The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಹಿರೋಷಿಮಾ ಮತ್ತು ನಾಗಸಾಕಿಗಳ ಪರಮಾಣು ಬಾಂಬ್ ದಾಳಿಗಳು
1945ರಲ್ಲಿ ನಡೆದ IIನೇ ಜಾಗತಿಕ ಸಮರದ ಅಂತಿಮ ಹಂತಗಳ ಅವಧಿಯಲ್ಲಿ, ಅಮೆರಿಕಾ ಸಂಯುಕ್ತ ಸಂಸ್ಥಾನವು ಜಪಾನ್ನಲ್ಲಿರುವ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ವಿರುದ್ಧ ಪರಮಾಣು ಬಾಂಬ್ ದಾಳಿಗಳನ್ನು ನಡೆಸಿತು. ತೀವ್ರ ಯುದ್ಧತಂತ್ರವನ್ನೊಳಗೊಂಡಿದ್ದ ಜಪಾನಿಯರ 67 ನಗರಗಳ ಮೇಲಿನ ಬೆಂಕಿ-ಬಾಂಬ್ ದಾಳಿಯ ಆರು ತಿಂಗಳುಗಳ ನಂತರ, ಪಾಟ್ಸ್ಡ್ಯಾಂ ಘೋಷಣೆಯಿಂದ ನೀಡಲ್ಪಟ್ಟ ಒಂದು ಅಂತಿಮ ಷರತ್ತನ್ನು ಜಪಾನಿಯರ ಸರ್ಕಾರ ಉಪೇಕ್ಷಿಸಿತು. ಅಧ್ಯಕ್ಷ ಹ್ಯಾರಿ S. ಟ್ರೂಮನ್ನಿಂದ ಬಂದ ಕಾರ್ಯಕಾರಿ ಆದೇಶದ ಅನುಸಾರ, 1945ರ ಆಗಸ್ಟ್ 6ರ ಸೋಮವಾರದಂದು "ಲಿಟ್ಲ್ ಬಾಯ್" ಎಂಬ ಹೆಸರಿನ ಪರಮಾಣು ಶಸ್ತ್ರಾಸ್ತ್ರವನ್ನು ಹಿರೋಷಿಮಾ ನಗರದ ಮೇಲೆ U.S. ಬೀಳಿಸಿತು; ಇದಾದ ನಂತರ ಆಗಸ್ಟ್ 9ರಂದು ನಾಗಸಾಕಿಯ ಮೇಲೆ "ಫ್ಯಾಟ್ ಮ್ಯಾನ್"ನ ಆಸ್ಫೋಟನವನ್ನು ಅದು ನಡೆಸಿತು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಸ್ತ ಪದವಾದಾಗ ಬೇರೊಂದು ಪದದ (ಅನ್ಯ ಪದದ) ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಎಂಬ ಹೆಸರು. ಹಣೆಗಣ್ಣ , ಮುಕ್ಕಣ್ಣ , ನಿಡುಮೂಗ - ಈ ಪದಗಳನ್ನು ಬಿಡಿಸಿ ಬರೆದರೆ , ಹಣೆಯಲ್ಲಿ + ಕಣ್ಣು ಉಳ್ಳವನು ಯಾರೋ ಅವನು - ಹಣೆಗಣ್ಣ (ಶಿವ) ಮೂರು + ಕಣ್ಣು ಉಳ್ಳವನು ಯಾರೋ ಅವನು - ಮುಕ್ಕಣ್ಣ (ಶಿವ)ನಿಡಿದು + ಮೂಗನ್ನು ಉಳ್ಳವನು ಯಾರೋ ಅವನು - ನಿಡುಮೂಗಹಣೆಯಲ್ಲಿ + ಕಣ್ಣು ಉಳ್ಳವ - ಈ ಎರಡೂ ಪದಗಳ ಅರ್ಥ ಇಲ್ಲಿ ಮುಖ್ಯವಲ್ಲ . ಈ ಎರಡೂ ಪದಗಳ ಅರ್ಥದಿಂದ ಹೊಳೆಯುವ ಅನ್ಯ ಪದ ಶಿವ ಮುಖ್ಯ.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
Caste Balija ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ದಿಕ್ಸೂಚಿ (compass)ದಿಕ್ಕನ್ನು ಸೂಚಿಸುವ ಉಪಕರಣ.ಪ್ರಾಚೀನ ಕಾಲದಿಂದಲೂ ನಾವಿಕರ ಸಂಗಾತಿಯಾದ ಸರಳ ಉಪಕರಣ.ಭಾರತದಲ್ಲಿ 'ಮತ್ಸ್ಯಯಂತ್ರ'ವೆಂದು ಉಪಯೋಗದಲ್ಲಿತ್ತು.ಹಿಂದಿನ ಕಾಲದಲ್ಲಿ ನೀರು ಅಥವಾ ಎಣ್ಣೆಯಲ್ಲಿ ಲೋಹದ ಮೀನನ್ನು ತೇಲಿ ಬಿಟ್ಟು ದಿಕ್ಕನ್ನು ಗುರುತಿಸುತ್ತಿದ್ದರು.ಹಲವಾರು ಬಾರಿ ರೂಪಾಂತರ ಹಾಗೂ ಅಭಿವೃದ್ಧಿಹೊಂದಿ ಈಗಿನ ರೂಪಕ್ಕೆ ಬಂದಿರುತ್ತದೆ.ಇದನ್ನು ಉತ್ತರಮುಖಿ ಎಂದೂ ಕರೆಯುತ್ತಾರೆ.