The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಹಬ್ಬಗಳು : ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಶ್ವ ಪರಿಸರ ದಿನ ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ, ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ೧೯೬೧ದಲ್ಲಿ ಸ್ಥಾಪಿಸಲಾಯಿತು. ೧೯೬೧ರಲ್ಲಿ ೧೭೯೨ ಬಸ್ಸುಗಳಿದ್ದವು. ಸಂಸ್ಥೆಯು ಕರ್ನಾಟಕ ಸರ್ಕಾರದ ಮಾಲೀಕತ್ವದಲ್ಲಿದೆ.
ಕರ್ಮಧಾರಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (ii) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
'ಪಾಂಡುರಂಗ ವಿಠಲ’ಎಂಬ ಜನಪ್ರಿಯ ಟೆಲಿವಿಶನ್ ಧಾರಾವಾಹಿಯನ್ನು ವೀಕ್ಷಿಸುವ ಬೆಂಗಳೂರಿನ ರಸಿಕರಿಗೆ, 'ಬಿ.ಜಯ,' ಒಬ್ಬ ಮರೆಯಲಾರದ ವ್ಯಕ್ತಿಯಾಗಿದ್ದಾರೆ. ಎಪ್ಪತ್ತು ವರ್ಷ ಪ್ರಾಯದ ಹರೆಯದ ಜಯರವರಿಗೆ, ಹಾಡುವುದು, ಕುಣಿಯುವುದು, ಅರಳು ಹುರಿದಂತೆ ಡಯಲಾಗ್ ಗಳನ್ನು ಹೇಳುವುದು ಮುಂತಾದವೆಲ್ಲಾ ನೀರು ಕುಡಿದಷ್ಟು ಸುಲಭ. 'ಜಯ' ಚಲನಚಿತ್ರ ನಟ ನರಸಿಂಹರಾಜುರವರ ಜೊತೆಯಲ್ಲಿ ಸುಮಾರು ೩೫೦-೪೦೦ ಚಿತ್ರಗಳಲ್ಲಿ ನಟಿಸಿದ ದಾಖಲೆ ಇದೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಸ್ತ ಪದವಾದಾಗ ಬೇರೊಂದು ಪದದ (ಅನ್ಯ ಪದದ) ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಎಂಬ ಹೆಸರು. ಹಣೆಗಣ್ಣ , ಮುಕ್ಕಣ್ಣ , ನಿಡುಮೂಗ - ಈ ಪದಗಳನ್ನು ಬಿಡಿಸಿ ಬರೆದರೆ , ಹಣೆಯಲ್ಲಿ + ಕಣ್ಣು ಉಳ್ಳವನು ಯಾರೋ ಅವನು - ಹಣೆಗಣ್ಣ (ಶಿವ) ಮೂರು + ಕಣ್ಣು ಉಳ್ಳವನು ಯಾರೋ ಅವನು - ಮುಕ್ಕಣ್ಣ (ಶಿವ)ನಿಡಿದು + ಮೂಗನ್ನು ಉಳ್ಳವನು ಯಾರೋ ಅವನು - ನಿಡುಮೂಗಹಣೆಯಲ್ಲಿ + ಕಣ್ಣು ಉಳ್ಳವ - ಈ ಎರಡೂ ಪದಗಳ ಅರ್ಥ ಇಲ್ಲಿ ಮುಖ್ಯವಲ್ಲ . ಈ ಎರಡೂ ಪದಗಳ ಅರ್ಥದಿಂದ ಹೊಳೆಯುವ ಅನ್ಯ ಪದ ಶಿವ ಮುಖ್ಯ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (೨೦೦೫)
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005 ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ರಾಷ್ಟ್ರೀಯ ಮಂಡಳಿ NCERT ಯಲ್ಲಿ 1975, 1988, 2000 ಮತ್ತು 2005 ರಲ್ಲಿ ಪ್ರಕಟವಾದ ನಾಲ್ಕು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟುಗಳು ಒಂದಾಗಿದೆ . ಫ್ರೇಮ್ವರ್ಕ್ ಭಾರತದಲ್ಲಿ ಶಾಲಾ ಶಿಕ್ಷಣ ಕಾರ್ಯಕ್ರಮಗಳಲ್ಲಿ , ಪಠ್ಯಕ್ರಮ ಪಠ್ಯಪುಸ್ತಕಗಳು ಮತ್ತು ಬೋಧನಾ ಅಭ್ಯಾಸಗಳನ್ನು ತಯಾರಿಸುವ ಚೌಕಟ್ಟನ್ನು ಒದಗಿಸುತ್ತದೆ. NCF2005 ದಾಖಲೆ ಹೊರೆ ಮತ್ತು ನ್ಯಾಷನಲ್ ಪಾಲಿಸಿ ಆಫ್ ಎಜುಕೇಶನ್ 1986-1992 ಮತ್ತು ಕೇಂದ್ರೀಕೃತ ಗುಂಪು ಚರ್ಚೆಯಂತಹ ಶಿಕ್ಷಣದ ಬಗ್ಗೆ ಹಿಂದಿನ ಸರ್ಕಾರದ ವರದಿಗಳಿಂದ ತನ್ನ ನೀತಿಯನ್ನು ಆಧರಿಸಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.