The most-visited ಕನ್ನಡ Wikipedia articles, updated daily. Learn more...
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಚಿಪ್ಕೋ ಚಳುವಳಿ ಅಥವಾ ಚಿಪ್ಕೋ ಆಂದೋಲನ ಎಂಬುದು ಮಹಾತ್ಮ ಗಾಂಧಿಯವರ ಮೂಲಮಂತ್ರಗಳಾದ ಸತ್ಯಾಗ್ರಹ ಮತ್ತು ಅಹಿಂಸೆಗಳ ಮೂಲಕ ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಮರ ಕಡಿಯುವುದರ ಬಗ್ಗೆ ಅಸಹಕಾರ ತೋರಿಸಿದ ಪ್ರಮುಖ ಚಳುವಳಿಯಾಗಿದೆ. ಚಿಪ್ಕೋ ಚಳುವಳಿಯು ಮೊದಲಿಗೆ ೧೯೭೦ರಲ್ಲಿ ಉತ್ತರಖಂಡದ ಗರ್ವಾಲಹಿಮಾಲಯ ಹಾಗೂ ಉತ್ತರಪ್ರದೇಶದಲ್ಲಿ ಅತಿಯಾಗಿ ನಡೆಯುತ್ತಿದ್ದ ಅರಣ್ಯನಾಶದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆರಂಭವಾಯಿತು. ಮಾರ್ಚ್ ೨೬ ೧೯೭೪ರಲ್ಲಿ ಉತ್ತರಖಂಡ ರಾಜ್ಯದ ಚಮೋಲಿ ಜಿಲ್ಲೆಯ ರೇನಿಹಳ್ಳಿ ಮತ್ತು ಹೇಮ ವಾಲ್ಘಂಟೆಯಲ್ಲಿ ಕೆಲವು ಮಹಿಳೆಯರು ಭಯಬೀತರಾಗಿ ತಮ್ಮ ಕಾಡಿನ ಸಾಂಪ್ರದಾಯಿಕ ಹಕ್ಕನ್ನು ವಾಪಸ್ಸು ಪಡೆಯುವ ಸಲುವಾಗಿ ಇವರು ಮರಕಡಿಯುವುದನ್ನು ವಿರೋಧಿಸಿ ಹೋರಾಟ ನಡೆಸಿದರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿnaತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಧ್ಯ ಏಷ್ಯಾದಿಂದ(ಮಂಗೋಲಿಯ ಸಾಮ್ರಾಜ್ಯದ ಉಜಬೇಕಿಸ್ತಾನದಿಂದ) ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ , ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು , ತಾಯಿಯ ಮೂಲಕ . ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು ,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ , ಬುದ್ಧಿವಂತಿಕೆಯ ಸಾಹಿತ್ಯ , ಕಲೆ , ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ಕೊಕ್ಕು ಹಕ್ಕಿಗಳಲ್ಲಿ ಕಾಣಬರುವ ವಿಶೇಷ ರೀತಿಯ ಒಂದು ಅಂಗ. ಇದು ಹಕ್ಕಿಗಳಿಗೆ ಅತ್ಯಂತ ಉಪಯುಕ್ತ ರಚನೆ. ಇದರ ಉಪಯೋಗಗಳೂ ವೈವಿಧ್ಯಮಯ: ಆಹಾರವನ್ನು ಹಿಡಿಯುವಲ್ಲಿ ಮತ್ತು ಗೂಡು ಕಟ್ಟುವ ಕಾರ್ಯದಲ್ಲಿ ಇದು ಕೈಯಂತೆಯೂ ಆಹಾರ ಸೇವನೆಯಲ್ಲಿ ಬಾಯಿಯಂತೆಯೂ ಮರಿಗಳಿಗೆ ಗುಟುಕು ಕೊಡುವ ಕಾರ್ಯದಲ್ಲಿ ಚಮಚದಂತೆಯೂ ಶತ್ರುಗಳನ್ನು ಎದುರಿಸುವುದರಲ್ಲಿ ಆಯುಧದಂತೆಯೂ ಕೆಲಸಕ್ಕೆ ಬರುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಭಾರತದ ಇತಿಹಾಸವನ್ನು ಪುನರ್ರಚಿಸುವಲ್ಲಿ ಸಹಕಾರಿಯಾಗಿರುವ ಮುಖ್ಯ ಚಾರಿತ್ರಿಕ ಮೂಲವಸ್ತುಗಳಲ್ಲೊಂದೆನಿಸಿಕೊಂಡಿರುವ ನಾಣ್ಯ ಸಾಮಗ್ರಿಗಳಲ್ಲಿ 4-6ನೆಯ ಶತಮಾನಗಳಲ್ಲಿ ಉತ್ತರ ಭಾರತದಲ್ಲಿ ಹೊರಡಿಸಲಾದ ಗುಪ್ತ ನಾಣ್ಯಗಳ ಸ್ಥಾನ- ಅವುಗಳ ಐತಿಹಾಸಿಕ ಹಾಗೂ ಕಲಾಮೌಲ್ಯಗಳ ದೃಷ್ಟಿಯಿಂದ- ಮಹತ್ವದ್ದು. 1783ರಿಂದೀಚೆಗೆ ಬಾಂಗ್ಲಾದೇಶದ ಮಹಮ್ಮದ್ಪುರ, ಪಶ್ಚಿಮ ಬಂಗಾಳದ ಕಾಲೀಘಟ್ಟ ಮತ್ತು ಹೂಗ್ಲಿ, ಉತ್ತರ ಪ್ರದೇಶದ ಭರ್ಸರ್, ಅಲಾಹಾಬಾದ್, ತಾಂಡ, ಕೋಟ್ವಾ, ಬಸ್ತಿ, ಟೇಕ್ರಿ ದೇಬ್ರಾ, ಕಸರ್ವಾ, ಜಾನ್ಪುರ, ಗೋಪಾಲಪುರ ಮತ್ತು ಝಾನ್ಸಿ, ಬಿಹಾರಿನ ಹಾಜೀಪುರ, ಪಂಜಾಬಿನ ಮೀಠಾಥಾಲ್ ಮತ್ತು ರಾಜಸ್ತಾನದ ಬಯಾನಾ ಮುಂತಾದ ಸ್ಥಳಗಳಲ್ಲಿ ಆಕಸ್ಮಿಕವಾಗಿ ದೊರೆತ ಪ್ರಾಚೀನ ನಾಣ್ಯಗಳ ರಾಶಿಗಳಿಂದ ಗುಪ್ತ ಅರಸರು ಹೊರಡಿಸಿದ ನೂರಾರು ವರ್ತುಲಾಕಾರದ ಬಂಗಾರದ, ಬೆಳ್ಳಿಯ, ಬೆಳ್ಳಿ ಮುಲಾಮಿರುವ ತಾಮ್ರದ ಮತ್ತು ತಾಮ್ರದ ನಾಣ್ಯಗಳು ಬೆಳಕಿಗೆ ಬಂದಿವೆ. ಶಾಸನಗಳಿಂದ ತಿಳಿದುಬರುವಂತೆ ಗುಪ್ತರ ಬಂಗಾರ ನಾಣ್ಯಗಳಿಗೆ ದಿನಾರವೆಂಬ ಹೆಸರಿತ್ತು.
'ಮಾಧ್ಯಮ ಅಥವಾ ಸಮೂಹ ಮಾಧ್ಯಮಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.