The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕುದುರೆಯು (ಎಕೂಸ್ ಫ಼ೆರೂಸ್ ಕಬಾಲೂಸ್) ಎಕೂಸ್ ಫ಼ೆರೂಸ್ ಅಥವಾ ಕಾಡು ಕುದುರೆಯ ಎರಡು ಅಸ್ತಿತ್ವದಲ್ಲಿರುವ ಉಪಪ್ರಜಾತಿಗಳ ಪೈಕಿ ಒಂದು. ಅದು ಜೀವಿವರ್ಗೀಕರಣ ಕುಟುಂಬ ಎಕ್ವಿಡೈಗೆ ಸೇರಿದ ಒಂದು ಬೆಸ ಕಾಲ್ಬೆರಳುಗಳಿರುವ ಗೊರಸುಳ್ಳ ಸಸ್ತನಿ. ಕುದುರೆಯು ಕಳೆದ ೪೫ ರಿಂದ ೫೫ ಮಿಲಿಯ ವರ್ಷಗಳಲ್ಲಿ ಚಿಕ್ಕ ಬಹು ಕಾಲ್ಬರೆಳುಗಳುಳ್ಳ ಪ್ರಾಣಿಯಿಂದ ಇಂದಿನ ದೊಡ್ಡ, ಒಂಟಿ ಕಾಲ್ಬೆರಳಿನ ಪ್ರಾಣಿಯಾಗಿ ವಿಕಾಸಗೊಂಡಿದೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಾನವ ಸಂಪನ್ಮೂಲ ನಿರ್ವಹಣೆ (ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್)(HRM) ಎಂಬುದು ಒಂದು ಸಂಸ್ಥೆಯ ಅತ್ಯಂತ ಮೌಲ್ಯಯುತ ಮಾನವ ಸಂಪತ್ತಿನ ನಿರ್ವಹಣೆಯೆಡೆಗೆ ತೋರುವ ನಿರ್ವಹಣಾ ಚಾತುರ್ಯ ಮತ್ತು ಹೊಂದಾಣಿಕೆಯಾಗಿದೆ- ಉದಾಹರಣೆಗೆ ವ್ಯಾಪಾರದ ಗುರಿಗಳನ್ನು ಸಾಧಿಸಲು ವೈಯಕ್ತಿಕ ಮತ್ತು ಸಾಮೂಹಿಕವಾಗಿ ತಮ್ಮ ಕೊಡುಗೆ ನೀಡಲು ಕಾರಣ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗವಾಗಿದೆ. "ಮಾನವ ಸಂಪನ್ಮೂಲ ನಿರ್ವಹಣೆ" ಮತ್ತು "ಮಾನವ ಸಂಪನ್ಮೂಲಗಳು" (HR) ಎಂಬ ಪದಗಳನ್ನು "ವೈಯಕ್ತಿಕ ನಿರ್ವಹಣೆ" ಎಂಬ ಪದದ ಬದಲಿಗೆ ಬಳಸಲಾಗಿದೆ. ಇದು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿರ್ವಹಣೆಯನ್ನೊಳಗೊಂಡ ಕಾರ್ಯಚಟುವಟಿಕೆಯ ವಿವರಣೆಯಾಗಿದೆ.
ಆಸ್ತಿ ವಿಮೆಯು, ಬೆಂಕಿ, ಕಳ್ಳತನ ಮತ್ತು ಕೆಲವು ಹವಾಮಾನ ಹಾನಿಯಂತಹ, ಆಸ್ತಿಯ ಬಹುತೇಕ ಅಪಾಯಗಳ ವಿರುದ್ಧ ಸಂರಕ್ಷಣೆಯನ್ನು ಒದಗಿಸುತ್ತದೆ. ಇದರಲ್ಲಿ ಬೆಂಕಿ ವಿಮೆ, ಪ್ರವಾಹ ವಿಮೆ, ಭೂಕಂಪ ವಿಮೆ, ಮನೆ ವಿಮೆ ಅಥವ ಬಾಯ್ಲರ್ ವಿಮೆಯಂತಹ ವಿಶೇಷ ವಿಧಗಳ ವಿಮೆಯು ಒಳಗೊಂಡಿದೆ. ಆಸ್ತಿಗೆ ಎರಡು ಮುಖ್ಯ ರೀತಿಗಳಲ್ಲಿ ವಿಮೆ ಮಾಡಿಸಲಾಗುತ್ತದೆ – ಮುಕ್ತ ಅಪಾಯಗಳು (ಓಪನ್ ಪೆರಿಲ್ಸ್) ಮತ್ತು ಹೆಸರಿಸಲ್ಪಟ್ಟ ಅಪಾಯಗಳು (ನೇಮ್ಡ್ ಪೆರಿಲ್ಸ್).ಮುಕ್ತ ಅಪಾಯಗಳು, ಪಾಲಿಸಿಯಲ್ಲಿ ನಿರ್ದಿಷ್ಟವಾಗಿ ಹೊರತುಪಡಿಸದ ಎಲ್ಲಾ ನಷ್ಟಗಳ ಕಾರಣಗಳನ್ನು ಒಳಗೊಂಡಿರುತ್ತದೆ.
ಮುಮ್ಮಡಿ ಕೃಷ್ಣರಾಜ ಒಡೆಯರು (೧೭೯೪ - ಮಾರ್ಚ್ ೨೭, ೧೮೬೮) ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದವರು. ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು ಮುಮ್ಮಡಿ ಕೃಷ್ಣರಾಜ ಒಡೆಯರು. ಬ್ರಿಟಿಷರೊಡನೆ ೧೭೯೯ರ ಎರಡನೇ ಮೈಸೂರು ಯುದ್ಧದಲ್ಲಿ ಟಿಪ್ಪೂವಿನ ಮರಣಾನಂತರ, ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು.
ಅಥರ್ವವೇದಹಿಂದೂ ಧರ್ಮದ ನಾಲ್ಕು ವೇದಗಳಲ್ಲಿ ಕೊನೆಯದು.ಅಥರ್ವಣ ಅಂಗೀರಸ ಋಷಿಗಳು ರಚಿಸಿದ ಮಂತ್ರಗಳಿಂದ ಕೂಡಿದ ವೇದವಾದುದರಿಂದ ಈ ಹೆಸರು.ಇದರಲ್ಲಿ ೨೦ ಕಾಂಡಗಳೂ,೭೬೦ ಸೂಕ್ತಗಳೂ,೬೦೦೦ ಮಂತ್ರಗಳೂ ಇವೆ.ಗದ್ಯ ಹಾಗೂ ಪದ್ಯ ಎರಡೂ ಶೈಲಿಯಲ್ಲಿ ರಚಿತವಾಗಿದೆ.ಈ ವೇದದಲ್ಲಿ ವಿವಾಹ ಪದ್ಧತಿ,ಶವಸಂಸ್ಕಾರ,ಗೃಹನಿರ್ಮಾಣ ಮುಂತಾದ ಜನರ ದಿನನಿತ್ಯದ ಜೀವನಕ್ಕೆ ಸಂಬಂಧಿಸಿದ ವಿಚಾರಗಳು ಕೂಡಾ ಸೇರಿಕೊಂಡಿದೆ.ಮಾಟ ಮಂತ್ರ,ಯಕ್ಷಿಣಿವಿದ್ಯೆ,ಇಂದ್ರಜಾಲ ಮುಂತಾದವುಗಳೂ ವಿಸ್ತಾರವಾಗಿ ಪ್ರಸ್ತಾಪಿಸಲ್ಪಟ್ಟಿದೆ.ಧನುರ್ವಿದ್ಯೆ,ರೋಗನಿವಾರಣೋಪಾಯ,ಔಷಧಿಗಳ ವಿವರ ಕೂಡಾ ಇದರಲ್ಲಿದೆ.ಯಜ್ಞಯಾಗಾದಿಗಳನ್ನು ನಿರ್ವಹಿಸುವ ಕ್ರಮದ ವಿವರಗಳೂ ಸೇರಿದೆ. ಇದು ದಿನನಿತ್ಯದ ಜೀವನಕ್ಕೆ ಬೇಕಾದ ಜ್ಞಾನವನ್ನು ಕೊಡುವ ಭಂಡಾರವೇ ಆಗಿದೆ. ಇದು ವೇದಗಳ ರಚನೆಯಲ್ಲಿ ಕೊನೆಯದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.