The most-visited ಕನ್ನಡ Wikipedia articles, updated daily. Learn more...
ಮಹಾರಾಣಾ ಪ್ರತಾಪ್ ಅಥವಾ ಮೇವಾರದ ಪ್ರತಾಪ್ ಸಿಂಗ್ ( 9 ಮೇ 1540- 29 ಜನವರಿ 1597) ವಾಯವ್ಯ ಭಾರತದ ರಾಜ್ಯವಾದ ಮೇವಾರವನ್ನು ಆಳುತ್ತಿದ್ದ ಹಿಂದೂ ದೊರೆಯಾಗಿದ್ದ. ಅವನು ಸೂರ್ಯವಂಶಿ ರಜಪೂತರ ಸಿಸೊದಿಯಾ ವಂಶಕ್ಕೆ ಸೇರಿದವನು. ತೀಕ್ಷ್ಣ ಸ್ವಭಾವದ ರಜಪೂತರ ಹೆಮ್ಮೆ ಮತ್ತು ಆತ್ಮಗೌರವದ ಸಾಕಾರರೂಪವಾಗಿದ್ದ ಪ್ರತಾಪ್, ಶತಮಾನಗಳವರೆಗೆ ರಜಪೂತರ ಮಹತ್ವಾಕಾಂಕ್ಷೆಯ ಗುಣಗಳಿಗೆ ದೃಷ್ಟಾಂತವಾಗಿದ್ದನು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಾಯಿ ಪಲ್ಲವಿ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಾಯಿ ಪಲ್ಲವಿ ಸೆಂತಮರಾಯಿಯವರು ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯ ಚಲನಚಿತ್ರಗಳಲ್ಲಿ ನಟಿಸುತ್ತಿರುವ ಭಾರತೀಯ ನಟಿ. ಪ್ರೇಮಂ ಮತ್ತು ಫಿದಾ ಚಲನಚಿತ್ರದಲ್ಲಿ ಇವರ ಅಭಿನಯಕ್ಕಾಗಿ ಎರಡು ಫಿಲ್ಮ್ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ.ಸಾಯಿ ಪಲ್ಲವಿ ಅವರು ೨೦೧೫ ರ ಮಲಯಾಳಂ ಚಿತ್ರ ಪ್ರೇಮಂನಲ್ಲಿ ಮಲಾರ್ ಪಾತ್ರಕ್ಕಾಗಿ ಸಾರ್ವಜನಿಕರ ಗಮನ ಸೆಳೆದರು. ನಂತರ ಅವರು ಕಾಳಿ (೨೦೧೬) ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಅವರೊಂದಿಗೆ ನಟಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಿತ್ರರಂಗದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡೆ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ( ಸಂಸ್ಕೃತ:पञ्चतन्त्र' )ಐದು ಮೂಲತತ್ವಗಳು'ಕ್ರಿಸ್ತ ಪೂರ್ವ 3ನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಕೋಲಾರ ಜಿಲ್ಲೆ ಯ ಬಂಗಾರಪೇಟೆ ಗೆ ೧೨ ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿ ಕೋಟಿಲಿಂಗಗಳ ನಾಡಾಗಿದೆ.೧೦೮ ಅಡಿಗಳ ಬೃಹತ್ ಶಿವಲಿಂಗ ಹಾಗೂ ೩೨ ಅಡಿ ಎತ್ತರದ ಅತಿ ದೊಡ್ಡ ಬಸವಣ್ಣನನನ್ನು ಹೊಂದಿದ ಇಲ್ಲಿ ಭಕ್ತರು ನಿತ್ಯವೂ ಶಿವಲಿಂಗ ಸ್ಥಾಪನೆ ಮಾಡುತ್ತಿದ್ದು, ಈ ಕ್ಷೇತ್ರದಲ್ಲಿ ಮುಂದಿನ ಕೆಲವು ದಶಕಗಳಲ್ಲಿ ಕೋಟಿ ಲಿಂಗ ಸ್ಥಾಪನೆಯಾಗುವ ಸಾಧ್ಯತೆ ಇದೆ.ತ್ರೇತಾಯುಗದ ಕಾಲದಿಂದಲೂ ಪವಿತ್ರ ಕ್ಷೇತ್ರವೆಂದೇ ಪರಿಗಣಿತವಾಗಿರುವ ಕಮ್ಮಸಂದ್ರದಲ್ಲಿ ಶ್ರೀಸಾಂಬಶಿವಮೂರ್ತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ಷೇತ್ರದಲ್ಲಿರುವ ವಿಶಾಲ ಪ್ರಕಾರದ ಮೊದಲ ಮುಖ್ಯದ್ವಾರದಲ್ಲಿ ಶಿವಲಿಂಗ ಮತ್ತು ಬಸವೇಶ್ವರರ ದರ್ಶನ ಪಡೆದು, ಎರಡನೇ ದ್ವಾರಕ್ಕೆ ಬಂದರೆ ಆಕಾಶ ಶಿವಲಿಂಗ ಮತ್ತು ಅನೇಕ ದೇವತೆಗಳ ದರ್ಶನವಾಗುತ್ತದೆ. ಮುಂದೆ ಸಾಗುತ್ತಿದ್ದಂತೆ ವಿಶಾಲ ಪ್ರಕಾರದಲ್ಲಿ ಭಕ್ತರು ಸ್ಥಾಪಿಸಿರುವ ಸಾವಿರಾರು ಶಿವಲಿಂಗಗಳನ್ನು ನೋಡಬಹುದು. ದೇವಾಲಯದ ಪ್ರಾಂಗಣ ಪ್ರವೇಶಿಸಿದ ಬಳಿಕ ಪ್ರಧಾನ ಶಿವದೇವಾಲಯ, ಬ್ರಹ್ಮ, ವಿಷ್ಣು, ಮಹೇಶ್ವರ, ವಿನಾಯಕ, ಅಯ್ಯಪ್ಪ, ಆಂಜನೇಯ, ಕನಿಕಾ ಪರಮೇಶ್ವರಿ, ಪಾರ್ವತಿ, ಲಕ್ಷ್ಮೀ, ನವಗ್ರಹ, ಸತ್ಯನಾರಾಯಣಸ್ವಾಮಿ, ಸುಬ್ರಹ್ಮಣ್ಯ, ವೆಂಕಟೇಶ್ವರ, ಪಂಚಮುಖಿ ಆಂಜನೇಯ, ಸಂತೋಷಿಮಾತಾ, ಮಂಜುನಾಥೇಶ್ವರ ಸ್ವಾಮಿ ದರ್ಶನಭಾಗ್ಯ ಲಭಿಸುತ್ತದೆ.