The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
Caste Balija ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಮತಾ ಬ್ಯಾನರ್ಜಿ (ಬಂಗಾಳಿ:মমতা বন্দ্যোপাধ্যায়, [mɔːmoːt̪ʰaː bɛːnaːrjiː]; ೫ ಜನವರಿ ೧೯೫೫ರಂದು ಜನನ) ಯವರು ತೃಣ ಮೂಲ ಕಾಂಗ್ರೆಸ್ನ ಮುಖಂಡರಾಗಿದ್ದು ರಾಜ್ಯದ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಪಕ್ಷದ ಸಂಸ್ಥಾಪಕರೂ, ಅಧ್ಯಕ್ಷರೂ ಹಾಗೂ ಪ್ರಜಾಸತ್ತಾತ್ಮಕ ಭಾರತದ ಮಾನ್ಯ ಕೇಂದ್ರ ರೈಲ್ವೆ ಸಚಿವರೂ ಆಗಿದ್ದಾರೆ. ಮಮತಾ ಬ್ಯಾನರ್ಜಿಯವರನ್ನು ಪಶ್ಚಿಮ ಬಂಗಾಳದಲ್ಲಿ ಅವರ ಅನುಯಾಯಿಗಳು "ದೀದಿ" ಅಂದರೆ ಅಕ್ಕ ಎಂದು ಪ್ರೀತಿಯಿಂದ ಕರೆಯುತ್ತಾರೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಮಣ್ಣು ಒಂದು ಸ್ವಾಭಾವಿಕ ವಸ್ತು. ಇದರಲ್ಲಿ ಖನಿಜಾಂಶವುಳ್ಳ ವಿವಿಧ ಗಾತ್ರದ ಅನೇಕ ಪದರುಗಳಿವೆ(ಸಾಯಿಲ್ ಹಾರಿಜಾನ್ಸ್), ಇದು ತನ್ನ ಮೂಲ ವಸ್ತುವಿಗಿಂತ ಮೇಲ್ಮೈಯಲ್ಲಿ ಭೌತಿಕವಾಗಿ, ರಾಸಾಯನಿಕವಾಗಿ, ಮತ್ತು ಖನಿಜಾಂಶಗಳ ಇರುವಿಕೆಯಲ್ಲಿ ವ್ಯತ್ಯಾಸ ತೋರುತ್ತದೆ. ಇದು ರಾಸಾಯನಿಕವಾಗಿ ಹಾಗು ಪರಿಸರದ ಕ್ರಿಯೆಗಳಿಂದಾಗಿ ಮುರಿದ ಬಂಡೆಗಳಿಂದ ಅಥವಾ ಕೊಚ್ಚಿಹೋದ ಅನೇಕ ಮಾರ್ಪಾಡುಗಳನ್ನೊಳಗೊಂಡ, ಹವಾ ಪರಿಣಾಮಗಳಿಂದ ,ಮತ್ತು ಭೂಸವೆತಗಳಿಂದ ರೂಪುಗೊಂಡಿದೆ .
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಏಷ್ಯನ್ ಕ್ರೀಡಾಕೂಟ', ಹಾಗೂ ಏಷ್ಯಾಡ್, ಎಂದೂ ಕರೆಯಲಾಗುವ ಬಹು-ಕ್ರೀಡೆಗಳ ಕ್ರೀಡಾಕೂಟವು ನಾಲ್ಕು ವರ್ಷಕ್ಕೊಮ್ಮೆ ಏಷ್ಯಾದ ಎಲ್ಲಾ ದೇಶಗಳ ಕ್ರೀಡಾಪಟುಗಳ ನಡುವೆ ಆಡಲಾಗುತ್ತದೆ. ಏಷ್ಯನ್ ಕ್ರೀಡಾಕೂಟವು ಭಾರತದ ನವದೆಹಲಿಯ ಮೊದಲ ಕ್ರೀಡಕೂಟದಿಂದ ೧೯೭೮ರ ಕ್ರೀಡಕೂಟದ ತನಕ ಏಷ್ಯನ್ ಗೇಮ್ಸ್ ಫೆಡೆರೆಷನ್ನಿಂದ ನಿಯಂತ್ರಸಲ್ಪಟ್ಟಿತ್ತು. ೧೯೮೨ರ ಕ್ರೀಡಕೂಟದಿಂದ ಒಲಂಪಿಕ್ ಕೌನ್ಸಿಲ್ ಆಫ್ ಏಷ್ಯಾ ದಿಂದ ಆಯೋಜಿಸಲ್ಪಡಲಾಗುತ್ತಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವು ಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.