The most-visited ಕನ್ನಡ Wikipedia articles, updated daily. Learn more...
ಸರ್ ಜಗದೀಶ್ಚಂದ್ರ ಬೋಸ್, ಸಿಎಸ್ಐ , ಸಿಐಈ, ಎಫ್ಆರ್ಎಸ್ (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು. ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಡಸಾಲ್ಟ್ ರಾಫೆಲ್ ಮಲ್ಟಿರೋಲ್ ಡಸಾಲ್ಟ್ ಏವಿಯೇಷನ್ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧ ವಿಮಾನ ಫ್ರೆಂಚ್ ಅವಳಿ-ಎಂಜಿನ್, ಕ್ಯಾನಾರ್ಡ್ ಡೆಲ್ಟಾ ವಿಂಗ್, .ವ್ಯಾಪಕ ಶ್ರೇಣಿಯ ಶಸ್ತ್ರಾಸ್ತ್ರಗಳನ್ನು ಹೊಂದಿದ ರಫೇಲ್ ವಾಯು ಪ್ರಾಬಲ್ಯ, ಮಧ್ಯಪ್ರವೇಶ, ವೈಮಾನಿಕ ವಿಚಕ್ಷಣ, ನೆಲದ ಬೆಂಬಲ, ಆಳವಾದ ಮುಷ್ಕರ, ಹಡಗು ವಿರೋಧಿ ಮುಷ್ಕರ ಮತ್ತು ಪರಮಾಣು ತಡೆಗಟ್ಟುವ ಕಾರ್ಯಗಳನ್ನು ನಿರ್ವಹಿಸಲು ಉದ್ದೇಶಿಸಿದೆ. ರಫೇಲ್ ಅನ್ನು ಡಸಾಲ್ಟ್ "ಓಮ್ನಿರೋಲ್" ವಿಮಾನ ಎಂದು ಕರೆಯುತ್ತಾರೆ. 1970 ರ ದಶಕದ ಉತ್ತರಾರ್ಧದಲ್ಲಿ, ಫ್ರೆಂಚ್ ವಾಯುಪಡೆ ಮತ್ತು ನೌಕಾಪಡೆಯು ತಮ್ಮ ಪ್ರಸ್ತುತ ವಿಮಾನಗಳನ್ನು ಬದಲಿಸಲು ಪ್ರಯತ್ನಿಸುತ್ತಿದ್ದವು.ಅಭಿವೃದ್ಧಿ ವೆಚ್ಚಗಳನ್ನು ಕಡಿಮೆ ಮಾಡಲು ಮತ್ತು ನಿರೀಕ್ಷಿತ ಮಾರಾಟವನ್ನು ಹೆಚ್ಚಿಸಲು, ಫ್ರಾನ್ಸ್ ಯುಕೆ, ಜರ್ಮನಿ, ಇಟಲಿ ಮತ್ತು ಸ್ಪೇನ್ನೊಂದಿಗೆ ಚುರುಕುಬುದ್ಧಿಯ ಬಹುಪಯೋಗಿ ಹೋರಾಟಗಾರ ಯೂರೋಫೈಟರ್ ಟೈಫೂನ್ ಅನ್ನು ಉತ್ಪಾದಿಸುವ ವ್ಯವಸ್ಥೆಯನ್ನು ಮಾಡಿತು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
STGDRFGTHGJKL;'L;'ಫ್ರೆಂಡ್ಶಿಪ್ ಡೇ ಸ್ನೇಹವನ್ನು ಆಚರಿಸಲು ಒಂದು ದಿನ. ಅನೇಕ ದಕ್ಷಿಣ ಅಮೆರಿಕಾದ ದೇಶಗಳಲ್ಲಿ ಹಲವು ವರ್ಷಗಳಿಂದ ದಿನಾಚರಣೆಯನ್ನು ಆಚರಿಸಲಾಗುತ್ತದೆ, ವಿFSFSFFGGGHJKL; ಶೇಷವಾಗಿ ಪರಾಗ್ವೆನಲ್ಲಿ, ಮೊದಲ ವಿಶ್ವ ಸ್ನೇಹ ದಿನ - ಅಂತರರಾಷ್ಟ್ರೀಯ ಸ್ನೇಹ ದಿನವನ್ನು 1958 ರಲ್ಲಿ ಪ್ರಸ್ತಾಪಿಸಲಾಯಿತು. ಆರಂಭದಲ್ಲಿ ಶುಭಾಶಯ ಪತ್ರ ಉದ್ಯಮದಿಂದ ರಚಿಸಲ್ಪಟ್ಟಿದೆ, 1935 ರಲ್ಲಿ ಯು.ಎಸ್.ನಲ್ಲಿ ಹುಟ್ಟಿದ ಸ್ನೇಹಿತರ ಗೌರವಾರ್ಥವಾಗಿ ಒಂದು ದಿನವನ್ನು ಅರ್ಪಿಸುವ ಸಂಪ್ರದಾಯವನ್ನು ನಿರೂಪಿಸಲಾಯಿತು , ಆದರೆ ಇದು ನಿಜವಾಗಿ 1919 ರಿಂದ ಆರಂಭವಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಜಗತ್ತಿನ ಎಲ್ಲ ಮಾನವರು ಪಡೆದ ಮೂಲ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮಾನವ ಹಕ್ಕುಗಳು ಎನ್ನುವರು. ಸಾಮಾನ್ಯವಾಗಿ ಮಾನವ ಹಕ್ಕುಗಳು ಎಂದು ಕರೆಯಲಾಗುವ ಹಕ್ಕುಗಳಲ್ಲಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳು ಹಾಗೂ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಮುಖ್ಯವಾಗಿವೆ. ನಾಗರಿಕ ಮತ್ತು ರಾಜಕೀಯ ಹಕ್ಕುಗಳಲ್ಲಿ ಜೀವನದ ಹಕ್ಕು, ಸ್ವಾತಂತ್ರ್ಯ, ಆಸ್ತಿ, ಅಭಿವ್ಯಕ್ತಿ ಸ್ವಾತಂತ್ರ್ಯ ಸಂತೋಷದ ಅನ್ವೇಷಣೆ ಕಾನೂನು ಸಮಾನತೆಯ ಹಕ್ಕುಗಳು ಒಳಗೊಂಡಿವೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಗ್ರೀಕ್ ἐνέργεια ಮೂಲ ಪದಗಳಾದ ಎನರ್ಜೀಯಾ ' (ಚಟುವಟಿಕೆ, ಕಾರ್ಯಾಚರಣೆ) ಮತ್ತು ἐνεργός ಎನರ್ಗೊಸ್' (ಸಕ್ರಿಯ, ಕಾರ್ಯನಿರತ) ಎಂಬ ಪದಗಳಿಂದ ಭೌತವಿಜ್ಞಾನದ ಶಕ್ತಿ ('ಎನರ್ಜಿ') (=ಇಂಧನ, ಬಲ) ಎಂಬ ಇಂಗ್ಲಿಷ್ ಪದವು ನಿಷ್ಪನ್ನವಾಗಿದೆ. 'ಶಕ್ತಿ' ಎಂಬುದು, ಬಲವು ನಿರ್ವಹಿಸಬಲ್ಲ ಕಾರ್ಯದ ಯಾವುದೇ ಭೌತಿಕ ಅದಿಶ ಪರಿಮಾಣವನ್ನು ಸೂಚಿಸುವುದಾಗಿದೆ. ಸಂರಕ್ಷಣಾ ನಿಯಮಕ್ಕೆ ಒಳಗಾಗುವ ವಸ್ತು ಮತ್ತು ವ್ಯವಸ್ಥೆಗಳ ಲಕ್ಷಣವೂ ಆಗಿದೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕನ್ನಡದಲ್ಲಿ ಮಹಿಳಾ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.