The most-visited ಕನ್ನಡ Wikipedia articles, updated daily. Learn more...
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇಸ್ರೇಲ್ (יִשְׂרָאֵל, ಯಿಸ್ರೆಇಲ್), ಅಧಿಕೃತವಾಗಿ ಇಸ್ರೇಲ್ ರಾಜ್ಯ (מְדִינַת יִשְׂרָאֵל, ಮೆದೀನತ್ ಯಿಸ್ರೇಎಲ್; دَوْلَةْ إِسْرَائِيل, ದವ್ಲತ್ ಇಸ್ರೇಇಲ್), ಮೆಡಿಟೆರೇನಿಯ ಸಮುದ್ರದ ಆಗ್ನೇಯಕ್ಕೆ ಇರುವ ಪಶ್ಚಿಮ ಏಷ್ಯಾದ ಒಂದು ದೇಶ. ಉತ್ತರಕ್ಕೆ ಲೆಬನನ್, ಪೂರ್ವಕ್ಕೆ ಸಿರಿಯ ಮತ್ತು ಜಾರ್ಡನ್, ನೈರುತ್ಯಕ್ಕೆ ಸಂಯುಕ್ತ ಅರಬ್ ಗಣರಾಜ್ಯ ಈಜಿಪ್ಟ್ ದೇಶಗಳೊಂದಿಗೆ ಗಡಿಯನ್ನು ಇಸ್ರೇಲ್ ಹೊಂದಿದೆ. ಪ್ಯಾಲೆಸ್ತೈನ್ ರಾಷ್ಟ್ರೀಯ ಪ್ರಾಧಿಕಾರ ಆಡಳಿತ ನಡೆಸುವ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿ ಕೂಡ ಪಕ್ಕದಲ್ಲಿ ಇವೆ.
ಪರಾವಲಂಬಿ ಜೀವಿಶಾಸ್ತ್ರ(ಪ್ಯಾರಸೈಟಾಲಜಿ)
ಪರಾವಲಂಬಿ ಜೀವಿಶಾಸ್ತ್ರ(ಪ್ಯಾರಸೈಟಾಲಜಿ) ಎಂದರೆ ಪರಾವಲಂಬಿ ಜೀವಿಗಳ ಕುರಿತು, ಅವುಗಳು ಅವಲಂಬಿಸುವ ಪೋಷಕ ಜೀವಿಗಳು ಹಾಗೂ ಅವುಗಳ ನಡುವೆ ಇರುವಂಥ ಸಂಬಂಧದ ಕುರಿತಾಗಿರುವ ಅಧ್ಯಯನ.
ತೀರ್ಥಂಕರ ವೃಷಭ ನಾಥ(ಆದಿನಾಥ)ರು ಸಂಸಾರದ ನಶ್ವರತೆಯನ್ನು ಅರಿತು ವೈರಾಗ್ಯವನ್ನು ಹೊಂದಿ ದೀಕ್ಷೆಯನ್ನು ಗ್ರಹಣೆ ಮಾಡಿ ತಪಸ್ಸಿಗೆ ಕಾಡಿಗೆ ತೆರಳುತ್ತಾರೆ.೬ ತಿಂಗಳು ಕಠಿಣ ತಪಸ್ಸನ್ನು ಮಾಡಿದ ಮೇಲೆ ಆಹಾರಕ್ಕೆಂದು ನಗರಕ್ಕೆ ವಿಧಿ ಪೂರ್ವಕ ಆಗಮಿಸುತ್ತಾರೆ.ಆದರೆ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರವನ್ನು ಕೊಡುವ ವಿಧಿಯನ್ನು ಶ್ರಾವಕ-ಶ್ರಾವಕಿಯರು ತಿಳಿದಿರುವುದಿಲ್ಲ.ಆ ಕಾರಣ ಜನರು ಮೊದಲೇ ಮಹಾರಾಜರಾಗಿದ್ದ ಅವರನ್ನು ಸತ್ಕರಿಸುವ ಭಾವನೆಯಿಂದ ವಿವಿಧ ಒಡವೆ,ವಸ್ತ್ರಗಳನ್ನು ಕೆಲವು ನೀಡಲು ಮುಂದಾಗುತ್ತಾರೆ,ಕೆಲವರು ತಮ್ಮ ಹೆಣ್ಣು ಮಕ್ಕಳನ್ನು ಮದುವೆಯಾಗುವಂತೆ ಕೇಳಿಕೊಳ್ಳುತ್ತಾರೆ.ಆದರೆ ಇದಾವುದನ್ನು ಬಯಸದ ಅವರು ಪುನಃ ಕಾಡಿಗೆ ತಪ್ಪಸ್ಸಿಗೆಂದು ಮರಳುತ್ತಾರೆ.ಇದಾಗಿ ೭ ತಿಂಗಳು ೯ ದಿನಗಳ ಉಪವಾಸದ ನಂತರ ಮತ್ತೆ ಹಸ್ತಿನಾಪುರ ಎಂಬ ನಗರಕ್ಕೆ ಆಹಾರಕ್ಕೆಂದು ಆಗಮಿಸುತ್ತಾರೆ.ಆವಾಗಲು ಪುನಃ ಅದೇ ಘಟನೆಗಳು ಮರುಕಳಿಸುತ್ತವೆ.ಆದರೆ ಅದೇ ನಗರದ ರಾಜಾ ಶ್ರೇಯಾಂಸನು ಇವರ ದರ್ಶನಕ್ಕೆಂದು ಪರಿವಾರ ಸಹಿತ ಆಗಮಿಸುತ್ತಾನೆ.ಆಗ ಅವನಿಗೆ ಹಿಂದಿನ ಜನ್ಮದ ಜಾತಿ ಸ್ಮರಣೆ ಆಗುತ್ತದೆ.ಹಿಂದಿನ ಭವ(೮ನೆ)ದಲ್ಲಿ ಇವರಿಬ್ಬರು(ಆದಿನಾಥರು) ಸೆರೀ ದಿಗಂಬರ ಮುನಿಗಳಿಗೆ ನವಧಾ ಭಕ್ತಿಯಿಂದ ಆಹಾರ ನೀಡಿದ ಸ್ಮರಣೆ ಆಗುತ್ತದೆ.ತಕ್ಷಣವೇ ರಾಜಾ ಸೋಮನು ಮತ್ತು ಶ್ರೆಯಾಂಸನು ಸೆರೀ ನವಧಾ ಭಕ್ತಿಯಿಂದ ಮೊದಲಿಗೆ ಇಕ್ಷು(ಕಬ್ಬಿನ ಹಾಲು)ರಸವನ್ನು ನೀಡುತ್ತಾರೆ.ಅಹಾರವಾದಾಕ್ಷಣ ದೇವತೆಗಳು ಪಂಚಾಶ್ಚರ್ಯ ವೃಷ್ಟಿ ಮಾಡುತ್ತಾರೆ.ಜನರು ಜಯ ಜಯಕಾರಗಳನ್ನು ಹಾಕಿ ಸಂತೋಷ ಪಡುತ್ತಾರೆ.ವೃಷಭ ನಾಥರಿಗೆ ಮೊದಲು ಆಹಾರ(ಪಾರಣಾ)ವಾದ ದಿವಸ ವೈಶಾಖ ಶುಕ್ಲ ತೃತೀಯ ತಿಥಿಯಿದ್ದ ಕಾರಣ ಆ ದಿನವನ್ನು “ಅಕ್ಷಯ ತೃತೀಯ“ವೆಂದು ಆಚರಿಸಲಾಗುತ್ತದೆ.ಜೈನ ಧರ್ಮದಲ್ಲಿ ಮುನಿಗಳಿಗೆ ಆಹಾರ ದಾನ ಮಾಡುವುದೆಂದರೆ ಅತ್ಯಂತ ಅತಿಶಯ,ಅಕ್ಷಯ ಪುಣ್ಯಕ್ಕೆ ಕಾರಣ ಎಂದು ಹೇಳಲಾಗಿದೆ.ಈ ದಿನ ಬಸದಿಗಳಲ್ಲಿ ವಿಶೇಷವಾಗೀ ಅಭಿಷೇಕ ಪೂಜೆ,ಉತ್ಸವಗಳನ್ನು ಆಚರಿಸಲಾಗುತ್ತದೆ.ಈ ದಿನ ದಿಗಂಬರ ಮುನಿಗಳಿಗೆ ,ವಿಶೇಷವಾಗಿ ಕಬ್ಬಿನ ಹಾಲನ್ನು ಆಹಾರ ದಾನದಲ್ಲಿ ನೀಡುವುದರಿಂದ ಧನ,ದಾನ್ಯಗಳು,ಮನೆಯಲ್ಲಿ ಸುಖ,ನೆಮ್ಮದಿ ಅಕ್ಷಯವಾಗಿ ವೃದ್ಧಿಯಾಗುತ್ತವೆ ಎಂಬ ನಂಬಿಕೆಯಿದೆ. ತೀರ್ಥಂಕರ ವೃಷಭ ನಾಥರ ಸಂಕ್ಷೇಪ ಜೀವನ ಪರಿಚಯ- ತಂದೆ-ರಾಜಾ ನಾಭೀರಾಯ(೧೪ ನೆ ಮನು) ತಾಯೀ-ರಾಣೀ ಮರುದೇವಿ ಜನ್ಮ ಸ್ಥಳ-ಅಯೋಧ್ಯ(ಉ.ಪ್ರ) ಗರ್ಭಕಲ್ಯಾಣ-ಆಷಾಡ ಕೃಷ್ಣ ೨ ಜನ್ಮ ಕಲ್ಯಾಣ-ಚೈತ್ರ ಕೃಷ್ಣ ೯ ದೀಕ್ಷಾ ಕಲ್ಯಾಣ-ಚೈತ್ರ ಕೃಷ್ಣ ೯ ಕೇವಲ ಜ್ಞಾನ-ಪಾಲ್ಗ್ಹುಣ ಕೃಷ್ಣ ೧೧ ಮೋಕ್ಷ(ನಿರ್ವಾಣ)ಕಲ್ಯಾಣ-ಮಾಘ ಕೃಷ್ಣ ೧೪ ಜನತೆಗೆ ಕಲಿಸಿದ 6 ವಿದ್ಯೆಗಳು-ಅಸಿ,ಮಸಿ,ಕೃಷಿ,ವಿಧ್ಯೆ,ವಾಣಿಜ್ಯ,ಮತ್ತು ಶಿಲ್ಪ ಕಲೆ. ಪಟ್ಟ ರಾಣೀಯರು-ನಂದಾ(ಯಶಸ್ವತೀ),ಸುನಂದಾ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಹನ್ನೆರಡನೆಯ ಶತಮಾನದ ಶರಣ ಸಮೂಹದಲ್ಲಿ ಅಗ್ರಗಣ್ಯವಾದ ಹೆಸರುಗಳಲ್ಲಿ , ಚನ್ನಬಸವಣ್ಣನವರದು ಬಹು ಪ್ರಮುಖವಾದುದು. ಇವರ ಜೀವಿತ ಕಾಲಾವಧಿ ತೀರಾ ಕಡಿಮೆ ; ಚನ್ನಬಸವಣ್ಣನವರು ಬದುಕಿದ್ದುದು ಕೇವಲ ಇಪ್ಪತ್ತುನಾಲ್ಕು ವರ್ಷಗಳು ಮಾತ್ರ. ಹನ್ನೆರಡನೆ ಯ ಶತಮಾನದ ಯುಗಪುರುಷನೂ; ಸಾಮಾಜಿಕ ಬದಲಾವಣೆಗಳ ಹರಿಕಾರನೂ ; ಅಸಮಾನತೆಯ ವಿರುದ್ದ ದನಿಯೆತ್ತಿ ,ವ್ಯವಸ್ಠೆಯ ಆಕ್ರೋಶಕ್ಕೆ ಗುರಿಯಾದ , ಬಸವಣ್ಣನವರ ಸೋದರಳಿಯ ಚನ್ನಬಸವಣ್ಣ .
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯) (ಆಂಗ್ಲ:Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ನೊಬೆಲ್ ಪ್ರಶಸ್ತಿ ಪುರಸ್ಕೃತ ಭಾರತೀಯರ ಪಟ್ಟಿ
ನೊಬೆಲ್ ಪ್ರಶಸ್ತಿ ಎನ್ನುವುದು, ಆಲ್ಫ್ರೆಡ್ ನೊಬೆಲ್ ಅವರ ಕೊನೆಯ ಇಚ್ಛೆಯಂತೆ ಸ್ಥಾಪಿಸಲಾದ, "ಭೌತಶಾಸ್ತ್ರ, ರಸಾಯನಶಾಸ್ತ್ರ, ಶರೀರಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಆರ್ಥಿಕ ವಿಜ್ಞಾನ ಕ್ಷೇತ್ರಗಳಲ್ಲಿ "ಮಾನವಕುಲಕ್ಕೆ ಹೆಚ್ಚಿನ ಕೊಡುಗೆಯನ್ನು ನೀಡಿದವರಿಗೆ" ನೀಡಲಾಗುವ ವಾರ್ಷಿಕ ಅಂತರರಾಷ್ಟ್ರೀಯ ಪ್ರಶಸ್ತಿಗಳ" ಒಂದು ಗುಂಪಾಗಿದೆ. ಪ್ರತಿಯೊಂದು ಪ್ರಶಸ್ತಿ ವಿಜೇತರಿಗೆ ಚಿನ್ನದ ಪದಕ, ಒಂದು ಡಿಪ್ಲೊಮಾ ಮತ್ತು ಹಣದ ಮೊತ್ತವನ್ನು ನೀಡಲಾಗುತ್ತದೆ. ಇದನ್ನು ನೊಬೆಲ್ ಪ್ರತಿಷ್ಠಾನವು ವಾರ್ಷಿಕವಾಗಿ ನಿರ್ಧರಿಸುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಅಕ್ಷಯಪಾತ್ರೆ ಹಿಂದೂ ಧರ್ಮಶಾಸ್ತ್ರದ ಒಂದು ವಸ್ತು. ಅದು ಸೂರ್ಯನು ಯುಧಿಷ್ಠಿರನಿಗೆ ನೀಡಿದ ಒಂದು ಅದ್ಭುತ ಪಾತ್ರೆಯಾಗಿತ್ತು ಮತ್ತು ಪಾಂಡವರಿಗೆ ಪ್ರತಿದಿನ ಎಂದಿಗೂ ಮುಗಿಯದ ಆಹಾರದ ಸಂಗ್ರಹವನ್ನು ಹಿಡಿಯುತ್ತಿತ್ತು. ಪಾಂಡವರು ವನವಾಸದಲ್ಲಿದ್ದಾಗ, ಘಟನೆಗಳ ತಿರುವಿನಿಂದ ಚಕಿತಗೊಂಡ ಅನೇಕ ಗಣ್ಯವ್ಯಕ್ತಿಗಳು, ಋಷಿಗಳು, ರಾಜರು ಮತ್ತು ಮಂತ್ರಿಗಳು ಅವರನ್ನು ಭೇಟಿಯಾಗಲು ಬರುತ್ತಿದ್ದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಇಂದಿಗೆ ಎಂಟು ಶತಮಾನಗಳ ಹಿಂದೆ ಭಾರತ ದೇಶದಲ್ಲಿ ವೈದಿಕಶಾಹಿ ಅತ್ಯಂತ ಪ್ರಬಲ ಶಾಲಿಯಾಗಿದ್ದ ಕಾಲವದು. ಬ್ರಾಹ್ಮಣ, ಕ್ಷತ್ರೀಯ, ವೈಶ್ಯ, ಶೂದ್ರರೆಂಬ ಚತುರ್ವಣಗಳನ್ನು ಮಾಡಿಕೊಂಡು, ಈ ನಾಲ್ಕೂ ವರ್ಣದಿಂದ ಹೊರಗಿರುವವರನ್ನು ಅಸ್ಪೃಶ್ಯರೆಂದು ಕರೆದು, ಅವರನ್ನು ಅತ್ಯಂತ ನಿಕೃಷ್ಟವಾಗಿ ಕಾಣುತ್ತಿದ್ದ ಕಾಲವದು. ಅಂದು ಇಲ್ಲಿ ಅನೇಕ ಮೂಢನಂಬಿಕೆಗಳು, ಬರಡು ಸಂಪ್ರದಾಯಗಳು ಬಹುದೇವತೋಪಾಸನೆ, ಸ್ತ್ರೀಶೋಷಣೆ, ಅನ್ಯಾಯಗಳಂತಹ, ಅನೇಕ ಸಂಪ್ರದಾಯಗಳು ರುದ್ರ ತಾಂಡವಾಡುತ್ತಿದ್ದ ಕಾಲವದು.