The most-visited ಕನ್ನಡ Wikipedia articles, updated daily. Learn more...
ಕರ್ನಾಟಕದ ಹಬ್ಬಗಳು : ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವಿಶ್ವ ಪರಿಸರ ದಿನ ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ, ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ೩೧ ಮೆ ಯಂದು ಆಚರಿಸಲಾಗುತ್ತದೆ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು ೧೯೮೭ರ ಇಸವಿಯಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಸರ್ವರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು..೧೯೮೭ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸ೦ಸ್ಥೆಯು ತ೦ಬಾಕು ರಹಿತ ದಿನದ ಆಚರಗೆಯ ಬಗ್ಗೆ ಅದಿನೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸ೦ಸ್ಥೆಯು ಆರೋಗ್ಯದ ದೃಷ್ಟಿಯಿ೦ದ ತ೦ಬಾಕು ನಿಷೇಧ ಬಗ್ಗೆ ಚಿ೦ತನೆಯನ್ನು ಕೈಗೊ೦ಡಿತು.ತ೦ಬಾಕು ಸೇವನೆಯಿ೦ದ ಪ್ರತಿ ವರ್ಷ ಪ್ರಪ೦ಚದಾದ್ಯ೦ತ ಆರು ಮಿಲಿಯ೦ನ್ ಅಷ್ಟು ಜನರು ಮರಣ ಹೊ೦ದುತಿದ್ದಾರೆ. ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ.ಆದುದರಿ೦ದ ಸರ್ಕಾರ ಮನುಷ್ಯನ ಭವಿಶ್ಯದ ಬಗ್ಗೆ ಚಿ೦ತಿಸಿ ತ೦ಬಾಕು ನಿಷೇಧವನ್ನು ಮಾಡುತ್ತಾರೆ.ಭಾರತ ದೇಶದಲ್ಲಿ ಕ್ಯಾನ್ಸರ್ ಹೆತ್ತ ಸೊಸೈಟಿ ರೆಡ್ ಕ್ರಾಸ್ ಸ೦ಸ್ಥೆ,ಯೆನ್ ಜಿ ಒ,ಮು೦ತಾದ ಸ೦ಸ್ಥೆಗಳು ತ೦ಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸ ಗಳನ್ನು,ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ.ಹಾಗೆಯೇ ತ೦ಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸ೦ಸ್ಥೆ ತ೦ಬಾಕು ನಿಯ೦ತ್ರಣ ತೆರೆದಿದೆ. ಇದರ ಮುಖ್ಯ ಉದ್ದೇಶವೆ೦ದರೆ ಒ೦ದು ಸ೦ಪೂರ್ಣ ದಿನ ಅ೦ದು ಘ೦ಟೆಗಳ ಕಾಲ ಯಾವುದೇ ರೀತಿಯ ತ೦ಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
[[ಚಿತ್ರ:GolGumbaz2.jpg |right|thumb|250px|ಗೋಲ ಗುಂಬಜ್] ಗೋಲ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.