The most-visited ಕನ್ನಡ Wikipedia articles, updated daily. Learn more...
ರಾಷ್ಟ್ರೀಯ ವೈದ್ಯರ ದಿನವು ವೈಯಕ್ತಿಕ ಜೀವನ ಮತ್ತು ಸಮುದಾಯಗಳಿಗೆ ವೈದ್ಯರ ಕೊಡುಗೆಗಳನ್ನು ಗುರುತಿಸಲು ಒಂದು ದಿನವಾಗಿದೆ.ದಿನ ಗುರುತಿಸಲು ಬಳಸಲಾಗುತ್ತದೆ ಸ್ಮರಣಾರ್ಥ ಘಟನೆ ಅವಲಂಬಿಸಿ ದಿನಾಂಕ ದೇಶದಿಂದ ರಾಷ್ಟ್ರಕ್ಕೆ ಬದಲಾಗಬಹುದು.ಕೆಲವು ರಾಷ್ಟ್ರಗಳಲ್ಲಿ ಈ ದಿನವನ್ನು ರಜಾದಿನವೆಂದು ಗುರುತಿಸಲಾಗಿದೆ.ರೋಗಿಗಳು ಮತ್ತು ಆರೋಗ್ಯ ಸೇವೆ ಉದ್ಯಮದ ಪ್ರಾಯೋಜಕರು ಆಚರಿಸಬೇಕೆಂದು ಭಾವಿಸಿದ್ದರೂ ಇದನ್ನು ಸಾಮಾನ್ಯವಾಗಿ ಆರೋಗ್ಯ ರಕ್ಷಣಾ ಸಂಸ್ಥೆಗಳಿಂದ ಆಚರಿಸಲಾಗುತ್ತದೆ.ಸಿಬ್ಬಂದಿ ಗುರುತಿಸುವ ಸಂಕೇತಗಳೊಂದಿಗೆ ವೈದ್ಯರನ್ನು ಪ್ರಸ್ತುತಪಡಿಸಲು ವೈದ್ಯರು ಊಟವನ್ನು ಆಯೋಜಿಸಬಹುದು.ಐತಿಹಾಸಿಕವಾಗಿ, ಒಂದು ಕಾರ್ಡ್ ಅಥವಾ ಕೆಂಪು ಕಾರ್ನೇಷನ್ ಅನ್ನು ವೈದ್ಯರು ಮತ್ತು ಅವರ ಸಂಗಾತಿಗಳಿಗೆ ಕಳುಹಿಸಬಹುದು, ಸತ್ತ ವೈದ್ಯರ ಸಮಾಧಿಯ ಮೇಲೆ ಹೂವು ಹೂಡಲಾಗುತ್ತದೆ.ಮೊದಲ ವೈದ್ಯರ ದಿನವನ್ನು ಜಾರ್ಜದ ವೈಂಡರ್ನಲ್ಲಿ ಮಾರ್ಚ್ ೩೦,೧೯೩೩ರಂದು ಆಚರಿಸಲಾಗಿತ್ತು. ಭಾರತದಲ್ಲಿ ಪ್ರಸಿದ್ಧ ವೈದ್ಯ ಮತ್ತು ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಬಿಧಾನ್ ಚಂದ್ರ ರಾಯ್ ಅವರ ಗೌರವಾರ್ಥ ವೈದ್ಯರ ದಿನವನ್ನು ಜುಲೈ ೧ರಂದು ಆಚರಿಸಲಾಗುತ್ತದೆ. ಈ ಆಚರಣೆಯು ನಮ್ಮ ಜೀವನದಲ್ಲಿರುವ ವೈದ್ಯರಿಗೆ ಅವರು ನಮಗೆಷ್ಟು ಮುಖ್ಯ ಮತ್ತು ನಮ್ಮನ್ನು ಗುಣಪಡಿಸುವ ಅವರ ಚಿಕಿತ್ಸೆಗಳು ಎಷ್ಟು ಅಮೂಲ್ಯವೆಂದು ತೋರಿಸುವ ಅಗತ್ಯವನ್ನು ಈಡೇರಿಸುತ್ತದೆ.
ಶಯನಿ ಏಕಾದಶಿ , ಮಹಾ ಏಕಾದಶಿ , ಪ್ರಥಮ ಏಕಾದಶಿ , ಪದ್ಮ ಏಕಾದಶಿ , ದೇವಶಯನಿ ಏಕಾದಶಿ , ದೇವಪೋಢಿ ಏಕಾದಶಿ ಎಂಬ ಹೆಸರುಗಳಿಂದ ಕರೆಯಲಾಗುವ ಈ ದಿನವು ಹಿಂದೂ ತಿಂಗಳು ಆಷಾಢ (ಜೂನ್ - ಜುಲೈ) ಶುಕ್ಲ ಪಕ್ಷದ ಹನ್ನೊಂದನೇ ದಿನ (ಏಕಾದಶಿ) ಆದ್ದರಿಂದ . ಇದನ್ನು ಆಷಾಢ ಏಕಾದಶಿ ಅಥವಾ ಆಷಾಢಿ ಎಂದೂ ಕರೆಯಲಾಗುತ್ತದೆ. ಇದನ್ನು ತೆಲುಗು ಭಾಷೆಯಲ್ಲಿ ತೊಲಿ ಏಕಾದಶಿ ಎಂದು ಕರೆಯುತ್ತಾರೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ, ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 December 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಾಟ್ಸ್ ಆಪ್ ಮೆಸ್ಸೆಂಜರ್ ಸ್ಮಾರ್ಟ್ ಫೋನ್ ಗಳಿಗೆ ಒಂದು ಪ್ರೊಪ್ರೈಟರಿ ವೇದಿಕೆ ಹಾಗೂ ತ್ವರಿತ ಸಂದೇಶವನ್ನು ಕಳಿಸುವ ಕ್ಲೈಂಟ್ ಆಗಿ ನಿಂತಿದೆ. ಅದು ಸಂದೇಶಗಳನ್ನು, ಚಿತ್ರಗಳನ್ನು, ಧ್ವನಿ ಸಂಭಾಷಣೆಗಳನ್ನು, ವೀಡಿಯೋಗಳನ್ನು ಮತ್ತು ದಾಖಲೆಗಳನ್ನು ಅಂತರಜಾಲದ ಮುಖಾಂತರ ಒಬ್ಬ ವ್ಯಕ್ತಿಯ ಸ್ಮಾರ್ಟ್ ಫೋನಿನಿಂದ ಮತ್ತೊಬ್ಬನಿಗೆ ಕಳುಹಿಸಲು ಉಪಯೋಗಿಸುತ್ತದೆ. ಫೆಬ್ರವರಿ ೧೬ ೨೦೧೬ರ ದಾಖಲೆಗಳ ಪ್ರಕಾರ ಪ್ರಪಂಚದಲ್ಲಿ ವಟ್ಸ್ ಆಪ್ ಬಳಸುವ ಸಂಖ್ಯೆಯು ೧೦೦ ಕೋಟಿಯನ್ನು ದಾಟಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮಂಗಳೂರು ಸಮಾಚಾರ ಕನ್ನಡದ ಮೊದಲ ಪತ್ರಿಕೆ.ಮಂಗಳೂರಿನಲ್ಲಿ ಕನ್ನಡ ಪತ್ರಿಕೋದ್ಯಮದ ಪ್ರಾರಂಭ ಬಾಸೆಲ್ ಮಿಶನ್ ಸಂಸ್ಥೆಯಿಂದ ನಡೆಯಿತು.ಮಂಗಳೂರು ಸಮಾಚಾರ ವಾರಪತ್ರಿಕೆಯ ಜುಲೈ ೧ ೧೮೪೧ರಲ್ಲಿ ಮೊದಲಿಗೆ ಪ್ರಕಟ. ಇದರ ಸಂಪಾದಕ ಹೆರ್ಮನ್ ಮ್ಯೋಗ್ಲಿಂಗ್ 17೩ ವರ್ಷಗಳ ದೀರ್ಘ ಇತಿಹಾಸ ಹೊಂದಿರುವÀ ಕನ್ನಡ ಪತ್ರಿಕೋದ್ಯಮ ಪ್ರಾರಂಭವಾದದ್ದು ತುಳುನಾಡಿನ ಮಂಗಳೂರಿನಲ್ಲಿ ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ 1843ರಲ್ಲಿ 'ಮಂಗಳೂರು ಸಮಾಚಾರ' ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ. ಪಾಶ್ಚಾತ್ಯ ಪ್ರಪಂಚದಲ್ಲಿ ಜನಜೀವನದ ಮೇಲೆ ಮುದ್ರಣದ ಪ್ರಬಾವವು ಮೂರು ನಾಲ್ಕು ಶತಮಾನಗಳಿಂದ ಉಂಟಾಗಿದ್ದರೂ ನಮ್ಮಲ್ಲಿ ಈ ವ್ಯವಸ್ಥೆ ಒಂದೂವರೆ ಶತಮಾನದ ಈಚಿನದು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ವಿಲಿಯಂ ಬ್ಲೇಕ್ (1757ರ ನವೆಂಬರ್ 28ರಿಂದ – 1827ರ ಆಗಸ್ಟ್ 12ರವರೆಗೆ) ಒಬ್ಬ ಇಂಗ್ಲಿಷ್ ಕವಿ, ಚಿತ್ರಕಾರ, ಮತ್ತು ನಕಾಸೆಗಾರನಾಗಿದ್ದ. ತನ್ನ ಜೀವಿತಾವಧಿಯಲ್ಲಿ ಅಷ್ಟೇನೂ ದೊಡ್ಡದಾದ ರೀತಿಯಲ್ಲಿ ಗುರುತಿಸಲ್ಪಡದಿದ್ದ ಬ್ಲೇಕ್, ರಮ್ಯತಾವಾದಿ ಯುಗದ ಕವಿತೆ ಮತ್ತು ದೃಷ್ಟಿಗೋಚರ ಕಲೆಗಳ ವಲಯಗಳ ಇತಿಹಾಸದಲ್ಲಿ ಓರ್ವ ಮೂಲಪುರುಷನೆಂದು ಈಗ ಪರಿಗಣಿಸಲ್ಪಟ್ಟಿದ್ದಾನೆ. ಅವನ ಭವಿಷ್ಯವಾಣಿಯಂಥ ಕಾವ್ಯವು "ಇಂಗ್ಲಿಷ್ ಭಾಷೆಯಲ್ಲಿನ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಓದಲ್ಪಟ್ಟ ಕಾವ್ಯದ ಭಾಗಕ್ಕೆ ಸಂಬಂಧಿಸಿದ ತನ್ನ ಅರ್ಹತೆ ಅಥವಾ ಉತ್ಕೃಷ್ಟತೆಯ ಅದೇ ಅಂಶದಲ್ಲಿ" ರೂಪಿಸುತ್ತದೆ ಎಂದು ಹೇಳಲಾಗಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ ರತ್ನ ಪುರಸ್ಕೃತ ಬಿಧಾನ್ ಚಂದ್ರ ರಾಯ್ M.R.C.P., F.R.C.S.ಬಂಗಾಳಿ:বিধান চন্দ্র রায় (೧ ಜುಲೈ ೧೮೮೨–೧ ಜುಲೈ ೧೯೬೨) ಇವರು ಭಾರತದಲ್ಲಿನ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ. ಇವರು ಈ ಹುದ್ದೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರತಿನಿಧಿಯಾಗಿ ಹದಿನಾಲ್ಕು ವರ್ಷಗಳ ಕಾಲ ೧೯೪೮ ರಿಂದ ೧೯೬೨ರಲ್ಲಿನ ಮರಣದವರೆಗೂ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಇವರು ಅತ್ಯಂತ ಗೌರವಾನ್ವಿತ ವೈದ್ಯರಾಗಿದ್ದರು ಮತ್ತು ಪ್ರಖ್ಯಾತ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.