿವೇಕ ಖ್ಯಾತಿ ಉಂಟಾಗುವುದಕ್ಕೆ ನೆರವಾಗುವ ಸಾಧನವೆಂದೂ ಅದರಿಂದ ಚಿತ್ತದಲ್ಲಿ ಸಾತ್ತ್ವಿಕ ಪರಿಣಾಮರೂಪವಾದ, ನಿರ್ಮಲರೂಪವಾದ ಪ್ರಕಾಶ (ಜ್ಞಾನದೀಪ್ತಿ) ಒದಗುವುದೆಂದೂ ಯೋಗಸೂತ್ರ ಭಾಷ್ಯಕಾರರಾದ ವ್ಯಾಸರು ವಿವರಿಸಿದ್ದಾರೆ.
ಪ್ರಾಣಾಯಾಮ (ಸಂಸ್ಕೃತ : प्राणायाम prāṇāyāma ) ಸಂಸ್ಕೃತ ಶಬ್ದವಾಗಿದ್ದು, ಪ್ರಾಣಾಯಾಮ ಎಂದರೆ "ಪ್ರಾಣವನ್ನು ಹತೋಟಿಯಲ್ಲಿಡು ಅಥವಾ ಉಸಿರಾಡು" ಎಂದಿದೆ . ಈ ಶಬ್ದವು ಸಂಸ್ಕೃತದ ಎರಡು ಶಬ್ದಗಳಿಂದ ರಚಿಸಲ್ಪಟ್ಟಿದ್ದು, ಪ್ರಾಣ, ಜೀವ ಶಕ್ತಿ, ಅಥವಾ ಮಹತ್ವದ ಶಕ್ತಿ ,ಅದರಲ್ಲಿಯೂ ಮುಖ್ಯವಾಗಿ, ಉಸಿರು, ಮತ್ತು "ಆಯಾಮ", ಮುಂದಕ್ಕೆ ಹಾಕು ಅಥವಾ ಹತೋಟಿಯಲ್ಲಿಡು ಎಂಬುದೇ ಆಗಿದೆ. ಮತ್ತೆ ಬದಲಾಯಿಸಿ ಹೇಳುವುದಾದರೆ 'ಜೀವಶಕ್ತಿಯ ಹಿಡಿತವೇ' ಆಗಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ಪತಂಜಲಿಯ ಯೋಗಸೂತ್ರಗಳು ಯೋಗದ ಮೂಲಭೂತ ಪಠ್ಯವನ್ನು ರೂಪಿಸುವ ೧೯೬ ಭಾರತೀಯ ಸೂತ್ರಗಳಾಗಿವೆ.ಪತಂಜಲಿ ಮುನಿಯು ೪೦೦ ರ ಆಸುಪಾಸಿನಲ್ಲಿ ಹಳೆಯ ಸಂಪ್ರದಾಯಗಳನ್ನೆಲ್ಲಾ ಅರಿತುಕೊಂಡ ನಂತರ ಯೋಗ ಸೂತ್ರಗಳನ್ನು ಸಂಪಾದಿಸಿರುತ್ತಾರೆ. ಮಧ್ಯಯುಗದಲ್ಲಿ, ಯೋಗವನ್ನು ಹಿಂದೂ ತತ್ವಶಾಸ್ತ್ರದ ಆರು ಸಾಂಪ್ರದಾಯಿಕ ಆಸ್ತಿಕ ಪರಂಪರೆಗಳ ಪೈಕಿ ಒಂದಾಗಿ ಇರಿಸಲಾಗಿತ್ತು. ನಂತರದ ಯೋಗತತ್ವ ಉಪನಿಷತ್ ಪ್ರಕಾರ, ಯೋಗವನ್ನು ನಾಲ್ಕು ರೂಪಗಳಲ್ಲಿ ವಿಭಜಿಸಲಾಗುತ್ತದೆ — ಮಂತ್ರಯೋಗ, ಲಯಯೋಗ, ಹಠಯೋಗ ಮತ್ತು ರಾಜಯೋಗ – ಇವುಗಳಲ್ಲಿ ಕೊನೆಯದು ಅತ್ಯಂತ ಉನ್ನತ ಆಚರಣೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ವಾಟ್ಸ್ ಆಪ್ ಮೆಸ್ಸೆಂಜರ್ ಸ್ಮಾರ್ಟ್ ಫೋನ್ ಗಳಿಗೆ ಒಂದು ಪ್ರೊಪ್ರೈಟರಿ ವೇದಿಕೆ ಹಾಗೂ ತ್ವರಿತ ಸಂದೇಶವನ್ನು ಕಳಿಸುವ ಕ್ಲೈಂಟ್ ಆಗಿ ನಿಂತಿದೆ. ಅದು ಸಂದೇಶಗಳನ್ನು, ಚಿತ್ರಗಳನ್ನು, ಧ್ವನಿ ಸಂಭಾಷಣೆಗಳನ್ನು, ವೀಡಿಯೋಗಳನ್ನು ಮತ್ತು ದಾಖಲೆಗಳನ್ನು ಅಂತರಜಾಲದ ಮುಖಾಂತರ ಒಬ್ಬ ವ್ಯಕ್ತಿಯ ಸ್ಮಾರ್ಟ್ ಫೋನಿನಿಂದ ಮತ್ತೊಬ್ಬನಿಗೆ ಕಳುಹಿಸಲು ಉಪಯೋಗಿಸುತ್ತದೆ. ಫೆಬ್ರವರಿ ೧೬ ೨೦೧೬ರ ದಾಖಲೆಗಳ ಪ್ರಕಾರ ಪ್ರಪಂಚದಲ್ಲಿ ವಟ್ಸ್ ಆಪ್ ಬಳಸುವ ಸಂಖ್ಯೆಯು ೧೦೦ ಕೋಟಿಯನ್ನು ದಾಟಿದೆ.
ಈ ಲೇಖನದಲ್ಲಿ ನರ್ಮದಾ ನದಿಯ ದಕ್ಷಿಣ ಭಾಗದ ಭಾರತೀಯ ಪರ್ಯಾಯದ್ವೀಪದಲ್ಲಿರುವ ದಕ್ಷಿಣ ಭಾರತದಲ್ಲಿ ಕಂಡು ಬರುವ ಪಕ್ಷಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ. ಆಂಧ್ರಪ್ರದೇಶದ ರೋಲ್ಲಪಾಡು, ಕರ್ನಾಟಕದ ನಾಗರಹೊಳೆ (ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ) ಮತ್ತು ಬಂಡೀಪುರ, ಕೇರಳದ ರಾಜಾಮಲೈ (ಎರವೀಕುಲಮ್ ರಾಷ್ಟ್ರೀಯ ಉದ್ಯಾನವನ) ಮತ್ತು ಪೆರಿಯಾರ್ ರಾಷ್ಟ್ರೀಯ ಉದ್ಯಾನವನ, ಮಧುಮಲೈ ರಾಷ್ಟ್ರೀಯ ಉದ್ಯಾನವನ, ಉದಕಮಂಡಲಮ್, ಅಣ್ಣಾಮಲೈನ ಇಂದಿರಾಗಾಂಧಿ ವನ್ಯಮೃಗ ಸಂರಕ್ಷಣಾ ವನ , ತಮಿಳುನಾಡಿನ ವೇದಾಂತಂಗಳ್ ಮತ್ತು ಕೋಡಿಕ್ಕರೈ ಗಳು ದಕ್ಷಿಣ ಭಾರತದ ಪಕ್ಷಿವೀಕ್ಷಣಾ ಸ್ಥಳಗಳೆಂದು ಹೆಸರುವಾಸಿಯಾಗಿವೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಆಯುರ್ವೇದದ ಪ್ರಕಾರ, ದೋಷವು ಒಬ್ಬ ವ್ಯಕ್ತಿಯ ದೇಹದಲ್ಲಿರುವ ಮೂರು ವಸ್ತುಗಳಲ್ಲಿ ಒಂದು. ಇಪ್ಪತ್ತನೇ ಶತಮಾನದ ಸಾಹಿತ್ಯದಿಂದ ಆರಂಭಗೊಂಡು, ಈ ಕಲ್ಪನೆಯನ್ನು ತ್ರಿದೋಷೋಪದೇಶ ಎಂದು ಕರೆಯಲಾಗುತ್ತಿದೆ. ಅಧಿಕೃತ ಆಯುರ್ವೇದ ಶಾಸ್ತ್ರಗ್ರಂಥಗಳು ಶರೀರದಲ್ಲಿ ಈ ಮೂರು ವಸ್ತುಗಳ ಪ್ರಮಾಣ ಮತ್ತು ಗುಣಮಟ್ಟಗಳು ಹೇಗೆ ಋತುಗಳು, ದಿನದ ಸಮಯ, ಆಹಾರ ಮತ್ತು ಹಲವು ಇತರ ಅಂಶಗಳ ಪ್ರಕಾರ ಏರಿಳಿಯುತ್ತವೆ ಎಂದು ವಿವರಿಸುತ್ತವೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.