The most-visited ಕನ್ನಡ Wikipedia articles, updated daily. Learn more...
ಮಹೇಶ್ ಶ್ರೀನಿವಾಸ್ ಭೂಪತಿ ( 7 ಜೂನ್ 1974) ಒಬ್ಬ ನಿವೃತ್ತ ಭಾರತೀಯ ವೃತ್ತಿಪರ ಟೆನ್ನಿಸ್ ಆಟಗಾರ. ೧೯೯೭ ರಲ್ಲಿ, ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಮೆಂಟ್ (ರಿಕಾ ಹಿರಾಕಿಯೊಂದಿಗೆ) ಗೆದ್ದ ಮೊದಲ ಭಾರತೀಯರಾದರು. ೨೦೦೬ ರಲ್ಲಿ ಆಸ್ಟ್ರೇಲಿಯನ್ ಓಪನ್ ಮಿಶ್ರಿತ ಡಬಲ್ಸ್ನಲ್ಲಿ ಗೆಲುವಿನೊಂದಿಗೆ ಅವರು ಎಂಟು ಟೆನ್ನಿಸ್ ಆಟಗಾರರ ಉತ್ಕೃಷ್ಟ ತಂಡವನ್ನು ಸೇರಿಕೊಂಡರು, ಅವರು ವೃತ್ತಿಜೀವನದ ಗ್ರಾಂಡ್ ಮಿಶ್ರ ಡಬಲ್ಸ್ನಲ್ಲಿ ಸ್ಲ್ಯಾಮ್.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ವಿಶ್ವ ಪರಿಸರ ದಿನ ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ, ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಾಶವಾಗುತ್ತಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಗುರು ಗ್ರಂಥ ಸಾಹೀಬ (ಪಂಜಾಬಿ:ਗੁਰੂ ਗ੍ਰੰਥ ਸਾਹਿਬ, gurū granth sāhib ),ಅಥವಾ ಆದಿ ಗ್ರಂಥ , ಸಿಖ್ಖ ರ ಅಂತಿಮ ಗುರುಗಳು. ಇದೊಂದು ಬೃಹತ್ ಗ್ರಂಥವಾಗಿದ್ದು, 1430 ಶ್ಲೋಕಗಳನ್ನು ಹೊಂದಿದೆ.ಇದರ ಸಂಗ್ರಹ ಮತ್ತು ಜೋಡಣೆಯು ಸಿಖ್ ಗುರುಗಳ ಕಾಲದಲ್ಲಿ ,ಅಂದರೆ 1469 ರಿಂದ 1708 ರ ಅವಧಿಯಲ್ಲಿ ಆಗಿದೆ. ಹಲವು ಶ್ಲೋಕಗಳ ಅಥವಾ ಶಾಬಾದ್ ಸಂಗ್ರಹ ಇದಾಗಿದೆ.ಇದರಲ್ಲಿ ದೇವರ ಗುಣಗಳನ್ನು ವಿವರಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
(ಇಲ್ಲಿ ಕೆಳಗಿನ ವಿವರ ಜ್ಯೀತಿರ್ಮೇಘಕ್ಕೆಸಂಬಂಧಿಸಿದೆ - ಜ್ಯೋತಿರ್ಮೇಘ ಎಂಬ ಹೊಸ ಪುಟ ತೆರೆದು ಅದಕ್ಕೆ ಈ ವಿವರವನ್ನು ಸ್ಥಳಾಂತರಿಸಬೇಕು.)(ವೆಬ್ ಡಿಕ್ಷನರಿ :An immense cloud of gas (mainly hydrogen) and dust in interstellar space = ಬಾಹ್ಯಾಕಾಶ ಮೋಡ ; ಗೂಗಲ್ ಅನುವಾದ=ನೀಹಾರಿಕೆ; ತಪ್ಪಾಗಿರಬಹುದೇ?) ನೀಹಾರಿಕೆ/ನೀಹಾರಕ(ಸರಿ) ಎಂದರೆ ಬ್ರಹ್ಮಾಂಡ೧; ನೀಹಾರಕವು ಅನೇಕ ತಾರೆಗಳ ಮತ್ತು ಅನಿಲಮೇಘಗಳ ಮತ್ತು ಇತರ ಕಾಯಗಳನ್ನೊಳಗೊಂಡ ಬ್ರಹ್ಮಾಂಡ(galaxy). - ಜ್ಯೋತಿರ್ಮೇಘವು ಧೂಳು, ಜಲಜನಕ ಮತ್ತು ಪ್ಲಾಸ್ಮ ಅನಿಲಗಳಿಂದ ಕೂಡಿದ ಒಂದು ಅಂತರ ನಾಕ್ಷತ್ರಿಕ ಮೋಡ. ನೀಹಾರಿಕೆಗಳು ಸಾಮಾನ್ಯವಾಗಿ ನಕ್ಷತ್ರಗಳನ್ನು ಸೃಷ್ಟಿಸುವ ವಲಯಗಳನ್ನು ಮೂಡಿಸುತ್ತವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
(ಸುಭಾಷ್ ಚಂದ್ರ ಬೋಸ್(ವಿಸೃತ ಲೇಖನಕ್ಕೆ ನೋಡಿ:)(ಭಾಷೆ ತುಂಬಾ ತಪ್ಪುಗಳಿಂದ ಕೂಡಿದ್ದು, ಅರ್ಥವಾಗದಂತಿದೆ, ಇದನ್ನು ರದ್ದು ಮಾಡಿ '[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಬೋಸ್, ಸುಭಾಷ್ಚಂದ್ರ]' ಲೇಖನ ಹಾಕುವುದು ಸೂಕ್ತ)ಸುಭಾಷ್ ಚಂದ್ರ ಬೋಸ್ ೧೮೯೭ ಜನವರಿ ೨೩ರಲ್ಲಿ ಹುಟ್ಟಿದ್ದರು ೧೮ ಆಗಸ್ಟ್ ೧೯೪೪೫ ೪೮ ವರ್ಷ ಇವರ ಪ್ರತಿಭಟನೆಯ ದೇಶಭಕ್ತಿ ಅವರನ್ನು ಭಾರತದ ನಾಯಕ ಮಾಡಿದ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿ, ಆದರೆ ಅವರ ಪ್ರಯತ್ನ ಮಹಾಯುದ್ದದಲ್ಲಿ ನಾಜಿ ಜರ್ಮನಿ ಮತ್ತು ಜಪಾನ್ ತೊಂದರೆಗೊಳಗಾಗಿರುವ ಆಸ್ತಿಯನ್ನು ಬಿಟ್ಟು ಹೋಗಿವೆ ಸಹಾಯದಿಂದ ಬ್ರಿಟಿಷ್ಆಡಳಿತದ ಭಾರತ ವಿಮುಕ್ತಿಗೊಳಿಸುವ ಗೌರವ ನೇತಾಜಿ ಮೈ ಹಿಂದೂಸ್ತಾನಿ ಭಾಷೆ ಗೌರವಾನ್ವಿತ ನಾಯಕರಾದ ಮೊದಲ ವೇಳೆಗೆ ಜರ್ಮನಿಯ ಬೋಸ್ ಅನ್ವಯಿಸಲಾಗಿದೆ ಇಂಡಿಷ್ ಲೀಜನ್ ಮತ್ತು ೧೯೪೨ ರ ಆರಂಭದಲ್ಲಿ ಬರ್ಲಿನ್ ಭಾರತ ವಿಶೇಷ ಬ್ಯೂರೋ ಜರ್ಮನ್ ಮತ್ತು ಭಾರತೀಯ ಅಧೀಕಾರಿಗಳು ಭಾರತೀಯ ಸೈನಿಕರು,ಈಗ ಭಾರತದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಹಿಂದಿನ ಬೋಸ್ ೧೯೩೮ ಮತ್ತು ೧೯೩೯ ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಆಗಲು ಏರುತ್ತಿರುವ,೧೯೨೦ ಮತ್ತು ೧೯೩೦ ರಲ್ಲಿ ಭಾರತೀಯ ರಾಷ್ರೀಯ ಕಾಂಗ್ರೆಸ್ ಕಿರಿಯ ತೀವ್ರಗಾಮಿ ಆದಾಗ್ಯೂ ಅವರು ೧೯೩೯ ರಲ್ಲಿ ಕಾಂಗ್ರಸ್ ನಾಯಕತ್ವದ ಸ್ಥಾನಗಳನ್ನು ಪದಚ್ಯುತಗೊಳಿಸಿ ಮೋಹನ್ ಕೆ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರು ಭಿನ್ನಾಭಿಪ್ರಾಯಗಳ ಕೆಳಗಿನ ತರುವಾಯ ೧೯೪೦ರಲ್ಲಿ ಭಾರತ ತಪ್ಪಿಸಿಕೊಂಡು ಮೊದಲು ಬ್ರಿಟಿಷರು ಗೃಹಬಂಧನದಲ್ಲಿ ಇರಿಸಲಾಗಿತ್ತು. ಬೋಸ್ ನಾಯಕತ್ವ ಇತರ ಸ್ಥಾಪಿಸಿದ ಜನರು ಮತ್ತು ಜನಾಂಗೀಯ ಸಮುದಾಯಗಳ ಕಡೆಗೆ ಅದರ ವರ್ತನೆಗಳೂ ಜೊತೆ ಹವಾಗುಣ ವೈತಿರಿಕ ,ಭಾರತದ ಸ್ವಾತಂತ್ರದ ಕಾರಣ ಸಹಾನುಭೂತಿ, ಕೆಲವೊಮ್ಮೆ ಚಂಚಲ,ಅನಿರಿಕ್ಡಿತ ನೀಡಿತ್ತು.ಅಲ್ಲಿ ಎಪ್ರಿಲ ೧೯೪೧,ರಲ್ಲಿ ಜರ್ಮನಿಗೆ ಆಗಮಿಸಿದರು.ನಂವೆಬರ ೧೯೪೧ ರಲ್ಲಿ [೧೧][೧೨],ಜೊತೆಗೆ ಜರ್ಮನ ಹಣ, ಉಚಿತ ಭಾರತ ಸೆಂಟರ ಭೋಸ ರಾತ್ರಿಯ ಪ್ರಸಾರ ಇದು.ಬರ್ಲಿನ್ ರಲ್ಲಿ ಸ್ಥಾಪಿಸಲಾಯಿತು, ಮತ್ತು ಶೀರ್ಘವೇ ಉಚಿತ ಇಂಡಿಯಾ ರೇಡಿಯೊ ಮಾಡಲಾಯಿತು.೩೦೦೦ ಬಲವಾದ ಉಚಿತ ಭಾರತ ಲೀಜನ ಎರ್ವಿನ ರೋಮೆಲ್ ನ ಆಫ್ರಿಕಾ ಕಾರ್ಪ್ಸ ವಶಪಡಿಸಿಕೊಂಡರು ಭಾರತೀಯರು ಒಳಗೊಂಡ, ಭಾರತದ ಸಂಭಾವ ಭವಿಷ್ಯದ ಜರ್ಮನ್ ಭೂಮಿ ಆಕ್ರಮಣದ ನೆರವಾಗಲೆಂದು ರಚಿಸಲಾಯಿತು.[೧೩] ಈ ಸಮಯದಲ್ಲಿ ಬೋಸ್ ಕೂಡ ತಂದೆ ಆದರು,.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಬಸಪ್ಪ ದಾನಪ್ಪ ಜತ್ತಿ(ಬಿ.ಡಿ.ಜತ್ತಿ) (ಸೆಪ್ಟೆಂಬರ್ 10,1912 - ಜೂನ್ 7, 2002) - ಭಾರತದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪಿದ ಏಕೈಕ ರಾಜಕಾರಣಿ ಬಿ.ಡಿ.ಜತ್ತಿ.
ಹೆಣ್ಣು ಪ್ರಾಣಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ/ತೂತು ಯೋನಿ ಮುಂದುವರಿದ ಪ್ರಾಣಿಗಳಲ್ಲಿ ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕಾರಿ. ವಯಸ್ಸಿನ ಮಹಿಳೆಯೊಬ್ಬಳು ಯೋನಿಯ ಉದ್ದ ಆದಾಗ್ಯೂ ಮುಂಭಾಗದ ಗೋಡೆಯ (ಮುಂದೆ) ಅಡ್ಡಲಾಗಿ ಸುಮಾರು ೬ ೭.೫ ಸೆಂ (೨.೫ ೩), ಹಾಗೂ ೯ ಸೆಂ (ರಲ್ಲಿ ೩.೫) ಉದ್ದ ಬದಿಯಲ್ಲಿರುವ ಹಿಂಭಾಗದ ಗೋಡೆ (ಹಿಂದಿನ).
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ನೈಸರ್ಗಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.