The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಾಗರ ಅಥವಾ ಇನ್ನಿತರ ಜಲರಾಶಿಯಲ್ಲಿ ಅಗಾಧ ಪ್ರಮಾಣದ ಚಲನೆಯುಂಟಾದಾಗ ಜನಿಸುವ ಸಾಗರದ ತರಂಗಗಳ ಸರಣಿಗೆ ಸುನಾಮಿ (ತ್ಸುನಾಮಿ) ಎಂದು ಕರೆಯಲಾಗುತ್ತದೆ. ಭೂಕಂಪ, ಜ್ವಾಲಾಮುಖಿ, ಬಾಹ್ಯಾಕಾಶದ ಬೃಹತ್ ಗಾತ್ರದ ವಸ್ತುವಿನ ಅಪ್ಪಳಿಕೆ ಇತ್ಯಾದಿ ಸುನಾಮಿ ಅಲೆಗಳನ್ನು ಹುಟ್ಟುಹಾಕುವ ಸಾಮರ್ಥ್ಯ ಪಡೆದಿವೆ. ಸುನಾಮಿಯು, ಗಮನಕ್ಕೆ ಬಾರದಷ್ಟು ಸಣ್ಣ ಪ್ರಮಾಣದಿಂದ ಹಿಡಿದು ಅತ್ಯಂತ ಹಾನಿಕರವಾದ ನೈಸರ್ಗಿಕ ವಿಕೋಪದವರೆಗೂ ತನ್ನ ಪ್ರಭಾವ ಬೀರಬಲ್ಲುದಾಗಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಮಳೆಬಿಲ್ಲು (ಅಥವಾ ಕಾಮನಬಿಲ್ಲು) ಎಂಬುದೊಂದು ದೃಗ್ವೈಜ್ಞಾನಿಕ ಮತ್ತು ಪವನಶಾಸ್ತ್ರದ ವಿದ್ಯಮಾನವಾಗಿದ್ದು, ಭೂಮಿಯ ವಾತಾವರಣದಲ್ಲಿನ ಸಣ್ಣಹನಿಗಳ ಮೇಲೆ ಸೂರ್ಯನು ಬೆಳಗಿದಾಗ ಆಕಾಶದಲ್ಲಿ ಬೆಳಕಿನ ಬಣ್ಣಗಳ ಪಟ್ಟಿಯೊಂದು ಕಾಣಿಸುವಂಥ ಪರಿಣಾಮವನ್ನು ಇದು ಉಂಟು ಮಾಡುತ್ತದೆ. ಒಂದು ಬಹುವರ್ಣದ ಬಿಲ್ಲಿನ ಸ್ವರೂಪವನ್ನು ತಳೆಯುವ ಇದು ತನ್ನ ಹೊರಗಿನ ಭಾಗದಲ್ಲಿ ಕೆಂಪು ಬಣ್ಣವನ್ನೂ ಒಳಗಿನ ವಿಭಾಗದಲ್ಲಿ ನೇರಿಳೆ ಬಣ್ಣವನ್ನೂ ಹೊಂದಿರುತ್ತದೆ. ಒಂದು ಅಖಂಡವಾಗಿರುವ ಬಣ್ಣಗಳ ರೋಹಿತವನ್ನು (ಬಣ್ಣಗಳ ಪಟ್ಟಿಯನ್ನು) ಒಂದು ಮಳೆಬಿಲ್ಲು ವ್ಯಾಪಿಸಿಕೊಳ್ಳುತ್ತದೆ; ಇದರ ವಿಶಿಷ್ಟ-ವಿಸ್ಪಷ್ಟ ಪಟ್ಟಿಗಳು ಮಾನವನ ವರ್ಣ ಕಲ್ಪನಾಚಿತ್ರದ ಒಂದು ಕಲಾಕೃತಿಯಂತೆ ಭಾಸವಾಗುತ್ತವೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಕೈಗಾ ಎಂಬುದು ಭಾರತದ ಕರ್ನಾಟಕ ರಾಜ್ಯದಲ್ಲಿನ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕೈಗಾ ಎಂಬಲ್ಲಿ ನೆಲೆಗೊಂಡಿರುವ ಒಂದು ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಈ ಸ್ಥಾವರವು 2000ನೇ ಇಸವಿಯ ಮಾರ್ಚ್ನಿಂದಲೂ ಕಾರ್ಯಾಚರಣೆಯನ್ನು ನಡೆಸುತ್ತಿದೆ ಮತ್ತು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದೆ. ಇದು ನಾಲ್ಕು ಘಟಕಗಳನ್ನು ಹೊಂದಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.