The most-visited ಕನ್ನಡ Wikipedia articles, updated daily. Learn more...
೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಹೆಬ್ರೂ ಬೈಬಲ್ನಲ್ಲಿನ ಪದಕ್ಕೆ ಮತ್ತು ವಿವಿಧ ಅರ್ಥಕ್ಕೆ ನೋಡಿ ತ್ಸಾರಾಥ್. ಬೇರೆ ರೀತಿಯ ಬಳಕೆಗೆ ನೋಡಿ ಕುಷ್ಠ (ಅಸಂದಿಗ್ಧಕರಣ). ಕುಷ್ಠ ಅಥವಾ ಹ್ಯಾನ್ಸೆನ್ ಖಾಯಿಲೆ (HD ),ಎಂದು ವೈದ್ಯ ಗೆರ್ಹಾರ್ಡ್ ಅರ್ಮೂಯೆರ್ ಹ್ಯಾನ್ಸೆನ್ ನಂತರ ಕರೆಯಲ್ಪಟ್ಟಿದೆ, ಇದು ದೀರ್ಘಕಾಲ ಖಾಯಿಲೆಯಾಗಿದ್ದು ಬ್ಯಾಕ್ಟಿರೀಯಾಗಳಾದ ಮೈಕೋಬ್ಯಾಕ್ಟೀರಿಯಂ ಲೆಪ್ರೆಯಿ ಮತ್ತು ಮೈಕೋಬ್ಯಾಕ್ಟೀರಿಯಂ ಲೆಪ್ರೋಮತೊಸಿಸ್ ದಿಂದ ಬರುವಂತಹುದು .
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಆಂಧ್ರಪ್ರದೇಶದಿಂದ ರಾಜ್ಯಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು .
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
Caste Balija ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವು ಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
(ಸುಭಾಷ್ ಚಂದ್ರ ಬೋಸ್(ವಿಸೃತ ಲೇಖನಕ್ಕೆ ನೋಡಿ:)(ಭಾಷೆ ತುಂಬಾ ತಪ್ಪುಗಳಿಂದ ಕೂಡಿದ್ದು, ಅರ್ಥವಾಗದಂತಿದೆ, ಇದನ್ನು ರದ್ದು ಮಾಡಿ '[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಬೋಸ್, ಸುಭಾಷ್ಚಂದ್ರ]' ಲೇಖನ ಹಾಕುವುದು ಸೂಕ್ತ)ಸುಭಾಷ್ ಚಂದ್ರ ಬೋಸ್ ೧೮೯೭ ಜನವರಿ ೨೩ರಲ್ಲಿ ಹುಟ್ಟಿದ್ದರು ೧೮ ಆಗಸ್ಟ್ ೧೯೪೪೫ ೪೮ ವರ್ಷ ಇವರ ಪ್ರತಿಭಟನೆಯ ದೇಶಭಕ್ತಿ ಅವರನ್ನು ಭಾರತದ ನಾಯಕ ಮಾಡಿದ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿ, ಆದರೆ ಅವರ ಪ್ರಯತ್ನ ಮಹಾಯುದ್ದದಲ್ಲಿ ನಾಜಿ ಜರ್ಮನಿ ಮತ್ತು ಜಪಾನ್ ತೊಂದರೆಗೊಳಗಾಗಿರುವ ಆಸ್ತಿಯನ್ನು ಬಿಟ್ಟು ಹೋಗಿವೆ ಸಹಾಯದಿಂದ ಬ್ರಿಟಿಷ್ ಆಡಳಿತದ ಭಾರತ ವಿಮುಕ್ತಿಗೊಳಿಸುವ ಗೌರವ ನೇತಾಜಿ ಹಿಂದೂಸ್ತಾನಿ ಭಾಷೆ ಗೌರವಾನ್ವಿತ ನಾಯಕರಾದ ಮೊದಲ ವೇಳೆಗೆ ಜರ್ಮನಿಯ ಬೋಸ್ ಅನ್ವಯಿಸಲಾಗಿದೆ ಇಂಡಿಷ್ ಲೀಜನ್ ಮತ್ತು ೧೯೪೨ ರ ಆರಂಭದಲ್ಲಿ ಬರ್ಲಿನ್ ಭಾರತ ವಿಶೇಷ ಬ್ಯೂರೋ ಜರ್ಮನ್ ಮತ್ತು ಭಾರತೀಯ ಅಧೀಕಾರಿಗಳು ಭಾರತೀಯ ಸೈನಿಕರು,ಈಗ ಭಾರತದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಹಿಂದಿನ ಬೋಸ್ ೧೯೩೮ ಮತ್ತು ೧೯೩೯ ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಆಗಲು ಏರುತ್ತಿರುವ,೧೯೨೦ ಮತ್ತು ೧೯೩೦ ರಲ್ಲಿ ಭಾರತೀಯ ರಾಷ್ರೀಯ ಕಾಂಗ್ರೆಸ್ ಕಿರಿಯ ತೀವ್ರಗಾಮಿ ಆದಾಗ್ಯೂ ಅವರು ೧೯೩೯ ರಲ್ಲಿ ಕಾಂಗ್ರಸ್ ನಾಯಕತ್ವದ ಸ್ಥಾನಗಳನ್ನು ಪದಚ್ಯುತಗೊಳಿಸಿ ಮೋಹನ್ ಕೆ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರು ಭಿನ್ನಾಭಿಪ್ರಾಯಗಳ ಕೆಳಗಿನ ತರುವಾಯ ೧೯೪೦ರಲ್ಲಿ ಭಾರತ ತಪ್ಪಿಸಿಕೊಂಡು ಮೊದಲು ಬ್ರಿಟಿಷರು ಗೃಹಬಂಧನದಲ್ಲಿ ಇರಿಸಲಾಗಿತ್ತು. ಬೋಸ್ ನಾಯಕತ್ವ ಇತರ ಸ್ಥಾಪಿಸಿದ ಜನರು ಮತ್ತು ಜನಾಂಗೀಯ ಸಮುದಾಯಗಳ ಕಡೆಗೆ ಅದರ ವರ್ತನೆಗಳೂ ಜೊತೆ ಹವಾಗುಣ ವೈತಿರಿಕ ,ಭಾರತದ ಸ್ವಾತಂತ್ರದ ಕಾರಣ ಸಹಾನುಭೂತಿ, ಕೆಲವೊಮ್ಮೆ ಚಂಚಲ,ಅನಿರಿಕ್ಡಿತ ನೀಡಿತ್ತು.ಅಲ್ಲಿ ಎಪ್ರಿಲ ೧೯೪೧,ರಲ್ಲಿ ಜರ್ಮನಿಗೆ ಆಗಮಿಸಿದರು.ನಂವೆಬರ ೧೯೪೧ ರಲ್ಲಿ [೧೧][೧೨],ಜೊತೆಗೆ ಜರ್ಮನ ಹಣ, ಉಚಿತ ಭಾರತ ಸೆಂಟರ ಭೋಸ ರಾತ್ರಿಯ ಪ್ರಸಾರ ಇದು.ಬರ್ಲಿನ್ ರಲ್ಲಿ ಸ್ಥಾಪಿಸಲಾಯಿತು, ಮತ್ತು ಶೀರ್ಘವೇ ಉಚಿತ ಇಂಡಿಯಾ ರೇಡಿಯೊ ಮಾಡಲಾಯಿತು.೩೦೦೦ ಬಲವಾದ ಉಚಿತ ಭಾರತ ಲೀಜನ ಎರ್ವಿನ ರೋಮೆಲ್ ನ ಆಫ್ರಿಕಾ ಕಾರ್ಪ್ಸ ವಶಪಡಿಸಿಕೊಂಡರು ಭಾರತೀಯರು ಒಳಗೊಂಡ, ಭಾರತದ ಸಂಭಾವ ಭವಿಷ್ಯದ ಜರ್ಮನ್ ಭೂಮಿ ಆಕ್ರಮಣದ ನೆರವಾಗಲೆಂದು ರಚಿಸಲಾಯಿತು.[೧೩] ಈ ಸಮಯದಲ್ಲಿ ಬೋಸ್ ಕೂಡ ತಂದೆ ಆದರು,.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.