The most-visited ಕನ್ನಡ Wikipedia articles, updated daily. Learn more...
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation ಜನನ ಬಿಹಾರದ ರಾಂಚಿಯಲ್ಲಿ ೭ ಜುಲೈ ೧೯೮೧ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕಬೀರ್ (ಸುಮಾರು ೧೪೪೦-೧೫೧೮) ಭಾರತದ ಒಬ್ಬ ಅನುಭಾವಿ ಕವಿ ಮತ್ತು ಸಂತರಾಗಿದ್ದರು, ಮತ್ತು ಇವರ ಬರಹಗಳು ಭಕ್ತಿ ಚಳುವಳಿಯ ಮೇಲೆ ಮಹತ್ತರ ಪ್ರಭಾವಬೀರಿವೆ. ಕಬೀರ್ ಹೆಸರು ಅರಬ್ಬೀ ಭಾಷೆಯ ಅಲ್-ಕಬೀರ್ ಅಂದರೆ ಮಹಾನ್ನಿಂದ ಬರುತ್ತದೆ. ಕಬೀರ್ರ ಕೊಡುಗೆಯನ್ನು ಇಂದು, ಅವರನ್ನು ಅದರ ಸ್ಥಾಪಕರೆಂದು ಗುರುತಿಸುವ ಮತ್ತು ಸಂತ ಮತ ಪಂಥಗಳಲ್ಲಿ ಒಂದಾದ ಒಂದು ಧಾರ್ಮಿಕ ಸಮುದಾಯವಾದ, ಕಬೀರ್ ಪಂಥ ಮುಂದಕ್ಕೆ ಸಾಗಿಸುತ್ತಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದೆಹಲಿ ಸ್ಥಳೀಯವಾಗಿ ದಿಲ್ಲಿ ಎಂದೇ ಹೆಸರಾಗಿರುವ ಹಿಂದಿ:दिल्ली ಪಂಜಾಬಿ:ਦਿੱਲੀ ಉರ್ದು: دلّی dillī ಮತ್ತು ಅಧಿಕೃತವಾಗಿ ನ್ಯಾಷನಲ್ಉರ್ದು: دلّی ಕ್ಯಾಪಿಟಲ್ ಟೆರಿಟರಿ ಆಫ್ ಡೆಲ್ಲಿ (ಎನ್.ಸಿ.ಟಿ) ಎಂದು ಕರೆಯಲ್ಪಡುವ ರಾಷ್ಟ್ರೀಯ ರಾಜಧಾನಿ ನಗರವು ಪ್ರಾದೇಶಿಕವಾಗಿ ಭಾರತದಲ್ಲೇ ಅತಿ ದೊಡ್ಡ ಮಹಾನಗರ ಮತ್ತು ಜನಸಂಖ್ಯೆಯಲ್ಲಿ ಎರಡನೇ ಅತಿ ದೊಡ್ಡ ಮಹಾನಗರವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ೧೨.೨೫ ದಶಲಕ್ಷಕ್ಕೂ ಮಿಕ್ಕಿ ನಿವಾಸಿಗಳು ಮತ್ತು ೧೫.೯ ದಶಲಕ್ಷ ನಗರವಾಸಿಗಳನ್ನು ಹೊಂದಿರುವ ದೆಹಲಿ ಜನಸಂಖ್ಯೆಯಲ್ಲಿ ಜಗತ್ತಿನಲ್ಲೇ ಎಂಟನೇ ದೊಡ್ಡ ನಗರವಾಗಿದೆ. (ಇದರಲ್ಲಿ ನೋಯ್ಡಾ, ಗುರ್ಗಾಂವ್, ಫರಿದಾಬಾದ್ ಮತ್ತು ಘಜೀಯಾಬಾದ್ ಸೇರಿವೆ).
ಕಮಲ (ನೀಲಂಬೊ ನೂಸಿಫೆರಾ) ನೀಲಂಬೊನೇಸಿಯಿ ಕುಟುಂಬದಲ್ಲಿನ ಜಲವಾಸಿ ಸಸ್ಯದ ಎರಡು ಪ್ರಜಾತಿಗಳಲ್ಲಿ ಒಂದು. ಹಿಂದಿನ ಹೆಸರುಗಳಾದ ನೀಲಂಬಿಯಮ್ ಸ್ಪೀಸಿಯೋಸಮ್ (ವಿಲ್ಡೆನೌ) ಮತ್ತು ನಿಂಫೆಯಾ ನೀಲಂಬೊ ಎಂದು ವರ್ಗೀಕರಿಸಲಾಗಿರುವ ಈ ಪ್ರಜಾತಿಯ ಪ್ರಸಕ್ತವಾಗಿ ಗುರುತಿಸಲ್ಪಟ್ಟಿರುವ ಹೆಸರು ಲಿನೀಯಸ್ನ ದ್ವಿಪದ ನಾಮ ನೀಲಂಬೊ ನೂಸಿಫೆರಾ (ಗ್ಯಾಟ್ನರ್). ಈ ಸಸ್ಯವು ಒಂದು ಜಲವಾಸಿ ಬಹುವಾರ್ಷಿಕ ಸಸ್ಯವಾಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ. ಅಂತಾರಾಷ್ಟ್ರೀಯವೆನ್ನಬಹುದಾದ ರೀತಿಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರು ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟಗಳದು ಮೊದಲನೆಯ ಘಟ್ಟ. ಬ್ರಿಟಿಷರು ಭಾರತದಲ್ಲಿ ಭದ್ರವಾಗಿ ನೆಲೆಗೊಳ್ಳುತ್ತಿದ್ದ ಕಾಲದಲ್ಲಿ ಇವರ ಆಡಳಿತವನ್ನು ಪ್ರತಿಭಟಿಸಿ ಅಲ್ಲಲ್ಲಿ ಸಂಭವಿಸಿದ ಸಶಸ್ತ್ರ ಬಂಡಾಯಗಳದು ಎರಡನೆಯ ಘಟ್ಟ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಅಶೋಕ ಚಕ್ರವು ಸಾಮ್ರಾಟ್ ಅಶೋಕನ ಚಿಹ್ನೆಯಾಗಿದ್ದು,ಭಾರತದ ಧ್ವಜದಲ್ಲಿ ಅಳವಡಿಸಿಕೊಳ್ಳಲಾಗಿದೆ. ಅಶೋಕಚಕ್ರದಲ್ಲಿ ವೃತ್ತಾಕಾರದ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ,ಚಕ್ರದಲ್ಲಿನ ೨೪ ಕಂಬಗಳು ಬೌದ್ಧಧರ್ಮದ ಆಚರಣೆಯನ್ನು ಸೂಚಿಸುತ್ತವೆ. ಪ್ರಾಚ್ಯ ಹಾಗೂ ಪಾಶ್ಚಾತ್ಯ ದೇಶಗಳಲ್ಲಿ ಪ್ರಸಿದ್ಧವಾಗಿರುವ ಈ ಚಕ್ರ ಅಶೋಕ ಮಹಾರಾಜನಿಂದ ಸಾರಾನಾಥದಲ್ಲಿ ನಿರ್ಮಾಣವಾದ ಸ್ಮಾರಕಸ್ತಂಭದ ಸಿಂಹಶೀರ್ಷಿಕೆಯಲ್ಲಿದೆ.
ಗಿಡಮರಗಳಿಂದ ಕೂಡಿ ಒಂದು ಯಾಜಮಾನ್ಯಕ್ಕೆ ಅಥವಾ ಆಡಳಿತಕ್ಕೆ ಸೇರಿರುವ ಅಥವಾ ವನಖಂಡಗಳಿಂದ ಕೂಡಿರುವ ಪ್ರದೇಶ ಅರಣ್ಯ (ಫಾರೆಸ್ಟ್). ಅರಣ್ಯಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸಿ, ಬೆಳೆಸಿ ಅವುಗಳಿಂದ ಪರಮಾವಧಿ ಉಪಯೋಗ ಹೊಂದುವ ವಿಧಾನ ಅರಣ್ಯಶಾಸ್ತ್ರ (ಫಾರೆಸ್ಟ್ರಿ). ಸಂಯುಕ್ತರಾಷ್ಟ್ರಗಳ (ಯು.ಎನ್.) ಆಹಾರ ಮತ್ತು ಕೃಷಿ ವಿಭಾಗ (ಫುಡ್ ಅಂಡ್ ಅಗ್ರಿಕಲ್ಚರಲ್ ಆರ್ಗನೈ¸óÉೀಷನ್, ಎಫ್.ಎ.ಓ.) ನೀಡಿರುವ ವ್ಯಾಖ್ಯೆಯ ಪ್ರಕಾರ ಸಸ್ಯಸಮುದಾಯದಿಂದ ವ್ಯಾಪ್ತವಾಗಿರುವ, ಎಲ್ಲ ಗಾತ್ರದ ಗಿಡಮರಗಳು ಪ್ರಧಾನವಾಗಿರುವ, ಕಡಿಯಲಿ ಬಿಡಲಿ ಮರಮುಟ್ಟು, ಸೌದೆ ಒದಗಿಸಲು ಸಮರ್ಥವಾಗಿರುವ ಅಥವಾ ಸ್ಥಳೀಯ ಹವೆಯ ಮೇಲೆ ಅಥವಾ ಜಲಸಂಪತ್ತಿನ ಮೇಲೆ ಪ್ರಭಾವ ಬೀರಲು ಶಕ್ತವಾಗಿರುವ, ಎಲ್ಲ ನೆಲೆಗಳಿಗೂ ಅರಣ್ಯ ಎಂಬ ಹೆಸರಿದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸುಭಾಷ್ ಚಂದ್ರ ಬೋಸ್ ೧೮೯೭ ಜನವರಿ ೨೩ರಲ್ಲಿ ಹುಟ್ಟಿದ್ದರು ೧೮ ಆಗಸ್ಟ್ ೧೯೪೪೫ ೪೮ ವರ್ಷ ಇವರ ಪ್ರತಿಭಟನೆಯ ದೇಶಭಕ್ತಿ ಅವರನ್ನು ಭಾರತದ ನಾಯಕ ಮಾಡಿದ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿ, ಆದರೆ ಅವರ ಪ್ರಯತ್ನ ಮಹಾಯುದ್ದದಲ್ಲಿ ನಾಜಿ ಜರ್ಮನಿ ಮತ್ತು ಜಪಾನ್ ತೊಂದರೆಗೊಳಗಾಗಿರುವ ಆಸ್ತಿಯನ್ನು ಬಿಟ್ಟು ಹೋಗಿವೆ ಸಹಾಯದಿಂದ ಬ್ರಿಟಿಷ್ ಆಡಳಿತದ ಭಾರತ ವಿಮುಕ್ತಿಗೊಳಿಸುವ ಗೌರವ ನೇತಾಜಿ ಹಿಂದೂಸ್ತಾನಿ ಭಾಷೆ ಗೌರವಾನ್ವಿತ ನಾಯಕರಾದ ಮೊದಲ ವೇಳೆಗೆ ಜರ್ಮನಿಯ ಬೋಸ್ ಅನ್ವಯಿಸಲಾಗಿದೆ ಇಂಡಿಷ್ ಲೀಜನ್ ಮತ್ತು ೧೯೪೨ ರ ಆರಂಭದಲ್ಲಿ ಬರ್ಲಿನ್ ಭಾರತ ವಿಶೇಷ ಬ್ಯೂರೋ ಜರ್ಮನ್ ಮತ್ತು ಭಾರತೀಯ ಅಧೀಕಾರಿಗಳು ಭಾರತೀಯ ಸೈನಿಕರು,ಈಗ ಭಾರತದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಹಿಂದಿನ ಬೋಸ್ ೧೯೩೮ ಮತ್ತು ೧೯೩೯ ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಆಗಲು ಏರುತ್ತಿರುವ,೧೯೨೦ ಮತ್ತು ೧೯೩೦ ರಲ್ಲಿ ಭಾರತೀಯ ರಾಷ್ರೀಯ ಕಾಂಗ್ರೆಸ್ ಕಿರಿಯ ತೀವ್ರಗಾಮಿ ಆದಾಗ್ಯೂ ಅವರು ೧೯೩೯ ರಲ್ಲಿ ಕಾಂಗ್ರಸ್ ನಾಯಕತ್ವದ ಸ್ಥಾನಗಳನ್ನು ಪದಚ್ಯುತಗೊಳಿಸಿ ಮೋಹನ್ ಕೆ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರು ಭಿನ್ನಾಭಿಪ್ರಾಯಗಳ ಕೆಳಗಿನ ತರುವಾಯ ೧೯೪೦ರಲ್ಲಿ ಭಾರತ ತಪ್ಪಿಸಿಕೊಂಡು ಮೊದಲು ಬ್ರಿಟಿಷರು ಗೃಹಬಂಧನದಲ್ಲಿ ಇರಿಸಲಾಗಿತ್ತು. ಬೋಸ್ ನಾಯಕತ್ವ ಇತರ ಸ್ಥಾಪಿಸಿದ ಜನರು ಮತ್ತು ಜನಾಂಗೀಯ ಸಮುದಾಯಗಳ ಕಡೆಗೆ ಅದರ ವರ್ತನೆಗಳೂ ಜೊತೆ ಹವಾಗುಣ ವೈತಿರಿಕ ,ಭಾರತದ ಸ್ವಾತಂತ್ರದ ಕಾರಣ ಸಹಾನುಭೂತಿ, ಕೆಲವೊಮ್ಮೆ ಚಂಚಲ,ಅನಿರಿಕ್ಡಿತ ನೀಡಿತ್ತು.ಅಲ್ಲಿ ಎಪ್ರಿಲ ೧೯೪೧,ರಲ್ಲಿ ಜರ್ಮನಿಗೆ ಆಗಮಿಸಿದರು.ನಂವೆಬರ ೧೯೪೧ ರಲ್ಲಿ [೧೧][೧೨],ಜೊತೆಗೆ ಜರ್ಮನ ಹಣ, ಉಚಿತ ಭಾರತ ಸೆಂಟರ ಭೋಸ ರಾತ್ರಿಯ ಪ್ರಸಾರ ಇದು.ಬರ್ಲಿನ್ ರಲ್ಲಿ ಸ್ಥಾಪಿಸಲಾಯಿತು, ಮತ್ತು ಶೀರ್ಘವೇ ಉಚಿತ ಇಂಡಿಯಾ ರೇಡಿಯೊ ಮಾಡಲಾಯಿತು.೩೦೦೦ ಬಲವಾದ ಉಚಿತ ಭಾರತ ಲೀಜನ ಎರ್ವಿನ ರೋಮೆಲ್ ನ ಆಫ್ರಿಕಾ ಕಾರ್ಪ್ಸ ವಶಪಡಿಸಿಕೊಂಡರು ಭಾರತೀಯರು ಒಳಗೊಂಡ, ಭಾರತದ ಸಂಭಾವ ಭವಿಷ್ಯದ ಜರ್ಮನ್ ಭೂಮಿ ಆಕ್ರಮಣದ ನೆರವಾಗಲೆಂದು ರಚಿಸಲಾಯಿತು.[೧೩] ಈ ಸಮಯದಲ್ಲಿ ಬೋಸ್ ಕೂಡ ತಂದೆ ಆದರು,.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಅಂಕಗಣಿತ(Aritmetic)ವು ಸಂಖ್ಯೆಗಳ ಕೆಲವು ಪರಿಕ್ರಿಯೆ(Operations)ಗಳ ಲಕ್ಷಣಗಳನ್ನು ತಿಳಿಸುವ ಗಣಿತದ ಒಂದು ವಿಭಾಗ.ಇದು ನಮಗೆ 'ಎಷ್ಟು?', 'ಎಷ್ಟು ದೂರ?', 'ಎಷ್ಟು ಉದ್ದ?' ಮುಂತಾದ ಪ್ರಶ್ನೆಗಳಿಗೆ ಉತ್ತರವನ್ನು ನೀಡುತ್ತದೆ.ಅಂಕಗಣಿತವನ್ನು ಕೆಲವೊಮ್ಮೆ ಸಂಖ್ಯೆಗಳ ವಿಜ್ಞಾನ ಎಂದೂ ಕರೆಯುತ್ತಾರೆ. ನಾಗರಿಕತೆಯ ಬೆಳೆವಣಿಗೆಗೆ ಅನಾದಿಕಾಲದಿಂದಲೂ ಅಂಕಗಣಿತ ಅತ್ಯಾವಶ್ಯಕವಾಗಿದ್ದಿತೆಂಬುದು ¸ಸ್ಪಷ್ಟವಾಗಿಯೇ ಇದೆ. ಎಲ್ಲಾ ಜನಾಂಗಗಳ ಪೂರ್ವಿಕರು ಇದಕ್ಕಾಗಿ ಬಹಳ ಶ್ರಮಿಸಿರಬೇಕು.