The most-visited ಕನ್ನಡ Wikipedia articles, updated daily. Learn more...
alt=|thumb|396x396px ' ಕುಮಾರರಾಮ: 13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ವಾಲ್ಮೀಕಿ/ಬೇಡ [೧] ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು.ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಲಿಷ್ಠ ಹಿಂದೂ ಸಾಮ್ರಾಜ್ಯದ ಕನಸುಕಂಡವನು ಈ ಕುಮಾರ ರಾಮ.13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ಧಿ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ವಿಕಿ ಎನ್ನುವುದು ತಂತ್ರಜ್ಞಾನವಾಗಿದ್ದು ಅದು ಬಳಕೆದಾರರಿಗೆ ಲಭ್ಯವಿರುವ ಮಾಹಿತಿಯನ್ನು ಸೇರಿಸಲು ಅನುವು ಮಾಡಿಕೊಡುತ್ತದೆ, ಜೊತೆಗೆ ಬಳಕೆದಾರರಿಗೆ ಬದಲಾವಣೆಗಳನ್ನು ಅಥವಾ ತಿದ್ದುಪಡಿಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಸಾಮಾನ್ಯವಾಗಿ ಅಂತರ್ಜಾಲದಲ್ಲಿ ಒದಗಿಸುವ ಪುಟಗಳು (ಜಾಲ ಪುಟಗಳು) ಮಾಹಿತಿಯನ್ನು ಪುಟದ ಓದುಗರಿಂದ ಬದಲಾಯಿಸಲಾಗುವುದಿಲ್ಲ. ವಿಕಿ ತಂತ್ರಜ್ಞಾನವನ್ನು ಆಧರಿಸಿದ ಪುಟಗಳಲ್ಲಿನ ಮಾಹಿತಿಯನ್ನು ಓದುಗರಿಂದ ಬದಲಾಯಿಸಬಹುದು.
ಜಿಮ್ಮಿ ಡೊನಾಲ್ "ಜಿಂಬೊ" ವೇಲ್ಸ್ - (ಜನನ:೧೯೬೬) - ಅಮೆರಿಕಾದ ಅಂತರಜಾಲ ಉದ್ಯಮಿ ಹಾಗೂ ವಿಕಿಪೀಡಿಯದ ಸಹ-ಸ್ಥಾಪಕ ಮತ್ತು ಪ್ರವತ೯ಕ.ವೇಲ್ಸ್ ಅಮೆರಿಕ ಸಂಯುಕ್ತ ಸಂಸ್ಥಾನದ ಅಲಬಾಮಾ ರಾಜ್ಯದ ಹಂಟ್ಸ್ವಿಲ್ಲೆ ಎಂಬಲ್ಲಿ ಜನಿಸಿದರು. He attended The Randolph School and a university-preparatory school, and then earned bachelor's and master's degrees in finance. While in graduate school, he taught at two universities.
ಅಬ್ರಹಮ್ ಬೆಂಜಮಿನ್ ಡಿ ವಿಲಿಯರ್ಸ್ (ಜನನ: ಫೆಬ್ರವರಿ ೧೭, ೧೯೮೪ ಪ್ರೆಟೋರಿಯಾ, ದಕ್ಷಿಣ ಆಫ್ರಿಕಾದಲ್ಲಿ) ದಕ್ಷಿಣ ಆಫ್ರಿಕಾದ ಆಟಗಾರ. ಎಬಿ ಡೀ ವಿಲಿಯರ್ಸ್ ಏಕದಿನ ಹಾಗೂ ಟ್ವೆಂಟಿ೨೦ ಪಂದ್ಯಗಳಿಗೆ ದಕ್ಷಿಣ ಆಫ್ರಿಕ ಕ್ರಿಕೆಟ್ ತಂಡದ ನಾಯಕನಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಮೂರು ಆವೃತ್ತಿಗಳಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ಪರವಾಗಿ ಆಡಿದ್ದರು ಆದರೆ ನಂತರ ನಡೆದ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು.
ಮುದ್ರಣಕಲೆ ಯು ಅಚ್ಚುಗಳನ್ನು ಜೊಡಿಸುವ, ಅಚ್ಚುಗಳನ್ನು ವಿನ್ಯಾಸಿಸುವ, ಮತ್ತು ಅಚ್ಚುಗಳ ಗ್ಲೈಫ್ಗಳನ್ನು ತಿದ್ದುವ ಒಂದು ಕಲೆ ಮತ್ತು ತಂತ್ರ. ಅಚ್ಚುಗಳ ಗ್ಲೈಫ್ಗಳನ್ನು ವಿವಿಧ ರೇಖಾಚಿತ್ರ ತಂತ್ರಗಳಿಂದ ತಯಾರಿಸಿ ತಿದ್ದುಪಡಿಸಲಾಗಿದೆ. ಅಚ್ಚುಗಳ ಜೊಡಣೆಯು ಅಚ್ಚಿನಕ್ಷರದ ನಮೂನೆಗಳ ಆಯ್ಕೆ, ಪಾಯಿಂಟ್ನ ಗಾತ್ರ, ಪಂಕ್ತಿಯ ಉದ್ದ, ಲೀಡಿಂಗ್ (ಪಂಕ್ತಿಯನ್ನು ಅಂತರಿಸುವುದು), ಅಕ್ಷರಗಳ ಗುಂಪುಗಳ ನಡುವೆ ಅಂತರಗಳ ಹೊಂದಾಣಿಕೆ ( ಟ್ರ್ಯಾಕಿಂಗ್ ), ಮತ್ತು ಅಕ್ಷರಗಳ ಜೋಡಿಗಳ ನಡುವೆ ಅಂತರಗಳ ಹೊಂದಾಣಿಕೆ (ಕೆರ್ನಿಂಗ್) ಗಳನ್ನು ಒಳಗೊಂಡಿದೆ.ಮುದ್ರಣಕಲೆಯು ಅಚ್ಚುಮೊಳೆಗಳನ್ನು ತಯಾರಿಸುವವರು, ಅಚ್ಚುಮೊಳೆಗಳನ್ನು ಜೊಡಿಸುವವರು, ಮುದ್ರಣಕಲೆಗಾರರು, ಗ್ರಾಫಿಕ್ ವಿನ್ಯಾಸಕರು, ಕಲಾ ನಿರ್ದೇಶಕರು, ಹಾಸ್ಯ ಪುಸ್ತಕಗಳ ಕಲೆಗಾರರು, ಗೀಚುಬರಹ ಕಲೆಗಾರರು, ಮತ್ತು ಗುಮಾಸ್ತಕೆಲಸಗಾರರಿಂದ ಕಾರ್ಯರೂಪದಲ್ಲಿ ತರಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ವಿಕಿಮೀಡಿಯ ಪ್ರತಿಷ್ಠಾನ, ( ಡಬ್ಲ್ಯುಎಂಎಫ್, ವಿಕಿಮೀಡಿಯ ಫೌಂಡೇಶನ್, ಅಥವಾ ಸರಳವಾಗಿ ವಿಕಿಮೀಡಿಯ) ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಅಮೆರಿಕದ ಲಾಭರಹಿತ ಮತ್ತು ದತ್ತಿ ಸಂಸ್ಥೆಯಾಗಿದೆ . ಇದು ಹೆಚ್ಚಾಗಿ ವಿಕಿಮೀಡಿಯ ಚಳವಳಿಯಲ್ಲಿ ಭಾಗವಹಿಸಲು ಹೆಸರುವಾಸಿಯಾಗಿದೆ. ಇದು ಅನೇಕ ಚಳುವಳಿ ಯೋಜನೆಗಳ ಅಂತರ್ಜಾಲ ಸ್ವತ್ತಿನ ಹೆಸರುಗಳನ್ನು ಹೊಂದಿದೆ ಮತ್ತು ವಿಕಿಪೀಡಿಯದಂತಹ ಸೈಟ್ಗಳನ್ನು ಹೋಸ್ಟ್ ಮಾಡುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕರ್ಮಧಾರಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (ii) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.