The most-visited ಕನ್ನಡ Wikipedia articles, updated daily. Learn more...
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಶ್ಯಾಮ್ ಪ್ರಸಾದ್ ಮುಖರ್ಜಿ (ಜುಲೈ ೬, ೧೯೦೧ - ಜೂನ್ ೨೩, ೧೯೫೩) ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ. ಶ್ಯಾಮ ಪ್ರಸಾದ್ ಮುಖರ್ಜಿ (6 ಜುಲೈ 1901 - 23 ಜೂನ್ 1953) ಒಬ್ಬ ಭಾರತೀಯ ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದರು, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಚಿವ ಸಂಪುಟದಲ್ಲಿ "ಕೈಗಾರಿಕೋದ್ಯಮ ಮತ್ತು ಸರಬರಾಜು(ವಾಣಿಜ್ಯೋದ್ಯಮ) ಸಚಿವರಾಗಿ ಕಾರ್ಯನಿರ್ವಹಿಸಿದರು. ಅವರು ಕಾಂಗ್ರೆಸ್ ಪಕ್ಷವಲ್ಲದಿದ್ದರೂ, ಅವರ ಪ್ರತಿಭೆಯನ್ನು ಪರಿಗಣಿಸಿ, ಅವರನ್ನು ನೆಹರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿದ್ದರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಹತ್ತರಿಂದ ಹನ್ನೆರಡನೇ ಶತಮಾನದ ಸುಮಾರಿಗೆ ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಈಗಿನ ಕರ್ನಾಟಕದ ಉತ್ತರ ಭಾಗದಿಂದ ಉತ್ತರ ಭಾರತದೆಡೆಗೆ ಅಪಾರ ಸಂಖ್ಯೆಯ ಜನರು ವಲಸೆ ಹೊರಟರು. ಸಾಮಾನ್ಯ ಜನರಷ್ಟೇ ಅಲ್ಲದೆ ಬಲಶಾಲಿಯಾದ ಸೈನ್ಯ, ಅಧಿನಾಯಕರು, ಪಾಳೇಗಾರರು, ಸಾಮಂತರು, ರಾಜರು ಕೂಡ ಉತ್ತರ ಭಾರತದೆಡೆಗೆ ವಿವಿಧ ಕಾರಣಗಳಿಗೆ ಪ್ರಯಾಣ ಬೆಳೆಸಿದರು. ಈ ಮೂಲಕ ಕರ್ನಾಟಕ ಸಾಂಸ್ಕೃತಿಕ, ಧಾರ್ಮಿಕ ಘಮಲನ್ನು ಉತ್ತರ ಭಾರತದ ಕಡೆಗೂ ಹರಡಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ. ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.ಇವೆಲ್ಲವುಗಳ ಉಸ್ತುವಾರಿಯನ್ನು ಗ್ರಂಥಸ್ವಾಮ್ಯ ಹೊಂದಿರುವ ICC ಮತ್ತು ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ ನೋಡಿಕೊಳ್ಳುತ್ತಿದೆ.ಕ್ರಿಕೆಟ್ ಆಟವನ್ನು ಕ್ರಿಕೆಟ್ ಮೈದಾನದ ಮಧ್ಯಭಾಗದಲ್ಲಿರುವ ಪಿಚ್ ಮೇಲೆ ಆಡಿಸಲಾಗುತ್ತದೆ.ಪಂದ್ಯವನ್ನು ಒಂದೊಂದು ಪಂಗಡದಲ್ಲಿಯೂ ಹನ್ನೊಂದು ಜನ ಆಟಗಾರರು ಇರುವ ಎರಡು ಪಂಗಡಗಳ ನಡುವೆ ಆಡಿಸಲಾಗುತ್ತದೆ.ಬ್ಯಾಟಿಂಗ್ ಮಾಡುತ್ತಿರುವ ಪಂಗಡ ಔಟ್ ಆಗದೆ ಸಾಧ್ಯವಾದಷ್ಟು ರನ್ ಗಳಿಸಲು ಪ್ರಯತ್ನಿಸುತ್ತಿದ್ದರೆ ಬೌಲಿಂಗ್ ಮತ್ತು ಫೀಲ್ಡಿಂಗ್ ಮಾಡುತ್ತಿರುವ ಇನ್ನೊಂದು ಪಂಗಡ ಬ್ಯಾಟಿಂಗ್ ಮಾಡುತ್ತಿರುವ ಪಂಗಡದ ಬ್ಯಾಟ್ಸ್ಮನ್ಗಳನ್ನ ಚದುರಿಸಿ ಕಡಿಮೆ ಅಂಕಕ್ಕೆ ಮಿತಿಗೊಳಿಸಲು ಪ್ರಯತ್ನಿಸುತ್ತಿರುತ್ತದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ: ಭಾರತ ಗಣರಾಜ್ಯ, Transliteration: Bhārata Gaņarājya ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಎಚ್.ಎಸ್.ವೆಂಕಟೇಶಮೂರ್ತಿ , ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು , ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. (ಜನನ:ಜೂನ್,೨೩,೧೯೪೪), ಈಗ ಮಕ್ಕಳ, ಯುವಕರ, ಮತ್ತು ಮಹಿಳೆಯರಿಗೆ ಬೇಕಾದ ಗೀತೆಗಳನ್ನು ರಚಿಸಿ, ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಶ್ರೀಪಾದರಾಜರು (೧೩೮೯ - ೧೪೮೭) ಕನ್ನಡ ಹರಿದಾಸ ಸಾಹಿತ್ಯದ ಪಿತಾಮಹರು ಶ್ರೀಪಾದರಾಜರು. ಸರಳ ಕನ್ನಡ ಭಾಷೆಯಲ್ಲಿ ಧರ್ಮಗ್ರಂಥಗಳನ್ನು ಪರಿವರ್ತಿಸಬೇಕೆಂಬ ಅಭಿಲಾಷೆ ಇವರಲ್ಲಿ ಉಂಟಾದದು ಅಂದಿನ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕವೇ ಆಗಿತ್ತು. ಇದಕ್ಕಾಗಿ ಭಾಗವತ ತಂಡವೊಂದನ್ನು ಏರ್ಪಡಿಸಿ ಪೂಜಾಕಾಲದಲ್ಲಿ ವೇದ ಪಾರಾಯಣ ಮಾಡಿದಂತೆ ಭಾಗವತರ ಮೂಲಕ ಕನ್ನಡ ದೇವರನಾಮಗಳನ್ನು ಹಾಡಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.