The most-visited ಕನ್ನಡ Wikipedia articles, updated daily. Learn more...
ಅಕ್ಷಮ್ ಕುಮಾರ್ (ಹಿಂದಿ:अक्षय कुमार; 1967 ರ ಸೆಪ್ಟೆಂಬರ್ 9 ರಂದು ಜನಿಸಿದ ರಾಜೀವ್ ಹರಿ ಓಮ್ ಭಾಟಿಯಾ ) ಇವರು ಭಾರತೀಯ ಚಲನಚಿತ್ರ ನಟರಾಗಿದ್ದಾರೆ. ಮತ್ತು ಇವರು 100 ಕ್ಕೂ ಹೆಚ್ಚು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 1990 ರ ದಶಕದಲ್ಲಿ, ಅಕ್ಷಯ್ ಕುಮಾರ್ ಅವರು ಮುಖ್ಯವಾಗಿ ಖಿಲಾಡಿ (1992), ಮೊಹ್ರಾ (1994), ಸಬಸೆ ಬಡಾ ಖಿಲಾಡಿ (1995) ಮತ್ತು ಖಿಲಾಡಿಯೋಂಕಾ ಖಿಲಾಡಿ (1996) ನಂತಹ ಚಿತ್ರಗಳಲ್ಲಿ ನಟಿಸುವ ಮೂಲಕ ಸಾಮಾನ್ಯವಾಗಿ "ಖಿಲಾಡಿ ಸರಣಿಗಳು" ಎಂದು ಕರೆಯಲಾಗುವ ಚಲನಚಿತ್ರಗಳಲ್ಲಿನ ತಮ್ಮ ನಟನೆಗೆ ಹೆಸರುವಾಸಿಯಾಗಿದ್ದರು.
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.ಕಾರ್ಮಿಕರ ಮೆರೆವಣಿಗೆ, ಪ್ರದರ್ಶನ, ಸಭೆ-ಇವು ಆ ದಿನದ ವಿಶೇಷಗಳು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ವಿಷುವತ್ ಸಂಕ್ರಾಂತಿ ಯು ಒಂದು ವರ್ಷದಲ್ಲಿ ಎರಡು ಬಾರಿ ಸಂಭವಿಸುತ್ತದೆ. ಯಾವಾಗ ಭೂಮಿಯ ಅಕ್ಷಾಂಶವು ಸೂರ್ಯನಿಂದ ದೂರ ಅಥವಾ ಸೂರ್ಯನ ಕಡೆಗೆ ವಾಲದಿರುತ್ತದೆಯೋ, ಮತ್ತು ಸೂರ್ಯನ ಕೇಂದ್ರವು ಭೂಮಿಯ ಸಮಭಾಜಕ ವೃತ್ತವೂ ಒಂದೇ ಸಮತಲದಲ್ಲಿರುತ್ತದೆಯೋ ಆಗ ಉಂಟಾಗುತ್ತದೆ. ವಿಷುವತ್ ಸಂಕ್ರಾಂತಿ ಎಂಬ ಶಬ್ದವನ್ನು ಅಂತಹ ಮಾರ್ಗವು ಸಂಭವಿಸುವ ದಿನಾಂಕವನ್ನು ಸೂಚಿಸುವ ಒಂದು ವಿಶಾಲವಾದ ಅರ್ಥದಲ್ಲೂ ಕೂಡ ಬಳಸಬಹುದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಬಾಹ್ಯ ನರ ವ್ಯವಸ್ಥೆಯ ನರಗಳಿಗೆ ಹಾನಿಯಾದರೆ, ಇದಕ್ಕೆ 'ಬಾಹ್ಯ ನರ ರೋಗ ' ಎನ್ನಲಾಗುವುದು. ಮಾನವ ಶರೀರದಲ್ಲಿನ ನರದ ರೋಗಗಳು ಅಥವಾ ಇಡೀ ದೇಹದಲ್ಲಿ ಕಾಯಿಲೆಯ ಅಡ್ಡ-ಪರಿಣಾಮಗಳಿಂದಾಗಿ ಇದು ಸಂಭವಿಸಬಹುದು. 'ಬಹು-ನರರೋಗ', 'ಏಕ-ನರರೋಗ', 'ಮಾನೊನ್ಯೂರಿಟಿಸ್ ಮಲ್ಟಿಪ್ಲೆಕ್ಸ್'(ಒಂದಕ್ಕಿಂತ ಹೆಚ್ಚು ಪ್ರತ್ಯೇಕ ನರದ ಗುಂಪುಗಳಿಗೆ ಹಾನಿ) ಹಾಗೂ 'ಸ್ವನಿಯಂತ್ರಿತ ನರರೋಗ' ಎಂಬ ಬಾಹ್ಯ ನರರೋಗದ ನಾಲ್ಕು ಪ್ರಧಾನ ನಮೂನೆಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬತ್ತಳಿಕೆಯು ಬಾಣಗಳು, ಕ್ವಾರಲ್ಗಳು, ಅಥವಾ ಈಟಿಗಳನ್ನು ಇಡಲು ಒಂದು ಧಾರಕ. ಅದನ್ನು, ಬಿಲ್ಲುಗಾರಿಕೆಯ ಬಗೆ ಮತ್ತು ಬಿಲ್ಲುಗಾರನ ವೈಯಕ್ತಿಕ ಆದ್ಯತೆಯನ್ನು ಆಧರಿಸಿ, ಬಿಲ್ಲುಗಾರನ ಶರೀರ, ಬಿಲ್ಲು, ಅಥವಾ ನೆಲದ ಮೇಲೆ ಒಯ್ಯಬಹುದು. ಬತ್ತಳಿಕೆಗಳನ್ನು ಸಾಂಪ್ರದಾಯಿಕವಾಗಿ ಚಕ್ಕಳ, ಕಟ್ಟಿಗೆ, ತುಪ್ಪಳ, ಮತ್ತು ಇತರ ನೈಸರ್ಗಿಕ ವಸ್ತುಗಳಿಂದ ತಯಾರಿಸಲಾಗುತ್ತಿತ್ತು, ಆದರೆ ಈಗ ಹಲವುವೇಳೆ ಲೋಹ ಅಥವಾ ಪ್ಲಾಸ್ಟಿಕ್ನಿಂದ ತಯಾರಿಸಲ್ಪಡುತ್ತವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಇತರರ ಅಧೀನದಲ್ಲಿ, ಎಂದರೆ ತಮ್ಮ ನೇಮಕದಾರರ, ಉದ್ಯೋಗದಾತರ, ಧಣಿಗಳ ಅಥವಾ ಯಜಮಾನರ ಕೈಕೆಳಗೆ, ದುಡಿಯುವ ಜನರ ಕೆಲಸಕ್ಕೆ ಸಂಬಧಿಸಿದಂತೆ ರಚಿತವಾದ ಎಲ್ಲ ಕಾನೂನುಗಳು (ಲೇಬರ್ ಲಾಸ್). ಇವನ್ನು ಕೈಗಾರಿಕಾ ಕಾನೂನುಗಳು ಅಥವಾ ಕೈಗಾರಿಕಾ ನ್ಯಾಯ ಎಂದೂ ಕರೆಯುವುದುಂಟು. ಆದರೆ ಕೈಗಾರಿಕೋದ್ಯಮಗಳಲ್ಲಿ ದುಡಿಯುವವರು ಮಾತ್ರವೇ ಈಕಾನೂನುಗಳ ಪರಿಮಿತಿಯೊಳಕ್ಕೆ ಬರುವುದಿಲ್ಲವಾದ್ದರಿಂದ ಇವನ್ನು ಕಾರ್ಮಿಕ ಕಾನೂನುಗಳು ಎಂದು ಕರೆಯುವುದೇ ಸೂಕ್ತ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.